Breaking News

23 ರಾಷ್ಟ್ರಗಳಲ್ಲಿ `ಒಮಿಕ್ರಾನ್’ ಸೋಂಕು ಪತ್ತೆ

ನವದೆಹಲಿ : ಕಳೆದ ಒಂದು ವಾರದಲ್ಲಿಯೇ ದಕ್ಷಿಣ ಆಫ್ರಿಕಾದಿಂದ ಒಮಿಕ್ರಾನ್ ವೈರಸ್ 23 ದೇಶಗಳನ್ನು ತಲುಪಿದೆ. ವಿಶ್ವದಾದ್ಯಂತ ಕೊರನಾ ರೂಪಾಂತರಿ ಒಮಿಕ್ರಾನ್ ವೈರಸ್ ಸೋಂಕಿನ ಆತಂಕ ಹೆಚ್ಚಳವಾಗಿದ್ದು, 23 ರಾಷ್ಟ್ರಗಳಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.ಕೊರೊನಾ ವೈರಸ್ ಒಮಿಕ್ರಾನ್​ನ ಹೊಸ ರೂಪಾಂತರವು ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ.   ದಕ್ಷಿಣ ಆಫ್ರಿಕಾ-77, ಯುಕೆ-22, ಬೋಟ್ಸ್ ವಾನದಲ್ಲಿ 19, ನೆದರ್ ಲ್ಯಾಂಡ್ ನಲ್ಲಿ 16, ಪೋರ್ಚಗಲ್ ನಲ್ಲಿ 13, ಜರ್ಮನಿಯಲ್ಲಿ 9, ಇಟಲಿ 9, ಆಸ್ಟ್ರೇಲಿಯಾ …

Read More »

ಸರ್ಕಾರಿ ಕೆಲಸದ ಅವಧಿಯಲ್ಲಿ ನಿರ್ಜನ ಸ್ಥಳಕ್ಕೆ ತೆರಳಿ ಪಾರ್ಟಿ ಮಾಡುವ ಸರ್ಕಾರಿ ಅಧಿಕಾರಿಗಳು,

ಖಾನಾಪುರ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂವರು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಓರ್ವ ಮಹಿಳಾ ಕಾರ್ಯದರ್ಶಿ,  ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕಿ ಇತ್ತೀಚೆಗೆ ಸರ್ಕಾರಿ ಕೆಲಸದ ಅವಧಿಯಲ್ಲಿ ನಿರ್ಜನ ಸ್ಥಳಕ್ಕೆ ತೆರಳಿ ಪಾರ್ಟಿ ಮಾಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬೀಡಿ ಗ್ರಾಮ ಪಂಚಾಯ್ತಿ ಸದಸ್ಯರಾದ ಸುನೀಲ ಕದಮ್, ಸಂತೋಷ ಕಾಶೀಲಕರ, ವಿಠ್ಠಲ ಪತ್ರಿ, ಫ್ರಾನ್ಸಿಸ್ ಶೇರಾಂವ ಮಂಗಳವಾರ ತಹಸೀಲ್ದಾರ್ ಮತ್ತು …

Read More »

ಸುವರ್ಣ ವಿಧಾನಸೌಧ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರ ಪಿ.ಹೇಮಲತಾ

ಬೆಳಗಾವಿ: ವಿಧಾನಮಂಡಲ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್13 ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಪಿ.ಹೇಮಲತಾ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಬುಧವಾರ (ಡಿ.1) ಭೇಟಿ ನೀಡಿದ ಅವರು ಎಲ್ಲ ಸಿದ್ಧತೆಗಳನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರ ಹಾಗೂ ವಿರೋಧ ಪಕ್ಷದ ಮೊಗಸಾಲೆ, ಸೆಂಟ್ರಲ್ ಹಾಲ್, ಊಟದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯನ್ನು, ಕಾರ್ಯದರ್ಶಿಗಳ ಕ್ಯುಬಿಕಲ್ಸ್ …

Read More »

ಬೆಳಗಾವಿ ಮಾರ್ಕೆಟ್ ಪೊಲೀಸರಿಂದ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 9 ಮಂದಿ ಬಂಧನ

ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಇಸ್ಪೀಟ್ ಆಡುತ್ತಿದ್ದ ಬರೊಬ್ಬರಿ 9 ಮಂದಿಗೆ ಹೆಡೆಮುರಿ ಕಟ್ಟಿದ್ದಾರೆ. ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ ಅವರ ನೇತೃತ್ವದ ತಂಡವು ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾಧ್ವ ರೋಡ ಬಳಿ ದಾಳಿ ಮಾಡಿದ್ದಾರೆ. ಈ ವೇಳೆ 9 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರಿಂದ 1,03,440 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನಕ್ಕೂ ಒಮಿಕ್ರಾನ್ ಕರಿ ನೆರಳು

ವಿದೇಶಗಳಲ್ಲಿ ಹೊಸ ತಳಿ ಕೊರೊನಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಡೀ ವಿಶ್ವದಾಧ್ಯಂತ ಮತ್ತೆ ಆತಂಕ ಸೃಷ್ಟಿಯಾಗಿದೆ. ಅಲ್ಲದೇ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನಕ್ಕೂ ಒಮಿಕ್ರಾನ್ ಕರಿ ನೆರಳು ಬಿದ್ದಿದೆ. ಹೌದು ಡಿಸೆಂಬರ್ 13ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಎಲ್ಲ ರೀತಿಯ ಸಿದ್ಧತೆ ಕೂಡ ಆರಂಭವಾಗಿದೆ. ಆದರೆ ಇದೀಗ ವಿದೇಶಗಳಲ್ಲಿ ಒಮಿಕ್ರಾನ್ ಮತ್ತೆ ಹಾಗೂ ರಾಜ್ಯದಲ್ಲಿ ಅಲ್ಲಲ್ಲಿ ಕೊರೊನಾ ಸೋಂಕು …

Read More »

ಖಾನಾಪುರ ತಾಲ್ಲೂಕಿನ ನಂದಗಡದ ವಾರದ ಸಂತೆಯಲ್ಲಿ ಬುಧವಾರ ಒಂದು ಸುತ್ತು ಸುತ್ತಾಡಿದ ಸ್ಥಳೀಯ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್

ಖಾನಾಪುರ:  ಸ್ಥಳೀಯ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಬುಧವಾರ ತಾಲ್ಲೂಕಿನ ನಂದಗಡ ನಡೆಯುತ್ತಿದ್ದ ವಾರದ ಸಂತೆಯಲ್ಲಿ ಸಾಮಾನ್ಯ ಜನರಂತೆ ಸುತ್ತಾಡಿ ತರಕಾರಿ ಖರೀದಿಸುವುದರ ಜೊತೆಗೆ ಬೀದಿಬದಿ ವ್ಯಾಪಾರಸ್ಥರ ಕುಂದುಕೊರತೆ ಆಲಿಸಿದರು. ವಿಧಾನ ಪರಿಷತ್ ಚುನಾವಣೆಯ ಪ್ರಚಾರಾರ್ಥ ನಂದಗಡಕ್ಕೆ ಭೇಟಿ ನೀಡಿದ್ದ ಅವರು ನಂದಗದ ಸಂತೆಯನ್ನು ಒಂದು ಪೂರ್ಣ ಸುತ್ತು ಹಾಕಿ ಸಂತೆಯಲ್ಲಿ ತಮ್ಮ ಮನೆಬಳಕೆಗೆ ಬೇಕಾದ ಗಜ್ಜರಿ, ಬೀಟರೂಟ್, ಪಾಲಕ್, ಬೀನ್ಸ್ ಸೌತೆಕಾಯಿ ಮತ್ತಿತರ ತರಕಾರಿಗಳನ್ನು ಖರೀದಿಸಿದರು. ಬಳಿಕ ಬೀದಿಬದಿ ವ್ಯಾಪಾರಸ್ಥರೊಂದಿಗೆ ಸಂವಾದ …

Read More »

ಬೆಳಗಾವಿ ವಿಧಾನಪರಿಷತ್‌ ಕ್ಷೇತ್ರ: ಬಿಜೆಪಿ, ಕಾಂಗ್ರೆಸ್‌ಗೆ ‘ಒಳೇಟಿನ’ ಭೀತಿ,ಪಕ್ಷೇತರ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಬಹಳ..?

ಬೆಳಗಾವಿ: ವಿಧಾನಪರಿಷತ್‌ ದ್ವಿಸದಸ್ಯ ಸ್ಥಾನಗಳಿಗೆ ಡಿ.10ರಂದು ನಡೆಯಲಿರುವ ಚುನಾವಣೆಯು, ಇಲ್ಲಿನ ಪ್ರಭಾವಿಗಳಾದ ಜಾರಕಿಹೊಳಿ ಸಹೋದರರ ನಡುವಿನ ಸವಾಲ್‌ನಿಂದಾಗಿ ಇಡೀ ರಾಜ್ಯದ ಗಮನಸೆಳೆದಿದೆ ಮತ್ತು ತೀವ್ರ ಕುತೂಹಲವನ್ನೂ ಹುಟ್ಟು ಹಾಕಿದೆ.   ಬಿಜೆಪಿಯ ಮಹಾಂತೇಶ ಕವಟಗಿಮಠ ಸತತ 3ನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಕಾಂಗ್ರೆಸ್‌ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ತಮ್ಮ ಚನ್ನರಾಜ ಹಟ್ಟಿಹೊಳಿ ಅವರಿಗೆ ಟಿಕೆಟ್ ಕೊಟ್ಟಿದೆ. ಆಮ್ ಆದ್ಮಿ ಪಕ್ಷದಿಂದ ಶೇಖರ ಹೆಗಡೆ ಸ್ಪರ್ಧಿಸಿದ್ದಾರೆ. …

Read More »

ರೋಬೋ ಪಾಪಣ್ಣನ ವರದಿಗೆ ಅಮಾಯಕ BMTC ನೌಕರರು ಸೇವೆಯಿಂದ ವಜಾ!

ಬೆಂಗಳೂರು, ಡಿ. 01: ವೇತನ ಪರಿಷ್ಕರಣೆ ಮಾಡುವಂತೆ ಕೋರಿ ಸಾರಿಗೆ ನೌಕರರು ನಡೆಸಿದ ಮುಷ್ಕರ ನೌಕರರನ್ನೇ ಸಾರಿಗೆ ಇಲಾಖೆ ಬೀದಿ ಪಾಲು ಮಾಡಿದೆ. ಬಿಡಿಗಾಸು ಹೆಚ್ಚಳ ಮಾಡಿಸಿಕೊಳ್ಳಲು ಹೋಗಿ ಕೆಲಸವೇ ಕಳೆದುಕೊಂಡಿದ್ದಾರೆ. ಹತ್ತು ದಿನದಲ್ಲಿ ನಿಮ್ಮ ಬೇಡಿಕೆ ಈಡೇರಿಸುತ್ತೇವೆ ಎಂದ ಸರ್ಕಾರ ಬರೋಬ್ಬರಿ 2500 ಸಾರಿಗೆ ನೌಕರರನ್ನು ಸೇವೆಯಿಂದ ವಜಾ ಮಾಡಿ ಸಿಟ್ಟು ತೀರಿಸಿಕೊಂಡಿದೆ. ವೇತನ ಹೆಚ್ಚಳಕ್ಕಾಗಿ ಹೋರಾಟ ಮಾಡಿದವರು ಎಂಟು ತಿಂಗಳಿನಿಂದ ಕೆಲಸವೇ ಇಲ್ಲದೇ ‘ಮರು ನೇಮಿಸಿಕೊಳ್ಳಿ ಸ್ವಾಮಿ” …

Read More »

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ : ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗಾಗಿ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಡಿ. 31 ರವರೆಗೆ ವಿಸ್ತರಿಸಿದೆ. ಈ ಮೊದಲು ಅರ್ಜಿ ಸಲ್ಲಿಸಲು ನ.30 ವರೆಗೆ ಕೊನೆಯ ದಿನಾಂಕವಾಗಿತ್ತು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡ ಕಾರಣ ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.31 ರವರೆಗೆ ವಿಸ್ತರಿಸಲಾಗಿದೆ.   ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ …

Read More »

ಅಕ್ರಮವಾಗಿ ಗೋವು ಸಾಗಾಟ: ಆರೋಪಿಗಳ ಬಂಧನ

ಉಡುಪಿ: ಭಜರಂಗದಳದ ಕಾರ್ಯಕರ್ತರ ಮೇಲೆ ವಾಹನ ನುಗ್ಗಿಸಿ, ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು. ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿ ಮಾರಣಾಂತಿಕ ದಾಳಿಗೊಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರರಾದ ಚರಣ್ ಹಾಗೂ ಕಿರಣ್ ಅವರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು

Read More »