Breaking News

ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಲಕ್ನೋ: ಯುವಕನೊಬ್ಬ ತನ್ನ ತಂದೆಯನ್ನು ಭೀಕರವಾಗಿ ಹತ್ಯೆ ಮಾಡಿ ಬಂಧನಕ್ಕೆ ಒಳಗಾಗಿದ್ದಾನೆ. ತಂದೆಗೆ ಗುಂಡಿಕ್ಕಿ ಕೊಂದು, ತುಂಡು ಮಾಡಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಿದ್ದ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಅವರ ಮನೆಗೆ ಭೇಟಿ ನೀಡಿದ್ದ ಪೊಲೀಸರಿಗೆ ಬ್ಯಾರೆಲ್‌ನಲ್ಲಿ ವ್ಯಕ್ತಿಯ ದೇಹದ ಭಾಗಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಪುತ್ರನನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ತೀವ್ರ …

Read More »

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, …

Read More »

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

ರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ ಪದವಿಗಳನ್ನ ಪ್ರದಾನ ಮಾಡಲಾಯಿತು. ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಹಾಗೂ ಇತರ ಗಣ್ಯರಿಗೆ ವಿವಿಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಡಾಕ್ಟರೇಟ್ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ನಟರಾದ ವಿನಯ್ ರಾಜಕುಮಾರ್, ಯುವರಾಜಕುಮಾರ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್ …

Read More »

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

ಬೆಂಗಳೂರು: ಶಾಸಕ ಡಾ.ಚಂದ್ರು‌ ಲಮಾಣಿ  ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿರೋದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಕಮಿಷನ್ ವಿರುದ್ಧ ಹೋರಾಟ ನಡೆಸಿ ಕಾಂಗ್ರೆಸ್ ವಿರುದ್ಧ ಕೆಂಡ ಉಗುಳುತ್ತಿದ್ದ ಬಿಜೆಪಿಗೆ ತಮ್ಮದೇ ಪಕ್ಷದ ಶಾಸಕ ಸಿಕ್ಕಿಬಿದ್ದಿರೋದು ಸಹಿಸಲಾಗದ ಮರಣ ಸಂಕಟ ಬಂದಂತಾಗಿದೆ. ಈ ಹಿನ್ನೆಲೆ ಚಂದ್ರು ಲಮಾಣಿ ವಿರುದ್ಧ ಶಿಸ್ತು ಕ್ರಮಕ್ಕೆ ಚಿಂತನೆ ನಡೆಸಿದೆ. ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಟ್ರ್ಯಾಪ್‌ ಆಗಿದ್ದು, ಈ ಪ್ರಕರಣ ಸಂಬಂಧ ವರಿಷ್ಠರಿಗೆ ರಾಜ್ಯ …

Read More »

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ  ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ …

Read More »

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ (MGNREGA) ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್  ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಕರೆ ನೀಡಿದರು. ಇಂದು ಚಿಕ್ಕಬಳ್ಳಾಪುರದಲ್ಲಿನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ದೇಶಾದ್ಯಂತ ‘ಮನರೇಗಾವನ್ನು ಉಳಿಸಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾವನ್ನು ರದ್ದುಪಡಿಸಿ, ವಿಬಿಜಿರಾಮ್ ಜಿ (VB-G RAM G) ಕಾಯ್ದೆಯನ್ನು …

Read More »

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್-ಎಂಎಲ್​ಸಿ ಎಫ್.ಎಚ್.ಜಕ್ಕಪ್ಪನವರ ನಡುವೆ ವಾಗ್ವಾದ

ಧಾರವಾಡ : ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ನೇತೃತ್ವದಲ್ಲಿ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ಇಂದು(ಸೋಮವಾರ) ನಡೆದಿದ್ದು, ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ವೇಳೆ ಸಚಿವ ಸಂತೋಷ್​ ಲಾಡ್ ಹಾಗೂ ಎಂಎಲ್​ಸಿ ಎಫ್.ಎಚ್.ಜಕ್ಕಪ್ಪನವರ ನಡುವೆ ತುಸು ಹೊತ್ತು ಏರು ದ್ವನಿಯಲ್ಲಿ ವಾಗ್ವಾದ ನಡೆದ ಪ್ರಸಂಗ ನಡೆಯಿತು. ಜಿಲ್ಲೆಯಲ್ಲಿ ಎಸ್‌ಸಿ, ಎಸ್‌ಟಿ ಸಮಾಜವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಎಸ್‌ಸಿ, …

Read More »

ಗಾಂಧಿ ಪಾಕಿಸ್ತಾನದ ಪಿತಾಮಹ, ಓಮರ್ ಅಬ್ದುಲ್ಲಾ, ರಾಹುಲ್ ಗಾಂಧಿ ಒಂದೇ ಪ್ರೊಡಕ್ಷನ್ : ಯತ್ನಾಳ್ ವಿವಾದದ ಹೇಳಿಕೆ ವೈರಲ್!

ಯಾದಗಿರಿ : ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನದ ರಾಷ್ಟ್ರಪಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ವೈರಲಾಗಿದೆ. ಶಿವಾಜಿ ಜಯಂತಿಯಲ್ಲಿ ಶಾಸಕ ಬಸನಗೌಡ ಪಾಟೀಲ ಭಾಷಣದ ವಿಡಿಯೋ ಈಗ ವೈರಲ್ ಆಗಿದೆ. ಫೆಬ್ರುವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳಲ್ಲ. ಜವಾಹರ್ಲಾಲ್ ನೆಹರೂರನ್ನ ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ನಮ್ಮ ದೇಶದ …

Read More »

ಶಾಸಕ ಡಾ.ಚಂದ್ರು ಲಮಾಣಿ ವಿದ್ಯಾವಂತ ಎಂಬ ಕಾರಣಕ್ಕಾಗಿ ಕುತಂತ್ರ ಮಾಡಲಾಗಿದೆ: ರಮೇಶ ಜಾರಕಿಹೊಳಿ

ಬೆಳಗಾವಿ: ‘ವಿದ್ಯಾವಂತ ಎಂಬ ಕಾರಣಕ್ಕೆ ಪರಿಶಿಷ್ಟ ಸಮುದಾಯದ ಶಾಸಕ ಡಾ.ಚಂದ್ರು ಲಮಾಣಿ ವಿರುದ್ಧ ಪಿತೂರಿ ಮಾಡಿ, ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈ ಕುತಂತ್ರಕ್ಕೆ ಅದೇ ಸಮುದಾಯದ ವ್ಯಕ್ತಿ ಬಳಸಿಕೊಳ್ಳಲಾಗಿದೆ. ಈ ಅನ್ಯಾಯದ ವಿರುದ್ಧ ನಾನೂ ಧ್ವನಿ ಎತ್ತುತ್ತೇನೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಸಕರನ್ನು ತುಳಿಯುವ ಕೆಲಸ ಇಂದು, ನಿನ್ನೆಯಿಂದ ಅಲ್ಲ; 20 ವರ್ಷಗಳಿಂದಲೂ ನಡೆಯುತ್ತ ಬಂದಿದೆ. ಶೇ …

Read More »

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಬಾಗಲಕೋಟೆ: ಶಿವಾಜಿ ಜಯಂತಿಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಬಾಗಲಕೋಟೆಯ ಕಿಲ್ಲಾ ಓಣಿ ಸಹಜ ಸ್ಥಿತಿಗೆ ಬಂದಿದೆ. ಕೊತ್ತಲೇಶ್ವರ ದೇವಸ್ಥಾನ ಹಾಗೂ ಪಂಕಾ ಮಸೀದಿ ಆವರಣದಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಆರಂಭವಾಗಿದೆ. ಈ ಬೆನ್ನಲ್ಲೇ ಹಿಂದೂ ಸರ್ವ ಸಮಾಜದ ಮುಖಂಡರು ಭಾನುವಾರ (ಫೆ.22) ನಡೆಸಿದ ಸಭೆಯಲ್ಲಿ ಮತ್ತೊಮ್ಮೆ ಶಿವಾಜಿ ಜಯಂತಿ ಆಚರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಬಾಗಲಕೋಟೆ ಶಿವಾನುಭವ ಚರಂತಿಮಠ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಫೆ.26 ರಂದು ಶಿವಾಜಿ …

Read More »