ಬೆಳಗಾವಿ – ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಾನುವಾರ ಸಂಜೆ ಬೆಳಗಾವಿಗೆ ಆಗಮಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಸಚಿವ ಎ.ಬಿ.ಪಾಟೀಲ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಸ್ವಾಗತಿಸಿದರು. ಬೆಳಗಾವಿ ಅಧಿವೇಶನದಲ್ಲಿ ಸರಕಾರದ ನೀತಿ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಪ್ರವಾಹ, ಉತ್ತರ ಕರ್ನಾಟಕದ ಸಮಸ್ಯೆಗಳು, ಮತಾಂತರ, ಮನೆಗಳನ್ನು ಕೊಡದಿರುವುದು, ಶೇ.40ರಷ್ಟು ಲಂಚ ಮೊದಲಾದವುಗಳ …
Read More »ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ
ಬೆಳಗಾವಿ:: ಮುಂದಿನ ಚುನಾವಣೆ ಗೋಕಾಕನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಡೋಣ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ. ನಾವು ಯಾವುದೇ ಚುನಾವಣೆಯನ್ನು ಕೇಂದ್ರಿಕೃತ ಮಾಡಿಲ್ಲ, ಸ್ವತಂತ್ರವಾಗಿಯೇ ಮಾಡಿದ್ದೇವೆ. ಅವರು ಮಾತ್ರ ಅಧಿಕಾರವನ್ನು ಕೈಯಲ್ಲಿಯೇ ಹಿಡಿದುಕೊಂಡಿರುತ್ತಾರೆ ಎಂದು ತಿವಿದಿದ್ದಾರೆ. ಇನ್ನೂ ವಿಧಾನಪರಿಷತ್ ಫಲಿತಾಂಶಕ್ಕೆ ಸಂಬಂಧಿಸಿದಂತೆ …
Read More »ರಾಮ ರಾಮ ಅಂತಾರೆ ರಾಮನೇನು ಇವರಪ್ಪನ ಮನೆಯ ಸ್ವತ್ತಲ್ಲ : ಮಾಜಿ ಸಚಿವ ಹೆಚ್.ಆಂಜನೇಯ
ಬಾಗಲಕೋಟೆ : ಮತಾಂತರ ಅದು ವ್ಯಕ್ತಿಯ ಅಭಿವ್ಯಕ್ತಿತ್ವ ಸ್ವಾತಂತ್ರ್ಯವಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನೀಗ ಹಿಂದೂ ಧರ್ಮದಲ್ಲಿ ಇದ್ದೇನೆ. ರಾಮ ರಾಮ ಅಂತಾರೆ ರಾಮನೇನು ಇವರಪ್ಪನ ಮನೆಯ ಸ್ವತ್ತಲ್ಲ. ರಾಮನಿಗೆ ಅತಿ ಹತ್ತಿರದವನು ಆಂಜನೇಯ, ಆಂಜನೇಯ ಇಲ್ಲದೆ ರಾಮನಿಲ್ಲ. ರಾಮನಿಲ್ಲದ ಆಂಜನೇಯ ಇಲ್ಲ ಎಂದು ಟಾಂಗ್ ನೀಡಿದರು. ನನ್ನ ಹೆಸರು ನಮ್ಮವ್ವ ಆಂಜನೇಯ ಅಂತ್ಹೇಳಿ ಇಟ್ಟಿದ್ದಾಳೆ. ನಾನು ಹಿಂದೂಧರ್ಮದಲ್ಲಿ ಇದ್ದೇನೆ, ಕಾಂಗ್ರೆಸ್ನಲ್ಲಿ ಇದ್ದೇನೆ. ಕೆಲವರು …
Read More »ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತನಾಡಿದ್ವಾ? ಸಿ.ಎಂ.ಇಬ್ರಾಹಿಂ
ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತನಾಡಿದ್ವಾ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮತಾಂತರ ನಿಷೇಧ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿ.ಎಂ.ಇಬ್ರಾಹಿA ಮತಾಂತರವನ್ನು ಯಾರೂ ಬಲವಂತವಾಗಿ ಮಾಡಬಾರದು. ಸ್ವಯಿಚ್ಚೆಯಿಂದ ಬೇಕಾದರೆ ಮತಾಂತರವಾಗಲಿ. ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತಾಡಿದ್ದೇವಾ..? ರಿಜ್ವಿ ಹಿಂದೂ ಆದ, ನಾವು ಏನಾದರೂ ಹೇಳಿದ್ವಾ..? ಮತಾಂತರ ಅವರವರ ಇಚ್ಛೆ. ಅದಕ್ಕಾಗಿ …
Read More »ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯ
ಬೆಂಗಳೂರು: ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ಕೊತ್ತದೊಡ್ದಿ ಗ್ರಾಮದಲ್ಲಿ ನಡೆದಿದೆ. ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ ನಿಂದ ಪರಾರಿಯಾಗಿದ್ದಾರೆ. ಅಪಘಾತದಲ್ಲಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
Read More »ಹಾವು ಕಚ್ಚಿ ಸ್ವಾಮೀಜಿ ಸಾವು
ಚಾಮರಾಜನಗರ – ಇಲ್ಲಿಯ ಗೋಪಾಲಪುರದ ಕೋಲೇಶ್ವರ ಮಠದ ಗುರುಮಲ್ಲ ಸ್ವಾಮೀಜಿ ನಿಧನರಾಗಿದ್ದಾರೆ. ಅವರಿಗೆ 44 ವರ್ಷ ವಯಸ್ಸಾಗಿತ್ತು. ಶನಿವಾರ ಕಾರ್ಮಿಕರ ಕೆಲಸದ ಮೆಲುಸ್ತುವಾರಿ ನೋಡಲು ಹೋದ ಸಂದರ್ಭದಲ್ಲಿ ಸ್ವಾಮೀಜಿಗೆ ಹಾವು ಕಚ್ಚಿತ್ತು. ತಕ್ಷಣ ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಚಾಮರಾಜ ನಗರಕ್ಕೆ ಕಳಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾದರು. ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ.
Read More »ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ದಕ್ಷಿಣ ಆಫ್ರಿಕಾದಿಂದ ಬಂದಿರುವ 34 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಸೋಂಕು ದೃಢವಾಗಿದ್ದು, ಸೋಂಕಿತರನ್ನು ಐಸೋಲೇಷನ್ ಮಾಡಲಾಗಿದೆ. ಅಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಐವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 15 ಜನರ ಸ್ಯಾಂಪಲ್ ಗಳನ್ನು ಸಂಗ್ರಹಿಸಿ …
Read More »ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ ಸಂಕಷ್ಟ
ಬೆಂಗಳೂರು: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ ಸಂಕಷ್ಟ ಎದುರಾಗಿದ್ದು, ಸಾಲದ ಹಣ ವಾಪಸ್ ನೀಡುವಂತೆ ಕೊರ್ಟ್ ಆದೇಶ ನೀಡಿದೆ. 2013ರಲ್ಲಿ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ಅವರಿಂದ ದ್ವಾರಕೀಶ್ ಸಾಲ ಪಡೆದುಕೊಂಡಿದ್ದರು. ‘ಚಾರುಲತಾ’ ಸಿನಿಮಾ ಬಿಡುಗಡೆಗಾಗಿ 50 ಲಕ್ಷರೂ ಮೊತ್ತ ಪಡೆದುಕೊಂಡಿದ್ದರು. ನಂತರ ಸಾಲದ ಹಣ ವಾಪಸ್ ನೀದದೇ ಸತಾಯಿಸಿದ್ದರು. ಅಲ್ಲದೇ ದ್ವಾರಕೀಶ್ ನೀಡಿದ್ದ ಚೆಕ್ ಕೂಡ ಸರಿಯಿರಲಿಲ್ಲ. ನಾನು ಯಾವುದೇ ಚೆಕ್ ಕೊಟ್ಟಿಲ್ಲ, ಸಹಿ ನನ್ನದಲ್ಲ ಎಂದು ಕೋರ್ಟ್ ನಲ್ಲಿ …
Read More »ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಡಿವೈಡರ್ಗೆ ಬೈಕ್ ಡಿಕ್ಕಿ: ಬೆಂಗಳೂರಲ್ಲಿ ಜೀವಂತ ಹೆಣವಾದ ಯುವಕ
ಬೆಂಗಳೂರು : ಹೆಲ್ಮೆಟ್ ಹಾಕದೆ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಸ್ನೇಹಿತರಿಬ್ಬರು ಹೊರಟಿದ್ದರು. ಮಾರ್ಗಮಧ್ಯೆ ಜಂಕ್ಷನ್ನಲ್ಲಿ ಸಂಚಾರಿ ಪೊಲೀಸರು ತಪಾಸಣೆಯಲ್ಲಿ ನಿರತರಾಗಿದ್ದರು. ಸೀದಾ ಹೋಗಿ ದಂಡ ಕಟ್ಟಿದ್ರೆ ಯಾವುದೇ ಅನಾಹುತ ಆಗುತ್ತಿರಲಿಲ್ಲ. ಆದ್ರೆ, ಸ್ನೇಹಿತನ ಹುಚ್ಚುತನವೋ, ಪೊಲೀಸರ ಅಸಡ್ಡೆಯೋ ಯುವಕನೊರ್ವ ಆಸ್ಪತ್ರೆಯಲ್ಲಿ ಜೀವಂತ ಶವವಾಗಿದ್ದಾನೆ. ಹೌದು, ಇದೇ ತಿಂಗಳು 9 ರಂದು ಮಧ್ಯಾಹ್ನ ಬೈಕಿನಲ್ಲಿ ಸ್ನೇಹಿತರಿಬ್ಬರು ಕತ್ರಿಗುಪ್ಪೆ ಬಳಿ ಹೋಗುವಾಗ ತಪಾಸಣೆ ನಿರತನಾಗಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಡಿವೈಡರ್ಗೆ ಗುದ್ದಿದ್ದರು. ಪರಿಣಾಮ …
Read More »ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆಯಾಗುತ್ತದೆ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ನಾಳೆಯಿಂದ ಬೆಳಗಾವಿ ಅಧಿವೇಶ ಆರಂಭವಾಗುತ್ತದೆ. ಈಗಾಗಲೇ ಎಲ್ಲಾ ತಯಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯ ನಾಯಕರಿಗೆ ನಾನು ಹೇಳಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗಲ್ಲ. ಬದಲಾಗಿ ಬಡತನವನ್ನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಆಸೆ ಆಮಿಷವೊಡ್ಡಿ ಮತಾಂತರ ಮಾಡಲು ಅವಕಾಶವಿಲ್ಲ. ಮತಾಂತರ ಕಾಯ್ದೆ ಚರ್ಚೆಗೂ …
Read More »