ಬೆಂಗಳೂರು: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. 2023ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಘೋಷಣೆಯೊಂದಿಗೆ ಬಜೆಟ್ ಮಂಡಿಸುವ ಅನಿವಾರ್ಯತೆ ಸಿಎಂ ಬೊಮ್ಮಾಯಿ ಮೇಲಿದೆ. ಆದರೆ, ಆರ್ಥಿಕ ಸಂಕಷ್ಟದ ಮಧ್ಯೆ ಬಜೆಡ್ ಮಂಡಿಸುವ ಇಕ್ಕಟ್ಟಿನಲ್ಲಿ ಸಿಎಂ ಬೊಮ್ಮಾಯಿ ಸಿಲುಕಿದ್ದಾರೆ. ಸದ್ಯದ ಆರ್ಥಿಕ ಸ್ಥಿತಿಗತಿ ಏನಿದೆ ಎಂಬ ವರದಿ ಇಲ್ಲಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲು ಸಿಎಂ ನಿರ್ಧರಿಸಿದ್ದಾರೆ. 2023 ವಿಧಾನಸಭೆ ಚುನಾವಣೆ ಹಿನ್ನೆಲೆ ಸಿಎಂ ಬೊಮ್ಮಾಯಿಗೆ ಈ …
Read More »ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ,ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಪಣಜಿ: ಗೋವಾ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಬಿಜೆಪಿ ಅವರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಗೋವಾದ ಎರಡು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಾರೆ. ಆದರೆ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಗೋವಾ ಬಿಜೆಪಿ ಸರ್ಕಾರ ಬಹಳಷ್ಟು ಹಗರಣ, ಭ್ರಷ್ಟಾಚಾರ ಮಾಡಿದೆ ಎಂದು ಹೇಳಿಕೆ …
Read More »ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯ ಪ್ರವೇಶಕ್ಕೆ ಯತ್ನಿಸಿರುವ ಖಾಸಗಿ ಬಸ್
ಚಿಕ್ಕೋಡಿ: ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯ ಪ್ರವೇಶಕ್ಕೆ ಯತ್ನಿಸಿರುವ ಖಾಸಗಿ ಬಸ್ ಕಂಪನಿಗಳ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಕಳ್ಳದಾರಿಯ ಮೂಲಕ ಆರ್‍ಟಿಸಿಪಿಆರ್ ವರದಿ ಇಲ್ಲದೆ ಮುಂಬೈನಿಂದ ಬೆಂಗಳೂರಿಗೆ 17 ಜನ ಪ್ರಯಾಣಿಕರನ್ನು ಖಾಸಗಿ ಕಂಪನಿ ಬಸ್ ರಾಜ್ಯಕ್ಕೆ ಕರೆತರುತ್ತಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಪ್ಪಾಚಿವಾಡಿ ಬಳಿ ಬಸ್‍ನನ್ನು ಪೊಲೀಸರು …
Read More »ಈ ಬಾರಿ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಬದಲಾಯಿಸಿಲ್ಲ.: ನಿರ್ಮಲಾ ಸೀತಾರಾಮನ್
ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಮಧ್ಯೆ ತೆರಿಗೆಯನ್ನು ಹೆಚ್ಚಿಸದಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಹೀಗಾಗಿ ಈ ಬಾರಿಯ ಬಜೆಟ್‌ನಲ್ಲಿ ಜನರಿಂದ ಯಾವುದೇ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ಇಳಿದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಜೆಟ್ ಬಳಿಕ ಇಲಾಖೆಯ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿರುವ ಜನರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಬಾರದು ಎಂದು ಪ್ರಧಾನಿ ಮೋದಿ ಅವರು ಕಳೆದ ವರ್ಷ ಸೂಚಿಸಿದ್ದರು. ಈ ಕಾರಣಕ್ಕೆ …
Read More »ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿ, ಬಿಜೆಪಿ ಶಾಸಕ ನಿತೇಶ್ ರಾಣೆಗೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.
ಮುಂಬೈ: ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ c ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್‌ಬಿ ರೋಟೆ ಅವರು ರಾಣೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಕಳೆದ ಡಿಸೆಂಬರ್ 2021ರಲ್ಲಿ ಸಿಂಧುದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತ ಸಂತೋಷ್ ಪರಬ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣವನ್ನು ದಾಖಲಿಸಲಾಗಿತ್ತು.ಪ್ರಕರಣ ಸಂಬಂಧಿಸಿ ರಾಣೆಯನ್ನು 10 ದಿನಗಳ …
Read More »ತಗ್ಗಿದ ಕೋವಿಡ್ ಕೇಸ್.. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳಿಗಿದ್ದ ನಿರ್ಬಂಧ ತೆರವು
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ಹರಡುವ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಜನವರಿ 6 ರಿಂದ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನದಲ್ಲಿ ಎಲ್ಲಾ ಸೇವೆಗಳನ್ನು ರದ್ದು ಮಾಡಿ, ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ರಾಜ್ಯದಲ್ಲಿ ಇದೀಗ ಸೋಂಕು ತಗ್ಗಿದ ಹಿನ್ನೆಲೆ ನಿರ್ಬಂಧಗಳನ್ನು ರದ್ದು ಮಾಡಿ ಆದೇಶಿಸಲಾಗಿದೆ. ಹೀಗಾಗಿ ಕುಕ್ಕೆ …
Read More »ದೇಶದ ಸಂವಿಧಾನ ಪಾಲಿಸದ ಸಮುದಾಯ ಪಾಕಿಸ್ತಾನಕ್ಕೆ ಹೋಗಲಿ
ವಿಜಯಪುರ : ಆರೋಪಿಗಳು ಯಾರೇ ಆಗಿರಲಿ, ಎಂಥವರೇ ಇರಲಿ, ಮುಂದೆ ಒಂದು ದಿನ ಅವರಿಗೆ ಶಿಕ್ಷೆ ತಪ್ಪಿದ್ದಲ್ಲ. ಅದರಲ್ಲೂ ಇಡಿಗೆ ಸಿಕ್ಕವರು ಅಷ್ಟು ಸುಲಭವಾಗಿ ಪಾರಾಗಲಾರರು. ಇಡಿ ಕೈಗೆ ಸಿಕ್ಕವರ ವಿರುದ್ಧ ಈಗಿಲ್ಲದಿದ್ರೂ ಇನ್ನು ಹತ್ತು ವರ್ಷಕ್ಕೆ ನಿಶ್ಚಿತವಾಗಿ ಕ್ರಮ ಆಗೇ ಆಗುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಮೊನ್ನೆ ಒಬ್ಬ ಬಸ್ ಕಂಡೆಕ್ಟರ್ ಸಿಕ್ಕಿದ್ದಾರೆ. ಅವರ ಮನೆಯಲ್ಲಿ ಸಾವಿರಾರು ಕೋಟಿ ಜಪ್ತಿ ಮಾಡಲಾಗಿದೆ. …
Read More »ಹೈಕಮಾಂಡ್ ಈ ಬಾರಿ ಸಚಿವ ಸ್ಥಾನ ನೀಡಲಾಗುವುದು ಎಂದಿದೆ :ಶ್ರೀಮಂತ ಪಾಟೀಲ್
(ಬೆಳಗಾವಿ): ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಮಂತ್ರಿಸ್ಥಾನ ನೀಡುವುದಾಗಿ ಹೈಕಮಾಂಡ್ ಹೇಳಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.ಕಾಗವಾಡ ತಾಲೂಕಿನ ಕೇಂಪವಾಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ತಪ್ಪಿದೆ. ಹಾಗಾಗಿ, ಈ ಬಾರಿ ಮಂತ್ರಿಸ್ಥಾನ ನೀಡಲಾಗುವುದೆಂದು ಹೈಕಮಾಂಡ್ ಹೇಳಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಮರಳುತ್ತಾರೆ ಎಂಬುದೆಲ್ಲಾ ಊಹಾಪೋಹ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಮಾಡಿದರೂ ನಾನು …
Read More »ಕಲಬುರಗಿಯಲ್ಲಿ ಸಾಂಕ್ರಾಮಿಕ ಕೋಗಕ್ಕೆ ಬಲಿಯಾದ್ರಾ ಸಹೋದರರು!?
ಕಲಬುರಗಿ: ಜಿಲ್ಲೆಯಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದು, ಇದಕ್ಕೆ ಸಾಂಕ್ರಾಮಿಕ ರೋಗ ಚಿಕನ್ ಪಾಕ್ಸ್ ಕಾರಣ ಎಂದು ಹೇಳಲಾಗುತ್ತಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ್ ಗ್ರಾಮದಲ್ಲಿ ಸ್ಟೇಷನ್ ಬಡಾವಣೆಯ ನಿವಾಸಿಗಳಾದ ಇಮ್ರಾನ್ ಪಟೇಲ್(16) ಹಾಗೂ ರೆಹಮಾನ್ ಪಟೇಲ್ (14) ಸಾವಿಗೀಡಾದ ಬಾಲಕರು. ಹಾಪೀಸಾ ಬೇಗಂ ಎಂಬುವರ ನಾಲ್ವರು ಮಕ್ಕಳಲ್ಲಿ ಚಿಕನ್ ಪಾಕ್ಸ್ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿದೆ. ಇದರಿಂದ ಆತಂಕಗೊಂಡ ಬೇಗಂ ತನ್ನ ಇಬ್ಬರು ಮಕ್ಕಳನ್ನು ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ …
Read More »ಇದು ‘ಸಬ್ ಕಾ ವಿನಾಶ್ ಬಜೆಟ್’ – ಸಿದ್ದರಾಮಯ್ಯ
ಮೈಸೂರು: ಇಂದು ಮಂಡನೆಯಾಗಿರುವ ಕೇಂದ್ರ ಬಜೆಟ್ ಯಾವುದಕ್ಕೂ ಆದ್ಯತೆ ನೀಡಿಲ್ಲ. ಸಮಸ್ಯೆಗಳಿಗೆ ಪರಿಹಾರ ನೀಡಿಲ್ಲ. ಇದೊಂದು ಸಬ್ ಕಾ ವಿನಾಶ್ ಬಜೆಟ್ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಬಜೆಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇಂದು ಹೆಚ್ ಡಿ ಕೋಟೆ ಜಂಗಲ್ ಲಾಡ್ಜ್ ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಮಂಡನೆಯಾದ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇರಲಿಲ್ಲ. ಆದ್ದರಿಂದ ನಿರಾಶೆಯಾಗಿಲ್ಲ. ಆದರೆ ಮಹಿಳೆಯರು, ರೈತರು ಹಾಗೂ ಮಧ್ಯಮ ವರ್ಗದವರು …
Read More »