ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಲಗಮೇಶ್ವರ ಗ್ರಾಮದ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ
ಬೆಂಗಳೂರು : ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್ಗಳು ರಸ್ತೆಗಿಳಿದಿವೆ. ಬಂದ್ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಎಂದಿನಂತೆಯೇ ಸಾರ್ವಜನಿಕರು, ಸಾರಿಗೆ ವಾಹನಗಳ ಸಂಚಾರ …
Read More »ಸ್ಯಾಂಕಿ ಟ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮೂಲಕ ಗಂಗೆಗೆ ನಮನ
ಬೆಂಗಳೂರು : ತೇಲುವ ವೇದಿಕೆ ಮೇಲೆ ತಾಯಿ ಗಂಗಮ್ಮ ದೇವಿಗೆ ನಮನ, ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಹಾಕಿ ಕಾವೇರಿ ಆರತಿ, ವರ್ಣರಂಜಿತ ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಮಂತ್ರ ಘೋಷಗಳ ಭಕ್ತಿ ಭಾವದ ಜತೆಗೆ ಜಲ ಹಾಗೂ ಜಲ ಮೂಲಗಳ ಸಂರಕ್ಷಣೆಗಾಗಿ ಪ್ರತಿಜ್ಞಾ ಸ್ವೀಕಾರ.. ಇದು ಬೆಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಯಾಂಕಿ ಕೆರೆಯಲ್ಲಿ ಶುಕ್ರವಾರ ನಡೆದ ಕಾವೇರಿ ಆರತಿ ಕಾರ್ಯಕ್ರಮದ ಚಿತ್ರಣ. ಮಾ.22ರಂದು ವಿಶ್ವ ಜಲ ದಿನದ ಅಂಗವಾಗಿ 21ರಂದು …
Read More »ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ
ಬೆಂಗಳೂರು: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದೆ. ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ. ಇರ್ಪಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಚೇರ್ಮನ್ ಡಾ. ದಾಕ್ಷಯಿಣಿ ಎಸ್. ಅಪ್ಪ ಇವರಿಗೆ ಕೂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ …
Read More »ಕರವೇ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಬೆಳಗಾವಿಯಲ್ಲಿ ಫಾಲೋವರ್ ಎಂಬ ಮರಾಠಿ ಸಿನಿಮಾ ರದ್ದು
ಬೆಳಗಾವಿ : ಟ್ರೇಲರ್ನಲ್ಲಿ ಬೆಳಗಾವಿ ಮಹಾರಾಷ್ಟ್ರದ್ದು ಎಂದು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು “ಫಾಲೋವರ್” ಮರಾಠಿ ಚಿತ್ರ ವಿರುದ್ಧ ಸಿಡಿದೆದ್ದಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾಗಿದ್ದರಿಂದ ಸಿನಿಮಾ ಪ್ರದರ್ಶನ ರದ್ದು ಪಡಿಸಲಾಗಿದೆ. ಗಡಿ ವಿವಾದದ ಬಗ್ಗೆ ಬೆಳಕು ಚೆಲ್ಲುವ ಚಿತ್ರ ಇದಾಗಿದೆ ಎಂದು ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ಕಾರ್ಯಕರ್ತರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಫಾಲೋವರ್ ಚಿತ್ರಪ್ರದರ್ಶನವನ್ನು ಟಾಕೀಸ್ …
Read More »ಕರ್ನಾಟಕ ಬಂದ್: ಕೆಲವು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
ಬೆಂಗಳೂರು : ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಇಂದು ಬಂದ್ಗೆ ಕರೆ ಕೊಟ್ಟಿದ್ದು, ಕೆಲವು ಜಿಲ್ಲೆಗಳು ನೀರಸ ಪ್ರತಿಕ್ರಿಯೆ ತೋರಿದೆ. ಗಣಿ ನಾಡು ಬಳ್ಳಾರಿಯಲ್ಲಿ ಎಂದಿನಂತೆ ಅಂಗಡಿ-ಮುಂಗಟ್ಟಿನಿಂದ ಹಿಡಿದು ಎಲ್ಲವೂ ತೆರೆದಿದೆ. ಬಸ್, ಆಟೋ ಸಂಚಾರವಿದ್ದು ಬಳ್ಳಾರಿ ಮಂದಿ ಬಂದ್ಗೆ ಬೆಂಬಲ ನೀಡಿಲ್ಲ. ಆದರೆ ಬೆಳಗ್ಗೆ ಹತ್ತು ಗಂಟೆಗೆ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನೈತಿಕ ಬೆಂಬಲ ಕೊಡಲು ಕನ್ನಡಪರ ಸಂಘಟನೆಗಳು ತೀರ್ಮಾನಿಸಿವೆ. ಈ ಹಿನ್ನೆಲೆ ಬಳ್ಳಾರಿ ರಾಯಲ್ ವೃತ್ತದಲ್ಲಿ ಪೊಲೀಸರು ನಿಯೋಜನೆಗೊಂಡಿದ್ದಾರೆ. …
Read More »ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ!
ಬೆಳಗಾವಿ : ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ! ಬೆಳಗಾವಿ ನಗರದಲ್ಲಿ ಅನ್ಯ ಕೋಮಿನ ಯುವಕರಿಂದ ವಿವಿದೆಡೆ ನಡೆಯುತ್ತಿರುವ ಅನುಚಿತ ಚಟುವಟಿಕೆಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಇಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಪಾಂಗುಳಗಲ್ಲಿ …
Read More »ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ
ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಬಾಲಭವನದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ …
Read More »ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು…
ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು… ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು ಹರಿಸದಂತೆ ಆಗ್ರಹಿಸಿದ ಇಂದು ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಚಿಕ್ಕಪಡಸಲಗಿ ಗ್ರಾಮದ ಬಳಿ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ …
Read More »ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ… ಬೀದಿಗಿಳಿದು ಪ್ರೊಟೆಸ್ಟ್, ಪೊಲೀಸರೊಂದಿಗೆ ವಾಗ್ವಾದ
ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ… ಬೀದಿಗಿಳಿದು ಪ್ರೊಟೆಸ್ಟ್, ಪೊಲೀಸರೊಂದಿಗೆ ವಾಗ್ವಾದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್‌ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ …
Read More »