ನವದೆಹಲಿ: ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು …
Read More »ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುಣೆ: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಆಂಜಿಯೋಗ್ರಫಿ ಮಾಡಲಾಗಿದೆ ಎಂದು ಡಾ. ಗುರುವಾರ ರೂಬಿ ಹಾಲ್ ಕ್ಲಿನಿಕ್‌ನಲ್ಲಿ ವೈದ್ಯಕೀಯ ಅಧೀಕ್ಷಕ ಅವಧೂತ್ ಬೋದಮವಾಡ್ ಹೇಳಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 84 ವರ್ಷದ ಅಣ್ಣಾ ಹಜಾರೆ ಅವರನ್ನ ಆಸ್ಪತ್ರೆಗೆ …
Read More »ಇಂದು ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಪ್ರವಾಸ : ಸಂವಿಧಾನ ದಿವಸ ಆಚರಣೆಯಲ್ಲಿ ಭಾಗಿ
ದಾವಣಗೆರೆ : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆಗೆ ಭೇಟಿ ನೀಡಲಿದ್ದಾರೆ.ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿವಸ ಆಚರಣೆ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 11.30 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಶಾಸಕರಾದ …
Read More »ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ
ನವದೆಹಲಿ : ಕಳೆದ 24 ಗಂಟೆಯಲ್ಲಿ ಮತ್ತೆ 10,549 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 466980ಕ್ಕೆ ಏರಿಕೆಯಾಗಿದೆ. ಇನ್ನು ಸಾವಿನ ಸಂಖ್ಯೆಯಲ್ಲಿಯೂ ಭಾರಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 488 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ 110133 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9868 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33977830 ಜನರು ಕೋವಿಡ್ ನಿಂದ ಗುಣಮುಖರಾಗಿ …
Read More »150 ರೂ. ಗಡಿ ದಾಟಿದ ಟೊಮೆಟೋ ದರ!
ದಕ್ಷಿಣ ಭಾರತದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆನ್ನೈನಲ್ಲಿ ಪ್ರತಿ ಕೆಜಿ ಟೊಮೊಟೋ ದರವನ್ನು 150 ರೂ..ಗೆ ಮುಟ್ಟಿದೆ. ಇತ್ತ ಕರ್ನಾಟಕದಲ್ಲಿ ಟೊಮೆಟೋ ಆಗಮನ ಸ್ಥಗಿತವಾಗಿರುವುದು, ಕೃಷ್ಣಗಿರಿಯಲ್ಲಿ ಮಳೆಯಿಂದಾಗಿ ಬೆಳೆ ನಷ್ಟವಾದ ಕಾರಣ, ಬೇಡಿಕೆಗೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಮಳೆ ಆರಂಭಕ್ಕಿಂತ ಮೊದಲು ಪ್ರತೀ ಕೆಜಿ ಟೊಮ್ಯಾಟೊಗೆ ೨೦ ರು. ನಂತೆ ಮಾರಾಟ ಮಾಡಲಾಗುತಿತ್ತು. ಏಕಾಏಕಿ ಆರಂಭವಾದ ಮಳೆ ತರಕಾರಿ ಬೆಲೆಗಳನ್ನು ಗಗನಕ್ಕೆ ಏರುವಂತೆ ಮಾಡಿತ್ತು. ಇದರಿಂದ …
Read More »ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವ.
ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧವೊಂದು ಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಆರ್.ಆರ್.ನಗರ, ಮಾಗಡಿ, ಹೆಮ್ಮಿಗೆಪುರ, ಕಗ್ಗಲಿಪುರ, ಕೆಂಗೇರಿ, ಬಿಡದಿ ಭಾಗಗಳಲ್ಲಿ ಹಲವೆಡೆ ಭೂಗರ್ಭದೊಳಗಿಂದ ಭಾರಿ ಶಬ್ಧ ಕೇಳಿಬಂದಿದ್ದು, ಕೆಲಕಾಲ ಭೂಮಿ ಕಂಪಿಸಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಜನರು ಆತಂಕಕ್ಕೀಡಾಗಿ ಮನೆಯಿಂದ ಹೊರಗೋಡಿ ಬಂದ ಘಟನೆ ನಡೆದಿದೆ. ಮಧ್ಯಾಹ್ನ 12.15ರ ಸುಮಾರಿಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ. ಬೆಂಗಳೂರಿನ ಹಲವೆಡೆ ಹಾಗೂ ರಾಮನಗರದಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ ರಿಕ್ಟರ್ …
Read More »ಮೋದಿ ಸರ್ಕಾರಕ್ಕೆ ಜ.26ರವರೆಗೆ ಗಡುವು: MSPಗಾಗಿ ಒತ್ತಾಯ
ನವದೆಹಲಿ ನವೆಂಬರ್ 26: ದೆಹಲಿ ಗಡಿ ಭಾಗದಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಬೇಡಿಕೆ ಈಡೇರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ರೈತರು ಗಡುವು ಕೊಟ್ಟಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುವವರೆಗೂ ಸರ್ಕಾರಕ್ಕೆ ಯೋಚಿಸಲು ಮತ್ತು ಅರ್ಥಮಾಡಿಕೊಳ್ಳಲು ಸಮಯವಿದೆ. ಕೇಂದ್ರ ಸರ್ಕಾರಕ್ಕೆ ಜನವರಿ 26 ರವರೆಗೆ ಬೇಡಿಕೆ ಈಡೇರಿಕೆಗೆ ಸಮಯ ನೀಡಿದ್ದೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …
Read More »ಕಬ್ಬು ಪೂರೈಸಿದ ಬಾಕಿ ಹಣ ನೀಡುವಂತೆ ಆಗ್ರಹಿಸಿ ರಾಮದುರ್ಗ ಶಾಸಕ ಮಹದೇವಪ್ಪ ಯಾದವಾಡ ಮನೆ ಎದುರು ರೈತರು ಪ್ರತಿಭಟನೆ
ಬೆಳಗಾವಿ: ಕಬ್ಬು ಪೂರೈಸಿದ ಬಾಕಿ ಹಣ ನೀಡುವಂತೆ ಆಗ್ರಹಿಸಿ ರಾಮದುರ್ಗ ಶಾಸಕ ಮಹದೇವಪ್ಪ ಯಾದವಾಡ ಮನೆ ಎದುರು ರೈತರು ಪ್ರತಿಭಟನೆ ನಡೆಸಿದರು. ಉದಪುಡಿ ಗ್ರಾಮದ ಬಳಿಯಿರುವ ಶಿವಸಾಗರ ಸಹಕಾರಿ ಸಕ್ಕರೆ ಕಾರ್ಖಾನೆಗೆ ರೈತರು ಪೂರೈಸಿದ್ದ ಕಬ್ಬಿಗೆ ಈವರೆಗೆ ಹಣ ನೀಡಿಲ್ಲ. ಕಾರ್ಖಾನೆ ಅಧ್ಯಕ್ಷರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ ರೈತರು, ಬಾಕಿ ಹಣ ನೀಡುವವರೆಗೂ ಕಾರ್ಖಾನೆ ಮುಚ್ಚುವಂತೆ ಆಗ್ರಹಿಸಿದರು. ಸಕ್ಕರೆ ಸಚಿವರಿಂದ ಸೂಕ್ತ ಭರವಸೆ ಸಿಗುವವರೆಗೂ ಮನೆಗಳಿಗೆ ತೆರಳುವುದಿಲ್ಲ ಎಂದು ಧರಣಿ …
Read More »ಸ್ಥಳೀಯ ವ್ಯಾಪಾರಿಗಳ ಬೇಡಿಕೆಗೆ ಪಟ್ಟಣದ ವಿವಿಧ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿದ್ದರಿಂದ ಬಂದ್ ಶಾಂತಿಯುತವಾಗಿ ಸಂಪನ್ನಗೊಂಡಿತು.
ಖಾನಾಪುರ: ಪರಜಿಲ್ಲೆ, ಪರರಾಜ್ಯಗಳಿಂದ ಬಂದು ಪಟ್ಟಣದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವವರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಖಾನಾಪುರ ಶಹರ ವ್ಯಾಪಾರಸ್ಥರ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಖಾನಾಪುರ ಬಂದ್ ಸಂಪೂರ್ಣ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಥಳೀಯ ವ್ಯಾಪಾರಿಗಳ ಬೇಡಿಕೆಗೆ ಪಟ್ಟಣದ ವಿವಿಧ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿದ್ದರಿಂದ ಬಂದ್ ಶಾಂತಿಯುತವಾಗಿ ಸಂಪನ್ನಗೊಂಡಿತು. ಬಂದ್ ಅಂಗವಾಗಿ ಔಷಧ ಅಂಗಡಿಗಳು, ಪೆಟ್ರೋಲ್ ಬಂಕ್ ಹೊರತುಪಡಿಸಿ ಉಳಿದ ಎಲ್ಲ ಬಗೆಯ ವ್ಯಾಪಾರ ವಹಿವಾಟುಗಳು ನಡೆಯಲಿಲ್ಲ. ಹಣ್ಣು, ತರಕಾರಿ …
Read More »