ಹಾಸನ: ವಂಚನೆ ಪ್ರಕರಣವೊಂದರಲ್ಲಿ ಸಿಲುಕಿ ತಲೆಮರೆಸಿಕೊಂಡಿದ್ದ ತಮಿಳುನಾಡಿನ ಮಾಜಿ ಸಚಿವರೂ ಆದ ಎಐಡಿಎಂಕೆ ಮಾಜಿ ಶಾಸಕ ರಾಜೇಂದ್ರ ಬಾಲಾಜಿ ಅವರನ್ನು ಹಾಸನದಲ್ಲಿ ನಿನ್ನೆ(ಬುಧವಾರ) ಮಧ್ಯಾಹ್ನ ತಮಿಳುನಾಡು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಹಾಸನ ನಗರದ ವಾರ್ತಾ ಇಲಾಖೆ ಮುಂಭಾಗ ರಾಜೇಂದ್ರ ಬಾಲಾಜಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ನಡುರಸ್ತೆಯಲ್ಲೇ ಕಾರನ್ನು ಅಡ್ಡಗಟ್ಟಿ ಸುತ್ತುವರಿದ ತಮಿಳುನಾಡು ಪೊಲೀಸರು, ರಾಜೇಂದ್ರ ಬಾಲಾಜಿ ಅವರನ್ನು ಬಂಧಿಸಿದರು. ಒಂದು ಕಾರನ್ನು ಅಡ್ಡಗಟ್ಟಿ ಆರೋಪಿಯನ್ನು ಮತ್ತೊಂದು ಕಾರಿಗೆ ಹತ್ತಿಸಿಕೊಳ್ಳುವ …
Read More »ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್‌ಗೆ ಜಯ ಗಳಿಸಿಕೊಟ್ಟ ಪವನ್
ಬೆಂಗಳೂರು: ರೇಡಿಂಗ್ ಚತುರ ಪವನ್ ಶೆರಾವತ್ ಮತ್ತೊಮ್ಮೆ ಕಬಡ್ಡಿ ಅಂಗಣದಲ್ಲಿ ಮಿಂಚು ಹರಿಸಿದರು. ಅವರ ಅಮೋಘ ‘ಸೂಪರ್ ಟೆನ್’ ಸಾಧನೆಯ ಬಲದಿಂದ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್‌ನ ಎಂಟನೇ ಆವೃತ್ತಿಯಲ್ಲಿ ಮತ್ತೊಂದು ಗೆಲುವು ಸಾಧಿಸಿತು. ವೈಟ್‌ಫೀಲ್ಡ್‌ನ ಹೋಟೆಲ್ ಶೆರಟಾನ್ ಗ್ರ್ಯಾಂಡ್‌ನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಗುರುವಾರ ಬೆಂಗಳೂರು ತಂಡ ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ 38-31ರ ಜಯ ಸಾಧಿಸಿತು. 13 ಟಚ್ ಪಾಯಿಂಟ್ ಸೇರಿದಂತೆ ಪವನ್ 18 ಪಾಯಿಂಟ್ …
Read More »ಜನವರಿ-ಫೆಬ್ರವರಿ ವೇಳೆಗೆ ಭಾರತದಲ್ಲಿ ಪರಿಸ್ಥಿತಿ ತೀರಾ ಕೆಡಲಿದ್ದು, ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗಲಿವೆ:: ತಜ್ಞರು
ನವದೆಹಲಿ(ಜ.07): ಕೊರೋನಾ ವೈರಸ್ನ ಹೊಸ ರೂಪಾಂತರ ಓಮೈಕ್ರಾನ್ ಪ್ರಾರಂಭದಲ್ಲೇ ತನ್ನ ಪ್ರಭಾವವನ್ನು ತೋರಿಸುತ್ತಿದೆ. ಜನವರಿ-ಫೆಬ್ರವರಿ ವೇಳೆಗೆ ಭಾರತದಲ್ಲಿ ಪರಿಸ್ಥಿತಿ ತೀರಾ ಕೆಡಲಿದ್ದು, ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗಲಿವೆ ಎಂದು ತಜ್ಞರು ಹೇಳಿದ್ದಾರೆ. ಇದು ಕೇವಲ ಪ್ರಾರಂಭ ಅಷ್ಟೇ ಆಗಿದ್ದು, ಮುಂದಿನ ದಿನಗಳಲ್ಲಿ ಓಮೈಕ್ರಾನ್ ತನ್ನ ನಿಜರೂಪ ತೋರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬುಧವಾರ ಭಾರತದಲ್ಲಿ ಸುಮಾರು 91,000 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು ಬಹಳ ಕಳವಳಕಾರಿಯಾದ …
Read More »ಗೂಳಿ ಗ್ಯಾಂಗ್ ಗೆ ಹೆದರಿ ಬೆಳೆದ ಬೆಳೆ ನಾಶಪಡಿಸಿದ ರೈತರು!
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಜಂಬಗಿ ಸಂಬರಗಿ ಅರಳಿಹಟ್ಟಿ ಜಕ್ಕರಟ್ಟಿ ಬೊಮ್ಮನ್ನಾಳ ಗ್ರಾಮದಲ್ಲಿ ಸುಮಾರು 40ಕ್ಕೂ ಹೆಚ್ಚು ಹಸು ಗೂಳಿಗಳ ಗ್ಯಾಂಗ್ ದಿನಾಲೂ ಬೆಳೆಗಳಿಗೆ ನುಗ್ಗಿ ನಾಶಪಡಿಸುತ್ತಿವೆ. ರೈತರು ಹಗಲು ರಾತ್ರಿ ಕೈಯಲ್ಲಿ ಕೋಲು ಹಿಡಿದು ಇವುಗಳನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ. ಈ ಹಸುಗಳು ಸುಮಾರು ವರ್ಷಗಳಿಂದ ಇದೆ ರೀತಿ ದಾಳಿ ಮಾಡುತ್ತಿವೆ ಇವು ನಿಜವಾಗಲೂ ಯಾರಿಗೆ ಸಂಭಧಪಟ್ಟ ಹಸುಗಳಿವೆ ಅನ್ನೋದು ಯಾರಿಗೂ ಗೊತ್ತಾಗುತ್ತಿಲ್ಲ. ಫಲವತ್ತಾಗಿ ಬೇಳೆದ ಜೋಳ …
Read More »ಬೆಳಗಾವಿ ನಗರದಲ್ಲಿ ಖಾಸಗಿ ಭಾಜಿ ಮಾರ್ಕೆಟ್‍ಗೆ ಅನುಮತಿ ನೀಡಿದ ಎಪಿಎಂಸಿ ಅಧಿಕಾರಿಗಳ ನಡೆಯನ್ನು ಪ್ರಶ್ನಿಸಿ ವಿವಿಧ ರೈತಪರ ಸಂಘಟನೆಗಳ ನಾಯಕರು ಹಾಗೂ ರೈತ ಮುಖಂಡರು ಸುದ್ದಿಗೋಷ್ಠಿ
ಬೆಳಗಾವಿ ನಗರದಲ್ಲಿ ಖಾಸಗಿ ಭಾಜಿ ಮಾರ್ಕೆಟ್‍ಗೆ ಅನುಮತಿ ನೀಡಿದ ಎಪಿಎಂಸಿ ಅಧಿಕಾರಿಗಳ ನಡೆಯನ್ನು ಪ್ರಶ್ನಿಸಿ ವಿವಿಧ ರೈತಪರ ಸಂಘಟನೆಗಳ ನಾಯಕರು ಹಾಗೂ ರೈತ ಮುಖಂಡರು ಸುದ್ದಿಗೋಷ್ಠಿಯನ್ನು ನಡೆಸಿದರು. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವ್ಯಾಪಾರಿ ಮುಖಂಡರು, ಸರಕಾರಿ ಆದೇಶದಂತೆ ಈಗಾಗಲೇ ಎಪಿಎಂಸಿ ನಮಗೆ ವಾರ್ಷಿಕ ಲೀಸ್ ಮೇಲೆ 132 ಅಂಗಡಿಗಳನ್ನು 20 ಲಕ್ಷದಿಂದ 1ಕೋಟಿ 5ಲಕ್ಷದವರೆಗೆ ಲೀಸ್ ಮೇಲೆ ವ್ಯಾಪಾರ ಮಾಡಲು ಅವಕಾಶ ನೀಡಿದೆ. ಅದರಂತೆ ವ್ಯಾಪಾರ ಮಾಡುತ್ತಿದ್ದೇವೆ. ಆದರೆ …
Read More »ಬಹುಕೋಟಿ ವಂಚನೆ ಪ್ರಕರಣ ಆನಂದ ಅಪ್ಪುಗೋಳ್ ಬಂಧನ
ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಸೈಟಿ ಚೇರ್‍ಮೆನ್ ಆನಂದ ಅಪ್ಪುಗೋಳ್‍ರನ್ನು ಎಡಿ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸೊಸೈಟಿಯ ವಿವಿಧ ಬ್ರ್ಯಾಂಚ್ ಗಳಲ್ಲಿ ಗ್ರಾಹಕರಿಗೆ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗೊಳ್ಳಿ ರಾಯಣ್ಣ ಸೊಸೈಟಿ ಚೇರ್ಮನ್ ಆನಂದ ಅಪ್ಪುಗೊಳ ಬಂಧನವಾಗಿದೆ. ಸೊಸೈಟಿಯ ಗ್ರಾಹಕರಿಗೆ 250 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಆನಂದ ಅಪ್ಪುಗೋಳ್‍ರನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
Read More »ಬೆಳಗಾವಿ ನಗರದಲ್ಲಿ ಇಂದು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟದ ಸಮಾರೋಪ ಸಮಾರಂಭ
ಬೆಳಗಾವಿ ನಗರದಲ್ಲಿ ಇಂದು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟದ ಸಮಾರೋಪ ಸಮಾರಂಭ ನಡೆಯಿತು. ನಗರದ ಪೊಲೀಸ್ ಕಾವಾಯತ್ ಆವರಣದಲ್ಲಿ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿಜಯಕುಮಾರ್ ಸಾಲಿಮಠ ವಹಿಸಿದ್ದರು. ಉತ್ತರ ವಲಯ ಐಜಿಪಿ ಎನ್. ಸತೀಶ್‍ಕುಮಾರ್, ಬೆಳಗಾವಿ ನಗರಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಉಪಸ್ಥಿತರಿದ್ದರು. ಇಂದು ಗುರವಾರ ಪೊಲೀಸ್ ತಂಡಗಳಿಗೆ ಹಗ್ಗ ಜಗ್ಗಾಟದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತು. …
Read More »ಕೇರಳ, ಮಹಾರಾಷ್ಟ್ರ, ಗೋವಾ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಕ್ರಮ ಜಾರಿ
ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಸೇರಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಾಗಿದೆ. ಇದೇ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹಲವು ನಿಯಮಗಳನ್ನು ಸೂಚಿಸಿದೆ. ಕೇರಳ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್ ಲಸಿಕೆ ಪಡೆದಿದ್ದರೂ/ ಪಡೆಯದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ವಾರಾಂತ್ಯದ ಕರ್ಫ್ಯೂ …
Read More »ಒಮಿಕ್ರಾನ್’ ಸೋಂಕು ಶ್ವಾಸಕೋಶಕ್ಕೆ ಹೋಗಲ್ಲ:ಡಾ.ಕೆ. ಸುಧಾಕರ್
ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ,ಒಮಿಕ್ರಾನ್ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೆ ಪರಿಣಾಮ ಕಡಿಮೆ. ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಒಮಿಕ್ರಾನ್ನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ ಎಂದು ಹೇಳಿದರು. ಕೊರೊನಾದ ಈ ಅಲೆ ದೀರ್ಘ ಕಾಲ ಇರೋದಿಲ್ಲ. ವೇಗವಾಗಿ ಹರಡುತ್ತೆ, ಬೇಗ …
Read More »ಮೇಕೆದಾಟು ನಡಿಗೆ ನಿಲ್ಲದು; ನಮ್ಮನ್ನು ತಡೆಯಲಾಗದು..
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ.6.45ಕ್ಕೆ ಜಿಗಿತಕಂಡು ಸಂಭಾವ್ಯ ಅನಾಹುತದ ಮುನ್ಸೂಚನೆ ನೀಡಿರುವ ಹೊರತಾಗಿಯೂ ಮೇಕೆದಾಟು ಯೋಜನೆಗಾಗಿ ಜ.9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ನಡೆಸಿಯೇ ಸಿದ್ಧ ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಕೋವಿಡ್ ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಸಭೆ, ಸಮಾರಂಭ, ರಾಜಕೀಯ ರ್ಯಾಲಿಗಳಿಗೆ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ ಬುಧವಾರ ಮಧ್ಯಾಹ್ನ ಕಾಂಗ್ರೆಸ್ ನಾಯಕರು ಸಭೆ ನಡೆಸಿ, ಪಾದಯಾತ್ರೆ ನಿಲ್ಲಿಸುವುದು ಬೇಡ ಎಂಬ ನಿರ್ಣಯಕ್ಕೆ ಬಂದರು. ಹಾಗೆಯೇ ಜಂಟಿ ಸುದ್ದಿಗೋಷ್ಠಿ …
Read More »