ಬೆಳಗಾವಿ: ಜಿಲ್ಲೆಯಾದ್ಯಂತ 1ರಿಂದ 9ನೇ ತರಗತಿಯವರೆಗಿನ ಶಾಲೆಗಳನ್ನು ಜ.17ರಿಂದ ಪುನರಾರಂಭಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಬುಧವಾರ ಆದೇಶ ಹೊರಡಿಸಿದ್ದಾರೆ. ‘ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಿಕೆ ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾಧ್ಯಮದ ಶಾಲೆಗಳನ್ನು ಜ.19ವರೆಗೆ ತೆರೆಯದಂತೆ ಆದೇಶಿಸಲಾಗಿತ್ತು. ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಶಿಕ್ಷಣ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿ ನೀಡಿದ ನಿರ್ದೇಶನದ ಅನ್ವಯ ಆದೇಶವನ್ನು ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದ್ದಾರೆ.
Read More »ಪೊಲೀಸ್ ಭದ್ರಕೋಟೆಯಾದ ಇಡೀ ರಾಮನಗರ: ಇಂದು ಭಾರೀ ಹೈಡ್ರಾಮಾಗೆ ಸಾಕ್ಷಿ ಆಗಲಿದೆ
ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಐದನೇ ದಿನಕ್ಕೆ ಕಾಲಿರಿಸಿದೆ. ಆದರೆ ಇದರ ವಿರುದ್ಧ ರಾಜ್ಯ ಹೈಕೋರ್ಟ್ ಗರಂ ಆಗಿದ್ದು, ಕೊರೊನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ. ಕೋರ್ಟ್ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್ ಪಡೆಯನ್ನು ಫೀಲ್ಡ್ಗಿಳಿಸಿದೆ. ಇಂದು ಐದನೇ ದಿನಕ್ಕೇ ಕಾಂಗ್ರೆಸ್ ಪಾದಯಾತ್ರೆ …
Read More »ಮಾಡೆಲ್ ಮಾಡುವ ನೆಪದಲ್ಲಿ ಖಾಸಗಿ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ ಪುಂಗಿದಾಸ, ಚರಿತ್ರೆ ಬಿಚ್ಚಿಟ್ಟ ಪೊಲೀಸ್
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಾಂಗ ಮಾಡ್ತಿರೋ ಪ್ರಪಂಚ್ ಎಂಬಾತ ಮಹಿಳೆಯರ ಹೆಸರಿನಲ್ಲಿ ಇನ್ಸ್ಟಾಗ್ರಾಂನಲ್ಲಿ ಫೇಕ್ ಖಾತೆಗಳನ್ನು ತೆಗೆದು ಯುವತಿಯರನ್ನು ಪರಿಚಯ ಮಾಡಿಕೊಳ್ತಿದ್ದ. ಹುಡುಗಿಯರು ಪರಿಚಯವಾಗ್ತಿದ್ದಂತೆ ನಿಮ್ಮನ್ನು ದೊಡ್ಡ ಮಾಡೆಲ್ ಮಾಡ್ತೀನಿ, ಕೈ ತುಂಬಾ ದುಡ್ಡು ಸಿಗೋಹಾಗೆ ಮಾಡ್ತೀನಿ ಅಂತ ಫುಂಗಿ ಬಿಡ್ತಿದ್ದ. ಇವನ ಮಾತು ಕೇಳಿ ಯುವತಿಯರು ಮರುಳಾಗ್ತಿದ್ದಂತೆ ಮಾಡೆಲಿಂಗ್ ಫೋಟೋ ಕಳಿಸುವಂತೆ ಕೇಳುತ್ತಿದ್ದ. 35 ರಿಂದ 40 ಸಾವಿರ ಕೊಡುವ ಭರವಸೆ ನೀಡ್ತಿದ್ದ. ಅಲ್ಲದೇ ಹಲವರಿಗೆ ಹಣ …
Read More »ಡಾಬಾದಲ್ಲಿ ಕೆಲಸ ಮಾಡಿ ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಸಾವು
ಬೆಳಗಾವಿ: ಲಾರಿ ಮಹಿಳೆ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ನಿವಾಸಿ ರಮೇಜಾ ನದಾಫ್ (40) ಮೃತ ಮಹಿಳೆ. ಡಾಬಾದಲ್ಲಿ ಕೆಲಸ ಮಾಡಿ ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುವಾಗ ವೇಗವಾಗಿ ಬಂದ ಲಾರಿ ಮಹಿಳೆ ಮೇಲೆ ಹರಿದಿದೆ.
Read More »ಕೆಆರ್ಎಸ್ ಸುತ್ತ ಕಲ್ಲು ಗಣಿಗಾರಿಕೆ: ಸೂಕ್ತ ನಿರ್ಧಾರ ಕೈಗೊಳ್ಳಲು ಹೈಕೋಟ್ ಸೂಚನೆ
ಬೆಂಗಳೂರು: ಮಂಡ್ಯ ಜಿಲ್ಲೆಯ ಬೇಬಿಬೆಟ್ಟ ಹಾಗೂ ಚಿನಕುರಳಿ ಗ್ರಾಮಗಳಲ್ಲಿನ ಕಲ್ಲು ಗಣಿಗಾರಿಕೆ ಘಟಕಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಗಣಿ ಮಾಲೀಕರ ಮನವಿಯನ್ನು ಮೂರು ವಾರದಲ್ಲಿ ಪರಿಗಣಿಸಿ ಕಾನೂನು ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಈ ಕುರಿತು ಶ್ರೀಕೃಷ್ಣ ಸ್ಟೋನ್ ಕ್ರಷಿಂಗ್ ಇಂಡಸ್ಟ್ರೀಸ್ ಸೇರಿದಂತೆ 17 ಗಣಿ ಕಂಪನಿಗಳ ಮಾಲೀಕರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ …
Read More »ಡಿಕೆ ಶಿವಕುಮಾರ್ ರಾಜಕೀಯ ಗುರುವಿನಿಂದ ಪಾದಯಾತ್ರೆ ಕೈಬಿಡಲು ಸಲಹೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಕೀಯ ಗುರು ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆಯಿಂದ ಜನರ ಜೀವಕ್ಕೆ ಹಾನಿ ಉಂಟಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪಾದಯಾತ್ರೆಯನ್ನು ಕೈಬಿಡಲು ಕೋರಿದ್ದಾರೆ. ತಮ್ಮ ನೇತೃತ್ವದಲ್ಲಿ ಮೇಕದಾಟು ಸಂಗಮದಿಂದ ಬೆಂಗಳೂರಿನವರೆಗೆ ಬೆಂಗಳೂರಿನ ಭವಿಷ್ಯ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಬವಣಿಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯದ ಬಹುದಿನಗಳ ಬೇಡಿಕೆಯಾದ ಮೇಕೆದಾಟು ಅಣಿಕಟ್ಟು ನಿರ್ಮಾಣ ಸಂಬಂಧ ಸರ್ಕಾರಗಳ …
Read More »ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಕಾರ್ಯದರ್ಶಿ ಸಿ.ಎಸ್ ರವಿಕುಮಾರ್ ಆದೇಶ ಹೊರಡಿಸಿದ್ದು, ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಪಾದಯಾತ್ರೆಯ ವಾಹನ ಸಂಚಾರ,ಜನಸಂಚಾರ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಉಲ್ಲಂಘಿಸಿ ಪಾದಯಾತ್ರೆ ಮುಂದುವರೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಪಿಐಎಲ್ …
Read More »ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸರ್ಕಾರ ಬದ್ಧ: ಬೊಮ್ಮಾಯಿ ಭರವಸೆ
ಬೆಂಗಳೂರು: ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅವರು ಹೇಳಿಕೆ ನೀಡಿದ್ದು, ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ. ನೆಲ, ಜಲ, ಜನರ ಹಿತರಕ್ಷಣೆಗೆ ಎಲ್ಲಾ ಪಕ್ಷಗಳು ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡೋಣ. ಮೇಕೆದಾಟು ಯೋಜನೆ ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಂದಾಗಿ ಕೆಲಸ ಮಾಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೋನಾ …
Read More »ಸಂಕ್ರಾಂತಿ ಬಳಿಕ ದೇವೇಗೌಡರ ದತ್ತು ಪುತ್ರ ದತ್ತ ಕಾಂಗ್ರೆಸ್ನತ್ತ?
ಕಡೂರು: ಮಾಜಿ ಶಾಸಕ ವೈ.ಎಸ್.ವಿ. ದತ್ತ ಕಾಂಗ್ರೆಸ್ಸೇರುವ ಊಹಾಪೋಹಕ್ಕೆ ಬಹುತೇಕ ತೆರೆ ಬಿದ್ದಿದ್ದುಸಂಕ್ರಾತಿ ಬಳಿಕ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.ದತ್ತ ಜತೆಗೆ ಜೆಡಿಎಸ್ನ ಅನೇಕ ಶಾಸಕರಹೆಸರು ಮುಂಚೂಣಿಯಲ್ಲಿದ್ದು ಇವರೆಲ್ಲರೂಒಟ್ಟಾಗಿ ಕಾಂಗ್ರೆಸ್ ಸೇರುವ ಸಂಗತಿ ಬೆಂಗಳೂರುಸೇರಿದಂತೆ ಕ್ಷೇತ್ರದ ರಾಜಕೀಯ ಮೊಗಸಾಲೆಯಲ್ಲಿಗಂಭೀರವಾಗಿ ಚರ್ಚೆಯಾಗುತ್ತಿದೆ. 2018ರವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕದತ್ತ ಕೆಲವು ಕಾಲ ನೇಪಥ್ಯಕ್ಕೆ ಸರಿದಿದ್ದರು. ಅಭಿವೃದ್ಧಿಕೆಲಸಗಳನ್ನು ಮಾಡಿಸಿಯೂ ಜನರ ಜತೆಗೆ ಉತ್ತಮಒಡನಾಟ ಇಟ್ಟುಕೊಂಡಿದ್ದರು. ಆದರೆ ಕ್ಷೇತ್ರದಜನ ತಮ್ಮನ್ನು ಸೋಲಿಸಿದರು ಎಂಬ ಕಾರಣಕ್ಕೆ …
Read More »ರಸ್ತೆ ಅಪಘಾತದಲ್ಲಿ ಅಣ್ಣನ ಮೃತದೇಹ ನೋಡಲು ಬಂದ ತಂಗಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾಳೆ.
ಮೈಸೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಹೋದರನ ಮೃತದೇಹ ಕಂಡು ತೀವ್ರ ಹೃದಯಾಘಾತಕ್ಕೊಳಗಾಗಿ ಸಹೋದರಿಯೂ ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಕೊಡಗಿನ ಪೊನ್ನಪೇಟೆಯ ನಿವಾಸಿ ಮಂಜುನಾಥ್ ಮತ್ತು ರತ್ನ ದಂಪತಿಯ ಮಗಳಾದ ರಶ್ಮಿ(21) ಸಾವನ್ನಪ್ಪಿರುವ ಯುವತಿ. ಇವರು ಮೈಸೂರಿನ ವಿಜಯ ನಗರದಲ್ಲಿ ವಾಸವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದರು. ಅಪಘಾತದಲ್ಲಿ ಅಣ್ಣ ಸಾವು: ಯುವತಿ ರಶ್ಮಿಯ ದೊಡ್ಡಪ್ಪನ ಮಗ ಕೀರ್ತಿರಾಜ್ ಸೋಮವಾರ ರಾತ್ರಿ …
Read More »