Breaking News

ರಾಜ್ಯ ದಲ್ಲಿ ಮತ್ತೆ 10 ಒಮಿಕ್ರಾನ್ ಹೊಸ ಕೇಸ್ ಪತ್ತೆ!

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಒಮಿಕ್ರಾನ್ ಸೋಂಕಿನ ಅಬ್ಬರ ರಾಜ್ಯದಲ್ಲೂ ಹೆಚ್ಚಾಗಿದ್ದು, ಇಂದು ರಾಜ್ಯದಲ್ಲಿ 10 ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಜನವರಿ 2 ರಂದು ಕರ್ನಾಟಕದಲ್ಲಿ 10 ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 8 ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 5 ವಿದೇಶಿ ಪ್ರಯಾಣಿಕರಾಗಿದ್ದಾರೆ. ಧಾರವಾಡದಲ್ಲಿ 2 …

Read More »

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಎಂಎಲ್ಸಿ ಚುನಾವಣೆ ಹಿನ್ನೆಲೆ ಡಿಸಿ ಮಹಾಂತೇಶ ಹಿರೇಮಠರನ್ನು ಚುನಾವಣಾ ಆಯೋಗದ ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡಿ ಆರ್.ವೆಂಕಟೇಶಕುಮಾರ್ ಅವರನ್ನು ಡಿಸಿಯಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ಅವಧಿಗೆ ನೇಮಕ ಮಾಡಿತ್ತು. ಇದೀಗ ಪುನಃ ಮಹಾಂತೇಶ ಹಿರೇಮಠ್ ಅವರನ್ನೆ ಬೆಳಗಾವಿ ಡಿಸಿಯಾಗಿ ನಿಯುಕ್ತಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ

Read More »

ಇಂಡಿಯಾಸ್ ಫಸ್ಟ್ ಲೇಡಿ ಟೀಚರ್ ಎಂದೇ ಪ್ರಸಿದ್ಧರಾಗಿರುವ ಮಹಿಳೆ ಸಾವಿತ್ರಿಬಾಯಿ ಫುಲೆ.

ಇಂಡಿಯಾಸ್ ಫಸ್ಟ್ ಲೇಡಿ ಟೀಚರ್ ಎಂದೇ ಪ್ರಸಿದ್ಧರಾಗಿರುವ ಮತ್ತು ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ ಸಾವಿತ್ರಿಬಾಯಿ ಫುಲೆ. ಇಂದು ಅವರ 191 ಜನ್ಮವಾರ್ಷಿಕೋತ್ಸವ ದಿನ. ಈ ದಿನದಂದು ಭಾರತದಲ್ಲಿ ಅಕ್ಷರ ಕ್ರಾಂತ್ರಿ ಮೊದಲ ಮಹಿಳಾ ಶಿಕ್ಷಕಿಯ ಕುರಿತಾದ ಒಂದಷ್ಟು ಆಸಕ್ತಿದಾಯಕ ಸಂಗತಿಗಳನ್ನು ಇಲಿ ನೀಡಲಾಗಿದೆ ತಪ್ಪದೇ ಓದಿ ತಿಳಿಯಿರಿ.   ಸಾವಿತ್ರಿಬಾಯಿ ಫುಲೆ 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ ‘ನೈಗಾಂನ್’ನಲ್ಲಿ ಹುಟ್ಟಿದರು. ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ …

Read More »

ಒಂದೇ ದಿನ 60 ಸಾವಿರ ಮೆಟ್ರಿಕ್‌ ಟನ್‌ ಕಬ್ಬು ನುರಿಸಿದ ನಿರಾಣಿ ಶುಗರ್

ಬಾಗಲಕೋಟೆ: ದೇಶದ ಅತಿ ದೊಡ್ಡ ಸಕ್ಕರೆ ಸಮೂಹ ಸಂಸ್ಥೆಗಳಲ್ಲಿ ಒಂದಾದ ಜಿಲ್ಲೆಯ ಮುಧೋಳದ ನಿರಾಣಿ ಉದ್ಯಮ ಸಮೂಹ ಸಂಸ್ಥೆ ಒಂದೇ ದಿನದಲ್ಲಿ 60,975 ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ಮೂಲಕ ಹೊಸ ದಾಖಲೆ ಬರೆದಿದೆ. ದಕ್ಷಿಣ ಭಾರತದಲ್ಲಿ ಒಂದೇ ದಿನದಲ್ಲಿ ಸಕ್ಕರೆ ಉದ್ಯಮ ಸಮೂಹವೊಂದು ಅತ್ಯಧಿಕ ಕಬ್ಬು ನುರಿಸಿದ ದಾಖಲೆ ಇದಾಗಿದೆ ಎಂದು ಸಮೂಹದ ತಾಂತ್ರಿಕ ಸಲಹೆಗಾರ ಆರ್‌. ವಿ. ವಟ್ನಾಳ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯಶಸ್ಸು ಬಾಗಲಕೋಟೆ, …

Read More »

ಒಳನೋಟ| ಕ್ಯಾನ್ ಮಾಫಿಯಾ ಮನೆ ಮನೆಗೆ ವಿಷಯುಕ್ತ ನೀರು

ಕಲಬುರಗಿ:‌ ಕುಡಿಯುವ ನೀರು ಪೂರೈಸುವ ಘಟಕಗಳು ಐಎಸ್‌ಐ ಗುರುತು ಹೊಂದಿರುವುದು ಕಡ್ಡಾಯ ಎಂಬ ಆದೇಶ ಪೂರ್ಣಪ್ರಮಾಣದಲ್ಲಿ ಅನುಷ್ಠಾನವಾಗಿಲ್ಲ. ಬೆಂಗಳೂರೂ ಸೇರಿ ರಾಜ್ಯದ ಎಲ್ಲಾ ನಗರ, ತಾಲ್ಲೂಕು ಕೇಂದ್ರಗಳಲ್ಲಿ ಕ್ಯಾನ್‌ಗಳ ಮೂಲಕ ವಿಷಯುಕ್ತ ನೀರು ಪೂರೈಕೆಯಾಗುತ್ತಿದೆ.   ಕಲಬುರಗಿ ನಗರದಲ್ಲಿ 44 ನೀರು ಶುದ್ಧೀಕರಣ ಘಟಕಗಳು ಅನುಮತಿ ಪಡೆದಿದ್ದು, ಅವುಗಳಲ್ಲಿ 22ಕ್ಕೆ ಮಾತ್ರ ಐಎಸ್‌ಐ ಮಾರ್ಕ್‌ ಇದೆ. ಜಿಲ್ಲೆಯಾದ್ಯಂತ 400ಕ್ಕೂ ಹೆಚ್ಚು ಅನಧಿಕೃತ ನೀರು ಸರಬರಾಜು ಘಟಕಗಳಿವೆ. 20 ಲೀಟರ್‌ ನೀರಿನ ಒಂದು …

Read More »

ಕೋರೆಗಾಂವ್ ವಿಜಯೋತ್ಸವ: ವಿಜಯಸ್ತಂಭ ಮೆರವಣಿಗೆ

ಚಾಮರಾಜನಗರ: 204ನೇ ಭೀಮ ಕೋರೆಗಾಂವ್‌ ವಿಜಯೋತ್ಸವದ ಅಂಗವಾಗಿ ನಗರದಲ್ಲಿ ಶನಿವಾರ ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಶಾಖೆಯ ವತಿಯಿಂದ ಕೋರೆಗಾಂವ್‌ ವಿಜಯಸ್ತಂಭದ ಪ್ರತಿಕೃತಿಯ ಮೆರವಣಿಗೆ ನಡೆಯಿತು. ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮೆರವಣಿಗೆಗೆ ಕಾಂಗ್ರೆಸ್‌ ಮುಖಂಡ ಎಸ್.ನಂಜುಂಡಸ್ವಾಮಿ ಅವರು ಚಾಲನೆ ನೀಡಿದರು.   ಮೆರವಣಿಗೆಯು ಸತ್ಯಮಂಗಲ ರಸ್ತೆ, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಚಾಮರಾಜೇಶ್ವರ ಉದ್ಯಾನವನ ರಸ್ತೆ, ನಗರಸಭಾ ಕಚೇರಿ ಮೂಲಕ ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, …

Read More »

ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕೆತ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಮಾಹಿತಿಯ 2022ರ ಜನವರಿ 10 …

Read More »

ಮತ್ತೆ ಲಾಕ್​ಡೌನ್​ ಮಾಡುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಸಿಎಂ ಕೈಯಲ್ಲಿ

ಮುಂಬೈ, ಜನವರಿ 1: ದೇಶದ ಒಂದೊಂದೇ ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಜೊತೆಗೆ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿಯೂ ಕಾಡುತ್ತಿದೆ. ಸದ್ಯ ಮಹಾರಾಷ್ಟ್ರ, ಕೇರಳ ಮತ್ತು ದೆಹಲಿಗಳಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ. ಈ ನಡುವೆ ಮಹಾರಾಷ್ಟ್ರ ಸಚಿವರೊಬ್ಬರು ಮತ್ತೊಮ್ಮೆ ಲಾಕ್​ಡೌನ್ ಮಾಡುವ ಸೂಚನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಚಿವ ವಿಜಯ್ ವಡೆತ್ತಿವಾರ್, ಮಹಾರಾಷ್ಟ್ರದಲ್ಲಿ ಕೊರೊನಾ …

Read More »

ಡಿಕೆಶಿ ಹಿಂದೂ ಹೌದ, ಅಲ್ಲವಾ ಅನ್ನೋದರ ಬಗೆಗೆ ಸಂಶಯ; ಸಿಟಿ ರವಿ

ಬೆಂಗಳೂರು, ಡಿಸೆಂಬರ್ 31; ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಿಗೊಳಿಸುವ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಈ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಶುಕ್ರವಾರ ಕೆಪಿಸಿಸಿ ಅಧ್ಯಕ್ಷಡಿ. ಕೆ. ಶಿವಕುಮಾರ್ಟ್ವೀಟ್ ಮಾಡಿ, “ದಕ್ಷಿಣ ಭಾರತದ ಬಹುತೇಕ ರಾಜ್ಯಗಳಲ್ಲಿ ದೇಗುಲಗಳಿಂದ ಸರ್ಕಾರದ ಖಜಾನೆಗೆ ಸಾಕಷ್ಟು ಆದಾಯ ಬರುತ್ತಿದೆ. ಕೋವಿಡ್‌ ಪರಿಸ್ಥಿತಿಯಿಂದಾಗಿ ರಾಜ್ಯದ ಬೊಕ್ಕಸ ಖಾಲಿಯಾಗುತ್ತಿದೆ. ಇಂತಹ ಸಮಯದಲ್ಲಿ ಆದಾಯ ತರುತ್ತಿರುವ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿ …

Read More »

ʼUPSC ಸಂಯೋಜಿತ ವೈದ್ಯಕೀಯ ಸೇವೆʼಗಳ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್‌ ನೋಡಿ |

ಕೇಂದ್ರ ಲೋಕಸೇವಾ ಆಯೋಗ (UPSC) ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆ ಫಲಿತಾಂಶ(Combined Medical Services Examination 2021) ಘೋಷಿಸಿದೆ. ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್ ಸೈಟ್(official website) upsc.gov.in ನಲ್ಲಿ ತಮ್ಮ ಫಲಿತಾಂಶವನ್ನ ಪರಿಶೀಲಿಸಬಹುದು. ಅಂದ್ಹಾಗೆ, ಈ ಪರೀಕ್ಷೆಯನ್ನ 21 ನವೆಂಬರ್ 2021ರಂದು ನಡೆಸಲಾಗಿತ್ತು. ಲಿಖಿತ ಪರೀಕ್ಷೆಯನ್ನ ಎರಡು ಶಿಫ್ಟ್‌ನಲ್ಲಿ ಅಂದ್ರೆ ಮೊದಲ ಶಿಫ್ಟ್ʼನಲ್ಲಿ, ಪರೀಕ್ಷೆ ಬೆಳಿಗ್ಗೆ 9:30 ರಿಂದ 11:30 ರವರೆಗೆ ನಡೆಯಿತು. ಎರಡನೇ ಪಾಳಿಯಲ್ಲಿ ಮಧ್ಯಾಹ್ನ 2 …

Read More »