ಮಂಗಳೂರು: ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ರತ್ನಾಕರ್ನ ಕಾಮಪುರಾಣದ ಅಸಹ್ಯ ಉಟ್ಟಿಸೋ ದೃಶ್ಯಗಳು ವೈರಲ್ ಆಗಿದ್ದು, ಆರೋಗ್ಯ ಕಚೇರಿಯಲ್ಲೇ ಹಲವು ದಿನದಿಂದ ಚೆಲ್ಲಾಟ ನಡೆಸಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದರೂ ತಡವಾಗಿ ಪ್ರಕರಣ ಬೆಳಕಿಗೆ ಬಂದಿದ್ದೇಕೆ? ಈ ಹಿಂದೆಯೇ ವೈದ್ಯ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಜತೆ ರತ್ನಾಕರ್ ನಡೆದುಕೊಳ್ಳುತ್ತಿರುವ ರೀತಿಯ ವಿರುದ್ಧ ಅನಾಮಿಕ ಪತ್ರವೊಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬಂದಿತ್ತು. ಆಗಲೂ ಸಂತ್ರಸ್ತ ಮಹಿಳೆಯರೂ ಬಾಯ್ಬಿಟ್ಟಿರಲಿಲ್ಲ ಏಕೆ? ರತ್ನಾಕರ್ ಕಂಡರೆ ಸಂತ್ರಸ್ತೆಯರಿಗೆ …
Read More »ಈಶ್ವರಪ್ಪ ಹೇಳಿದ ಹಾಗೆ ಬೊಮ್ಮಾಯಿ ರಾಜೀನಾಮೆ ಖಚಿತ….ಡಿಕೆಶಿ ವಿಜಯಪುರದಲ್ಲಿ ಹೊಸ ಬಾಂಬ್
ವಿಜಯಪುರ: ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ. ಈ ಹಿಂದೆ ಯಡಿಯೂರಪ್ಪ ಮೇಲೆ ವಿಶ್ವಾಸ ಕಳೆದುಕೊಂಡರೆಂದು ರಾಜೀನಾಮೆ ಪಡೆಯಲಾಯಿತು. ಅನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬೊಮ್ಮಾಯಿ ಕೂಡ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಆಡಳಿತ ಯಂತ್ರದ ಕುಸಿತದ ಕುರಿತು …
Read More »ಬೆಳಗಾವಿ ಜಿಲ್ಲೆಯ ದುಷ್ಟ ರಾಜಕಾರಣಕ್ಕೆ ಬಿಜೆಪಿ ನಾಯಕರು ಕೊನೆ ಹಾಡುತ್ತಾರೆ ಎಂದು ತಿಳಿದಿದ್ದೇನೆ
ಬೆಳಗಾವಿ: ರಮೇಶ್, ಲಖನ್ ಗಾಡಿ ಕಳಿಸಿದ ಅಂದ ತಕ್ಷಣ ಹೋಗಬೇಡಿ. ನಮ್ಮ ಪಕ್ಷದ ಮುಖಂಡರು ಈ ಸಂಸ್ಕೃತಿಯನ್ನು ಬಿಟ್ಟುಬಿಡಬೇಕು. ಅರಭಾವಿ ಕ್ಷೇತ್ರದಲ್ಲಿ ಮತದಾರರಿಗೆ ₹10,000 ಮುಂಗಡ ಪಾವತಿ ಮಾಡಿದ್ದಾರೆ ಎಂಬ ಮಾತುಗಳಿವೆ. ಮೂರ್ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಹಾಕುವುದಿಲ್ಲವೆಂಬ ಮಾಹಿತಿ ಬಂದಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಮತದಾರರ ಚೀಟಿ ಪಡೆದು ನಾವೇ ಮತ ಹಾಕುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. …
Read More »ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ತಂಡವೊಂದರ ಪಾಲಾಗಲಿದ್ದಾರೆ ಕನ್ನಡಿಗ ಕೆಎಲ್ ರಾಹುಲ್..?
15ನೇ ಆವೃತ್ತಿಯ ಐಪಿಎಲ್‌ಗೆ ಆಟಗಾರರ ರಿಟೇನ್ ಪಟ್ಟಿ ಅಂತಿಮ ಹಂತದಲ್ಲಿದೆ. ಹಾಲಿ 8 ತಂಡಗಳಿಗೆ ತಲಾ 4 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಆಟಗಾರರು ಬೇಕಿದ್ದರಷ್ಟೇ ತಮ್ಮ ಫ್ರಾಂಚೈಸಿಗಳೊಂದಿಗೆ ಒಪ್ಪಂದ ಮುಂದುವರಿಸಬಹುದು. ಇಲ್ಲವಾದರೆ ಹರಾಜಿಗೆ ದಾಖಲಿಸಬಹುದು. ಈ ಬಾರಿ ಲಖನೌ ಹಾಗೂ ಅಹಮದಾಬಾದ್ ತಂಡಗಳು ಕೂಡ ಸೇರ್ಪಡೆಗೊಂಡಿದ್ದು, ಸ್ಟಾರ್ ಆಟಗಾರರಿಗೆ ಮತ್ತಷ್ಟು ಡಿಮ್ಯಾಂಡ್ ಹೆಚ್ಚಾಗಿದೆ. ಕಳೆದೆರಡು ಆವೃತ್ತಿಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ತಂಡದಿಂದ …
Read More »ಕುಷ್ಟಗಿ: ಪೊಲೀಸರ ಬಲೆಗೆ ಬಿದ್ದ ಟ್ರಾಲಿ ಸ್ಪೆಷಲಿಸ್ಟ್ ಕಳ್ಳರ ಗ್ಯಾಂಗ್
ಕುಷ್ಟಗಿ: ನಿಲ್ಲಿಸಿದ್ದ ರೈತರ ಟ್ರ್ಯಾಕ್ಟರ್ ಟ್ರಾಲಿ ಗಳನ್ನು ಕದ್ದು, ಮಾರುತ್ತಿದ್ದ ಟ್ರಾಲಿ ಸ್ಪೆಷಲಿಸ್ಟ್ ಕಳ್ಳರ ಗ್ಯಾಂಗನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದು, ಮೂರು ಟ್ರ್ಯಾಕ್ಟರ್ ಟ್ರಾಲಿ ವಶಪಡಿಸಿಕೊಂಡಿದ್ದಾರೆ. ಕಳೆದ ನ.26ರಂದು ಸಂಗನಾಳ ಗ್ರಾಮದ ಮುದಕನಗೌಡ ಭರಮಗೌಡ ಗೌಡ್ರು ಅವರು, ಗ್ರಾಮದ ನಿರುಪಾದೇಶ್ವರ ಮಠದ ಜಾಗದಲ್ಲಿ ನಿಲ್ಲಿಸಿದ್ದ ಟ್ರಾಲಿ ಕಳುವಾಗಿರುವ ಬಗ್ಗೆ ದೂರು ನೀಡಿದ್ದರು. ತಾವರಗೇರಾ ಪಿಎಸೈ ವೈಶಾಲಿ ಝಳಕಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನ.28ರಂದು ನಾಲ್ವರು ಸ್ಪೆಷಲಿಸ್ಟ್ ಕಳ್ಳರು ಟ್ರಾಲಿ ತೆಗೆದುಕೊಂಡು ಹೋಗುವಾಗ ಪೊಲೀಸರು …
Read More »4 ಬಾರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ನಾಲ್ಕು ಬಾರಿಯೂ ಅವನ್ಯಾವನ್ನೋ ಕರೆದುಕೊಂಡು ಬಾ. ಅವನಿಗೆ ದುಡ್ಡು ಕೊಡು ಹೀಗೆ ಇದೇ ಆಯ್ತು
ಕೊಪ್ಪಳ: ಕರ್ನಾಟಕ ರಾಜ್ಯದಲ್ಲಿ 4 ಬಾರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಆದ್ರೆ ನಮ್ಮ ಗ್ರಹಚಾರ ಸರಿ ಇಲ್ಲ, ಪೂರ್ಣ ಬಹುಮತ ಸಿಗಲಿಲ್ಲ. ನಾಲ್ಕು ಬಾರಿಯೂ ನಮಗೆ ಪೂರ್ಣ ಬಹುಮತ ಸಿಗಲೇ ಇಲ್ಲ. ಜನ ಆಡಳಿತ ಮಾಡಿ ಅಂತಾರೆ, ಆದ್ರೆ ಒಂದು ಸ್ಥಾನ ಕಡಿಮೆ, ನಾಲ್ಕು ಸ್ಥಾನ ಕಡಿಮೆ ಬರುತ್ತೆ, 4 ಬಾರಿಯೂ ಹಾಗೇ ಆಯ್ತು. ನಾಲ್ಕು ಬಾರಿಯೂ ಅವನ್ಯಾವನ್ನೋ ಕರೆದುಕೊಂಡು ಬಾ. ಅವನಿಗೆ ದುಡ್ಡು ಕೊಡು ಹೀಗೆ ಇದೇ ಆಯ್ತು …
Read More »₹ 20 ಸಾವಿರಕ್ಕೆ ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ!
ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪರೀಕ್ಷಾ ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರುತ್ತಿದ್ದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ‘ಮರಿಯಣ್ಣಪಾಳ್ಯದ ಎಂ. ರಾಕೇಶ್ (37), ಹೆಬ್ಬಾಳ ಕೆಂಪಾಪುರದ ಕೆ. ಕೃಷ್ಣ (27), ಕೊತ್ತನೂರಿನ ಹನುಮಂತಪ್ಪ ಲೇಔಟ್‌ನ ತನ್ವಯ್ ದೇಬ್‌ರಾಯ್ (33) ಹಾಗೂ ಎಚ್‌ಬಿಆರ್ ಲೇಔಟ್‌ನ ಹೈದರ್ ಅಲಿ (37) ಬಂಧಿತರು. ಅವರಿಂದ 682 ನಕಲಿ ಅಂಕಪಟ್ಟಿಗಳು ಹಾಗೂ 18 …
Read More »ರಾಸಲೀಲೆ ವಿಡಿಯೋ ಪತಿಗೆ ಕಳಿಸಿದ್ದ ಅತ್ಯಾಚಾರ ಆರೋಪಿಗೆ ಜಾಮೀನು, ಅಕ್ರಮ ಸಂಬಂಧಕ್ಕೆ ಇಬ್ಬರ ಒಪ್ಪಿಗೆ ಇತ್ತು ಎಂದ ಹೈಕೋರ್ಟ್
ಬೆಂಗಳೂರು: ವಿವಾಹಿತೆಯಾಗಿರುವ ಸಂತ್ರಸ್ತೆ ಮಹಿಳೆಯು ಬೆಳಗಿನ ಜಾವ ಆರೋಪಿಗೆ ವಿಡಿಯೊ ಕರೆ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಸಂತ್ರಸ್ತೆಯ ಖಾಸಗಿ ಅಂಗಗಳ ಚಿತ್ರಗಳನ್ನು ಆತ ಸೆರೆ ಹಿಡಿದಿದ್ದಾನೆ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ, ಅತ್ಯಾಚಾರ ಆರೋಪಿಗೆ ಜಾಮೀನು ನೀಡಿದೆ. ಕೊಪ್ಪಳ ಜಿಲ್ಲೆಯ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ ನಲ್ಲಿ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಆರೋಪಿ ಬಸನಗೌಡ ಅಲಿಯಾಸ್ ಬಸವರಾಜ್ ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ …
Read More »ಲಾಕ್ ಡೌನ್, ಶಾಲಾ, ಕಾಲೇಜು ಮುಚ್ಚುವ ಕುರಿತು ಸಿಎ ಹೇಳಿದ್ದೇನು?
ದಾವಣಗೆರೆ : ಸರ್ಕಾರದ ಮುಂದೆ ಲಾಕ್ ಡೌನ್ ಕುರಿತು ಯಾವುದೇ ಪ್ರಸ್ತಾವನೆ ಇಲ್ಲ. ಶಾಲಾ -ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತು ಜನತೆ ಭಯಪಡದೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ. ರೂಪಾಂತರಿ ವೈರಸ್ ಕಂಡು ಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಲಾಗಿದೆ. …
Read More »ಶಿಕ್ಷಕ ಹುದ್ದೆ ನಿರೀಕ್ಷಿತರಿಗೆ ಗುಡ್ ನ್ಯೂಸ್ : ವಿವಿ, ಕಾಲೇಜುಗಳಲ್ಲಿ ಖಾಲಿ ಇರುವ ಅಧ್ಯಾಪಕರ ನೇಮಕಾತಿಗೆ ʼUGCʼ ಅಧಿಸೂಚನೆ
ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು. ವಿಶ್ವವಿದ್ಯಾನಿಲಯ ಅನುದಾನ ಆಯೋಗವು ದೇಶಾದ್ಯಂತ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಸಂಸ್ಥೆಗಳು ಮತ್ತು ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯುಜಿಸಿ ಹೊರಡಿಸಿರುವ ನೋಟಿಸ್ ಪ್ರಕಾರ, ಅಧ್ಯಾಪಕರಲ್ಲಿ (Faculty) ಕಾಯಂ ನೇಮಕಾತಿಗೆ ಸಂಬಂಧಿಸಿದಂತೆ ಸೂಚನೆಗಳನ್ನ ನೀಡಲಾಗಿದೆ. ಏಪ್ರಿಲ್ 1, 2021ರ ಪ್ರಕಾರ, ದೆಹಲಿ ವಿಶ್ವವಿದ್ಯಾನಿಲಯದಲ್ಲಿ (DU) …
Read More »