Breaking News

ಲಖನ್ ಜಾರಕಿಹೊಳಿ ನಮ್ಮ ಪಕ್ಷದ ಬಂಡಾಯ ಅಭ್ಯರ್ಥಿ ಅಲ್ಲ,: ಲಕ್ಷ್ಮಣ ಸವದಿ

ಲಖನ್ ಜಾರಕಿಹೊಳಿ ನಮ್ಮ ಪಕ್ಷದ ಬಂಡಾಯ ಅಭ್ಯರ್ಥಿ ಅಲ್ಲ, ಅವರು ಪಕ್ಷೇತರ ಅಭ್ಯರ್ಥಿ. ನಮ್ಮ ಗುರಿ ಪ್ರಥಮ ಪ್ರಾಶಸ್ತ್ಯದ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸುವುದು ಒಂದೇ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಲಕ್ಷ್ಮಣ ಸವದಿ ಅವರು ಲಖನ್ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿ, ನಮ್ಮಲ್ಲಿ ಸದಸ್ಯತ್ವ ಪಡೆದುಕೊಂಡು ಚುನಾವಣೆಗೆ …

Read More »

ಟೂರ್‍ಗೆ ಕರೆದುಕೊಂಡು ಹೋಗುವ ಪ್ರಶ್ನೆ ಇಲ್ಲ, ಕಾಂಗ್ರೆಸ್‍ನವರಿಗೆ ಅದು ಇಷ್ಟವಾಗದಿದ್ದರೆ ಮಿಲಿಟ್ರಿ ತಂದು ನಿಲ್ಲಿಸಿ ಚುನಾವಣೆ ಮಾಡಲಿ : ಬಾಲಚಂದ್ರ ಜಾರಕಿಹೊಳಿ

ಡಿಸೆಂಬರ್ 10ರಂದು ನಡೆಯಲಿರುವ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಬೆಳಗಾವಿ ತಾಲೂಕಿನಲ್ಲಿ ಖಾಸಗಿ ರೆಸಾರ್ಟ್‍ವೊಂದರಲ್ಲಿ ಸಭೆ ನಡೆಸಿದ್ದರು. ಈ ವೇಳೆ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು, ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿಯವರು ಎಲ್ಲರೊಂದಿಗೆ ಸಭೆ ನಡೆಸಿದರು. ಆದರೆ ಈ ವೇಳೆ ಮುಖ್ಯಮಂತ್ರಿಗಳು ಮಾಜಿ ಸಚಿವ ರಮೇಶ ಜಾರಕಿಹೊಳಿ, ಸಚಿವ ಉಮೇಶ್ ಕತ್ತಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಜೊತೆಗೆ ಪ್ರತ್ಯೇಕ …

Read More »

ನಡೆಯಲಿರುವ ಮತದಾನ ವೇಳೆ ಹೆಚ್ಚು ಮತಬಿಜೆಪಿಗೆ: ಮಹಾಂತೇಶ ಕವಟಗಿಮಠ

ಡಿಸೆಂಬರ್ 10ನೇ ತಾರೀಖು ಪ್ರೀಲಿಮನರಿ ಮ್ಯಾಚ್ ಇದೆ. 14ರಂದು ಅಂತಿಮ ಮ್ಯಾಚ್ ಇದೆ. ಯಾರು ಯಾರಿಗೂ ಪ್ರತಿಸ್ಪರ್ಧೆ ಅಲ್ಲ. ಒಂದು ಸ್ಥಾನಕ್ಕಾಗಿ ನಾನು ಸ್ಪರ್ಧೆ ಮಾಡಿದ್ದೇನೆ. ಬಿಜೆಪಿ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ಜಿಲ್ಲೆಯ ಎಲ್ಲ ನಾಯಕರು ಸೇರಿ ಇಡೀ ಪಕ್ಷ ನನ್ನ ಜೊತೆಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಹಾಂತೇಶ …

Read More »

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ರಮೇಶ್, ಕತ್ತಿ, ಸವದಿ ಜೊತೆಗೆ ಪ್ರತ್ಯೇಕ ಸಭೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ರಮೇಶ್, ಕತ್ತಿ, ಸವದಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಡಿಸೆಂಬರ್10ರಂದು ನಡೆಯಲಿರುವ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಬೆಳಗಾವಿ ತಾಲೂಕಿನಲ್ಲಿ ಖಾಸಗಿ ರೆಸಾರ್ಟ್‍ವೊಂದರಲ್ಲಿ ಸಭೆ ನಡೆಸಿದ್ದರು. ಈ ವೇಳೆ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು, ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿಯವರು ಎಲ್ಲರೊಂದಿಗೆ ಸಭೆ ನಡೆಸಿದರು. ಆದರೆ ಈ ವೇಳೆ ಮುಖ್ಯಮಂತ್ರಿಗಳು ಮಾಜಿ …

Read More »

ಕೊರೊನಾ ರೂಪಾಂತರಿ ಒಮಿಕ್ರಾನ್‌ ಗೆ ಆತಂಕಪಡುವ ಅಗತ್ಯವಿಲ್ಲ

ನವದೆಹಲಿ: ರಾಜಸ್ಥಾನದಲ್ಲಿ ದೃಢಪಟ್ಟಿರುವ ಒಂಭತ್ತು ಪ್ರಕರಣಗಳಲ್ಲಿ ಅಲ್ಪ ತೀವ್ರತೆಯ ಒಮಿಕ್ರಾನ್‌ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ 9 ಮಂದಿಗೆ ಚಿಕಿತ್ಸೆ ನೀಡುತ್ತಿರುವ ಜೈಪುರದ ಸವಾಯ್‌ ಮಾನ್‌ ಸಿಂಗ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಮಂಗಳವಾರ ತಿಳಿಸಿದ್ದಾರೆ. ಕೊರೊನಾ ರೂಪಾಂತರಿ ಒಮಿಕ್ರಾನ್‌ ಗೆ ಆತಂಕಪಡುವ ಅಗತ್ಯವಿಲ್ಲ ಎಂಬ ಅಂಶ ಮತ್ತೂಮ್ಮೆ ಸಾಬೀತಾಗಿದೆ. ಇದರ ಜತೆಗೆ ಸೋಂಕಿನ ಮೊದಲ ಮತ್ತು ಎರಡನೇ ಅಲೆಯ ಅವಧಿಯಲ್ಲಿದ್ದಂತೆ ವಾಸನೆ ಗುರುತಿಸಲು ಅಸಾಧ್ಯವಾಗುವ ಮತ್ತು …

Read More »

ಮೊಟ್ಟೆ ಬದಲು ಹಣ್ಣು-ಹಂಪಲು ನೀಡಲು ಮುಖ್ಯಮಂತ್ರಿಗಳಿಗೆ ಜೈನ ಯುವ ಸಂಘಟನೆ ವತಿಯಿಂದ ಮನವಿ

ಬೆಳಗಾವಿ: ಸರಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಊಟದ ಸಂದರ್ಭದಲ್ಲಿ ಪೌಷ್ಟಿಕ ಆಹಾರವಾಗಿ ಮೊಟ್ಟೆ ನೀಡುವಂತೆ ಸರಕಾರ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತತ್‌ಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಇಂದು ಮಂಗಳವಾರ ಬೆಳಗಾವಿಯಲ್ಲಿ ಜೈನ ಯುವ ಸಂಘಟನೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಅರ್ಪಿಸಲಾಯಿತು. ವಿಧಾನ ಪರಿಷತ್ ಚುನಾವಣೆಯ ಪ್ರಚಾರಾರ್ಥ ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಜೈನ ಯುವ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. …

Read More »

ಬೊಮ್ಮಾಯಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೇ ರೈತರೊಬ್ಬರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ಬೆಳಗಾವಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೇ ರೈತರೊಬ್ಬರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಬೆಳಗಾವಿ ಖಾಸಗಿ ರೆಸಾರ್ಟ್ ನಲ್ಲಿ ಸಭೆ ನಡೆಸುತ್ತಿದ್ದ ಸಿಎಂ ಭೇಟಿಗೆಂದು ರೈತ ಮುಖಂಡ ರವಿ ಪಾಟೀಲ್ ಆಗಮಿಸಿದ್ದರು. ಈ ವೇಳೆ ಪೊಲೀಸರು ರೈತ ಮುಖಂಡನನ್ನು ತಡೆದಿದ್ದಾರೆ. ಅಲ್ಲದೇ ಸಿಎಂ ಭೇಟಿಗೆ ಅವಕಾಶ ನೀಡಿಲ್ಲ. ಇದರಿಂದ ಭಾವುಕನಾದ ರೈತ, ಅಕಾಲಿಕ ಮಳೆಯಿಂದ ಭತ್ತದ ಬೆಳೆ ಹಾನಿಗೀಡಾಗಿ ಸಂಕಷ್ಟಕ್ಕೀಡಾಗಿದ್ದು, ಸೂಕ್ತ …

Read More »

ರಮೇಶ ಜಾರಕಿಹೊಳಿ ಹಾಂಗ್ ಮಾಡಾಕತ್ತಾರ, ಹಿಂಗ್ ಮಾಡಾಕತ್ತರಾ ಎಂದು ಎಲ್ಲ ಕಡೆ ಸುದ್ದಿ ಹಬ್ಬುತ್ತಿದೆ. ನಾವೆಲ್ಲರೂ ಪ್ರಾಮಾಣಿಕವಾಗಿ ಬಿಜೆಪಿ ಕೆಲಸ ಮಾಡುತ್ತಿದ್ದೇವೆ. : ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ನಿಮಿತ್ತ ಬಿಜೆಪಿ ಪ್ರಮುಖರ ಸಭೆ ಖಾಸಗಿ ರೆಸಾರ್ಟ್ ನಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಕುರಿತು ಜಿಲ್ಲಾದ್ಯಂತ ಹಬ್ಬುತ್ತಿರುವ ಸುದ್ದಿಯ ಕುರಿತು ಮನನೊಂದು ಮಾತನಾಡಿದರು. ರಮೇಶ ಜಾರಕಿಹೊಳಿ ಹಾಂಗ್ ಮಾಡಾಕತ್ತಾರ, ಹಿಂಗ್ ಮಾಡಾಕತ್ತರಾ ಎಂದು ಎಲ್ಲ ಕಡೆ ಸುದ್ದಿ ಹಬ್ಬುತ್ತಿದೆ. ನಾವೆಲ್ಲರೂ ಪ್ರಾಮಾಣಿಕವಾಗಿ ಬಿಜೆಪಿ …

Read More »

ಅನಗತ್ಯ ವಿಳಂಬ ಬೇಡ: ಕೂಡಲಸಂಗಮ ಸ್ವಾಮೀಜಿ

ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ‘ಎ’ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾರ ಅನಗತ್ಯ ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.   ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಸಂಬಂಧ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ಬೆಳಗಾವಿ ಅಧಿವೇಶನದ ಒಳಗಾಗಿ ವರದಿ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ …

Read More »

ಪರಿಷತ್ ಚುನಾವಣೆ ಕ್ಷೇತ್ರ ಸಮೀಕ್ಷೆ: ಎಸ್‌ ರವಿ ಹ್ಯಾಟ್ರಿಕ್‌ ಗೆಲುವಿಗೆ ಲಗಾಮು?

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಎಸ್.ರವಿ ಮೂರನೇ ಜಯದ ವಿಶ್ವಾಸದಲ್ಲಿದ್ದಾರೆ. ಗೆಲುವಿನ ಓಟಕ್ಕೆ ಜೆಡಿಎಸ್ ಇಲ್ಲವೇ ಬಿಜೆಪಿ ತಡೆಯೊಡ್ಡುವುದೇ ಎಂಬುದು ಸದ್ಯದ ಕುತೂಹಲ. ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಇದರ ವ್ಯಾಪ್ತಿಗೆ ಬರುತ್ತವೆ. ರಾಜ್ಯದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ ಪ್ರತಿನಿಧಿಸುವ ಕ್ಷೇತ್ರವಿದು. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಾಮಬಲ ಕೈ ಪಾಳಯದ ಬಲ ಹೆಚ್ಚಿಸಿದೆ. ಕ್ಷೇತ್ರ ವ್ಯಾಪ್ತಿಯ ಇಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ …

Read More »