Breaking News

ದೆಹಲಿಗೆ ಹಾರಲಿದ್ದಾರಂತೆ ರಮೇಶ್​ ಜಾರಕಿಹೊಳಿ

ಬೆಳಗಾವಿ : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವಾಕಾಂಕ್ಷಿಗಳ ಕಸರತ್ತು ಮುಂದುವರೆದಿದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಲ ಶಾಸಕರು ಈಗಾಗಲೇ ಗುಪ್ತ ಸಭೆ, ಮಾತುಕತೆಯಲ್ಲಿ ತೊಡಗಿದ್ದಾರೆ. ಈ ನಡುವೆ ಮತ್ತೆ ಸಚಿವರಾಗಬೇಕೆಂದು ತೆರೆಮರೆಯಲ್ಲಿ ಕಸರತ್ತು ಮುಂದುವರೆಸಿರುವ ಮಾಜಿ ಮಂತ್ರಿ ರಮೇಶ್​ ಜಾರಕಿಹೊಳಿ ದೆಹಲಿಗೆ ಹಾರಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಗೋವಾಕ್ಕೆ ತೆರಳಿರುವ ಮಾಜಿ ಸಚಿವ ಜಾರಕಿಹೊಳಿ, ಅಲ್ಲಿಂದ ದೆಹಲಿಗೆ ತೆರಳಿ ಹೈಕಮಾಂಡ್​ ಭೇಟಿಗೆ ಮುಂದಾಗಲಿದ್ದಾರೆ. ಆ ಮೂಲಕ ಮತ್ತೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು …

Read More »

ಫೆ.7ರಿಂದ ಬಜೆಟ್‌ ಪೂರ್ವಭಾವಿ ಸಿದ್ಧತೆ- ಇಲಾಖಾವಾರು ಚರ್ಚೆಯ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ಫೆ.7 ರಿಂದ ಇಲಾಖಾವಾರು ಚರ್ಚೆಯ ವೇಳಾಪಟ್ಟಿ ನಿಗದಿ ಮಾಡಲಾಗಿದ್ದು, ಫೆ.10 ಮಧ್ಯಾಹ್ನ 12ಕ್ಕೆ ಸಚಿವ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು …

Read More »

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …

Read More »

ರವಿ ಚೆನ್ನಣ್ಣನವರ್ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಅಷ್ಟೇ: ಗೃಹ ಸಚಿವ ಆರಗ ಜ್ಞಾನೇಂದ್ರ

ಮೈಸೂರು: ರವಿ ಚನ್ನಣ್ಣನವರ್ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದಿರುವ ದೂರು ಆಧರಿಸಿ ತನಿಖೆ ಶುರುವಾಗಿದೆ. ಯಾರು ಬೇಕಾದರೂ ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಇನ್ನೂ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ವರ್ಗಾವಣೆ ಶಿಕ್ಷೆಯಲ್ಲ. ರವಿ ಚನ್ನಣ್ಣನವರ್​ ಅವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಎಂದು ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಹೇಳಿಕೆ ನೀಡಿದ್ದಾರೆ. ರಾಷ್ಟ್ರ ಕಟ್ಟಲು ನಾವು ಬದುಕಬೇಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ …

Read More »

ಬೆಂಗಳೂರಲ್ಲಿ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಪೊಲೀಸ್​! ತಪ್ಪಿತು ಅನಾಹುತ, ಪೇದೆ ಕಾರ್ಯಕ್ಕೆ ಶ್ಲಾಘನೆ

ಬೆಂಗಳೂರು: ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಸಂಚಾರಿ ಪೊಲೀಸ್ ಪೇದೆಯೊಬ್ಬರ ಸ್ಟೋರಿ ಇದು. ಸರಿಯಾದ ಸಮಯಕ್ಕೆ ಈ ಪೊಲೀಸಪ್ಪ ಬಾರದಿದ್ದಲ್ಲಿ ಅನಾಹುತ ಸಂಭವಿಸುತ್ತಿತ್ತು. ಅಷ್ಟರಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ಸಿಬ್ಬಂದಿ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರ್ತಿದೆ. ಅಷ್ಟಕ್ಕೂ ಪೊಲೀಸ್ ಸಿಬ್ಬಂದಿ ಮಾಡಿದ ಮತಹ್ವದ​ ಕಾರ್ಯ ಎಂತಹದ್ದು ಗೊತ್ತಾ? ಇದು ನಿನ್ನೆ(ಮಂಗಳವಾರ) ಬೆಂಗಳೂರಲ್ಲಿ …

Read More »

ಸಂಪುಟ ಪುನಾರಚನೆಗೆ ಮುಂದಾದ ಸಿಎಂ ಬೊಮ್ಮಾಯಿ ನಾಳೆ ದೆಹಲಿ ಭೇಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ಅವರೊಂದಿಗೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ. ಮೇಕೆದಾಟು, ಕೃಷ್ಣಾ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಬಗ್ಗೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ, ರಾಜ್ಯ ಸಂಸದರನ್ನು ಭೇಟಿಯಾಗಿ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ …

Read More »

ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ ಕೇಸ್​: ಚಿಕ್ಕಮನ ಜತೆ ಅಕ್ರಮ ಸಂಬಂಧ,

ಕಲಬುರಗಿ: ಫೋಟೊಗ್ರಾಫರ್ ಶಿವಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಡಿ ರೈಲ್ವೆ ಪೊಲೀಸರು ಐವರು ಹಂತಕರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾಂತೇಶ್ ಆಳಂದಕರ್, ಬಸವರಾಜ್ ಸಲಗಾರ್, ಫಕರಿಪ್ಪ ಸಲಗಾರ್, ಸಿದ್ದಾರೂಢ ಕೋರಬಾರ್ ಹಾಗೂ ಅಶೋಕ ಜಮಾದಾರ್​ ಎಂದು ಗುರುತಿಸಲಾಗಿದೆ.   ಕೊಲೆಯಾದ ಶಿವಕುಮಾರ್, ಆರೋಪಿ ಮಹಾಂತೇಶ್​ ತಾಯಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ವರಸೆಯಲ್ಲಿ ಇಬ್ಬರು ಸಹೋದರರು. ಮಹಾಂತೇಶ್​ಗೆ ಶಿವಕುಮಾರ್​ ದೊಡ್ಡಪ್ಪನ ಮಗನಾಗಬೇಕು. ಚಿಕ್ಕಮ್ಮನ ಜತೆಯಲ್ಲೇ ಅಕ್ರಮ ಸಂಬಂಧ ಹೊಂದಿದ್ದನ್ನು ಮಹಾಂತೇಶ್​ …

Read More »

ಮುಂದಿನ ಆದೇಶದವರೆಗೆ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಯನ್ನು ಗೆಜೆಟ್‌ನಲ್ಲಿ ಪ್ರಕಟಿಸದಂತೆ ಹೈಕೋರ್ಟ್‌ ಧಾರವಾಡ ಪೀಠ ಆದೇಶ

ಗದಗ: ಮುಂದಿನ ಆದೇಶದವರೆಗೆ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಯನ್ನು ಗೆಜೆಟ್‌ನಲ್ಲಿ ಪ್ರಕಟಿಸದಂತೆ ಹೈಕೋರ್ಟ್‌ ಧಾರವಾಡ ಪೀಠ ಆದೇಶ ನೀಡಿರುವುದು ಕಾಂಗ್ರೆಸ್‌ ಪಾಳಯದಲ್ಲಿ ಖುಷಿ ತರಿಸಿದ್ದರೆ; ಚುನಾವಣೆಯನ್ನು ನಿಯಮಾನುಸಾರವೇ ನಡೆಸಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಎಲ್ಲ ವಿಡಿಯೊ ದಾಖಲೆಗಳು ನಮ್ಮ ಬಳಿ ಇವೆ ಎಂಬ ಅಧಿಕಾರಿಗಳ ಹೇಳಿಕೆ ಬಿಜೆಪಿ ಪಾಳಯದಲ್ಲಿ ಆಶಾಭಾವ ಮೂಡಿಸಿದೆ.   ಗದಗ ಬೆಟಗೇರಿ ನಗರಸಭೆಗೆ ಡಿ.27ರಂದು ಚುನಾವಣೆ ನಡೆದು, ಡಿ.30ರಂದು ಫಲಿತಾಂಶ ಪ್ರಕಟವಾಗಿತ್ತು. 35 ವಾರ್ಡ್‌ಗಳ ಪೈಕಿ …

Read More »

ಪಿಸುಮಾತಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಶಿಸ್ತು ಸಮಿತಿ ನೋಟಿಸ್‌

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ. ಸಿದ್ದರಾಮಯ್ಯ ಬಳಿ ಅಂದು ಪುಲಿಕೇಶಿ ನಗರದಿಂದ ಜನ ಬಂದಿರುವ ಬಗ್ಗೆ ಮಾತಾಡಿದ್ದಷ್ಟೇ. ಅದರ ಹೊರತಾಗಿ ನಾನು ಬೇರೇನೂ ಮಾತನಾಡಿಲ್ಲ.ನೋಟಿಸ್‌ಗೆ ಎರಡು ಮೂರು ದಿನದಲ್ಲಿ ಉತ್ತರಿಸುತ್ತೇನೆ ಎಂದು ಮಾಜಿ ಶಾಸಕ ಅಶೋಕ್ ಪಟ್ಟಣ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನನಗೆ ನೋಟಿಸ್‌ ನೀಡಿರುವ ವಿಚಾರ ಮಾಧ್ಯಮಗಳಿಂದ ಗೊತ್ತಾಗಿದೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ಯುವ ಕಾಂಗ್ರೆಸ್ ಕಾಲದಿಂದಲೂ ಡಿ.ಕೆ ಶಿವಕುಮಾರ್ ನಾನು ಸ್ನೇಹಿತರು. ನನಗೆ ನೋಟಿಸ್​​ ಇನ್ನೂ …

Read More »

80 ನಿಮಿಷದಲ್ಲಿ 136 ಅಕ್ಕಿ ಕಾಳುಗಳ ಮೇಲೆ ನಾಡಗೀತೆ ಪದ್ಯ ಬರೆದು ಸಾಧನೆ

ಹಾವೇರಿ ಮೂಲದವರಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿರುವ ಮೈಕ್ರೋ ಪರಮೇಶ್ 80 ನಿಮಿಷದಲ್ಲಿ 136 ಅಕ್ಕಿ ಕಾಳುಗಳ ಮೇಲೆ ನಾಡಗೀತೆ ಪದ್ಯ ಬರೆದು ಸಾಧನೆ ಮಾಡಿದ್ದಾರೆ.ಅತಿ ಕಡಿಮೆ ಅವಧಿಯಲ್ಲಿ ಮತ್ತು ಕನಿಷ್ಠ ಅಕ್ಕಿ ಕಾಳಿನ ಮೇಲೆ ನಾಡಗೀತೆ ಬರೆದ ದಾಖಲೆ ಸೃಷ್ಟಿಸಿದ್ದಾರೆ. ಈ ಸಾಧನೆಗಾಗಿ ವಂಡರ್ ರೆಕಾರ್ಡ್ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನವರು ಪರಮೇಶ್‌ರನ್ನು ಸಂಪರ್ಕಿಸಿದ್ದಾರೆ. ಅವರ ಮುಂದೆ ಶೀಘ್ರವೇ ತಮ್ಮ ಸಾಧನೆಯನ್ನು ಪ್ರದರ್ಶಿಸಲಿದ್ದಾರೆ. ಪರಮೇಶ್ವರ್​ ಅವರು ಅಕ್ಕಿ ಕಾಳಿನ …

Read More »