Breaking News

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆ: ಡಿ.10ಕ್ಕೆ ಮತದಾನ

ಬೆಂಗಳೂರು: ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸೆಂಬರ್ 10 ಕ್ಕೆ ಮತದಾನ ನಡೆಯಲಿದೆ. ಒಟ್ಟು 25 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ವಿಧಾನಪರಿಷತ್ ನ ಸಭಾನಾಯಕ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ ಅವರ ಅವಧಿಯೂ ಮುಗಿದಿದ್ದು ಚುನಾವಣೆ ಎದುರಿಸಬೇಕಾಗಿದೆ.   ನಾಮಪತ್ರ ಸಲ್ಲಿಸಲು ನ. 23 ಕೊನೆ ದಿನ. ನ. 24ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ನ. …

Read More »

ದೆಹಲಿಯ ಏಮ್ಸ್ ಬಳಿ ಪೊಲೀಸರಿಂದ ಫೈರಿಂಗ್; ದುಷ್ಕರ್ಮಿಯ ಕಾಲಿಗೆ ಗುಂಡೇಟು

ದೆಹಲಿ: ದೆಹಲಿಯಲ್ಲಿ(Delhi) ಪೊಲೀಸರು ಮತ್ತು ದುಷ್ಕರ್ಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಮಂಗಳವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಏಮ್ಸ್ (AIIMS) ಬಳಿ ಗುಂಡಿನ ದಾಳಿ ನಡೆದಿದ್ದು, ದುಷ್ಕರ್ಮಿಯ ಕಾಲಿಗೆ ಗುಂಡು ತಗುಲಿದೆ. ಈ ದುಷ್ಕರ್ಮಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎಂದು ಎನ್​​ಡಿಟಿವಿ ವರದಿ ಮಾಡಿದೆ. ಮಂಗಳವಾರ ಬೆಳಗ್ಗೆ ದಕ್ಷಿಣ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಬಳಿ ದೆಹಲಿ ಪೊಲೀಸರ ಗಸ್ತು ತಂಡದೊಂದಿಗೆ …

Read More »

ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿಕೊಂಡ ಪುರಸಭೆ ಅಧಿಕಾರಿಗಳು, ಸ್ಥಳೀಯರ ಆಕ್ರೋಶ

ಬೆಳಗಾವಿ: ಮುಗಳಖೋಡ ಪುರಸಭೆಯಲ್ಲಿ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕಸದ ಬಾಕ್ಸ್‌ಗಳನ್ನು ಹೊರಿಸಿ ಮಕ್ಕಳ ಬಳಿ ಕೆಲಸ ಮಾಡಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ …

Read More »

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು :ಬಸವರಾಜ ಬೊಮ್ಮಾಯಿ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ …

Read More »

ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ

ಬೆಂಗಳೂರು, ನವೆಂಬರ್ 8: ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದೊಡ್ಡಜಾಲ ಮತ್ತು ರಾಜಾನುಕುಂಟೆ ಪಂಚಾಯತಿಗಳಿಗೆ ಭೇಟಿ ನೀಡಿದ್ದು, ಗ್ರಾಮೀಣ ಭಾಗದಲ್ಲಿ ಆಸ್ತಿ ಸೃಜನೆಗೆ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವ ನೀಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.   ಡಿಜಿಟಲ್ ಗ್ರಂಥಾಲಯಗಳಿಗೂ ಭೇಟಿ ನೀಡಿದ್ದಾಗಿ ತಿಳಿಸಿದ ಸಚಿವ ಕಪಿಲ್ ಮೊರೇಶ್ವರ ಪಾಟೀಲ್, ಭಾರತ್ ನೆಟ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ …

Read More »

ಶಂಕರ್​ ನಾಗ್ ಇಂದು (ನವೆಂಬರ್​ 9) ಬದುಕಿದ್ದರೆ 67ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರು (Happy Birthday Shankar Nag).

ಅರುಂಧತಿ ನಾಗ್ ಶಂಕರ್ ಅವರ ನೆನಪಿನಲ್ಲಿ ಬೆಂಗಳೂರಿನ ಜೆ.ಪಿ.ನಗರದಲ್ಲಿ ರಂಗಶಂಕರವನ್ನು ಪ್ರಾರಂಭಿಸಿದರು. ರಂಗಭೂಮಿ,ಕಲೆ ಮತ್ತು ಸಾಹಿತ್ಯ ಚಟುವಟಿಕೆಗಳಿಗೆ ಎಂದೇ ಮೀಸಲಾಗಿರುವ ರಂಗ ಶಂಕರ ಹಲವು ದೇಶಗಳಲ್ಲೂ ಮನೆಮಾತಾಗಿದೆ.  ನಟನೆ, ನಿರ್ದೇಶನ, ನಿರ್ಮಾಣದ ಮೂಲಕ ಜನರ ಮನ ಗೆದ್ದ ಅವರು 36 ನೇವಯಸ್ಸಿನಲ್ಲೇ ನಿಧನ ಹೊಂದಿದ್ದರು. ಜನ್ಮದಿನದಂದು ಅವರನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ‘ಆಟೋ ರಾಜ’ ಸಿನಿಮಾ ಮೂಲಕ ಶಂಕ್ರಣ್ಣ ಅಸಂಖ್ಯಾತ ಆಟೋ ಚಾಲಕರಲ್ಲಿ ಸ್ವಾಭಿಮಾನದ ಭಾವನೆ ಮೂಡಿಸಿದ್ದರು. 1954ರಲ್ಲಿ …

Read More »

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 206 ಪ್ರಕರಣಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ‍ಪತ್ತೆ:S.P. ಲಕ್ಷ್ಮಣ ನಿಂಬರಗಿ

ಬೆಳಗಾವಿ : ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 206 ಪ್ರಕರಣಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ‍ಪತ್ತೆ ಹಚ್ಚಿದ್ದು, ₹ 8.58 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಾಗವಾಡ, ಚಿಕ್ಕೋಡಿ, ಅಥಣಿ, ಗೋಕಾಕ, ಅಂಕಲಿ, ಮುರಗೋಡ, ಘಟಪ್ರಭಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ‍ಪ್ರಕರಣಗಳಲ್ಲಿ ಸಿಇಎನ್ ಅಪರಾಧ ಠಾಣೆಯಿಂದ 2020ರಲ್ಲಿ ₹ 10.97 ಲಕ್ಷ ವಶಕ್ಕೆ ಪಡೆಯಲಾಗಿದೆ …

Read More »

ಅಮೃತ ಯೋಜನೆಯಡಿ ರಾಜ್ಯದ 7,500 ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಅನುದಾನ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಮೃತ ಯೋಜನೆಯಡಿ 7,500 ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಗಳ ಅನುದಾನ ನೀಡುವ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ 5,690 ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಅಂತರ್ಜಾಲ ವ್ಯವಸ್ಥೆ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1 ಕೋಟಿ ರೂ.ವರೆಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ

 ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4 ರಷ್ಟು ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು. ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಪ್, ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಟ 1 ಕೋಟಿ ರೂ. ವರೆಗೆ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ …

Read More »

ಎಚ್​.ಡಿ.ರೇವಣ್ಣ ಕುಟುಂಬ ಸದಸ್ಯರು ಜನರ ಪ್ರಾಣ ಹಿಂಡುತ್ತಿದ್ದಾರೆ. ಚುನಾವಣೆಯಲ್ಲಿ ಅವರ ಕುಟುಂಬದವರನ್ನೆಲ್ಲಾ ಸೋಲಿಸಿ ಬಿಡು ತಾಯಿ:

ಹಾಸನ: ಎಚ್​.ಡಿ.ರೇವಣ್ಣ ಕುಟುಂಬ ಸದಸ್ಯರು ಜನರ ಪ್ರಾಣ ಹಿಂಡುತ್ತಿದ್ದಾರೆ. ಚುನಾವಣೆಯಲ್ಲಿ ಅವರ ಕುಟುಂಬದವರನ್ನೆಲ್ಲಾ ಸೋಲಿಸಿ ಬಿಡು ತಾಯಿ. ಅವರು ಮುಂದೆ ಬರಲು ಯಾರನ್ನೂ ಬಿಡುತ್ತಿಲ್ಲ… ತಾಯಿ ನಿನ್ನ ಕೃಪೆಯಿಂದ ‌ಹೊಳೆನರಸೀಪುರದ ಎಂಎಲ್‌ಎ ಬದಲಾಗಬೇಕು, ಆ ಮೂಲಕ ಹೊಳೆನರಸೀಪುರ ಜನರಿಗೆ ಒಳ್ಳೇದು ಮಾಡು ತಾಯಿ… ನನ್ನ ದೊಡ್ಡ ಮಗನಿಗೆ ಮದುವೆ‌ ಮಾಡು… ಒಂದು ವರ್ಷದೊಳಗೆ ಮನೆ ಕಟ್ಟಿದರೆ 301 ರೂಪಾಯಿಯನ್ನ ನಿನ್ನ ಹುಂಡಿಗೆ ಕಾಣಿಕೆ ಹಾಕುವೆ… ತಾಯಿ ನನಗೆ ಬೇಗ ಪ್ರಮೋಷನ್ ಕೊಡಮ್ಮ… …

Read More »