Breaking News

ದೇವಸ್ಥಾನದಲ್ಲಿನ ಪೂಜಾ ವಿಧಾನ ನಿರ್ಣಯ ಕೋರ್ಟ್‌ ಕೆಲಸವಲ್ಲ: ಸುಪ್ರೀಂ

ನವದೆಹಲಿ: ದೇವಸ್ಥಾನದಲ್ಲಿನ ಪೂಜಾ ವಿಧಿ ವಿಧಾನ ಹೇಗಿರಬೇಕು ಎಂಬುದನ್ನು ನ್ಯಾಯಾಲಯಗಳು ನಿರ್ಧರಿಸಲಾಗದು ಎಂದಿರುವ ಸುಪ್ರೀಂ ಕೋರ್ಟ್‌, ಈ ವಿಚಾರವಾಗಿ ಸಲ್ಲಿಕೆಯಾದ ಅರ್ಜಿಯೊಂದರ ಸಂಬಂಧ ಯಾವುದೇ ಆದೇಶವನ್ನು ನೀಡಲು ನಿರಾಕರಿಸಿದೆ. ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪೂಜಾ ವಿಧಿವಿಧಾನಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ, ‘ದೇವಾಲಯದಲ್ಲಿ ಯಾವ ರೀತಿ ಪೂಜೆ ಮಾಡಬೇಕು? ತೆಂಗಿನಕಾಯಿಯನ್ನು ಹೇಗೆ ಒಡೆಯಬೇಕು? ದೇವರ ಮೂರ್ತಿಗೆ ಹೇಗೆ ಹೂಮಾಲೆ ಹಾಕಬೇಕು ಎಂದೆಲ್ಲ ನ್ಯಾಯಾಲಯ …

Read More »

ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಪಲ್ಟಿ, ಓರ್ವ ಮಹಿಳೆ ಸಾವು : ಮೂವರು ಗಂಭೀರ

ಮಾನ್ವಿ: ತಾಲ್ಲೂಕಿನ ಗಿಣವಾರ ಗ್ರಾಮದಿಂದ ಕಲ್ಲೂರು ಗ್ರಾಮದಲ್ಲಿನ ಹೊಲಕ್ಕೆ ಹತ್ತಿ ಬಿಡಿಸಲು ತೆರಳಿದ ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಮಾನ್ವಿ ರಾಯಚೂರು ರಸ್ತೆಯ ಬೊಮ್ಮನಾಳ್ ಕ್ರಾಸ್ ಬಳಿ ಪಲ್ಟಿ ಹೊಡೆದು 18 ಜನ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿದ್ದಾಳೆ.   ಗಿಣವಾರ ಗ್ರಾಮದ ನಿವಾಸಿ ಲಕ್ಷ್ಮಿದೇವಿ (45 ) ಮೃತಳು. 3 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷವೇ ಕಾರಣ ಎನ್ನಲಾಗುತ್ತಿದ್ದು, ಮಾನ್ವಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು …

Read More »

ಸಿದ್ಧಸಿರಿ ಇಥೆನಾಲ್ ಕಾರ್ಖಾನೆಗೆ ಪೂಜೆ 22ಕ್ಕೆ

ಕಲಬುರಗಿ: ಜಿಲ್ಲೆಯ ಚಿಂಚೋಳಿಯಲ್ಲಿ ಸಿದ್ಧಸಿರಿ ಇಥೆನಾಲ್ ಹಾಗೂ ಪವರ್ ವಿಭಾಗದ ಪರಿವರ್ತಿತ ಕಾರ್ಖಾನೆಯ ವಾಸ್ತು ಪೂಜೆ, ಯಂತ್ರೋಪಕರಣಗಳು ಜೋಡಣಾ ಕಾರ್ಯಾರಂಭ ಹಾಗೂ ಸಿದ್ಧಸಿರಿ ಸಹಕಾರ ಸಂಸ್ಥೆಯ 136ನೇ ಶಾಖೆಯ ಉದ್ಘಾಟನಾ ಸಮಾರಂಭವನ್ನು ಇದೇ 22ರಂದು ಆಯೋಜಿಸಲಾಗಿದೆ ಎಂದು ವಿಜಯಪುರ ಶಾಸಕ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.   ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಂಚೋಳಿ ಷುಗರ್ಸ್‌ ಎಂದು ಕರೆಯಲಾಗುತ್ತಿದ್ದ ಸಕ್ಕರೆ ಕಾರ್ಖಾನೆ ಹಲವು …

Read More »

ಸುಶಾಂತ್​ ಸಿಂಗ್​ ರಜಪೂತ್​ ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ ನಿಧನ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಮಂಗಳವಾರ (ನ.16) ಬೆಳಗ್ಗೆ ಈ ಭೀಕರ ಆಯಕ್ಸಿಡೆಂಟ್​ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ 4 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಸುಶಾಂತ್​ ಅಭಿಮಾನಿಗಳಿಗೆ ತೀವ್ರ ಆಘಾತ ಆಗಿದೆ.

Read More »

ಬೆಳಗಾವಿಯ ಜೈನ್ ಹೆರಿಟೇಜ್ ಶಾಲೆಯಲ್ಲಿ ಇಂದು ರಾಜ್ಯ ಪುರಸ್ಕಾರ ಹಾಗೂ ರಾಜ್ಯಪಾಲರ ಪ್ರಶಸ್ತಿ ಪ್ರಮಾಣ

ಬೆಳಗಾವಿಯ ಜೈನ್ ಹೆರಿಟೇಜ್ ಶಾಲೆಯಲ್ಲಿ ಇಂದು ರಾಜ್ಯ ಪುರಸ್ಕಾರ ಹಾಗೂ ರಾಜ್ಯಪಾಲರ ಪ್ರಶಸ್ತಿ ಪ್ರಮಾಣ ಪತ್ರಗಳ ವಿತರಣಾ ಸಮಾರಂಭ ನಡೆಯಿತು. ರಾಜ್ಯ ಪುರಸ್ಕಾರ ಹಾಗೂ ರಾಜ್ಯಪಾಲರ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಳಗಾವಿ ಅಪರಾಧ ವಿಭಾಗದ ಡಿಸಿಪಿ ಪಿವಿ ಸ್ನೇಹಾ,ಎಸಿಪಿ ಶರಣಪ್ಪ, ಉಪಸ್ಥಿತರಿದ್ದರು. ಬೆಳಗಾವಿ ನಗರದ ರೋವರ್ಸ ವಿಭಾಗದಿಂದ ಬೆಕೆ ಕಾಲೇಜಿನ ಲಗಮೇಶ ಖೋತ್, ಪವನ್ ಮುದ್ದಿ, ಸುದರ್ಶನ್ ಕುಸನಾಳ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ,

Read More »

ಇಪಿಎಸ್ ಪಿಂಚಣಿದಾರರಿಗೆ ವಿವಿಧ ಸೌಲಭ್ಯ ನೀಡಬೇಕೆಂದು ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇಪಿಎಸ್ ಪಿಂಚಣಿದಾರರಿಗೆ ಮೂರು ಸಾವಿರ ರೂಪಾಯಿ ಪಿಂಚಣಿ ನೀಡಬೇಕು. ಡಿಎ ಸೌಲಭ್ಯ ಒಳಗೊಂಡಂತೆ ಭಗತ್‍ಸಿಂಗ್ ಕೋಶಾರಿ ವರದಿ, ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪಿಚಂಣಿದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದ ಇಪಿಎಸ್ ಪಿಂಚಣಿದಾರರ ಸಂಘದ ಸದಸ್ಯರು ನಮಗೆ ಕನಿಷ್ಟ ಮೂರು ಸಾವಿರ ರೂಪಾಯಿ ಪಿಂಚಣಿ ನೀಡಬೇಕು. ಬಿಪಿಎಲ್ ಫಲಾನುಭವಿಗಳಿಗೆ ಇರುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿ ಇಪಿಎಸ್ ಪಿಂಚಣಿದಾರರ …

Read More »

ಪ್ರವಚನ ನೀಡುತ್ತಲೇ ಪರಮಾತ್ಮನ ಪಾದ ಸೇರಿದ ಸ್ವಾಮೀಜಿ

ಗೋಕಾಕ : ಪ್ರವಚನ ಮಾಡುತ್ತಲೇ ಓರ್ವ ಸ್ವಾಮೀಜಿ, ಪರಮಾತ್ಮನ ಪಾದ ಸೇರಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ತೀವೃ ಹೃದಯಾಘಾತದಿಂದ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಬಗ್ಗೆ ವರದಿಯಾಗಿದ್ದು, ಹೃದಯಾಘಾತದಿಂದ ಲಿಂಗೈಕ್ಯರಾಗಿರುವ ಸ್ವಾಮಿಜಿಯವರನ್ನು ಬಸವಯೋಗ ಮಂಟಪ ಟ್ರಸ್ಟ್ ಸಂಗನಬಸವ ಮಹಾಸ್ವಾಮೀಜಿ (53) ಎಂದು ಹೇಳಲಾಗುತ್ತಿದೆ. ಈ ಘಟನೆ ನವೆಂಬರ್ 6ನೇ ತಾರೀಕೂ ನಡೆದಿದ್ದರೂ ಸಹ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ವಾಮಿಜಿ ನವೆಂಬರ್ …

Read More »

ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರು ಮಂಗಳವಾರ (ನ.16) ಅಧಿಕಾರ ಸ್ವೀಕರಿಸಿದರು

ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರು ಮಂಗಳವಾರ (ನ.16) ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವರ್ಗಾವಣೆಗೊಂಡಿದ್ದಾರೆ. ಅಧಿಕಾರ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿಗಳು, ಪರಿಷತ್ ಚುನಾವಣೆ ಸಿದ್ಧತೆ ಹಾಗೂ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಮತ್ತಿತರರು ಉಪಸ್ಥಿತರಿದ್ದರು. ಕಲಬುರ್ಗಿಯ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯಾಗಿದ್ದ …

Read More »

ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಅಗಲಿದ ’ರಾಜಕುಮಾರ’ನಿಗೆ

ಬೆಂಗಳೂರು: ಹೃದಯಾಘಾತದಿಂದ ಸಾವನ್ನಪ್ಪಿರುವ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆ ಇಡೀ ಕನ್ನಡ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಅಸಾಧ್ಯವಾದ ನೋವು. ಇಂದು ಕನ್ನಡ ಚಿತ್ರರಂಗದ ವತಿಯಿಂದ ಪುನೀತ ನಮನ ಕಾರ್ಯಕ್ರಮದ ಮೂಲಕ ಅಗಲಿದ ’ರಾಜಕುಮಾರ’ನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ ಪುನೀತ ನಮನ ಕಾರ್ಯಕ್ರಮದಲ್ಲಿ ಕನ್ನಡ, ತೆಲಗು, ತಮಿಳು ಚಿರರಂಗದ ಗಣ್ಯರು, ಸಿಎ ಬಸವರಾಜ್ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ …

Read More »

ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ: ತೀವ್ರವಾಗಿ ಗಾಯಗೊಂಡ ಪಾದಚಾರಿ

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಚಿಗರಿ ಬಸವೊಂದು ಡಿಕ್ಕಿ ಹೊಡೆದು ಪಾದಚಾರಿಗೆ ಗಂಭೀರ ಗಾಯವಾಗಿರುವ ಘಟನೆ ಧಾರವಾಡದ ಕೋರ್ಟ್ ವೃತದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಮಲ್ಲಣ್ಣ ಮೇಟಿ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನೂ ಪದಾಚಾರಿ ಮಲ್ಲಣ್ಣ ಧಾರವಾಡ ಕೋರ್ಟ್ ವೃತದ ಬಳಿಯ ಸಾರ್ವಜನಿಕ ಸಂಚಾರ ನಡೆಸುವ ರಸ್ತೆ ಕ್ರಾಸ್ ಮಾಡಿದ್ದಾರೆ. ಬಳಿಕ ಮುಂದೆ ಇದ್ದ ಬಿಆರ್‌ಟಿಎಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಲ್ಲಣ್ಣನಿಗೆ ಹಿಂಬದಿಯಿಂದ ಬಂದ್ ಚಿಗರಿ ಬಸ್ ಡಿಕ್ಕಿ …

Read More »