Breaking News

ಸಚಿವೆ ಶಶಿಕಲಾ ಜೊಲ್ಲೆ, ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಬೆಳಗಾವಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ನಿನ್ನೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಸಚಿವೆ ಶಶಿಕಲಾ ಜೊಲ್ಲೆ, ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಗುಡುಗಿದ್ದಾರೆ. ವಿಧಾನಸಭೆಯಲ್ಲಿ ನಿನ್ನೆ ಮಾತನಾಡಿದ್ದ ಮಜೈ ಸ್ಪೀಕರ್ ರಮೇಶ್ ಕುಮಾರ್, ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಆನಂದಿಸಿ ಎಂಬ ಮಾತಿದೆ ಎಂದು ಹೇಳಿ ನಕ್ಕಿದ್ದರು. ಮಾಜಿ ಸ್ಪೀಕರ್ ಅವರ ಈ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ …

Read More »

ಕ್ಷಮೆ ಕೋರಿದ ರಮೇಶ್ ಕುಮಾರ್ ಹೇಳಿದ್ದೇನು?

ಬೆಳಗಾವಿ: ಸದನದಲ್ಲಿ ಅಕ್ಷಮ್ಯ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ನಿನ್ನೆ ವಿಧಾನಸಭೆಯಲ್ಲಿ ಮಾತನಾಡಿದ್ದ ರಮೇಶ್ ಕುಮಾರ್, ’ಅತ್ಯಾಚಾರ ತಡೆಯಲಾಗದಿದ್ದರೆ ಮಲಗಿ ಆನಂದಿಸಿ’ ಎಂಬ ಒಂದು ಹೇಳಿಕೆಯಿದೆ ಎನ್ನುವ ಮೂಲಕ ವಿವಾದಕ್ಕೀಡಾಗಿದ್ದರು. ಮಾಜಿ ಸ್ಪೀಕರ್ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ರಮೇಶ್ ಕುಮಾರ್ ಬಹಿರಂಗ ಕ್ಷಮೆಯಾಚಿಸುವಂತೆ ಪಕ್ಷಾತೀತವಾಗಿ ಒತ್ತಾಯಗಳು ಕೇಳಿಬಂದಿದ್ದವು. ಇಂದು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಸದನದಲ್ಲಿ ಮಾತನಾಡಿದ ರಮೇಶ್ ಕುಮಾರ್, ನನ್ನ ಹೇಳಿಕೆಗೆ …

Read More »

ಮುಂದಿನ ವರ್ಷದಿಂದ ಅಂಗನವಾಡಿಯಲ್ಲಿ`ಎಲ್ ಕೆಜಿ, ಯುಕೆಜಿ’ ಆರಂಭ : ಸಚಿವ ಬಿ.ಸಿ. ನಾಗೇಶ್

ಬೆಳಗಾವಿ : ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.   ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ …

Read More »

ಇದ್ಯಾವ ಅಭಿವೃದ್ಧಿ, ಇದಾ ನಿಮ್ಮ ನೀತಿ’ ಎಂದು ರಾಜ್ಯ ಸರ್ಕಾರದ ವಿರುದ್ಧವೇ ಬಿಜೆಪಿ ಸದಸ್ಯ ಸಿದ್ದು ಸವದಿ ವಿಧಾನಸಭೆಯಲ್ಲಿ ಕಿಡಿ

ಬೆಳಗಾವಿ (ಸುವರ್ಣ ವಿಧಾನಸೌಧ): ‘ಇದ್ಯಾವ ಅಭಿವೃದ್ಧಿ, ಇದಾ ನಿಮ್ಮ ನೀತಿ’ ಎಂದು ರಾಜ್ಯ ಸರ್ಕಾರದ ವಿರುದ್ಧವೇ ಬಿಜೆಪಿ ಸದಸ್ಯ ಸಿದ್ದು ಸವದಿ ವಿಧಾನಸಭೆಯಲ್ಲಿ ಗುರುವಾರ ಹರಿಹಾಯ್ದರು. ಬನಹಟ್ಟಿಯ ಹಳೆಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಒದಗಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಶ್ನೋತ್ತರ ಅವಧಿಯಲ್ಲಿ ಸಿದ್ದು ಸವದಿ ಪ್ರಶ್ನೆ ಕೇಳಿದರು.’₹20 ಲಕ್ಷ ಮೊತ್ತದ ಕಾಮಗಾರಿ ಆರಂಭವಾಗಿ ಮೂರು ವರ್ಷವಾಗಿದ್ದು, ಕಾಮಗಾರಿ ಮುಗಿಸಲು ವಿಳಂಬ ಮಾಡಲಾಗುತ್ತಿದೆ. ಇದಾ ಅಭಿವೃದ್ಧಿ ನೀತಿ’ ಎಂದೂ ಪ್ರಶ್ನಿಸಿದರು. ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ …

Read More »

ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸರು ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದ್ದಾರೆ: ಗೃಹ ಸಚಿವ

: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸರು ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ಪರಿಷತ್‌ನಲ್ಲಿ ತಿಳಿಸಿದರು. ಸದಸ್ಯ ಯು.ಬಿ.ವೆಂಕಟೇಶ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 11 ಬಿಟ್‌ಕಾಯಿನ್ ಪ್ರಕರಣಗಳು ದಾಖಲಾಗಿವೆ. ಈ ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

Read More »

sda&fda ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಗೊಂಡ ಅಭ್ಯರ್ಥಿಗಳ ಸಕ್ಷಮ ಪ್ರಾಧಿಕಾರದಿಂದ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನೆಡೆಸಿ ನೇಮಕಾತಿ

ಬೆಳಗಾವಿ: ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಗೊಂಡ ಅಭ್ಯರ್ಥಿಗಳ ಸಕ್ಷಮ ಪ್ರಾಧಿಕಾರದಿಂದ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನೆಡೆಸಿ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸದಸ್ಯ ಅ.ದೇವೆಗೌಡ ಅವರ ಪ್ರಶ್ನೆಗೆ ಮೇಲ್ಮನೆಯಲ್ಲಿ ಉತ್ತರಿಸಿದ ಅವರು 2017-18ರಲ್ಲಿ ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಕೆ.ಪಿ.ಎಸ್.ಸಿ. ಅಂತಿಮ ಆಯ್ಕೆ ಪಟ್ಟಿಯನ್ನು ಸಕ್ಷಮ …

Read More »

ನೈಜೀರಿಯಾದಿಂದ ಬೆಳಗಾವಿಗೆ ಬಂದಿರುವ ಓರ್ವ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆ

ಬೆಳಗಾವಿ – ನೈಜೀರಿಯಾದಿಂದ ಬೆಳಗಾವಿಗೆ ಬಂದಿರುವ ಓರ್ವ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. 53 ವರ್ಷದ ವ್ಯಕ್ತಿ ನೈಜೀರಿಯಾದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಬೆಳಗಾವಿಗೆ ಪ್ರಯಾಣಿಸಿದ್ದಾರೆ. ನೈಜೀರಿಯಾದಲ್ಲಿ ಪರೀಕ್ಷೆ ನಡೆಸಿದಾಗ ಅವರಿಗೆ ನೆಗೆಟಿವ್ ಬಂದಿದೆ. ಆದರೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಪತ್ತೆಯಾದರೂ ಆ ವ್ಯಕ್ತಿಗೆ ಬೆಳಗಾವಿಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದೇಕೆ ಎನ್ನುವುದೇ ಈಗ ವಿವಾದಕ್ಕೊಳಗಾಗಿದೆ. ಅಲ್ಲಿಯೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಬದಲು ಹೋಮ್ …

Read More »

ವಾರಣಾಸಿಯಿಂದ ಬರುತ್ತಲೇ ಮೂವರು ಸಚಿವರಿಗೆ ಸಿಎಂ ಫುಲ್ ಕ್ಲಾಸ್

ಬೆಳಗಾವಿ, ಡಿ 16: 25 ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗುವ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಾರಣಾಸಿಯಲ್ಲಿ ಪಕ್ಷ ಆಯೋಜಿಸಿದ್ದ ಧಾರ್ಮಿಕ ಯಾತ್ರೆ ಮತ್ತು ಬಿಜೆಪಿ ಸಿಎಂಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಹನ್ನೊಂದು, ಜೆಡಿಎಸ್ ಎರಡು ಮತ್ತು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಇದರಲ್ಲಿ, ಪಕ್ಷಕ್ಕೆ ತೀವ್ರ ಮುಜುಗರ ತಂದಿದ್ದು ಬೆಳಗಾವಿಯಲ್ಲಿನ ಸೋಲು. ಅಯೋಧ್ಯೆಯಲ್ಲಿ ರಾಮ ಮಂದಿರ ದರ್ಶನದ ವೇಳೆ ಬಿಜೆಪಿ …

Read More »

ಕೆ.ಆರ್.ಇ.ಡಿ.ಎಲ್ ಗೆ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ’

ಬೆಳಗಾವಿ: ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮವು ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ-2021ರಡಿ ಉತ್ತಮ ಪರ್ಫಾಮೆನ್ಸ್ ವಿಭಾಗದಲ್ಲಿ (ಗ್ರೂಪ್-1) ಪ್ರಥಮ ಸ್ಥಾನ ಪಡೆದಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ ಪ್ರಯುಕ್ತ ನವದೆಹಲಿಯಲ್ಲಿ ಮಂಗಳವಾರ(ಡಿಸೆಂಬರ್ 14)ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ವಿದ್ಯುತ್ ಮತ್ತು ನವ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಆರ್.ಕೆ.ಸಿಂಗ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಜಿ.ಕುಮಾರನಾಯಕ ಮತ್ತು ಕೆ.ಆರ್.ಇ.ಡಿ.ಎಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಅವರು ಪ್ರಶಸ್ತಿ ಸ್ವೀಕರಿಸಿದರು. …

Read More »

ಹನಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ರಾಜ್ಯದ ಎಲ್ಲಾ ಬಗೆಯ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್‌ವರೆಗೆ ಶೇ. 90 ರಷ್ಟು ಸಬ್ಸಿಡಿ

ಬೆಳಗಾವಿ: ಹನಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ರಾಜ್ಯದ ಎಲ್ಲಾ ಬಗೆಯ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್‌ವರೆಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಶೂನ್ಯ ವೇಳೆಯಲ್ಲಿ ಶಾಸಕರಾದ ಯು.ಟಿ. ಖಾದರ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ವರ್ಷ ದೊಡ್ಡ ರೈತರಿಗೆ ಸಬ್ಸಿಡಿ ಪ್ರಮಾಣ ಕಡಿತ ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹನಿ ನೀರಾವರಿ ಯೋಜನೆಗಳಿಗೆ ಈ …

Read More »