ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಫಲಿತಾಂಶ (Council result) ಹೊರಬಿದ್ದಿದ್ದು, ವಿಧಾನ ಪರಿಷತ್ತಿನಲ್ಲಿ ಬಹುಮತದ ಕೊರತೆ ಎದುರಿಸುತ್ತಿದ್ದ ಆಡಳಿತಾರೂಢ ಬಿಜೆಪಿ (BJP) 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ವಿಪಕ್ಷ ಕಾಂಗ್ರೆಸ್ (Congress) 11 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ಇತ್ತು. ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಮತದಾನ ನಡೆಸಲಾಗಿತ್ತು. ಬಿಜೆಪಿ (BJP) …
Read More »ಬೆಳಗಾವಿ: ಜಾರಕಿಹೊಳಿ ಸಹೋದರರಲ್ಲಿ ನಾಲ್ವರು ಶಾಸಕರು
ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಗೆಲುವಿನೊಂದಿಗೆ, ಜಿಲ್ಲೆಯ ಪ್ರಭಾವಿ ಮನೆತನವಾದ ಜಾರಕಿಹೊಳಿ ಕುಟುಂಬದಲ್ಲಿನ ಶಾಸಕರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ರಮೇಶ ಜಾರಕಿಹೊಳಿ (ಗೋಕಾಕ) ಹಾಗೂ ಬಾಲಚಂದ್ರ ಜಾರಕಿಹೊಳಿ (ಅರಭಾವಿ) ಬಿಜೆಪಿ ಶಾಸಕರಾಗಿದ್ದಾರೆ. ಸತೀಶ ಜಾರಕಿಹೊಳಿ (ಯಮಕನಮರಡಿ) ಕಾಂಗ್ರೆಸ್ ಶಾಸಕರಾಗಿದ್ದಾರೆ. ಇದೀಗ ಲಖನ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದು ಚುನಾಯಿತ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ತಮ್ಮನಿಗೆ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು ಎಂಬ ಸಹೋದರರ ಆಸೆ ಈಡೇರಿದಂತಾಗಿದೆ ಮತ್ತು ಅವರು ರೂಪಿಸಿದ್ದ ಕಾರ್ಯತಂತ್ರವೂ …
Read More »ಬಿಜೆಪಿಗೆ ಧಮ್ ಇಲ್ಲ; ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ : ಸಿದ್ದರಾಮಯ್ಯ
ಬೆಂಗಳೂರು: ಪರಿಷತ್ ಫಲಿತಾಂಶದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂಬುದು ಗೊತ್ತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಚಿಕ್ಕಮಗಳೂರಿನಲ್ಲಿ ನಮ್ಮ ಅಭ್ಯರ್ಥಿ 6 ಮತಗಳ ಅಂತರದಿಂದ ಸೋತರು. ಅಲ್ಲಿ ಹತ್ತು ಮಂದಿ ನಾಮಿನೇಟೆಡ್ ಮೆಂಬರ್ ಇದ್ದರು. ವೋಟ್ ಹಾಕಿಲ್ಲ. ಉಳಿದೆಡೆ ನಾವು ಉತ್ತಮ ಹೋರಾಟ ಮಾಡಿದ್ದೇವೆ. ಜನಪ್ರತಿನಿಧಿಗಳ ತೀರ್ಪು ನಮ್ಮ …
Read More »ಪರಿಷತ್ ಫಲಿತಾಂಶದಿಂದ ಕಾಂಗ್ರೆಸ್ ಒಗ್ಗಟ್ಟಿನ ಸಂದೇಶ: ಸತೀಶ್ ಜಾರಕಿಹೊಳಿ, ಸತೀಶ್ ನೇತೃತ್ವವೇ ಗೆಲುವಿಗೆ ಕಾರಣ – ಲಕ್ಷ್ಮಿ ಹೆಬ್ಬಾಳಕರ್,
ಕಾಂಗ್ರೆಸ್ ಪಕ್ಷ ಬೆಳಗಾವಿಯಲ್ಲಿ ಗಟ್ಟಿಯಾಗಿದೆ. ಮುಂಬರುವ ಚುನಾವಣೆಗಳನ್ನು ಎಲ್ಲರ ಒಗ್ಗಟ್ಟಿನಿಂದ ಗೆಲ್ಲಿಸುತ್ತೇವೆಂಬ ಸಂದೇಶವನ್ನು ಈ ಚುನಾವಣೆ ಮೂಲಕ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪರಿಷತ್ ಚುನಾವಣೆ ಗೆದ್ದೆ ಗೆಲ್ಲುತ್ತೇವೆ ಎಂಬ ವಿಶ್ವಾಸ ಇತ್ತು. ಅದೇ ರೀತಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಎರಡನೇ ಪ್ರಾಶಸ್ತ್ಯ ಬಿಜೆಪಿ, ಪಕ್ಷೇತರ ಅಭ್ಯರ್ಥಿ ಯಾರೇ ಬಂದ್ರು ಕಾಂಗ್ರೆಸಗೆ ಲಾಭವೂ ಇಲ್ಲ. ನಷ್ಟವೂ ಇಲ್ಲ. …
Read More »ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರಿಗೆ ಮಸಿ ಬಳಿದ ಕನ್ನಡ ಕಾರ್ಯಕರ್ತ ಸಂಪತ್ ಕುಮಾರ ದೇಸಾಯಿವಿರುದ್ಧ ಕೊಲೆ ಯತ್ನ (ಸೆ.307) ಪ್ರಕರಣವನ್ನು ದಾಖಲಿಸಿದ ಪೋಲೀಸರ ವಿರುದ್ಧ ಕ್ರಮಕೈಕೊಳ್ಳಬೇಕು
ಬೆಳಗಾವಿ – ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರಿಗೆ ಮಸಿ ಬಳಿದ ಕನ್ನಡ ಕಾರ್ಯಕರ್ತ ಸಂಪತ್ ಕುಮಾರ ದೇಸಾಯಿವಿರುದ್ಧ ಕೊಲೆ ಯತ್ನ (ಸೆ.307) ಪ್ರಕರಣವನ್ನು ದಾಖಲಿಸಿದ ಪೋಲೀಸರ ವಿರುದ್ಧ ಕ್ರಮಕೈಕೊಳ್ಳಬೇಕು ಹಾಗೂ ಪ್ರಕರಣವನ್ನು ವಾಪಸ್ ಪಡೆಯಬೇಕೆಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಆಗ್ರಹಿಸಿದೆ. ರಾಜ್ಯ ಗೃಹಸಚಿವ ಅರಗ ಙ್ಞಾನೇಂದ್ರ ಅವರನ್ನು ಮಂಗಳವಾರ ರಾತ್ರಿ ಭೇಟಿ ಮಾಡಿದ ಕ್ರಿಯಾ ಸಮಿತಿ ನಿಯೋಗ, ಈ ಸಂಬಂಧ ಮನವಿಯನ್ನು ಸಲ್ಲಿಸಿತು. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿರುವ ಪೋಲೀಸರ …
Read More »ನಿರ್ದಿಷ್ಟ ಕಾಲಮಿತಿಯಲ್ಲಿ ನ್ಯಾಯ ಬೆಲೆ ಅಂಗಡಿಗೆ ಅನುಮತಿ: ಸಚಿವ ಉಮೇಶ್ ಕತ್ತಿ
: ಕನಿಷ್ಟ 100 ರೇಷನ್ ಕಾರ್ಡ್ ಇರುವ ತಾಂಡಾ ಹಾಗೂ ಎಸ್ಸಿ/ಎಸ್ಟಿ ಕಾಲೋನಿಗಳಿಗೆ, ಅರ್ಜಿ ಸಲ್ಲಿಸಿದ ನಿಯಮಿತ ಕಾಲಮಿತಿಯಲ್ಲಿ ನ್ಯಾಯ ಬೆಲೆ ಅಂಗಡಿಗೆ ಅನುಮತಿ ನೀಡಲಾಗುವುದೆಂದು ಆಹಾರ ಸಚಿವ ಉಮೇಶ್ ಕತ್ತಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ತಾಂಡಾಗಳಲ್ಲಿ ನ್ಯಾಯ ಬೆಲೆ ಅಂಗಡಿ ಪ್ರಾರಂಭಿಸಲು ಅನುಮತಿ ನೀಡುವ ಕುರಿತು, ಪರಿಷತ್ ಕಲಾಪದಲ್ಲಿ ಪ್ರಕಾಶ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ್ ಕತ್ತಿ, ರಾಜ್ಯದ …
Read More »ಇಂದು ಹೊರಬೀಳಲಿದೆ ಪರಿಷತ್ ಚುನಾವಣೆ ಫಲಿತಾಂಶ… ಯಾರಿಗೆ ‘ಮಂಗಳ’ವಾರ?
ಬೆಂಗಳೂರು: ಡಿಸೆಂಬರ್ 10ರಂದು ನಡೆದ ವಿಧಾನ ಪರಿಷತ್‍ನ 25 ಸ್ಥಾನಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗೆ ಚುನಾವಣಾ ಆಯೋಗ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಬೆಳಗ್ಗೆ 8 ಗಂಟೆಯಿಂದ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದೆ. ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಕೋಲಾರ, ಬೀದರ್, ಕಲಬುರಗಿ, ಬಿಜಾಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, …
Read More »ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಕ್ಷಣಗಣನೆ
91 ಅಭ್ಯರ್ಥಿಗಳ ಭವಿಷ್ಯ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 20 ಕ್ಷೇತ್ರಗಳಲ್ಲಿ ಸ್ಪರ್ಧೆ ಜೆಡಿಎಸ್ ಕೇವಲ ಆರು ಪರಿಷತ್ ಕ್ಷೇತ್ರಗಳಲ್ಲಿ ಸ್ಪರ್ಧೆ ಕೆಲವು ಕಡೆಗಳಲ್ಲಿ ಮೂರೂ ಪಕ್ಷಗಳಿಂದ ತೀವ್ರ ಪೈಪೋಟಿ 91 ಅಭ್ಯರ್ಥಿಗಳ ಭವಿಷ್ಯ ಬರೆಯಲಿರುವ 96 ಸಾವಿರ ಮತದಾರರು ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಕ್ಷಣಗಣನೆ ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್‍ನ 25 ಸ್ಥಾನಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗೆ ಚುನಾವಣಾ ಆಯೋಗ ಎಲ್ಲಾ ರೀತಿಯ …
Read More »ಬೆಳಗಾವಿ ಅಧಿವೇಶನಕ್ಕೆ ಬರುವವರಿಗೆ ಡಬಲ್ ಡೋಸ್ ಲಸಿಕೆ, 72 ಗಂಟೆಯೊಳಗಿನ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ ಕಡ್ಡಾಯ: ಡಿಸಿ ಆರ್.ವೆಂಕಟೇಶ್‍ಕುಮಾರ್
ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನಕ್ಕೆ ಆಗಮಿಸುವ ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಅದೇ ರೀತಿ 72 ಗಂಟೆಯೊಳಗಿನ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟನ್ನು ತೋರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್‍ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾಧಿಕಾರಿ ಆರ್.ವೆಂಕಟೇಶ್‍ಕುಮಾರ್ ಅವರು ಕೋವಿಡ್ ಹಿನ್ನೆಲೆಯಲ್ಲಿ ಇದೀಗ ಎರಡು ಹೊಸ ನಿರ್ದೇಶನಗಳು ಬಂದಿವೆ. ಎರಡು ಡೋಸ್ ಲಸಿಕೆ ಮತ್ತು 72 ಗಂಟೆಯೊಳಗಿನ ಆರ್‍ಟಿಪಿಸಿಆರ್ ನೆಗೆಟಿವ್ …
Read More »ವಿಶ್ವದಾಧ್ಯಂತ ಭೀತಿ ಮೂಡಿಸಿರುವ ಒಮಿಕ್ರಾನ್‍ಗೆಮೊದಲ ಬಲಿ:
ವಿಶ್ವದಾಧ್ಯಂತ ಭೀತಿ ಮೂಡಿಸಿರುವ ಒಮಿಕ್ರಾನ್‍ಗೆ ಇಂಗ್ಲೆಂಡ್‍ನಲ್ಲಿ ಮೊದಲ ರೋಗಿ ಸಾವನ್ನಪ್ಪಿದ್ದಾರೆ. ಇಂಗ್ಲೆಂಡ್‍ನಲ್ಲಿ ಕೊವಿಡ್ ಲಸಿಕಾ ಅಭಿಯಾನ ತೀವ್ರಗತಿಯಲ್ಲಿ ನಡೆಯುತ್ತಿದ್ದರೂ ಒಮಿಕ್ರಾನ್‍ನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮಾಹಿತಿ ನೀಡಿದ್ದಾರೆ. ಕಳೆದ ವರ್ಷದ ಆರಂಭದಿಂದ ಇಡೀ ವಿಶ್ವವನ್ನು ಕಾಡುತ್ತಿರುವ ಕೊರೊನಾವೈರಸ್ ಇದೀಗ ರೂಪಾಂತರಿ ವೈರಸ್‍ಗಳ ರೂಪ ತಾಳಿ ಮತ್ತೆ ವಿಶ್ವವನ್ನು ಕಂಗೆಡಿಸುತ್ತಿದೆ. ಹೊಸದಾಗಿ ಪತ್ತೆಯಾಗಿರುವ ಕೊವಿಡ್ ರೂಪಾಂತರಿಯಾದ ಒಮಿಕ್ರಾನ್‍ನಿಂದ ಮತ್ತೆ ಲಾಕ್‍ಡೌನ್ ಉಂಟಾಗಬಹುದು ಎಂಬ ಭೀತಿ …
Read More »