Breaking News

: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ: ಬೊಮ್ಮಾಯಿ

ಬೆಂಗಳೂರು: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ.. ಈಗಷ್ಟೇ ನಾನು ರಾಘಣ್ಣ ಹಾಗೂ ಶಿವರಾಜ್​ಕುಮಾರ್​ ಜೊತೆ ಮಾತನಾಡಿದೆ. ಪುನೀತ್​ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ  ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಅಂತಾ ಮಾಹಿತಿ ನೀಡಿದರು.

Read More »

ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ

ಬೆಂಗಳೂರು: ಪವರ್​​ಸ್ಟಾರ್ ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್​​ ರಾಜ್​ಕುಮಾರ್​ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.

Read More »

ಪುನೀತ್ ರಾಜಕುಮಾರ್ ನಿಧನಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿರುವ ಬೆಳಗಾವಿ ಅಭಿಮಾನಿ

ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಸುರಿಯುತ್ತಿದೆ. ಅಪ್ಪು ನಿಧನದಿಂದ ಆಘಾತಕ್ಕೆ ಒಳಗಾಗಿದ್ದ ಅಭಿಮಾನಿಯೊರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಶಿಂಧೊಳ್ಳಿ ಗ್ರಾಮದ ಪರಶುರಾಮ ದೇಮಣ್ಣವರ್ ಮೃತ ಅಭಿಮಾನಿ. ನಟ ಪುನೀತ್ ರಾಜಕುಮಾರ್ ಅಪ್ಪಟ ಅಭಿಮಾನಿಯಾಗಿದ್ದ ಮೃತ ಪರಶುರಾಮ್ ಟಿವಿಯಲ್ಲಿ ಅಪ್ಪು ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ. ಇದೇ ವೇಳೆ ರಾತ್ರಿ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ …

Read More »

ಬೆಳಗಾವಿಯಲ್ಲಿ ಆಯೋಜಿಸಿರುವ ನಿಸರ್ಗದ ಬಗೆಗಿನ ಮನಮೋಹಕ ಚಿತ್ರಗಳ ಪ್ರದರ್ಶನಕ್ಕೆ ಒಳ್ಳೆಯ ಪ್ರತಿಕ್ರಿಯೆ

ಬೆಳಗಾವಿಯಲ್ಲಿ ಆಯೋಜಿಸಿರುವ ನಿಸರ್ಗದ ಬಗೆಗಿನ ಮನಮೋಹಕ ಚಿತ್ರಗಳ ಪ್ರದರ್ಶನಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಸಾಕಷ್ಟು ವಿದ್ಯಾರ್ಥಿಗಳು, ಪೇಂಟಿಂಗ್ಸ್ ರಸಿಕರನ್ನು ಚಿತ್ರಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಹೌದು ಬೆಳಗಾವಿಯ ಟಿಳಕವಾಡಿಯಲ್ಲಿರುವ ಕೆ.ಬಿ.ಕುಲಕರ್ಣಿ ಆರ್ಟ ಗ್ಯಾಲರಿಯ ವರೆರ್ಕರ್ ನಾಟ್ಯಗ್ರಹದಲ್ಲಿ ಅಕ್ಟೋಬರ್ 25ರಿಂದ ಅಕ್ಟೋಬರ್ 31ವರೆಗೆ ನಿಸರ್ಗದ ಬಗೆಗಿನ ಚಿತ್ರಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿವಿಧ ಕಾಲೇಜು, ಶಾಲೆಗಳ ವಿದ್ಯಾರ್ಥಿಗಳು ಆಗಮಿಸಿ ನಿಸರ್ಗದ ರಮಣೀಯ ಚಿತ್ರಗಳನ್ನು ಕಣ್ತುಂಬಿಕೊಂಡರು. ಎಲ್ಲ ಚಿತ್ರಗಳು ಕೂಡ ನಮ್ಮ ನಿಸರ್ಗವನ್ನು ಕಾಪಾಡುವ …

Read More »

ಅಂತಿಮ ದರ್ಶನದ ವೇಳೆ ಕರ್ತವ್ಯ ನಿರತ ಪೊಲೀಸ್​ ಪೇದೆಯೊಬ್ಬರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಬೆಂಗಳೂರು: ಪವರ್​​ಸ್ಟಾರ್ ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ವೇಳೆ ಕರ್ತವ್ಯ ನಿರತ ಪೊಲೀಸ್​ ಪೇದೆಯೊಬ್ಬರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಪುನೀತ್​ ರಾಜ್​ಕುಮಾರ್​ ಅಂತಿಮ ದರ್ಶನ ಹಿನ್ನೆಲೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ಪುನೀತ್​ ಪಾರ್ಥಿವ ಶರೀರಕ್ಕೆ ಸೆಲ್ಯೂಟ್​ ಮಾಡಿ ಬಿಕ್ಕಿ ಬಿಕ್ಕಿ ಆಕ್ರಂದಿಸಿದ್ದಾರೆ.   ಪುನೀತ್ ರಾಜ್​​ಕುಮಾರ್ ಅವರ ಅಂತಿಮ ದರ್ಶನ ಪಡೆಯಲು ನಾಡಿನಾದ್ಯಂತ ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ನಗರದ ಕಂಠೀರವ ಸ್ಟೇಡಿಯಂಗೆ ಆಗಮಿಸಿ …

Read More »

ಅಪ್ಪು ಅಂತ್ಯಸಂಸ್ಕಾರ ರಾಜ್ ಸಮಾಧಿ ಪಕ್ಕದಲ್ಲೇ

ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ ನೀಡಿದೆ.  ಕನ್ನಡ ಚಿತ್ರರಂಗದ ನಾಯಕನಟ  ಪುನೀತ್ ರಾಜ್‌ಕುಮಾರ್  ಶುಕ್ರವಾರ ಅಪರಾಹ್ನ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿರುತ್ತಾರೆ. ಆದ ಕಾರಣ, …

Read More »

ಅಂತ್ಯಕ್ರಿಯೆ ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್ ಕುಮಾರ್, ಪುನೀತ್ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣುಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರನಿಂದ …

Read More »

4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್‍ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ ರೈತರ ಮಕ್ಕಳಿಗೆ 4.50 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.     ಎನ್‍ಎಂಪಿ ಘಟಕ ಸ್ಥಾಪನೆಗೆ ಬೆಳಗಾವಿ ಮಹಾ ನಗರದಲ್ಲಿ …

Read More »

ಕೋವಿಡ್ ಕಿಟ್ಗಳ ಹಸ್ತಾಂತರ….

ಮೂಡಲಗಿ: ತಾಲೂಕು ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಯುಎಸ್ ಎಐಡಿ ಅನುದಾನದೊಂದಿಗೆ ಕೆಎಚ್ ಪಿಟಿ ಸಂಸ್ಥೆಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರವನ್ನು ತಾಲೂಕು ಪಾಚಾಯಿತಿ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ತಾಲೂಕಿನ 2 ಗ್ರಾಮ ಪಂಚಾಯಿತಿ ಪಂಚಾಯಿತಿ ಅಧ್ಯಕ್ಷ ಹಾಗೂ ಕಾರ್ಯಕರ್ತೆಯರಿಗೆ ಕೋಡ್ ನಿರ್ವಹಣೆಯ ತದಬೇತಿ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು. ತಾಲೂಕಾ ಸಹಾಯಕ ನಿರ್ದೇಶಕ ಸಂಗಮೇಶ ದೊಡ್ಡವರ ಮತ್ತು ಚಿಕ್ಕ ಮಕ್ಕಳ ತಜ್ಞರಾದ ಡಾ. ಜಗದೀಶ ಜಿಂಗಿ ಅವರು ಕೊಪಿಡ್ …

Read More »

ಕೆಎಂಎಫ್ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿಯೂ ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿಗೆ ಏಕರೂಪದ ದರ ನಿಗದಿಮಾಡುವ ಬಗ್ಗೆ ಶೀಘ್ರವೇ ನಿರ್ಧಾರ:: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಕೆಎಂಎಫ್ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿಯೂ ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿಗೆ ಏಕರೂಪದ ದರ ನಿಗದಿಮಾಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಹಾಲು ಉತ್ಪಾದಕರ ಮಕ್ಕಳ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ 100 ವಿದ್ಯಾರ್ಥಿಗಳ ವಸತಿಗಾಗಿ ವಿದ್ಯಾರ್ಥಿನಿಲಯ …

Read More »