ಗೋಕಾಕ್ : ಗೋಕಾಕ ತಾಲ್ಲೂಕಿನ ಗುಜನಾಳ ಮತಗಟ್ಟೆಗೆ ನಾನೇ ಬೂತ್ ಮಟ್ಟದ ಏಜೆಂಟರಾಗಿ ಕಾರ್ಯ ನಿರ್ವಹಿಸುತ್ತೇನೆಂದು ಸ್ವತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಗೋಕಾಕ ಹಿಲ್ ಗಾರ್ಡನ್ ಕಚೇರಿಯಲ್ಲಿ ಶನಿವಾರ ಬೂತ್ ಮಟ್ಟದ ಏಜೆಂಟರುಗಳ ಆಯ್ಕೆ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಗ್ಗೆ ತಿಳಿಸಿದ್ದಾರೆ. ಗುಜನಾಳ ಮತಗಟ್ಟೆಯಲ್ಲಿ ಪ್ರತಿ ಬಾರಿಯೂ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರಭಾವ ಹೆಚ್ಚಾಗಿರುತ್ತದೆ. ಈ ಕಾರಣದಿಂದ ಸತೀಶ್ ಅವರು ಈ …
Read More »ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಆಸ್ಪತ್ರೆಗೆ ಎಂಟ್ರಿ!
ಹುಬ್ಬಳ್ಳಿ: ಧಾರವಾಡದ ಎಸ್ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸ್ಫೋಟದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿ ಕಿಮ್ಸ್ ಅಲರ್ಟ್ ಆಗಿದ್ದು, ಎರಡೂ ಡೋಸ್ ಕೊರೊನಾ ಲಸಿಕೆ ಪಡೆದವರಿಗಷ್ಟೇ ಕಿಮ್ಸ್ ಪ್ರವೇಶಕ್ಕೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಎಸ್ಡಿಎಂ ಮೆಡಿಕಲ್ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಎರಡೂ ಡೋಸ್ ಪಡೆದ ರೋಗಿಗಳು ಮತ್ತು ಸಂಬಂಧಿಕರಿಗೆ ಮಾತ್ರ ಪ್ರವೇಶ ಕಲ್ಪಿಸಿ ಕಿಮ್ಸ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಕಿಮ್ಸ್ …
Read More »ಬಾಗಲಕೋಟೆಯಲ್ಲಿ ಬ್ಲ್ಯಾಕ್ಮೇಲ್ ಮಾಡಿ 13 ಲಕ್ಷ ರೂ. ದೋಚಿದ್ದ ಖದೀಮ ಅರೆಸ್ಟ್
ಬಾಗಲಕೋಟೆ: ಕುಟುಂಬವೊಂದಕ್ಕೆ ಬ್ಲ್ಯಾಕ್ ಮೇಲ್ ಮಾಡಿ 13 ಲಕ್ಷ ರೂ. ದೋಚಿದ್ದ ಖತರ್ನಾಕ್ ಕಿಲಾಡಿ ಯುವಕನನ್ನು ಬಂಧಿಸುವಲ್ಲಿ ಇಲಕಲ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 18 ವರ್ಷದ ಯುವಕ ಸುಲೇಮಾನ್ ಮೇಕಮುಂಗಲಿ ಬಂಧಿತ ಆರೋಪಿ. ಈತ ಇಲಕಲ್ಲ ನಗರದ ಸೀರೆ ವ್ಯಾಪಾರಿ ಸುಜಿತ್ ಎಂಬುವರ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದ. ಸದ್ಯ ಆರೋಪಿ ಪೊಲೀಸ್ ವಶದಲ್ಲಿದ್ದಾನೆ. ಇಲಕಲ್ ನಗರದ ಸುಜಿತ್ ಎಂಬ ಸೀರೆ ವ್ಯಾಪಾರಸ್ಥರ 14 ವಯಸ್ಸಿನ …
Read More »ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ,
ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಗೋಕಾಕ ಚುನಾವಣಾ ವ್ಯವಸ್ಥೆ ಹೇಗಿದೆ ಎಲ್ಲರಿಗೂ ಗೊತ್ತೆ ಇದೆ, ಹೀಗಾಗಿ ನಾನೇ ಬೂತ್ ಎಜೆಂಟ್ ಆಗಿ ಚುನಾವಣೆಯ ದಿನ ಕೂರುತ್ತೆನೆ ಎಂದ ಸತೀಶ್, ಗೋಕಾಕದ ಹಿಲ್ ಗಾರ್ಡನ್ ನಲ್ಲಿ ಮಾಧ್ಯಮಗಳಿಗೆ ಸತೀಶ್ ಹೇಳಿಕೆ, ಗುಜನಾಳ ಗ್ರಾಂ ಪಂ ನಲ್ಲಿ ನಾನೇ ಬೂತ್ ಎಜೆಂಟ್ ಆಗುವೆ, ಪೂಜಾರಿ ಮಮದಾಪೂರ ದಲ್ಲಿ ಬೂತ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದ …
Read More »ನಾನು ಲೋಕಸಭಾ ಚುನಾವಣೆಯಲ್ಲಿ ನನ್ನ ತಮ್ಮ ನನ್ನ ಸೋಲಿಸಿ ಮಂಗಳಾ ಅಂಗಡಿಯನ್ನು ಗೆಲ್ಲಿಸಿ ತಂದಿದ್ದೇನೆ
ಬೆಳಗಾವಿ- ಇತ್ತೀಚಿಗೆ ನಡೆದ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಸ್ವಂತ ತಮ್ಮ ಸತೀಶ್ ಜಾರಕಿಹೊಳಿ ಅವರನ್ನು ಸೋಲಿಸಿ,ಲಿಂಗಾಯತ ಸಮುದಾಯದ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರನ್ನು ಗೆಲ್ಲಿಸಿದ್ದು ನಾನೇ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಠ ಅವರ ಪರವಾಗಿ ಮತಯಾಚಿಸಿದ ಅವರು ಪಕ್ಷದ ವಿಚಾರ ಬಂದಾಗ ನಾನೆಂದಿಗೂ ಕುಟುಂಬ ನೋಡಿಲ್ಲ,ನನಗೆ ಪಕ್ಷದ ಗೆಲುವೇ ಮುಖ್ಯವಾಗಿದ್ದು,ನಾನು …
Read More »ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಲಾರಿಗಳನ್ನ ವಶಕ್ಕೆ ಪಡೆದ ಪೊಲೀಸರು..
ಅಕ್ರಮವಾಗಿ ಅಕ್ಕಿ ಚೀಲಗಳನ್ನು ಹೊತ್ತು ಗುರುಮಠಕಲ್ ಕಡೆಯಿಂದ ಗುಜರಾತಿನ ಅಹಮದಾಬಾದ್ ಕಡೆಗೆ ಲಾರಿಗಳು ತೆರಳುತ್ತಿದ್ದವು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಲಾರಿಗಳಿಂದ ಒಟ್ಟು 21.62 ಲಕ್ಷ ರೂ. ಮೌಲ್ಯದ ( 50 ಕೆಜಿ ತೂಕದ) 1,962 ಅಕ್ಕಿ ಚೀಲಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಭೀಮರಾಯನಗುಡಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಅಧಿಕಾರಿಗಳ ಕಾರ್ಯಕ್ಕೆ ಎಸ್ಪಿ ಡಾ. …
Read More »ಧಾನಪರಿಷತ್ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ನಾಪಪತ್ರಗಳಲ್ಲಿ ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ.
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರ ವಾಪಸು ಪಡೆಯಲು ಇಂದು ಕೊನೆಯ ದಿನವಾಗಿದ್ದು, ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ. ವಿಧಾನಪರಿಷತ್‌ನ 20 ಕ್ಷೇತ್ರಗಳಿಂದ ಒಟ್ಟು 121 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಒಟ್ಟು 121 ಅಭ್ಯರ್ಥಿಗಳಿಂದ 215 ನಾಮಪತ್ರ ಸ್ವೀಕಾರ ಮಾಡಲಾಗಿತ್ತು. ಈ ಪೈಕಿ 119 ಪುರುಷರು ಹಾಗೂ ಇಬ್ಬರು ಮಹಿಳೆಯರು ನಾಮಪತ್ರ ಸಲ್ಲಿಕೆ ಮಾಡಿದ್ದರು. …
Read More »ಬುದ್ದಿ ಹೇಳಿದ್ದಕ್ಕೆ ನೇಣಿಗೆ ಶರಣಾದ ತಮ್ಮ: ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಕ್ಕ
ಹಾವೇರಿ: ಜಿಲ್ಲೆಯ ಬ್ಯಾಡಗಿಯ ವಿನಾಯಕ ನಗರದಲ್ಲಿ ಅಕ್ಕ- ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 16 ವರ್ಷದ ನಾಗರಾಜ ಚಲವಾದಿಗೆ ಅಕ್ಕ ಭಾಗ್ಯಶ್ರೀ ಚೆನ್ನಾಗಿ ಓದು ಶಾಲೆಗೆ ಹೋಗು ಎಂದು ಬುದ್ದಿ ಹೇಳಿದ್ದಾಳೆ. ಇದರಿಂದ ಮನನೊಂದ ನಾಗರಾಜ ಮನೆಯ ಮೇಲಿನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ತಮ್ಮನ ಸಾವಿನ ಸುದ್ದಿ ತಿಳಿದು ಮನೆಗೆ ಬಂದ ಅಕ್ಕ 18 ವರ್ಷದ ಭಾಗ್ಯಶ್ರಿ ಮನನೊಂದು ನೇಣಿಗೆ ಶರಣಾಗಿದ್ದಾಳೆ. ಬ್ಯಾಡಗಿ ಪಟ್ಟಣದ ವಿನಾಯಕ ನಗರದಲ್ಲಿ ನಡೆದ ಘಟನೆ ತಡವಾಗಿ …
Read More »ದಿನಕ್ಕೊಂದು ತಾಲ್ಲೂಕಿನಲ್ಲಿ ಮಿಂಚಿನ ಓಡಾಟ ನಡೆಸಿರುವ ರಮೇಶ್ ಜಾರಕಿಹೊಳಿ
ಬೆಳಗಾವಿ-ವಿಧಾನ ಪರಿಷತ್ರಿನ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಪರವಾಗಿ ಮಿಂಚಿನ ಪ್ರಚಾರ ನಡೆಸಿದ್ದಾರೆ. ದಿನಕ್ಕೊಂದು ತಾಲ್ಲೂಕಿನಲ್ಲಿ ಮಿಂಚಿನ ಓಡಾಟ ನಡೆಸಿರುವ ರಮೇಶ್ ಜಾರಕಿಹೊಳಿ ನಿನ್ನೆ ಗುರುವಾರ ಖಾನಾಪೂರ ತಾಲ್ಲೂಕಿನಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. ಒಂದೇ ದಿನ ಖಾನಾಪೂರ ತಾಲ್ಲೂಕಿನ 50 ಕ್ಕೂ ಹೆಚ್ವು ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿಯಾಗಿ ಮತಯಾಚನೆ ಮಾಡುವ ಮೂಲಕ ರಾಜಕೀಯ ವಿರೋಧಿಗಳಿಗೆ ನಡುಕ ಹುಟ್ಟಿಸಿದ್ದಾರೆ. …
Read More »ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಡಿಸೆಂಬರ್ ನಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ
ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ , ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ ಈ ಹಿನ್ನೆಲೆ …
Read More »