ನಂಜನಗೂಡು : ರಸ್ತೆ ತುಂಬೆಲ್ಲಾ ಹರಡಿದ್ದ ಹುರಳಿ ಸೊಪ್ಪುನಿಂದಾಗಿ ಗರ್ಭಿಣಿಯನ್ನು ಹೊತ್ತ ಅಂಬ್ಯುಲೆನ್ಸ್ ವಾಹನವೊಂದು ಸಿಲುಕಿಕೊಂಡು ಹುರುಳಿ ಸೊಪ್ಪಿನಿಂದ ಬಿಡಿಸಿಕೊಂಡು ಮುಂದೆ ಸಾಗಲು ಚಾಲಕ ಹರಸಾಹಸ ಪಡಬೇಕಾಯಿತು. ಸಾರ್ವಜನಿಕ ರಸ್ತೆಯಲ್ಲಿ ಹುರಳಿ ಒಕ್ಕಣೆ ಮಾಡುವುದಕ್ಕೆ ಸರಕಾರ ಈ ಹಿಂದೆ ನಿರ್ಬಂಧ ಹೇರಿದ್ದರೂ ಅದು ಕೇವಲ ಪುಸ್ತಕದ ಬದನೆಕಾಯಿಯಂತಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ಹುರಳಿ ಒಕ್ಕಣೆ ಮಾಡುವುದಕ್ಕೆ ಸರಕಾರ ಈ ಹಿಂದೆ ನಿರ್ಬಂಧ ಹೇರಿದ್ದರೂ ಅದು ಕೇವಲ ಪುಸ್ತಕದ ಬದನೆಕಾಯಿಯಂತಾಗಿದೆ. ಬುಧವಾರ ಗರ್ಭಿಣಿಯೊಬ್ಬಳನ್ನ …
Read More »ಜ. 26 ಗಣರಾಜ್ಯೋತ್ಸವದಂದು ಇಂಡಿಯಾ ಗೇಟ್, ಕೆಂಪುಕೋಟೆ ಮೇಲೆ ಭಯೋತ್ಪಾದಕ ದಾಳಿ ಸಾಧ್ಯತೆ:
ನವದೆಹಲಿ: ಜನವರಿ 26 ರ ಗಣರಾಜ್ಯೋತ್ಸವದಂದು (ಜನವರಿ 26), ಭಯೋತ್ಪಾದಕರು ದೆಹಲಿಯಲ್ಲಿ ದಾಳಿ ಮಾಡಬಹುದು. ಗಣರಾಜ್ಯೋತ್ಸವದಂದು ಭಯೋತ್ಪಾದಕ ದಾಳಿಯ ಸಾಧ್ಯತೆಯ ಬಗ್ಗೆ ಗುಪ್ತಚರ ಬ್ಯೂರೋ(ಐಬಿ) ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದೆ. ಇದರ ಪ್ರಕಾರ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಯೋತ್ಪಾದಕರು ದೇಶದ ನಾಯಕರು ಸೇರಿದಂತೆ ಕೆಲವು ವಿಐಪಿಗಳನ್ನು ಟಾರ್ಗೆಟ್ ಮಾಡುವ ಸೂಚನೆಗಳಿವೆ. IB ಯ ಇನ್ಪುಟ್ ಪ್ರಕಾರ, ನಿಷೇಧಿತ ಖಲಿಸ್ತಾನಿ ಸಂಘಟನೆಯಾದ ಸಿಖ್ ಫಾರ್ ಜಸ್ಟಿಸ್ ಗಣರಾಜ್ಯೋತ್ಸವದಂದು ಭಯೋತ್ಪಾದಕ ದಾಳಿಯನ್ನು ನಡೆಸುವ ಪ್ರಕ್ರಿಯೆಯಲ್ಲಿದೆ. …
Read More »ಕೊವ್ಯಾಕ್ಸಿನ್, ಕೊವಿಶೀಲ್ಡ್ ಲಸಿಕೆಗಳ ನಿಯಮಿತ ಮಾರುಕಟ್ಟೆ ಅನುಮೋದನೆಗಾಗಿ ಸಿಡಿಎಸ್ಸಿಒ ವಿಷಯ ತಜ್ಞರ ಸಮಿತಿಯಿಂದ ಶಿಫಾರಸ್ಸು
ತುರ್ತು ಪರಿಸ್ಥಿತಿಯಲ್ಲಿ ಷರತ್ತುಬದ್ಧ ಅನುಮತಿ ಪಡೆದಿರುವ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳಿಗೆ ಸಂಪೂರ್ಣವಾಗಿ ನಿಯಮಿತ ಮಾರುಕಟ್ಟೆ ಬಳಕೆಗೆ ಅನುಮೋದನೆ ನೀಡುವಂತೆ ಭಾರತದ ಔಷಧ ನಿಯಂತ್ರಕರ ವಿಷಯ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ. ಲಸಿಕೆಗಳಿಗೆ ಮಾರುಕಟ್ಟೆ ದೃಢೀಕರಣ ಸಿಕ್ಕರೆ, ಅವು ಔಷಧ ಮಾರುಕಟ್ಟೆಯಲ್ಲಿ ಸಿಗಲಿವೆ. ಸೀರಂ ಇನ್ಸ್ಟಿಟ್ಯೂಟ್ನ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆಗಳ ಸ್ಥಿತಿಯನ್ನು ಅಪ್ಗ್ರೇಡ್ ಮಾಡಬೇಕು ಅಂದರೆ, ಸದ್ಯ ಅವುಗಳನ್ನು ತುರ್ತುಸಂದರ್ಭದಲ್ಲಿ ವಯಸ್ಕರಿಗೆ ಷರತ್ತುಬದ್ಧವಾಗಿ, ನಿಯಂತ್ರಿತವಾಗಿ ನೀಡಲಾಗುತ್ತಿದೆ. …
Read More »ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆ, ತಾಲ್ಲೂಕುಗಳಿಗೆ ಅನುದಾನ ಬಿಡುಗಡೆ
ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ ಗಣರಾಜ್ಯೋತ್ಸವ ದಿನದ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ರಾಜಧಾನಿ ಬೆಂಗಳೂರು ನಗರಕ್ಕೆ 25 ಲಕ್ಷ ರೂ, ಉಳಿದಂತೆ ಪ್ರತಿ ಜಿಲ್ಲೆಗೆ ತಲಾ 1 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ತಾಲ್ಲೂಕು ಮಟ್ಟದ ಕಾರ್ಯಕ್ರಮಗಳಿಗೆ ತಲಾ 20 ಸಾವಿರ ರೂ. ಬಿಡುಗಡೆ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗಣರಾಜ್ಯೋತ್ಸವ ಟ್ಯಾಬ್ಲೋ; ಇಳಕಲ್ ಸೀರೆ, ಗುಳೇದಗುಡ್ಡದ ಖಣ ಆಯ್ಕೆ …
Read More »ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ.. ಅಪಾರ ವನಸಂಪತ್ತು ನಾಶ
ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ವನಸಂಪತ್ತು ನಾಶವಾಗಿದೆ. ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದು ಸುಮಾರು 2 ಕಿ.ಮೀ ವಾಪ್ತಿವರೆಗೂ ಬೆಂಕಿ ಆವರಿಸಿದೆ. ಇನ್ನು, ನವಿಲು, ಚಿರತೆ, ಜಿಂಕೆಗಳು ಸೇರಿದಂತೆ ಅನೇಕ ಪ್ರಾಣಿಗಳು ಅಗ್ನಿಗೆ ಆಹುತಿಯಾಗಿವೆ ಅಂತಾ ಹೇಳಲಾಗ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ತೆರಳಲು ಸಾಧ್ಯವಾಗದ ಸ್ಥಳದಲ್ಲಿ ಬೆಂಕಿ ಆವರಿಸಿಕೊಂಡಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
Read More »ರಾಜ್ಯದ ಇಂದಿನ ಕೊರೋನಾ ವರದಿ
ಬೆಂಗಳೂರು- ಕರ್ನಾಟಕದಲ್ಲಿ ಇಂದು 40,499 ಹೊಸ ಪ್ರಕರಣಗಳು ಕಂಡು ಬಂದಿವೆ. ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು: 24,135 ರಾಜ್ಯದಲ್ಲಿ ಧನಾತ್ಮಕ ದರ: 18.80% ಬಿಡುಗಡೆಗಳು: 23,209 ಸಕ್ರಿಯ ಪ್ರಕರಣಗಳು ರಾಜ್ಯ: 2,67,650 (ಬೆಂಗಳೂರಿನಲ್ಲಿ- 184000) ಸಾವುಗಳು: 21 (ಬೆಂಗಳೂರು- 05) ಪರೀಕ್ಷೆಗಳು: 2,15,312 ಕೋವಿಡ್ ನಿರ್ಬಂಧ ಸಡಿಲಿಕೆ: ತಜ್ಞರ ಸಭೆ ನಂತರ ತೀರ್ಮಾನ.
Read More »ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು
ದಾವಣಗೆರೆ: ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಸಾರ್ವಜನಿಕ ಆಸ್ಪತ್ರೆ ಎದುರು ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಸರ್ಕಾರಿ ಆಸ್ಪತ್ರೆ ಮುಂದೆ ಬಾಲಕನ ಮೃತದೇಹ ಇಟ್ಟು ಪಾಲಕರ ಪ್ರತಿಭಟನೆ ಮಹೇಶ್-ನೇತ್ರಾವತಿ ದಂಪತಿ ಪುತ್ರ ಮಗ ಭರತ್ (13) ಮೃತ ಬಾಲಕ. ಅನಾರೋಗ್ಯದಿಂದ ಬಳಲುತ್ತಿದ್ದ ಭರತ್ನನ್ನು ಪಾಲಕರು ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದರು. ಕರ್ತವ್ಯದಲ್ಲಿದ್ದ ವೈದ್ಯರು ಸಕಾಲಕ್ಕೆ ಬಾಲಕನಿಗೆ ಚಿಕಿತ್ಸೆ ನೀಡದ …
Read More »ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 89 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ.
ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಅಬ್ಬರ ಮುಂದುವರೆದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 89 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲೇ 39 ಮಂದಿಗೆ ಸೋಂಕು ತಗುಲಿದೆ. ಬೆಳಗಾವಿ ಎಪಿಎಂಸಿ ಠಾಣೆಯ 11 ಸಿಬ್ಬಂದಿ, ಶಹಾಪುರ ಠಾಣೆಯ ಮೂವರು ಸಿಬ್ಬಂದಿ, ಟಿಳಕವಾಡಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ. ಓರ್ವ ಇನ್ಸ್ಪೆಕ್ಟರ್, ಇಬ್ಬರು ಪಿಎಸ್ಐ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ 39 ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಕಂಡುಬಂದಿದೆ. ಉಳಿದಂತೆ ಡಿಎಆರ್, ಸಿಎಆರ್, …
Read More »ವಿದ್ಯಾರ್ಥಿಗಳಿಂದ ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ.
ಹುಬ್ಬಳ್ಳಿ: ‘ಬಡ, ನಿರ್ಗತಿಕ ಹಾಗೂ ದಾಸೋಹ ಕೈಂಕರ್ಯ ನಡೆಸುತ್ತಿರುವ ಮಠಗಳಿಗೆ ವಿತರಿಸುವುದಕ್ಕಾಗಿ, ನಗರದ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್) ವಿದ್ಯಾರ್ಥಿಗಳು ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ ಆರಂಭಿಸಿದ್ದಾರೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಡಿ.ವಿ. ಹೊನಗಣ್ಣವರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 50 ವಿದ್ಯಾರ್ಥಿಗಳು ಜ. 1ರಿಂದ 20ರವರೆಗೆ ಹಮ್ಮಿಕೊಂಡಿರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಇದುವರೆಗೆ 25 ಕೆ.ಜಿ.ಯ 200ಕ್ಕೂ ಹೆಚ್ಚು ಅಕ್ಕಿ ಚೀಲಗಳು ಸಂಗ್ರಹವಾಗಿವೆ. …
Read More »ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆ
ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಜಮೀನಿಗೆ ಆಕಳು ಮೇಯಿಸಲು ಬಿಟ್ಟಿದ್ದಿಯಾ ಎಂದು ಜಗಳ ತೆಗೆದು ಶ್ರೀಕಾಂತ ಕಟಾಬಳಿ ಎನ್ನುವ ಯುವಕನ ಮೇಲೆ ಲಕ್ಷ್ಮಣ್ ದಡ್ಡಿ, ಲಕ್ಷ್ಮಣ್ ಪುತ್ರ ಸಚಿನ್ ಹಾಗೂ ರಂಜಿತ್ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಶ್ರೀಕಾಂತ ಕಟಾಬಳಿ ತಲೆಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದಡ್ಡಿ …
Read More »