Breaking News

ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ.ಬಿ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ ಸಮರ ಸಾಧನಗಳು, ಎಂಬೆಡೆಡ್ ತಂತ್ರಾಂಶ, ಇ-ವಿಟಾಲ್ ಸಾಧನಗಳು, ಬಾಹ್ಯಾಕಾಶ ಕ್ಷೇತ್ರದಲ್ಲಿ ಬಳಸಲಾಗುವ ಪೇಲೋಡ್ ಇವುಗಳನ್ನು ಗಮನದಲ್ಲಿ ಇಟ್ಟುಕೊಂಡು ಸಮಗ್ರ ಕ್ಲಸ್ಟರುಗಳನ್ನು ಅಭಿವೃದ್ಧಿಪಡಿಸಲು ಒತ್ತು ಕೊಡಲಾಗಿದೆ. ಜೊತೆಗೆ ಈ ವರ್ಷದ ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿ ಹಂತ-1ರಲ್ಲಿ 200 ಎಕರೆ ವಿಸ್ತಾರದ ಸೆಮಿಕಂಡಕ್ಟರ್ ಪಾರ್ಕ್ ಕಾರ್ಯಾಚರಣೆ ಆರಂಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ …

Read More »

ಗ್ಯಾಸ್‌ ಸೋರಿಕೆಯಾಗಿ ಹೊತ್ತಿ ಉರಿದ ಅಂಗಡಿ – ಬೆಂಕಿ ನಂದಿಸಲು ಹರಸಾಹಸ

ಆನೆಕಲ್‌: ಗ್ಯಾಸ್ ಸೋರಿಕೆಯಾಗಿ ಹಾಸಿಗೆ ಗೋಡೌನ್ ಹೊತ್ತಿ ಉರಿದ  ಘಟನೆ ಬನ್ನೇರುಘಟ್ಟ  ಸಮೀಪದ ದೊಡ್ಡಕಮ್ಮಮಹಳ್ಳಿಯಲ್ಲಿ ನಡೆದಿದೆ. ಕಟ್ಟಡದ ಕೆಳಮಹಡಿಯಲ್ಲಿ ಹಾಸಿಗೆ ಅಂಗಡಿ ಮಾಡಿಕೊಳ್ಳಲಾಗಿತ್ತು. ಮೇಲಿನ ಮಹಡಿಯಲ್ಲಿ ಗೋಡೌನ್ ಮಾಡಿಕೊಳ್ಳಲಾಗಿತ್ತು. ಕೆಲಸಗಾರರಿಗೆ ಅಡುಗೆ ಮಾಡಿಕೊಳ್ಳಲು ಅಲ್ಲಿಯೇ ಸಿಲಿಂಡರ್ ಇಡಲಾಗಿತ್ತು. ಈ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದ್ದಾರೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೆಲಸಗಾರರು ಹೊರಗೆ ಓಡಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಹುಳಿಮಾವು …

Read More »

ಬಿಜೆಪಿ ಅವರಿಗೆ ನನ್ನ ಪರಿಶುದ್ಧ ಆಡಳಿತ ಸಹಿಸೋಕೆ ಆಗ್ತಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು : ಬಿಜೆಪಿ ಅವರಿಗೆ ನನ್ನ ಪರಿಶುದ್ದ ಆಡಳಿತ ಸಹಿಸೋಕೆ ಆಗ್ತಿಲ್ಲ. ಹೀಗಾಗಿ ನನ್ನ ‌ಮೇಲೆ ಏನೇನೋ ಮಾತಾಡ್ತಾ ಇದ್ದಾರೆ ಅಂತ ಸಿಎಂ ಡಿಕೆಶಿವಕುಮಾರ್ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊತ್ವಾಲ್ ಆಡಳಿತ ಇದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರು ಖುಷಿಗೆ ಏನು ಬೇಕಾದರೂ ಮಾತನಾಡಲಿ. ನಾನು ಹಳ್ಳಿಯಲ್ಲಿ ಹುಟ್ಟಿದ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಬಂದವನು. ಅಲ್ಲಿಂದ ಇಲ್ಲಿವರೆಗೂ ಜನರ …

Read More »

ಹಿಟ್ & ರನ್ ಕೇಸ್‌ಗೆ ಬಿಗ್ ಟ್ವಿಸ್ಟ್ – ಸ್ನೇಹಿತನನ್ನು ಕೊಂದು ಸೈಲೆಂಟಾಗಿದ್ದ ಹಂತಕ ತಿಂಗಳ ಬಳಿಕ ಅರೆಸ್ಟ್

ಚಿಕ್ಕಮಗಳೂರು: ‌ಇತ್ತೀಚೆಗೆ ತಾಲೂಕಿನ ಹಿರೇಗೌಜ ಬಳಿ ನಡೆದಿದ್ದ ಹಿಟ್‌ & ರನ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಹತ್ಯೆಯಾದ ಯುವಕನನ್ನು ಆತನ ಸ್ನೇಹಿತನೇ ಕೊಲೆಗೈದು ಕತೆ ಕಟ್ಟಿರುವುದು ತನಿಖೆ ವೇಳೆ ಗೊತ್ತಾಗಿದೆ. ಯಶವಂತ್ (26) ಕೊಲೆಯಾಗಿದ್ದ ಯುವಕ. ಈತನ ಸ್ನೇಹಿತ ಸಚಿನ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಇಬ್ಬರೂ ಹಾಸನದ  ವಿಜಯನಗರದ ನಿವಾಸಿಗಳು. ಕಳೆದ ಜೂನ್ 12 ರಂದು ರಾತ್ರಿ ಹಿರೇಗೌಜ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಶವಂತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ‌ಈ ಜಾಗದಲ್ಲಿ ಗೂಡ್ಸ್ …

Read More »

ನಾವೆಲ್ಲರು ಮಕ್ಕಳ ಭವಿಷ್ಯಕ್ಕಾಗಿ ಪ್ರತಿಭಟನೆ ಮಾಡ್ತಿದ್ದೇವೆ: ಡಿಕೆಶಿ

ಬೆಂಗಳೂರು: ನಾವೆಲ್ಲರು ಮಕ್ಕಳ ಭವಿಷ್ಯಕ್ಕಾಗಿ ಪ್ರತಿಭಟನೆ ಮಾಡ್ತಾ ಇದ್ದೇವೆ ಅಂತ ಸಿಎಂ ಡಿಕೆ ಶಿವಕುಮಾರ್  ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೋರಾಟವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ  ಮಾತನಾಡಿದ ಅವರು, ನಾವೆಲ್ಲರು ನಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡ್ತಿದ್ದೇವೆ. 100ಕ್ಕೂ ಹೆಚ್ಚು ಬಾರಿ ಪೇಪರ್ ಲೀಕ್ ಆಗಿದೆ. ಇಡೀ ದೇಶ ಮತ್ತು ಇಡೀ ವಿಶ್ವ ಯುವಕರ ಭವಿಷ್ಯದ ಬಗ್ಗೆ ಯೋಚನೆ ಮಾಡ್ತಿದೆ. ಭಾರತ ಟ್ಯಾಲೆಂಟ್ ಹಬ್. ನಮ್ಮ ಟ್ಯಾಲೆಂಟ್ ಇಡೀ ಪ್ರಪಂಚದಲ್ಲಿ …

Read More »

ಶಿವಮೊಗ್ಗದಲ್ಲೂ ಪ್ರತಿಭಟನೆಯ ಕಿಚ್ಚು – 1 ಕಿಮೀ ಓಡಿ ಬಿಜೆಪಿ ಕಚೇರಿಗೆ ನುಗ್ಗಿದ ʻಕೈʼ ಕಾರ್ಯಕರ್ತರು

ಶಿವಮೊಗ್ಗ: ನೀಟ್ ಅಕ್ರಮ  ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಿಚ್ಚು ರಾಜ್ಯಕ್ಕೂ ಹಬ್ಬಿದೆ. ಶಿವಮೊಗ್ಗದಲ್ಲೂ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್‌  ಕಾರ್ಯಕರ್ತರು ಪೊಲೀಸ್‌ ವ್ಯಾನ್‌ ಮೇಲೇರಿ ಭಾವುಟ ಬೀಸಿದ್ದಾರೆ. ನಗರದ ಮಹಾವೀರ ಸರ್ಕಲ್‌ನಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಪ್ರತಿಭಟನೆ ತೀವ್ರಗೊಳಿಸಿದ ಕಾಂಗ್ರೆಸ್‌ ಕಾರ್ಯಕರ್ತರು …

Read More »

ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರು: ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ. ಈಶ್ವರ್ ಆಚಾರ್ಯ ಹಾಗೂ ಗೌರಿ ಮೃತ ವೃದ್ಧ ದಂಪತಿ. ಇಬ್ಬರೂ ಶುಗರ್ ಹಾಗೂ ಬಿಪಿಯಿಂದ ಬಳಲುತ್ತಿದ್ದರು. ದಿನದಿಂದ ದಿನಕ್ಕೆ ಅನಾರೋಗ್ಯ ಉಲ್ಬಣಗೊಳ್ಳುತ್ತಿತ್ತು. ಇದೇ ಕಾರಣಕ್ಕೆ ಬೇಸತ್ತು ಜ್ಯೂಸ್‌ ಬಾಟಲ್‌ನಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಸವೇಶ್ವರ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶಿಲನೆ ನಡೆಸಿದ್ದಾರೆ. ದಂಪತಿಗೆ …

Read More »

ಮಗನ ಸಾವಿನ ಸುದ್ದಿ ಕೇಳಿ ಆಘಾತದಿಂದ ತಾಯಿ ಕೂಡ ಸಾವು

ಧಾರವಾಡ: ಮಗನ  ಸಾವಿನ ಸುದ್ದಿ ಕೇಳಿ ಆಘಾತದಿಂದ ತಾಯಿ  ಕೂಡ ಸಾವನ್ನಪ್ಪಿರುವ ಘಟನೆ ಧಾರವಾಡ  ನಗರದ ತೇಜಸ್ವಿನಗರದಲ್ಲಿ  ನಡೆದಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೆಹಬೂಬ್ ಸಾಬ್ ನದಾಫ್ (47) ಬುಧವಾರ ಬೆಳಗ್ಗೆ ಧಾರವಾಡ ನಗರದ ರಾಜೀವ್ ಗಾಂಧಿನಗರದ ಬಳಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ರೈಲ್ವೆ ಪೊಲೀಸರು ಸಂಜೆ ಮೆಹಬೂಬ್ ಶವ ಮರಣೋತ್ತರ ಪರೀಕ್ಷೆ ಮುಗಿಸಿ ಕೊಟ್ಟಿದ್ದರು. ಸಂಜೆ ಏಳು ಗಂಟೆಗೆ ಮೆಹಬೂಬ್ ಅಂತ್ಯಕ್ರಿಯೆ ಮಾಡಲು ತಯಾರಿ ಮಾಡಿದ್ದರು. …

Read More »

ಮಳೆ ಅಬ್ಬರ; ಸಿದ್ದಾಪುರ, ಜೋಯಿಡಾ, ದಾಂಡೇಲಿ, ಶಿರಸಿ ಶಾಲಾ-ಕಾಲೇಜುಗಳಿಗೆ ಜು.24ಕ್ಕೆ ರಜೆ

ಕಾರವಾರ: ಅಬ್ವರದ ಮಳೆ ಹಿನ್ನೆಲೆಯಲ್ಲಿ ಸಿದ್ದಾಪುರ, ಜೋಯಿಡಾ ದಾಂಡೇಲಿ, ಶಿರಸಿ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಜು.24 ರಂದು ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.

Read More »

ನೀಟ್‌ ಪ್ರಶ್ನೆಪತ್ರಿಕೆ ಅಕ್ರಮಕ್ಕೆ ಮೊದಲ ತಲೆದಂಡ – ಕೇಂದ್ರ ಶಿಕ್ಷಣ ಕಾರ್ಯದರ್ಶಿ ಎತ್ತಂಗಡಿ

ನವದೆಹಲಿ: ನೀಟ್‌ ಅಕ್ರಮಕ್ಕೆ ಮೊದಲ ತಲೆದಂಡ ಆಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್‌ ಜೋಶಿ  ಅವರನ್ನು ಎತ್ತಂಗಡಿ ಮಾಡಲಾಗಿದೆ. ಜೋಶಿ ಅವರನ್ನು ಪಂಚಾಯತ್‌ ರಾಜ್‌ ಸಚಿವಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ನಿಯೋಜಿಸಲಾಗಿದೆ.

Read More »