ಬೆಂಗಳೂರು: ರಾಜ್ಯದಲ್ಲಿ ಫಾರ್ಮಸಿ ಇನ್ಸ್ಪೆಕ್ಟರ್ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತಾ ನಿಯಮಗಳನ್ನು ರೂಪಿಸಿದ್ದು, ಅವುಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ‘ಫಾರ್ಮಸಿ ಕಾಯ್ದೆ-1948’ರ ನಿಯಮಗಳನ್ನು ಜಾರಿ ಮಾಡಲು ಸರ್ಕಾರಕ್ಕೆ ನಿರ್ದೇಶನ ಕೋರಿ ಅಶೋಕ್ ಸ್ವಾಮಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು …
Read More »ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಮಸ್ಯೆ ಶೀಘ್ರ ಪರಿಹರಿಸಲು ಕಾರ್ಮಿಕ ಸಚಿವರ ಸೂಚನೆ
ಬೆಳಗಾವಿ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಸಮಸ್ಯೆ ಕುರಿತಂತೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಸುವರ್ಣಸೌಧದ ತಮ್ಮ ಕಾರ್ಯಾಲಯದಲ್ಲಿ ಸಭೆ ನಡೆಸಿದರು. ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಕಾರ್ಖಾನೆಯ ಕಾರ್ಮಿಕರ ಸಮಸ್ಯೆಯನ್ನು ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಅಹವಾಲನ್ನು ಸ್ವೀಕರಿಸಿ, ಕಾರ್ಮಿಕರಿಗೆ ನೀಡಬೇಕಾಗಿರುವ ಬಾಕಿ ವೇತನ, ಇತರೆ ಸೌಲಭ್ಯಗಳನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಸಚಿವರ …
Read More »40% ಕಮಿಷನ್ ವಿಚಾರವಾಗಿ ಸದನದಲ್ಲಿ ಗಂಭೀರ ಚರ್ಚೆ ನಡೆಸಲು ಕಾಂಗ್ರೆಸ್ ತೀರ್ಮಾನ
ಬೆಳಗಾವಿ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ ಬೆಳಗ್ಗೆ ನಡೆಸಿ, ಸುವರ್ಣ ಸೌಧದಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಎಪಿಎಂಸಿ ಕಾಯಿದೆ ವಾಪಸು ಪಡೆಯುವಂತೆ ನಿಲುವಳಿ ಸೂಚನೆ ಮಂಡನೆ ಮಾಡಲು ನಿರ್ಧರಿಸಲಾಗಿದೆ. ಭೂ ಸುಧಾರಣಾ ತಿದ್ದುಪಡಿ ಕಾಯಿದೆ, ಗೋಹತ್ಯೆ ನಿಷೇಧ ಕಾಯಿದೆ ವಾಪಸು ಪಡೆಯುವಂತೆ ಒತ್ತಾಯ ಮಾಡುವುದು, ಕರೋನದಿಂದ ಸತ್ತವರಿಗೆ ಪರಿಹಾರ ಕೊಡುವ ವಿಚಾರ, ಮತಾಂತರ ತಿದ್ದುಪಡಿ ವಿಧೇಯಕ ಸರ್ಕಾರ ತಂದ್ರೆ ವಿರೋಧ …
Read More »ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ: ಕರವೇ ಆಕ್ರೋಶ
ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ ಅಧ್ಯಕ್ಷ ದೀಪಕ ದಳವಿಗೆ ಕಪ್ಪು ಮಸಿ ಬಳದಿರುವುದನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ಪುಂಡತನ ಮೆರೆದಿದ್ದಾರೆ. ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ಸಮಯದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಕಿಡಿಗೇಡಿತನ ಮಾಡಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಧ್ವಜಕ್ಕೆ ಬೆಂಕಿ ಹತ್ತುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲ ಕಿಡಿಗೇಡಿಗಳು ಈ ವಿಡಿಯೋಗೆ, ಈಗ ಧ್ವಜಕ್ಕೆ ಬೆಂಕಿ ಹಾಕಲಾಗಿದೆ. …
Read More »ಹೊಳೆಗೆ ಬಿದ್ದ ಬಸ್ : ಕನಿಷ್ಠ 9 ಮಂದಿ ಸಾವು
ಪಶ್ಚಿಮ ಗೋದಾವರಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ಬಸ್ ಹೊಳೆಗೆ ಬಿದ್ದು ಕನಿಷ್ಠ 9 ಮಂದಿ ಸಾವನ್ನಪ್ಪಿದ ಭೀಕರ ಅವಘಡ ಮಂಗಳವಾರ ನಡೆದಿದೆ. ಜಂಗರೆಡ್ಡಿ ಎಂಬಲ್ಲಿ ಸೇತುವೆಯ ಮೇಲೆ ಎಪಿಎಸ್ ಆರ್ಟಿ ಯ ಬಸ್ ಅಪಘಾತಕ್ಕೆ ಗುರಿಯಾಗಿದ್ದು, ಹೊಳೆಗೆ ಬಿದ್ದು ದುರಂತ ಸಂಭವಿಸಿದೆ. ಅವಘಡಕ್ಕೆ ಗುರಿಯಾಗುವ ಮೊದಲು ಬಸ್ಸಿನಲ್ಲಿ 26 ಮಂದಿ ಪ್ರಯಾಣಿಕರು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಬಸ್ಸಿನಲ್ಲಿ ಸಿಕ್ಕ ಪ್ರಯಾಣಿಕರನ್ನು ಹೊರಗೆ ತೆಗೆದಿದ್ದಾರೆ. …
Read More »ಕರಾವಳಿಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ
ಬೆಳಗಾವಿ: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ, ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಯು ಟಿ ಖಾದರ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, “ಕರಾವಳಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೋಮು ಸಾಮರಸ್ಯ ವಾತಾವರಣವನ್ನು ಕೆಡಿಸುವ, ಕೆಲವರ, ಪ್ರಯತ್ನಗಳ ಬಗ್ಗೆ ವರದಿಗಳನ್ನು ಗಮನಿಸಿದ್ದೇನೆ, ಅವುಗಳಿಗೆ …
Read More »: ರಾಜ್ಯ ಸರಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ನಾಳೆ ಗುರುವಾರ, ಟ್ರ್ಯಾಕ್ಟರ್ ಮತ್ತು ಎತ್ತಿನಗಾಡಿ ಮೆರವಣಿಗೆ
ಬೆಳಗಾವಿ : ರಾಜ್ಯ ಸರಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಧಿವೇಶನದ ವೇಳೆ ನಿರಂತರ ಪ್ರತಿಭಟನೆ ನಡೆಸಲು ಮುಂದಾಗಿದ್ದು, ನಾಳೆ ಗುರುವಾರ, ಟ್ರ್ಯಾಕ್ಟರ್ ಮತ್ತು ಎತ್ತಿನಗಾಡಿ ಮೆರವಣಿಗೆ ಮಾಡಿ ಪ್ರತಿಭಟನೆ ನಡೆಸಲಿದೆ. ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಕಾಂಗ್ರೆಸ್ ಕಛೇರಿಯಿಂದ ಸುವರ್ಣ ಸೌಧಕ್ಕೆ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಪಕ್ಷದ ಎಲ್ಲಾ ಶಾಸಕರು ಮತ್ತು ಪರಿಷತ್ ಸದಸ್ಯರುಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ …
Read More »22 ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪತ್ರ, ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ;: ಅಶ್ವತ್ಥನಾರಾಯಣ
ಬೆಳಗಾವಿ: ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ `ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ’ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ …
Read More »ಬಿಜೆಪಿಗೆ ಸೋಲಾದ ಕ್ಷೇತ್ರಗಳಲ್ಲಿ ಏನಾಗಿದೆ? ಯಾರೆಲ್ಲ ಕೆಲಸ ಮಾಡಿಲ್ಲ ಎಂಬುದರ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಪರಿಶೀಲನೆ : B.S.Y.
ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾದ ಕ್ಷೇತ್ರಗಳಲ್ಲಿ ಏನಾಗಿದೆ? ಯಾರೆಲ್ಲ ಕೆಲಸ ಮಾಡಿಲ್ಲ ಎಂಬುದರ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಬೆಳಗಾವಿ ಹಾಗೂ ಮೈಸೂರಿನಲ್ಲಿ ಪರಿಷತ್ ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಬೆಳಗಾವಿಯಲ್ಲಿ ಸೋಲಿನ ಬಗ್ಗೆ ಸುದೀರ್ಘ ಚರ್ಚೆಯಾಗಲಿದೆ. ಹೆಚ್ಚು ಮಂದಿ ಶಾಸಕರು, ಸಂಸದರು ಇದ್ದರೂ ಗೆಲ್ಲಲು ಸಾಧ್ಯವಾಗಿಲ್ಲ. ಎಲ್ಲಿ ಏನಾಗಿದೆ ಎಂಬುದರ ಬಗ್ಗೆ ಚರ್ಚಿಸಿ …
Read More »1 ಟ್ರಕ್ ಗೋವುಗಳ ಹಾಗೂ ಎಮ್ಮೆಗಳ ಚರ್ಮ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಬುಧವಾರ ಮಾರಿಹಾಳ ಪೊಲೀಸ್ ಠಾಣೆಗೆ ಭೇಟಿ
ಬೆಳಗಾವಿ – ಇತ್ತೀಚಿಗೆ ಸಾರ್ವಜನಿಕರು ಮಾರಿಹಾಳ ಪೊಲೀಸ್ ಠಾಣೆಗೆ ನೀಡಿದ ಖಚಿತ ಮಾಹಿತಿ ಆಧಾರದಿಂದ 1 ಟ್ರಕ್ ಗೋವುಗಳ ಹಾಗೂ ಎಮ್ಮೆಗಳ ಚರ್ಮ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಬುಧವಾರ ಮಾರಿಹಾಳ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದರು. ಡಿ10 ರಂದು ರಾತ್ರಿ ಸಾರ್ವಜನಿಕರು ಪೆಟ್ರೋಲ್ ಬಂಕ್ ನಲ್ಲಿ ಡಿಸೈಲ್ ಹಾಕಿಸುತ್ತಿದ್ದ ಟ್ರಕ್ ನಿಂದ ರಕ್ತದ ನೀರು ಹರಿಯುತ್ತಿರುವುದನ್ನು ಕಂಡು ಪೊಲೀಸರಿಗೆ ವಿಷಯ …
Read More »