Breaking News

ಬಳ್ಳಾರಿ: ಹುಚ್ಚ ಬಸ್ಯಾನ ಅಂತ್ಯ ಸಂಸ್ಕಾರದಲ್ಲಿ ಸಾವಿರಾರು ಜನರು ಭಾಗಿ, ಫೋಟೋ, ವಿಡಿಯೋ ವೈರಲ್​

ಬಳ್ಳಾರಿ: ಖ್ಯಾತ ವ್ಯಕ್ತಿ, ರಾಜಕಾರಣಿ, ಸಿನಿಮಾ ನಟರು ಮೃತಪಟ್ಟಾಗ ಅವರ ಅಂತಿಮ ದರ್ಶನ ಪಡೆಯಲು ಸಾವಿರಾರು ಜನರು ಬರುವುದು ಸಹಜ. ಬುದ್ಧಿಮಾಂದ್ಯ, ಹುಚ್ಚನೊಬ್ಬ ಸಾವನ್ನಪ್ಪಿದಾಗ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದ್ದನ್ನು ನೀವು ಕೇಳಿದ್ದೀರಾ? ನೋಡಿದ್ದೀರಾ?. ಬಳ್ಳಾರಿ ಜಿಲ್ಲೆಯ ಹಡಗಲಿ ಪಟ್ಟಣದಲ್ಲಿ ಇಂಥದ್ದೊಂದು ಕುತೂಹಲಕಾರಿ ಘಟನೆ ನಡೆದಿದೆ. ಪಟ್ಟಣದ ಮಾನಸಿಕ ಅಸ್ವಸ್ಥನೊಬ್ಬ ಮೃತಪಟ್ಟಿದ್ದು, ಅವನ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಲ್ಲದೇ ಊರ ತುಂಬಾ ಅವನ ಫೋಟೋವುಳ್ಳ ಫ್ಲೆಕ್ಸ್​, ಬ್ಯಾನರ್​ ಹಾಕಿಸಿ ಅದ್ಧೂರಿಯಾಗಿ …

Read More »

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಸ್ವಾಮೀಜಿಗಳ ಭವಿಷ್ಯ

ಬಾಗಲಕೋಟೆ: ಬಾದಾಮಿ ಪಟ್ಟಣದಲ್ಲಿ ಮಂಗಲ ಭವನ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ(Siddaramaiah) ಮುಂದೆ ಮುಖ್ಯಮಂತ್ರಿ ಆಗುತ್ತೀರಿ ಎಂದು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.ಮಂಗಲ‌ ಭವನ ಉದ್ಘಾಟನೆ‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ಸಿದ್ದನಕೊಳ್ಳದ ಡಾ.ಶಿವಕುಮಾರ ಸ್ವಾಮೀಜಿ, ವಿಜಯಪುರ ಜಿಲ್ಲೆ ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿಗಳು ಸೇರಿದಂತೆ ಇನ್ನೂ ಕೆಲವು ಸ್ವಾಮೀಜಿಗಳು ಸಿದ್ದರಾಮಯ್ಯ ಸಿಎಂ ಆಗಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರ ಕುರಿತು …

Read More »

ಕಾಂಗ್ರೆಸ್​ ಪಾಳಯದಲ್ಲಿ ಸಿದ್ದು-ಡಿಕೆಶಿ ಬಣದ ಇಬ್ಬರು ಶಾಸಕರ ನಡುವೆ ಆಂತರಿಕ ಸಮರ

ಬೆಂಗಳೂರು: ಕಾಂಗ್ರೆಸ್​ನ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್​ ಜಬ್ಬಾರ್​ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಣ ರಾಜಕೀಯ ಬಯಲಾಗಿದ್ದು, ಕೈ ನಾಯಕರಿಗೆ ಭಾರಿ ಮುಜುಗರ ತಂದೊಡಿದೆ. ಅರಮನೆ ಮೈದಾನದಲ್ಲಿ ಮಂಗಳವಾರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗಲೇ ಕೆಲವರು ಡಿಕೆಶಿ.. ಡಿಕೆಶಿ.. ಜಮೀರ್ ಜಮೀರ್​ ಎಂದು ಘೋಷಣೆ ಕೂಗುತ್ತಿದ್ದರು. ಇನ್ನು ಮುಂದು ವರೆದು ಜಮೀರ್​ ಫೋಟೋ ಹಿಡಿದು ಜಮೀರ್​ ಜಮೀರ್​ ಎಂದು ಜೋರಾಗಿ ಕೂಗುತ್ತಿದ್ದರು. …

Read More »

ಮಹಿಳೆ ಹಾಗೂ ಮಕ್ಕಳ ಸುರಕ್ಷತೆಗಾಗಿ ಹೊಸ ಐಟಿ ನಿಯಮಾವಳಿ; ಹೈಕೋರ್ಟ್‌ ಗೆ ಕೇಂದ್ರದಿಂದ ಮಹತ್ವದ ಮಾಹಿತಿ

2021ನೇ ಸಾಲಿನ ಐಟಿ ನಿಯಮಾವಳಿಗಳು ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯನ್ನು ಹೆಚ್ಚಿಸುವ ಬಗ್ಗೆ ಸ್ಪಷ್ಟ ಗಮನವನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್ ಗೆ​ ಮಾಹಿತಿಯನ್ನು ರವಾನಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್​. ಪಟೇಲ್​ ಹಾಗೂ ನ್ಯಾಯಮೂರ್ತಿ ಜ್ಯೋತಿ ಸಿಂಗ್​​ ನೇತೃತ್ವದ ಪೀಠಕ್ಕೆ ಅಫಿಡವಿಟ್​ ಸಲ್ಲಿಸಿದ ಕೇಂದ್ರ ಸರ್ಕಾರವು ಐಟಿ ಹೊಸ ನಿಯಮಾವಳಿಗಳು ಅಶ್ಲೀಲತೆ ಹಾಗೂ ಭೌತಿಕ ಗೌಪ್ಯತೆಯನ್ನು ಉಲ್ಲಂಘಿಸುವಂತಹ ವಿಷಯಗಳನ್ನು ತೆಗೆದು ಹಾಕಲಿದೆ ಎಂದು ಹೇಳಿದೆ.   ‘ಐಟಿ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ವರ್ಗಾವಣೆ ನೀತಿಯಲ್ಲಿ ಮಾರ್ಪಾಡು ಮಾಡಿ ಆದೇಶ ಹೊರಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraja Bommai) ಅವರ ಕಚೇರಿಗೆ ವರ್ಗಾವಣೆ ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಕೋರಿ ಹೆಚ್ಚಿನ ಸಂಖ್ಯೆಯಲ್ಲಿ ಮನವಿ ಸಲ್ಲಿಸುತ್ತಿರುವುದು ಖುದ್ದು ಸಿಎಂಗೆ ದೊಡ್ಡ ತಲೆ ನೋವು ಆಗಿದೆ.   ಈ ನಡುವೆ ವರ್ಗಾವಣೆ ನೀತಿಯ ಪ್ರಕಾರ (transfer policy) ಎಲ್ಲಾ ವೃಂದದ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವರ್ಗಾವಣೆ ಅವಧಿ ಮುಗಿದಿರುವುದರಿಂದ ಕಡತಗಳನ್ನು ಮುಖ್ಯಮಂತ್ರಿಗಳ ಅನುಮೋದನೆಗೆ ಸಲ್ಲಿಸಲಾಗುತ್ತಿದೆ (Chief Minister for approval.). …

Read More »

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ಗೆ ಚುನಾವಣೆ ನಡೆಸಲು ಸಂಘಗಳ ಜಿಲ್ಲಾ ನೊಂದಣಾಧಿಕಾರಿ ಆದೇಶ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ( karnataka chalanachitra vanijya mandali ) ಚುನಾವಣೆಯನ್ನು ( Election ) ಕೂಡಲೇ ನಡೆಸುವಂತೆ, ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಆದೇಶಿಸಿದ್ದಾರೆ. ‘ ಈ ಕುರಿತಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿರುವಂತ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಂಸ್ಥೆಯ ಸಮಿತಿಗೆ ಅವಧಿ ಮುಗಿದು ಈಗಾಗಲೇ ವರ್ಷಗಟ್ಟಲೇ ಗತಿಸಿದರೂ ಸಹ ಚುನಾವಣೆಗೆ ಸಂಸ್ಥೆಯಿಂದ ಕ್ರಮವಿಟ್ಟಿರುವುದಿಲ್ಲ. ಚುನಾವಣೆಯನ್ನು ಇಲಾಖೆಯ …

Read More »

ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ

ನವದೆಹಲಿ: ನಾಗರಿಕ ಪ್ರಪಂಚವೇ ತಲೆ ತಗ್ಗಿಸುವಂತ ಘೋರ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕೋಪಗೊಂಡಿದ್ದ ತಂದೆಯೊಬ್ಬ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಹೇಯ ಘಟನೆ ನಡೆದಿದೆ. ಮಗಳ 8 ತಿಂಗಳ ಮಗು ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಮಗುವಿನ ಅಂತ್ಯಕ್ರಿಯೆಗೆಂದು ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಮಗಳನ್ನು ಹತ್ಯೆ ಮಾಡಿದ್ದಾನೆ. ಈ ಕುರಿತು ರಾಟಿಬಾದ್ ಠಾಣೆ ಅಧಿಕಾರಿ ಸುದೇಶ್ ತಿವಾರಿ …

Read More »

ಇಂದಿನಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೇ.50ರಷ್ಟು ವರ್ಕ್ ಫ್ರಂ ಹೋಂ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೇ.50ರಷ್ಟು ವರ್ಕ್ ಫ್ರಂ ಹೋಂ ಗೆ ಸೂಚಿಸಲಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚುತ್ತಿದ್ದು, ಉಸಿರಾಟಕ್ಕೂ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗಶ: ಲಾಕ್ ಡೌನ್ ಜಾರಿಯಾದಂತಾಗಿದೆ. ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ವಾಯುಗುಣಮಟ್ಟ ನಿರ್ವಹಣಾ ಆಯೋಗ ತಿಳಿಸಿದೆ. ದೆಹಲಿಯ 300 ಕಿ.ಮೀ ವ್ಯಾಪ್ತಿಯಲ್ಲಿರುವ 11 ಉಷ್ಣ ವಿದ್ಯುತ್ ಸ್ಥಾವರಗಳನ್ನು ನವೆಂಬರ್ 30ರವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. …

Read More »

ಪುನೀತ್ ರಾಜಕುಮಾರ್ ಗೆ ‘ಭಾರತ ರತ್ನ’ ನೀಡಲು ಶರತ್ ಕುಮಾರ್ ಒತ್ತಾಯ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ನಟ ಶರತ್ ಕುಮಾರ್ ಹೇಳಿದ್ದಾರೆ. ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಪುನೀತ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕು ಎಂದು ಹೇಳಿದ್ದಾರೆ. ಅಪ್ಪು ನಿಧನದ ಸುದ್ದಿ ಕೇಳಿ ದೇವರನ್ನು ಕ್ಷಮಿಸಲಾಗಲಿಲ್ಲ. …

Read More »

ಉತ್ತರ ಪ್ರದೇಶ: ಟೈಮ್ಸ್ ನೌ ಚುನಾವಣಾಪೂರ್ವ ಸಮೀಕ್ಷೆ ಏನು ಹೇಳುತ್ತದೆ?

ಲಕ್ನೋ, ನವೆಂಬರ್‌ 16: ಮುಂದಿನ ವರ್ಷ ಆರಂಭದಲ್ಲೇ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ. ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರವನ್ನು ರೂಪಿಸಿದೆ. ಪ್ರಚಾರ ಕಾರ್ಯವನ್ನು ಮಾಡುತ್ತಿದೆ. ಈ ಐದು ರಾಜ್ಯಗಳ ಪೈಕಿ ಉತ್ತರ ಪ್ರದೇಶವು ರಾಜಕೀಯವಾಗಿ ಹೆಚ್ಚು ಪ್ರಮುಖವಾದ ರಾಜ್ಯವಾಗಿದೆ. ಪ್ರಸ್ತುತ ಬಿಜೆಪಿಯು ಇಲ್ಲಿ ಆಡಳಿತವನ್ನು ಹೊಂದಿದೆ. ಈ ನಡುವೆ ಉತ್ತರ ಪ್ರದೇಶದಲ್ಲಿ 2022 ರ ಚುನಾವಣಾ ಫಲಿತಾಂಶ ಏನು ಆಗಲಿದೆ …

Read More »