Breaking News

ಬಿಜೆಪಿ-ಜೆಡಿಎಸ್‌ನಿಂದ ಷರತ್ತುಗಳಿಲ್ಲದೇ ಕಾಂಗ್ರೆಸ್‌ಗೆ​ ಸೇರಲು ಎಲ್ಲರಿಗೂ ಅವಕಾಶ : ಮಾಜಿ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ : ಯಾರೇ ಪಕ್ಷ ಸೇರಿದರೂ ಸ್ವಾಗತ. ಆದರೆ, ಯಾವುದೇ ಷರತ್ತುಗಳು ಹಾಕುವಂತಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು. ಇದಕ್ಕೆಲ್ಲಾ ಸಿದ್ಧವಾಗಿದ್ದರೆ ಮಾತ್ರ ಪಕ್ಷಕ್ಕೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ಗೆ ಸೇರಲು ಬಿಜೆಪಿ ಮತ್ತು ಜೆಡಿಎಸ್​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಹೆಸರು ಮಾತ್ರ ಹೇಳಲ್ಲ. ನಾವು ಯಾವಾಗಲೂ ಚುನಾವಣೆಗೆ ಸಿದ್ಧರಿದ್ದೇವೆ. ವಿಧಾನಸಭೆಗೂ ರೆಡಿ ಇದ್ದೇವೆ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ …

Read More »

ಕರ್ನಾಟಕ ರತ್ನ ಅಪ್ಪು ಅಗಲಿ 3 ತಿಂಗಳು..ಸಸಿ ನೆಟ್ಟು ಭಾವುಕರಾದ ರಾಘಣ್ಣ

ಬೆಂಗಳೂರು: ಪವರ್​ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳು ಕಳೆದಿದೆ. ಕಳೆದ ವರ್ಷ ಅಕ್ಟೋಬರ್ 29 ರಂದು ಹೃದಯಾಘಾತದಿಂದ ಪುನೀತ್​ ರಾಜ್​ ಕುಮಾರ್​ ಇಹಲೋಕ ತ್ಯಜಿಸಿದ್ದರು. ಪುನೀತ್​ ರಾಜ್​ ಕುಮಾರ್​ ನಿಧನರಾಗಿ ಮೂರು ತಿಂಗಳು ಕಳೆದ ಹಿನ್ನೆಲೆ, ಪುನೀತ್ ಸಮಾಧಿ ಬಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.   ಸಮಾಧಿ ಬಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್,​ ಪುತ್ರಿ ಧೃತಿ , ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ …

Read More »

ಗೋಕಾಕ್‌ನಲ್ಲಿ ಅಭಿವೃದ್ಧಿ ಆಗಿಲ್ಲ ಎಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತೇನಿ: ರಮೇಶ್ ಜಾರಕಿಹೊಳಿ

ಅಥಣಿ: ಗೋಕಾಕ್ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಅಂದ್ರೆ ತಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿ ತಾಲೂಕಿನ ರಡ್ಡೆರಹಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಗೋಕಾಕ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನ ಬಂದಂತೆ ಮಾತಾಡುತ್ತಾರೆ. ಅವರಿಗೆ ಬಹಿರಂಗವಾಗಿ ಸವಾಲು ಹಾಕುತ್ತೇನೆ, ಕ್ಷೇತ್ರ ಅಭಿವೃದ್ಧಿ ಆಗಿಲ್ಲ ಎಂದರೆ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಇತ್ತಿಚಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ …

Read More »

ರಾಜ್ಯದ ಪ್ರತಿ ಗಾಮದಲ್ಲೂ ಗೋಶಾಲೆ ಆರಂಭಿಸಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ.

ರಾಜ್ಯದ ಪ್ರತಿ ಗಾಮದಲ್ಲೂ ಗೋಶಾಲೆ ಆರಂಭಿಸಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ.   ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ಪ್ರತಿ ತಾಲ್ಲೂಕು ಮಟ್ಟದಲ್ಲೂ ಗೋಶಾಲೆಗಳನ್ನು ತೆರೆಯಲಾಗಿದ್ದು, ಒಟ್ಟು 197 ಗೋಶಾಲೆಗಳಿಗೆ ಅನುದಾನ ನೀಡಲಾಗಿದೆ’ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ. ಜಿಲ್ಲೆ ಹಾಗೂ ತಾಲ್ಲೂಕು ಮಾತ್ರವಲ್ಲದೆ ಪ್ರತಿಯೊಂದು ಗ್ರಾಮ ಮಟ್ಟದಲ್ಲೂ ಗೋ ಶಾಲೆ ತೆರೆಯಬೇಕು’ ಎಂಬ ಮೌಖಿಕ ಅಭಿಪ್ರಾಯ …

Read More »

ಹೈಕೋರ್ಟ್‌ ರಿಜಿಸ್ಟ್ರಾರ್‌ ವಿರುದ್ಧ ದಾವೆ; ಅರ್ಜಿದಾರರಿಗೆ ₹ 11 ಲಕ್ಷ ದಂಡ

ಬೆಂಗಳೂರು : ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ದಂಡದ ಮೊತ್ತವನ್ನು 8 ವಾರಗಳಲ್ಲಿ ವಕೀಲರ ಪರಿಷತ್ತಿಗೆ ಪಾವತಿಸಬೇಕು. ನಿಗದಿತ ಅವಧಿಯಲ್ಲಿ ದಂಡದ ಮೊತ್ತ ಪಾವತಿಸದೇ ಹೋದಲ್ಲಿ ಜಿಲ್ಲಾಧಿಕಾರಿಗಳು ದಂಡ ವಸೂಲಿಗೆ ಕ್ರಮ ಕೈಗೊಳ್ಳಬೇಕು. ದಂಡದ ಮೊತ್ತ ಪಾವತಿಯಾಗದಿದ್ದರೆ ವಕೀಲರ ಪರಿಷತ್ತು ಅರ್ಜಿದಾರರ ವಿರುದ್ಧ ನ್ಯಾಯಾಂಗ ನಿಂದನೆ ದಾವೆ ಹೂಡಬಹುದು’ ಎಂದು ಆದೇಶಿಸಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು 2021ರ ಮೇ 19ರಂದು ಏಕಸದಸ್ಯ …

Read More »

ತಜ್ಞರ ಜೊತೆ ಇಂದು ಸಿಎಂ ಸಭೆ: ಕೋವಿಡ್‌ ನಿರ್ಬಂಧ ಸಡಿಲಿಕೆ?

ಬೆಂಗಳೂರು: ರಾಜ್ಯದಲ್ಲಿನ ಕೋವಿಡ್‌ ಸ್ಥಿತಿಗತಿಗಳ ಕುರಿತು ಅವಲೋಕನ ನಡೆಸಲು ತಾಂತ್ರಿಕ ಸಮಿತಿಯ ಸದಸ್ಯರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಶನಿವಾರ) ಸಭೆ ನಡೆಸಲಿದ್ದಾರೆ. ರಾತ್ರಿ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲೆ ಮತ್ತೆ ಆರಂಭಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಸುದ್ದಿಗಾರರ ಜೊತೆ ಶನಿವಾರ ಬೆಳಿಗ್ಗೆ ಮಾತನಾಡಿದ ಮುಖ್ಯಮಂತ್ರಿ, ‘ಜಿಲ್ಲೆಗಳಲ್ಲಿ ಮತ್ತು ಬೆಂಗಳೂರು ನಗರದಲ್ಲಿ ಕೋವಿಡ್‌ ಸ್ಥಿತಿಗತಿಗಳ ವಿವರ ತೆಗೆದುಕೊಂಡು ಕೆಲವು ತೀರ್ಮಾನ ತೆಗೆದುಕೊಳ್ಳಲಾಗುವುದು’ …

Read More »

ಲೂಟಿಯೇ ಬಿಜೆಪಿ ಸಾಧನೆ: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

ಬೆಂಗಳೂರು: ‘ಕಾವೇರಿ ನೀರು, 110 ಹಳ್ಳಿಗಳ ಅಭಿವೃದ್ದಿ, ಎತ್ತಿನಹೊಳೆ ಯೋಜನೆ, ಉದ್ಯಾನಗಳ ಅಭಿವೃದ್ದಿ, ಒಳಚರಂಡಿ, ಮೇಲ್ಸೇತುವೆಗಳು ಸೇರಿದಂತೆ ಅಭಿವೃದ್ದಿ ಕೆಲಸಗಳು ಕಾಂಗ್ರೆಸ್ ಆಡಳಿತದಲ್ಲಿ ಮಾತ್ರ ಸಾಧ್ಯವಾಗಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು.   ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ‍ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಬಿಜೆಪಿಯಿಂದ ಯಾವುದೇ ಅಭಿವೃದ್ದಿ ಕೆಲಸ ನಡೆಯುತ್ತಿಲ್ಲ. ಭ್ರಷ್ಟಾಚಾರ, ದಬ್ಬಾಳಿಕೆ, ಅಕ್ರಮ, ಅನ್ಯಾಯ, ಅಭಿವೃದ್ದಿ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿ …

Read More »

ಇಬ್ಬರು ಆರೋಪಿಗಳನ್ನು ಒಂದು ವರ್ಷ ಗಡಿಪಾರು ಮಾಡಿ ಡಿಸಿಪಿ ರವಿಂದ್ರ ಗಡಾದಿ ಆದೇಶ

ಓಸಿ ಜುಗಾರ್ ಆಡಲು ಪ್ರೇರೇಪಿಸುತ್ತಿದ್ದ ಮಹೇಶ ಯಲ್ಲಪ್ಪಾ ಯಲ್ಲಾರಿ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಿದ ಮತ್ತು ಕೊಲೆ ಪ್ರಯತ್ನದಂತಹ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿತನಾದ ವಿಲಾಸ ಶಂಕರ ಬಾಳೆಕುಂದ್ರಿ ಇವರಿಗೆ 1 ವರ್ಷದ ಅವಧಿಗೆ ಗಡಿಪಾರು ಮಾಡಬೇಕು ಪೋಲಿಸ್ ಆಯುಕ್ತರಾದ ರವೀಂದ್ರ ಕೆ ಗಡಾದಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಸಾರ್ವಜನಿಕರಿಗೆ ಓಸಿ ಜುಗಾರ್ ಆಡಲು ಪ್ರೇರೇಪಿಸುತ್ತಿದ್ದ ಮಹೇಶ ಯಲ್ಲಪ್ಪಾ ಯಲ್ಲಾರಿ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಿದ …

Read More »

ಬಳ್ಳಾರಿಯಲ್ಲಿ ಕೊರೋನಾ 3ನೇ ಅಲೆ ಅಬ್ಬರ: ಒಂದೇ ದಿನ 5 ಮಂದಿ ಮಹಾಮಾರಿಗೆ ಬಲಿ

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೊರೋನಾ ಮೂರನೇ ಅಲೆ ಅಬ್ಬರಿಸುತ್ತಿದ್ದು, ಜಿಲ್ಲೆಗಳಲ್ಲಿ ಒಂದೇ ದಿನದಲ್ಲಿ 5 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದಾರೆ. ಇದು ಮೂರನೇ ಅಲೆಯ ವೇಳೆ ಸಂಭವಿಸಿದ ಅತೀ ಹೆಚ್ಚು ದೈನಂದಿನ ಸಾವುಗಳಾಗಿದೆ.   ಈ ನಡುವೆ ಜಿಲ್ಲೆಯಲ್ಲಿನ ಈ ಬೆಳವಣಿಗೆ ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದ್ದು, ಅಧಿಕಾರಿಗಳು ಮಾತ್ರ ಬಾಕಿ ಉಳಿದಿದ್ದ ಸಾವಿನ ವರದಿಯನ್ನು ಸೇರ್ಪಡೆಗೊಳಿಸಿದ ಪರಿಣಾಮ, ದೈನಂದಿನ ಅಂಕಿಅಂಶಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು ಹೇಳಿದ್ದಾರೆ. …

Read More »

ಕಾನ್‌ಸ್ಟೆಬಲ್ ನೌಕರಿ ನಿರಾಕರಿಸಿದ್ದ ಯುವತಿ ಪಿಎಸ್‌ಐಗೆ ಆಯ್ಕೆ

ಮುಗಳಖೋಡ: ಪಟ್ಟಣದ ಬಡ ಕುಟುಂಬದ ಯುವತಿ ಪ್ರೀತಿ ಮಲ್ಲ‍ಪ್ಪ ಬಾಳೋಜಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 25ನೇ ‍ರ‍್ಯಾಂಕ್ ಗಳಿಸಿ ಪಿಎಸ್‌ಐ ನೌಕರಿಗೆ ಆಯ್ಕೆಯಾಗಿದ್ದಾರೆ. ಗುಡಿಸಲಲ್ಲಿ ವಾಸಿಸುತ್ತಾ, ಮನೆ-ಕೃಷಿ ಕೆಲಸ ಮಾಡುತ್ತಾ ಓದಿ ಸಾಧನೆ ತೋರಿ ಗಮನಸೆಳೆದಿದ್ದಾರೆ. 25 ವರ್ಷದ ಈ ಯುವತಿ 2 ಬಾರಿ ಸಿಕ್ಕಿದ್ದ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್‌ ಕೆಲಸವನ್ನು ನಿರಾಕರಿಸಿದ್ದರು. ಪಿಎಸ್‌ಐ ಹುದ್ದೆ ಗಿಟ್ಟಿಸಿಕೊಳ್ಳಲೇಬೇಕು ಎಂದು ಹಟದಿಂದ ಧಾರವಾಡದಲ್ಲಿದ್ದುಕೊಂಡು ಓದಿ ಪರಿಶ್ರಮದಿಂದ ಯಶಸ್ಸು ಗಳಿಸಿದ್ದಾರೆ. ಸ್ವಂತ ಊರು ಮುಗಳಖೊಡವಾದರೂ ಅಜ್ಜಿ …

Read More »