Breaking News

32 ವಾರಗಳಲ್ಲಿ ಜನಿಸಿದ ಮಗುವಿಗೆ ಗಂಭಿರ ಕಾಯಿಲೆ: ಶಸ್ತ್ರಚಿಕಿತ್ಸೆ ಮೂಲಕ ಪ್ರಾಣ ಉಳಿಸಿದ ಕೆಎಲ್ಇ ವೈದ್ಯರು

ಬೆಳಗಾವಿ:ಕೇವಲ 32 ವಾರಗಳಲ್ಲಿ ಜನಿಸಿದ ಮಗುವಿನ ತೂಕ ಒಂದೂವರೆ ಕೆಜಿ ಮಾತ್ರ. ಶಸ್ತ್ರಚಿಕಿತ್ಸೆ ಮಾಡಿ ಹೆರಿಗೆಯ ನಂತರ ಪ್ಲೆಟಲೆಟ್‌ ತೀವ್ರ ಕಡಿಮೆಗೊಂಡು, ರಕ್ತ ಹೆಪ್ಪುಗಟ್ಟುವಿಕೆಯಿಂದ ಬಳಲುತ್ತಿತ್ತು. ಆಸ್ಪತ್ರೆಗೆ ಬಂದ ತಕ್ಷಣ ಮಗುವನ್ನು ಸಮಗ್ರವಾಗಿ ತಪಾಸಣೆಗೊಳ್ಪಡಿಸಿದಾಗ ನವಜಾತ ಶಿಶು ಅತ್ಯಂತ ಅಪರೂಪದ ಜೈಂಟ್‌ ಸಿಸ್ಟಿಕ್‌ ಮೆಕೊನಿಯಮ್‌ ಪೆರಿಟೊನಿಟಿಸ್‌ ಎಂಬ ಅತ್ಯಂತ ಗಂಭಿರವಾದ ಖಾಯಿಲೆಯಿಂದ ಬಳಲುತ್ತ ಜೀವನ್ಮರಣದ ನಡುವೆ ಹೋರಾಡುತ್ತಿತ್ತು. ತಕ್ಷಣವೇ ಶಸ್ತ್ರಚಿಕಿತ್ಸೆ ನೆರವೇರಿಸಿ ಮಗುವಿಗೆ ಪುನರಜನ್ಮ ಪ್ರಾಣ ಉಳಿಸುವಲ್ಲಿ ಕೆಎಲ್‌ಇ ಸಂಸ್ಥೆಯ …

Read More »

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

ರಾಯಚೂರು: ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದೆ. ಫೆ.18ರಿಂದ 24ರವರೆಗೆ ಏಳು ದಿನಗಳ ಕಾಲ ರಾಯರ ಪಟ್ಟಾಭಿಷೇಕ, ವರ್ಧಂತಿ ಉತ್ಸವಗಳು ಸೇರಿ ನಾನಾ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗುರುವೈಭವೋತ್ಸವಕ್ಕೆ ಇಂದು (ಫೆ.18) ಚಾಲನೆ ಸಿಕ್ಕಿದ್ದು, ನಾಳೆ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ ಜರುಗಲಿದೆ. ರಾಘವೇಂದ್ರ ತೀರ್ಥರ ಶಿಷ್ಯ ಯತಿ ಯೋಗಿಂದ್ರ ತೀರ್ಥರ ಪಾರ್ಥನೆಯಂತೆ ಮೂಲ ಪಾದುಕೆಗಳ ಪಟ್ಟಾಭಿಷೇಕ ನೆರವೇರಿಸಲಾಗುತ್ತದೆ. ಮಠದ ಪ್ರಸ್ತುತ ಪೀಠಾಧಿಪತಿ …

Read More »

ಯರಗಟ್ಟಿ ತಾಲೂಕು ೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ!

​ಕನ್ನಡ ಎಂದರೆ ಕೇವಲ ಭಾಷೆಯಲ್ಲ, ಅದು ನಮ್ಮ ಬದುಕು ಮತ್ತು ಸಂಸ್ಕೃತಿ ​ಇಂದು ಯರಗಟ್ಟಿ ತಾಲೂಕಿನ ತಲ್ಲೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಯರಗಟ್ಟಿ ವತಿಯಿಂದ ಆಯೋಜಿಸಿದ ೩ನೇ ಕನ್ನಡ ಸಾಹಿತ್ಯ ಸಮ್ಮೇಳನ”ದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸುವ ಸೌಭಾಗ್ಯ ನನ್ನದಾಯಿತು. ​ಸಾಹಿತ್ಯ ಸಮ್ಮೇಳನಗಳು ನಮ್ಮ ನಾಡು-ನುಡಿಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ವೇದಿಕೆಗಳಾಗಲಿ. ಈ ಅದ್ಧೂರಿ ಸಮ್ಮೇಳನದಲ್ಲಿ ಸಾಹಿತಿಗಳು, …

Read More »

ತಾವಲಗೇರಿ ಗ್ರಾಮದ ಹೆಳವ ಜನಾಂಗದವರ ಸ್ವಂತ ಮನೆಯ ಕನಸಿಗೆ ಚಾಲನೆ!

​ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಮತ್ತು ಪ್ರತಿಯೊಬ್ಬರಿಗೂ ಗೌರವಯುತ ಜೀವನ ಸಿಗಬೇಕು ಎನ್ನುವುದು ನಮ್ಮ ಆಶಯ. ​ಇಂದು ಯರಗಟ್ಟಿ ತಾಲೂಕಿನ ಕುರುಬಗಟ್ಟಿ ಗ್ರಾಮದ ಸ.ನಂ 143/ಪಿ1 ರಲ್ಲಿನ 12 ಎಕರೆ 12 ಗುಂಟೆ ಜಮೀನಿನ ಪೈಕಿ 02 ಎಕರೆ ಜಮೀನನ್ನು, ತಾವಲಗೇರಿ ಗ್ರಾಮದ ಹೆಳವ ಜನಾಂಗದವರಿಗೆ ನಿವೇಶನ ಮತ್ತು ಮನೆ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಜೂರು ಮಾಡಲಾಗಿದ್ದು, ಸದರಿ ಜಾಗದಲ್ಲಿ …

Read More »

50 ಹಾಸಿಗೆಗಳ ತೀವ್ರ ನಿಗಾ ಘಟಕ (CCU) ನಿರ್ಮಾಣಕ್ಕೆ ಶಂಕುಸ್ಥಾಪನೆ

ಬೆಳಗಾವಿ : ರಾಜ್ಯದಲ್ಲಿ ಅತ್ಯಂತ ಉತ್ತಮವಾಗಿ ನಿರ್ವಹಿಸುತ್ತಿರುವ ಆಸ್ಪತ್ರೆಗಳಲ್ಲಿ ಬೈಲಹೊಂಗಲ ಆಸ್ಪತ್ರೆ ಮುಂಚೂಣಿಯಲ್ಲಿದೆ. ಪ್ರತಿ ತಾಲೂಕಿನ ಆಸ್ಪತ್ರೆಗಳು ಇದೇ ರೀತಿಯಲ್ಲಿ ನಿರ್ವಹಿಸಿದರೆ ರೋಗಿಗಳ ಬಹುತೇಕ ಸಮಸ್ಯೆಗಳು ಪರಿಹಾರವಾಗುತ್ತವೆ. ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಾ ಆಸ್ಪತ್ರೆ ಮೇಲ್ದರ್ಜೆಗೆರಿಸುವ ಉದ್ದೇಶದಿಂದ ನೂತನವಾಗಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ಮಂಜೂರು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡುರಾವ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ …

Read More »

ವಿದ್ಯುತ್ ಕಂಬದಿಂದ ಬಿದ್ದು ಗೋಕಾಕ್ ಮೂಲದ ಲೈನ್‌ಮ್ಯಾನ್‌ ಸಾವು…!

ತುಮಕೂರು : ವಿದ್ಯುತ್ ಕಂಬದಿಂದ‌ ಬಿದ್ದು ಲೈನ್‌ಮ್ಯಾನ್‌ ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹನುಮಂತ ಜಾಲಿಕಟ್ಟೆ (29) ಮೃತ ದುರ್ದೈವಿ. ‌ವಿದ್ಯುತ್‌ ಕಂಬದ ಮೇಲೆ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಕೆಳಗಡೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ ಮೂಲದ ಹನುಮಂತ ಜಾಲಿಕಟ್ಟೆ ಕಂಬದ ಮೇಲೆ ಕೆಲಸ ಮಾಡುವ ಮೊದಲು ವಿದ್ಯುತ್‌ ಸಂಪರ್ಕ ಸರಿಯಾಗಿ ಕಡಿತಗೊಳಿಸಬೇಕು. ಬೆಸ್ಕಾಂ ಅಧಿಕಾರಿ ಮತ್ತು …

Read More »

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ದಿಢೀರ್ ರೌಂಡ್ಸ್: ರಸ್ತೆಯಲ್ಲೇ ಕಸ ಚೆಲ್ಲಿದವರಿಗೆ ಬಿತ್ತು 5 ಸಾವಿರ ದಂಡ!

ಬೆಳಗಾವಿ ನಗರದ ಸ್ವಚ್ಛತೆ ಕಾಪಾಡುವಲ್ಲಿ ಮಹಾನಗರ ಪಾಲಿಕೆ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ವಾರ್ಡ್ ಸಂಖ್ಯೆ 44ಕ್ಕೆ ಸ್ವತಃ ಆಯುಕ್ತರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆಯಲ್ಲೇ ಕಸ ಸುರಿದವರಿಗೆ ಸ್ಥಳದಲ್ಲೇ ಬಿಸಿ ಮುಟ್ಟಿಸಿದ್ದಾರೆ. ಬೆಳಗಾವಿಯ ವಾರ್ಡ್ ಸಂಖ್ಯೆ 44ರ ಮಾರುಕಟ್ಟೆ ಪ್ರದೇಶಕ್ಕೆ ಮಹಾನಗರ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ., ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾರುಕಟ್ಟೆ ಪ್ರದೇಶದ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಸ ಚೆಲ್ಲಿರುವುದನ್ನು …

Read More »

ಸಿದ್ದರಾಮಯ್ಯ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವ ; ಶಶಿಕಲಾ ಜೊಲ್ಲೆ ಆಕ್ರೋಶ

ಯಕ್ಸಂಬಾ : ಮೂಡಾ ಹಗರಣದ ನಂತರ ಹದಿನಾಲ್ಕು ಸೈಟ್ ವಾಪಸ್ ನೀಡಿರುವ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಸಾವಿರ ದಿನ ಪೂರೈಸಿದ ಸಮಾವೇಶ ಮಾಡುವುದು ಹಾಸ್ಯಾಸ್ಪದ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಯಕ್ಸಂಬಾ ಪಟ್ಟಣದ ಬೀರೇಶ್ವರ ಸಭಾಗೃಹದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿ ಹಾಗೂ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಭೃಷ್ಟಚಾರ ತಾಂಡವವಾಡುತ್ತಿದೆ. ವಾಲ್ಮೀಕಿ, ಮೂಡಾ, ಅಬಕಾರಿ ಸೇರಿದಂತೆ ಅನೇಕ ಹಗರಣದಲ್ಲಿ ಕಾಂಗ್ರೆಸ್ ಮುಳುಗಿದೆ ಎಂದು …

Read More »

ಚಿಕ್ಕೋಡಿ ಕರೋಶಿ ಗ್ರಾಮ ಪಂಚಾಯಿತಿ ಎದರು ಗ್ರಾಮಸ್ಥರ ಪ್ರತಿಭಟನೆ

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿನ ಕಿಟಕಿ ಮುರಿದು ಕಿಡಿಗೇಡಿಗಳು ಪುಸ್ತಕಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇಂತಹ ದುರ್ಘಟನೆ ನಡೆಯಬಾರದೆಂದು ಉದ್ದೇಶದಿಂದ ಅಲ್ಲಿನ ಗ್ರಾಮಸ್ಥರು ಶಾಲೆಗೆ ಸಿಸಿ ಕ್ಯಾಮೆರಾ ಅಳವಡಿಸುವಂತೆ ಮನವಿ ಸಲ್ಲಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿ ಸಿ ಕ್ಯಾಮೆರಾ ಅಳವಡಿಸದೆ ನಿರ್ಲಕ್ಷ ಮಾಡಿದ್ದಾರೆ. ಇದರಿಂದಾಗಿ ಕಿಡಿಗೆಡಿಗಳು ಶಾಲೆಯ ಕಿಟಕಿ ಮುರಿದು ಪುಸ್ತಕಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಇಂತಹ ಕೃತ್ಯ ಮಾಡಿದವರ …

Read More »

ಕೃಷ್ಣಾ ತೀರದ ಭಾಗದ ಗ್ರಾಮಗಳಲ್ಲಿ ಶುದ್ದ ಕುಡಿಯೋ ನೀರು ಮರೀಚಿಕೆ

  • ವಿಜಯಪುರ: ಹರಿಯುವ ನದಿಗಳ ನಡುವೆ ನೀರಿಗಾಗಿ ಹಾಹಾಕಾರ • ಕೃಷ್ಣಾ ತೀರದ ಗ್ರಾಮಗಳಲ್ಲಿ ಮರೀಚಿಕೆಯಾದ ಶುದ್ಧ ನೀರು • ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ನೀರಿನ ಘಟಕಗಳು ಬಂದ್ • ಅನುದಾನಕ್ಕಾಗಿ ಕಾಯುತ್ತಿದೆ ಕುಡಿಯುವ ನೀರು ಇಲಾಖೆ ಆ ಜಿಲ್ಲೆಯಲ್ಲಿ ಮೂರು ನದಿಗಳು ಹರಿಯುತ್ತವೆ. ಆದ್ರೆ ಗ್ರಾಮೀಣ ಭಾಗದ ಜನರಿಗೆ ಶುದ್ದ ಕುಡಿಯೋ ನೀರು ಸಿಗುತ್ತಿಲ್ಲಾ ಅನ್ನೊದು ದುರಂತ. ಸರ್ಕಾರ ಸಾವಿರಾರು ಕೋಟಿ ಯಾವುದ್ಯಾವುದೋ ಯೋಜನೆಗೆ ಖರ್ಚು ಮಾಡುತ್ತೆ. …

Read More »