ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ ಯೂನಿವರ್ಸಿಟಿ ಅಥವಾ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ.ವಸತಿ ಇಲಾಖೆಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ವಿಶ್ವವಿದ್ಯಾಲಯವನ್ನು ನಿರ್ಮಿಸಲಾಗಿದೆ. ಪ್ರಧಾನಮಂತ್ರಿಯವರ ಭೇಟಿಗೆ ಮುಂಚಿತವಾಗಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ ನಾರಾಯಣ ಅವರು ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಲು ಕಳೆದ …
Read More »18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 1000 ರೂ. ಮಾಶಾಸನ :ಅರವಿಂದ ಕೇಜ್ರಿವಾಲ್
ಪಣಜಿ: ಗೋವಾ ರಾಜ್ಯದ ಪ್ರತಿ ಮಹಿಳೆಗೆ ತಲಾ 1 ಸಾವಿರ ರೂಪಾಯಿ ಮಾಸಾಶನ ನೀಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಭರವಸೆ ನೀಡಿದೆ. ನವೇಲಿಮ್ ನಲ್ಲಿ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು, ಪ್ರತಿ ಮಹಿಳೆಗೆ ಹಣಕಾಸು ನೆರವು ಒದಗಿಸುವ ಗುರಿಯೊಂದಿಗೆ 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ನೆರವು ನೀಡಲಾಗುತ್ತದೆ. ದೀರ್ಘಾವಧಿ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥರಾದ ದೆಹಲಿ ಸಿಎಂ …
Read More »ಇಷ್ಟು ವರ್ಷದ ಜನರ ಪ್ರೀತಿ ಒಮ್ಮೆಲೆ ಕಣ್ಮುಂದೆ ಬಂದು ಕಣ್ಣೀರು ಹಾಕಿದೆ: B. S. Y
ಮೈಸೂರು: ರಾಜ್ಯದ ಮೂಲೆ ಮೂಲೆಯಲ್ಲೂ ಜನ ಪ್ರೀತಿ ನೀಡುತ್ತಿದ್ದಾರೆ, ನನಗೆ ರಾಜಕೀಯ ತೃಪ್ತಿ ಇದೆ, ಸಮಾಧಾನ ಇದೆ, ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಸಂಘಟನೆ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಶ್ರೀರಾಜೇಂದ್ರ ಭವನದಲ್ಲಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪರ ಮತಯಾಚನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …
Read More »ದೇಶದಲ್ಲಿ ಸಾಲಮನ್ನಾ ಮಾಡಿದ್ದು ನರೇಂದ್ರ ಮೋದಿ ಎಂದು ತಪ್ಪಾಗಿ ಹೇಳಿದ ಸಿದ್ದರಾಮಯ್ಯ
ಬಾಯ್ತಪ್ಪಿ ಮೋದಿ ಹೆಸರು : ದೇಶದಲ್ಲಿ ಸಾಲಮನ್ನಾ ಮಾಡಿದ್ದು ನರೇಂದ್ರ ಮೋದಿ ಎಂದು ತಪ್ಪಾಗಿ ಹೇಳಿದ ಸಿದ್ದರಾಮಯ್ಯನವರು ಬಳಿಕ ಕ್ಷಮೆ ಕೋರಿ ಮನಮೋಹನ್ ಸಿಂಗ್ ಸಾಲಮನ್ನಾ ಮಾಡಿದರು. ಐದು ರಾಜ್ಯಗಳಲ್ಲಿ ಸೋತ ಬಳಿಕ ಕೃಷಿ ಕಾಯ್ದೆ ವಾಪಸ್ ಪಡೆದುಕೊಂಡಿದ್ದಾರೆ. 700 ಜನ ರೈತರು ಸಾವನ್ನಪ್ಪಿದಕ್ಕೆ ಮಿಸ್ಟರ್ ಮೋದಿಯೇ ಕಾರಣ. ರೈತರ ಬಗ್ಗೆ ಇವರಿಗೆ ಕಾಳಜಿ ಇಲ್ಲ. ರೈತರ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆ. ಇವರಿಗೆ ಮೂರು ಕಾಸಿನ ಮಾನ …
Read More »ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದರೂ ಆಶ್ಚರ್ಯವಿಲ್ಲ: ಸಿದ್ದರಾಮಯ್ಯ
ಬೆಳಗಾವಿ : ಕಳೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಸಿನಲ್ಲಿದ್ದುಕೊಂಡೇ ರಮೇಶ್ ಜಾರಕಿಹೊಳಿ ನಮ್ಮಅಭ್ಯರ್ಥಿಯನ್ನು ಸೋಲಿಸಿದರು. ಇದೀಗ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದರೂ ಆಶ್ಚರ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು. ಜಿಲ್ಲೆಯ ರಾಮದುರ್ಗ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಒಬ್ಬರನ್ನೆ ಕಣಕ್ಕಿಳಿಸಬೇಕಿತ್ತು. ಆದರೆ, ಇಬ್ಬರನ್ನು ನಿಲ್ಲಿಸಿದ್ದಾರೆ. ಬಿಜೆಪಿಯವರಿಗೆ ಇಬ್ಬಂದಿ ರಾಜಕಾರಣ ಮಾಡಿ ಗೊತ್ತು. ಈ ಜಿಲ್ಲೆಯ ಲೀಡರ್ ರಮೇಶ್ ಜಾರಕಿಹೊಳಿ ಕಳೆದ …
Read More »200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಸಂಕಷ್ಟ
ಮುಂಬೈ: ವಂಚಕ ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ ಲುಕ್ ಔಟ್ ನೋಟಿಸ್ ಹೊರಡಿಸಿದ್ದು ವಲಸೆ ವಿಭಾಗದ ಅಧಿಕಾರಿಗಳು ನಟಿಯನ್ನು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಕೆಳಗಿಳಿಸಿದರು. ಮೂಲಗಳ ಪ್ರಕಾರ, ನಟಿ ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ನಿರ್ಗಮನ ಗೇಟ್ ಸಂಖ್ಯೆ 3ರ ಮೂಲಕ ಸಂಜೆ 5:30ಕ್ಕೆ ಮಸ್ಕತ್ಗೆ …
Read More »ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ C.M.
ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಮಂಗಳವಾರ ಬೆಳಗಾವಿಗೆ ಆಗಮಿಸಲಿರುವ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ. ಅಂದು ಮುಂಜಾನೆ 8.45ಕ್ಕೆ ವಿಮಾನದ ಮೂಲಕ ಆಗಮಿಸಲಿರುವ ಬೊಮ್ಮಾಯಿ, 9 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ನಗರದ ಖಾಸಗಿ ಹೊಟೆಲ್ ನಲ್ಲಿ ಪಂಚಾಯಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಚುನಾವಣೆಗೆ ಕೇವಲ 4 …
Read More »ಚುನಾವಣೆಯಲ್ಲಿ ನಾವು ಕುಸ್ತಿ ಹಿಡಿಯದೇ ಗೆಲ್ಲುತ್ತೇವೆ: ಗೋವಿಂದ್ ಕಾರಜೋಳ
ಬೆಳಗಾವಿ – ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಕುಸ್ತಿ ಹಿಡಿಯದೇ ನಾವು ಗೆಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ, ರಾಜ್ಯ ಜಲಸಂಪನ್ಮೂಲ ಸಚಿವರೂ ಆಗಿರುವ ಗೋವಿಂದ್ ಕಾರಜೋಳ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿಯ 5150 ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ. ಅವರೆಲ್ಲರೂ ನಮ್ಮ ಪೈಲ್ವಾನರೇ. ಅವರ ಮೇಲೆ ನಮಗೆ ವಿಶ್ವಾಸವಿದೆ. ಹಾಗಾಗಿ ನಾವು ಕುಸ್ತಿ ಹಿಡುಯವ ಅಗತ್ಯವೇ ಇಲ್ಲ ಎಂದರು. ಜಾತಿ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ …
Read More »ಹಿರಿಯ ನಟ ಶಿವರಾಂ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದ ಇಡೀ ಕನ್ನಡ ಚಿತ್ರರಂಗ ನೊಂದಿತ್ತು. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯಕೊಂಡಿ ಕಳಚಿದೆ. ನಾಗರಹಾವು ಹಾಗೂ ಶುಭಮಂಗಳ ಸಿನಿಮಾಗಳ ಖ್ಯಾತಿಯ ನಟ, ನಿರ್ದೇಶಕ ಶಿವರಾಂ ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ನಿನ್ನೆಯಷ್ಟೇ ನಟ ಶಿವರಾಂ ಪಾರ್ಥಿವ ಶರೀರಕ್ಕೆ ತ್ಯಾಗರಾಜನಗರ ನಿವಾಸದಲ್ಲಿ, ಕನ್ನಡ ಚಿತ್ರರಂಗದವರು, ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಇಂದು …
Read More »ಕ್ಷೇತ್ರದ ಅಭಿವೃದ್ಧಿಗೆ ಸದಾ ನಿಮ್ಮ ಜೊತೆ ನಿಮ್ಮ ಒಂದು ವೋಟು ನನಗೆ ಒಂದು ಲಕ್ಷ ವೋಟ್ ಇದ್ದಹಾಗೆ.: ಲಖನ ಜಾರಕಿಹೊಳಿ
ಬೆಳಗಾವಿ: ಪಕ್ಷೇತರ ಅಭ್ಯರ್ಥಿ ಪ್ರಚಾರ ಇಂದು ಕೂಡ ಜೋರಾಗಿತ್ತು ಹಿಂದಿ ಭಾಷೆಯಲ್ಲಿ ತಮ್ಮ ಮತ ಯಾಚನೆ ಪ್ರಾರಂಭ ಮಾಡಿದ ಛೋಟಾ ಸಾಹುಕಾರ ಮರಾಠಿಗರ ಮನಸ್ಸು ಗೆಲ್ಲುವಲ್ಲಿ ಸಫಲ ರಾಗಿದ್ದಾರೆ ಎಂಬ ಮಾತುಗಳು ಸದ್ಯ ಅಲ್ಲಿನ ಗ್ರಾಮದ ವಲಯ ಗಳಲ್ಲಿ ಕೇಳಿ ಬರುತ್ತಿವೆ . ಕನ್ನಡ ಹಾಗೂ ಹಿಂದಿ ಎರಡು ಭಾಷೆ ಗಳಲ್ಲಿ ಮತ ಯಾಚನೆ ಮಾಡಿ ಜನರ ಗಮನ ಸೆಳೆದಿದ್ದಾರೆ . ನಾನು ನಿಮ್ಮ ಸೇವಕ ಈ ಸೇವಕನಿಗೆ ನಿಮ್ಮ …
Read More »