ಹಾವೇರಿ : ”ಹಾನಗಲ್ಲ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ.ಯಾವಾಗಲೂ ನಾವು ಅಭಿವೃದ್ಧಿ ಪರವಾಗಿ ಕೆಲಸ ಮಾಡಿದ್ದೇವೆ” ಎಂದು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, ”ಯಾವ ಪುರುಷಾರ್ಥಕ್ಕೆ ಹಾನಗಲ್ ಚುನಾವಣಾ ಪ್ರಣಾಳಿಕೆ ಮಾಡಿದ್ದಿರಿ” ಎಂಬ ಡಿ. ಕೆ. ಶಿವಕುಮಾರ್ ಅವರ ಹೇಳಿಕೆಗೆ ಈ ತಿರುಗೇಟು ನೀಡಿದ್ದಾರೆ. ”ಕಾಂಗ್ರೆಸ್ ನವರಿಗೆ ಇಂತಹ ಚಿಂತನೆ ಬರುವುದಿಲ್ಲ. ಅದಕ್ಕಾಗಿ ಅವರು ಆರೋಪ ಮಾಡುತ್ತಿದ್ದಾರೆ” ಎಂದರು. ”ಹಾನಗಲ್ಲ ಕ್ಷೇತ್ರದಲ್ಲಿ ಎಂದೆಂದೂ …
Read More »ಏಕಾಏಕಿ ರನ್ ವೇ ಬದಲಿಸಿ ಬೇರೆ ರನ್ ವೇನಲ್ಲಿ ವಿಮಾನ ಲ್ಯಾಂಡಿಂಗ್ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ.
ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಂಭವಿಸಲಿದ್ದ ವಿಮಾನ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ. ಸ್ಪೈಸ್ ಜೆಟ್ ವಿಮಾನವೊಂದು ರಾಂಗ್ ರನ್ ವೆನಲ್ಲಿ ನುಗ್ಗಿದೆ ಎಂದು ತಿಳಿದುಬಂದಿದೆ. 26ನೇ ರನ್ ವೇ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನವು 8ನೇ ರನ್ ವೇ ನಲಿ ಲ್ಯಾಂಡಿಂಗ್ ಆಗಿದೆ. ಸದ್ಯ 8ನೇ ರನ್ ವೇ ನಲ್ಲಿ ಯಾವುದೇ ವಿಮಾನ ಇರಲಿಲ್ಲ ಹಾಗಾಗಿ ಯಾವುದೇ ಅನಾಹುತ ಸಂಭಿಸಿಲ್ಲ ಎಂದು ತಿಳಿದುಬದಿದೆ. ಏಕಾಏಕಿ ರನ್ ವೇ ಬದಲಿಸಿ ಬೇರೆ …
Read More »ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಾಗರೀಕರಿಗೊಂದು ‘ಸುವರ್ಣಾವಕಾಶ’, ಇಲ್ಲಿದೆ ಮಾಹಿತಿ
ಬೆಂಗಳೂರು: ಭಾರತ ಚುನಾವಣಾ ಆಯೋಗವು ದಿನಾಂಕ 01-01-2022 ರ ಅರ್ಹತಾ ದಿನಾಂಕಕ್ಕೆ ಒಳಪಟ್ಟಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೂರ್ವ ಪರಿಷ್ಕರಣಾ ಕಾರ್ಯಚಟುವಟಿಕೆಗಳಾದ ಮತದಾರರ ಪಟ್ಟಿಗಳಲ್ಲಿ ದೋಷಗಳನ್ನು ಗುರ್ತಿಸಿ ಸರಿಪಡಿಸುವುದು. ಮೃತ ಮತ್ತು ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತದಾರರ ವಿವರಗಳನ್ನು ಗುರ್ತಿಸಿ ಮಾಹಿತಿಯನ್ನು ಸಂಗ್ರಹಿಸುವುದು. ಮತಗಟ್ಟೆಗಳ ಭೌತಿಕ ಪರಿಶೀಲನೆ ಮುಂತಾದವುಗಳನ್ನು ಆಗಸ್ಟ್ 09 ರಿಂದ ಅಕ್ಟೋಬರ್ 31 ರವರೆಗೆ ಮತಗಟ್ಟೆ …
Read More »ಬೆಳಗಾವಿ :ಮಕ್ಕಳಿಗೆ ಪುಷ್ಪವೃಷ್ಟಿ ಮಾಡಿ, ಚಾಕೊಲೆಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿ ಬರಮಾಡಿಕೊಳ್ಳಲಾಯಿತು
ಬೆಳಗಾವಿ: ಜಿಲ್ಲೆಯ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 678 ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 956 ಸೇರಿ 1,634 ಶಾಲೆಗಳಲ್ಲಿ 1-5ರಿಂದ ತರಗತಿಗಳು ಸೋಮವಾರ ಪುನರಾರಂಭಗೊಂಡವು. ಶೇ 50ರಷ್ಟು ವಿದ್ಯಾರ್ಥಿಗಳು ಆಫ್‌ಲೈನ್ ಹಾಜರಾಗಲು ಸರ್ಕಾರ ಅವಕಾಶ ನೀಡಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಶಿಕ್ಷಕರು ಮತ್ತು ಸಿಬ್ಬಂದಿ ಚಿಣ್ಣರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಕೋವಿಡ್ ಮಾರ್ಗಸೂಚಿ ಪಾಲಿಸಿ ತರಗತಿಗಳನ್ನು ನಡೆಸಲು ಕ್ರಮ ವಹಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಹಿಂಡಲಗಾ …
Read More »ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ
ವಿಜಯಪುರ : ಬಿಜೆಪಿ ನಾಯಕರು ಹಣ ಹಂಚಿಕೆ ಎಂದು ಜಮೀರ್ ಅಹ್ಮದ್ ತಮ್ಮ ಪಕ್ಷದ ಭಾವನೆಯನ್ನು ಹೊರಹಾಕಿದ್ದಾರೆ. ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕುಟುಕಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಮೀರ್ ಅವರು ಮೊದಲಿನಿಂದ ಅದೇ ಕರಾಮತ್ತು ಮಾಡಿಕೊಂಡು ಬಂದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ನಿನ್ನೆ 13 ಕಡೆಗಳಲ್ಲಿ ಪ್ರಚಾರ ಸಭೆಗಳನ್ನು ಮಾಡಿದ್ದಾರೆ. ಹಳ್ಳಿಗಳಲ್ಲಿ ಬಿಜೆಪಿ ಪರ ದೊಡ್ಡ …
Read More »ಲಂಬಾಣಿ ಮಹಿಳೆಯರ ಜೊತೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ
ವಿಜಯಪುರ: ಸಿಂದಗಿ ಬೈಎಲೆಕ್ಷನ್ ಅಖಾಡ(Sindagi By Election) ಇಂದು ಮತ್ತಷ್ಟು ರಂಗೇರಿದೆ. ಮಾಜಿ ಸಿಎಂ ಸಿದ್ದರಾಮಯ್ಯ(siddaramaiah) ಪ್ರಚಾರಕ್ಕಾಗಿ ವಿಜಯಪುರಕ್ಕೆ ಆಗಮಿಸಿದ್ದು ಈ ವೇಳೆ ಅಭಿಮಾನಿಗಳು ಜಯಘೋಷ ಕೂಗಿದ್ದಾರೆ. ಸಿದ್ದರಾಮಯ್ಯ ಸಿಂದಗಿಯಲ್ಲಿ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಯ್ಯ ಸಾಹೇಬ್ರಗೆ ಜಯ್ ಎಂದು ಅಭಿಮಾನಿಗಳು ಜಯಘೋಷ ಕೂಗಿ ಸ್ವಾಗತಿಸಿದ್ದಾರೆ. ಲಂಬಾಣಿ ನೃತ್ಯ ಮಾಡಿದ ಸಿದ್ದರಾಮಯ್ಯ ಸಿಂದಗಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಲಂಬಾಣಿ ಸಮಾಜದ ಮತಗಳನ್ನು ಸೆಳೆಯಲು ಕೈ ತಂತ್ರ ರೂಪಿಸಿದ್ದು …
Read More »ವಿಧಾನಸೌಧಕ್ಕೆ ಬೀಗ ಜಡಿದು ಪ್ರಚಾರಕ್ಕೆ ಬಂದ ಸಚಿವರು ಎಂಬ ಟೀಕೆಗೆ ಸಿಎಂ ತಿರುಗೇಟು
ವಿಜಯಪುರ: ವಿಧಾನಸೌಧಕ್ಕೆ ಬೀಗ ಜಡಿದು ಸಚಿವರು ಪ್ರಚಾರಕ್ಕೆ ಬರುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಆ ಥರ ಏನಿಲ್ಲಾ, ಎರಡೆರಡು ಮೂರು ಮೂರು ದಿನ ನಮ್ಮ ಸಚಿವರು ಬಂದು-ಹೋಗಿ ಮಾಡ್ತಿದ್ದಾರೆ. ಅವರು ಹಿಂದೆ ಏನೆಲ್ಲಾ ಮಾಡಿದ್ದಾರೆ ಎಂಬುದು ನಮಗೂ ಗೊತ್ತಿದೆ. ನಾನು ಮಂತ್ರಿಗಳಿಗೆ ಏನು ಸೂಚನೆ ಕೊಡಬೇಕೋ ಕೊಟ್ಟಿದೇನೆ, ಯಾವುದೇ ಕೆಲಸಗಳೂ ನಿಂತಿಲ್ಲ. ಎಂದಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಬಿಜೆಪಿ, ಕಾಂಗ್ರೆಸ್ ಮುಗಿಸುತ್ತವೆ ಎಂಬ ದೇವೇಗೌಡರ …
Read More »ಖತಲ್ ರಾತ್ರಿ ಮಾಡುವವರೇ ಕಾಂಗ್ರೆಸ್ಸಿಗರು: ಬಸವರಾಜ ಬೊಮ್ಮಾಯಿ
ವಿಜಯಪುರ: ‘ಖತಲ್ ರಾತ್ರಿ’ ಮಾಡುವವರೇ ಕಾಂಗ್ರೆಸ್ ಪಕ್ಷದವರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸಿಂದಗಿ ಮತಕ್ಷೇತ್ರದ ಕನ್ನೂಳ್ಳಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಅಂಗವಾಗಿ ನಡೆದ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ವಾರ್ಥ ರಾಜಕಾರಣ ಮಾಡಿ, ಗಳಿಸಿದ್ದ ಹಣವನ್ನು ಹಂಚುತ್ತಾರೆ ಎಂದು ದೂರಿದರು. ‘ಡಿಕೆಶಿ ವಿವಿಧ ಉಪ ಚುನಾವಣೆಗಳಲ್ಲಿ ಗೋಣಿ ಚೀಲದಲ್ಲಿ ಹಣ ಹಂಚಿದ್ದಾರೆ. ಅವರ ಅನುಭವವನ್ನು ಹೇಳುವ …
Read More »ಯಾವತ್ತಾದರೂ ಕುರಿ ಕಾಯ್ದಿದ್ದೀರೇನು?: ಸೀನಿಯರ್-ಜೂನಿಯರ್ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ
ವಿಜಯಪುರ: ಕಂಬಳಿ ಹಾಕಿಕೊಳ್ಳಲೂ ಯೋಗ್ಯತೆ ಬೇಕು ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ನೀವೇನಾದರೂ ಕುರಿ ಕಾಯ್ದಿದ್ದೀರೇನು? ಎಂದು ತಿರುಗೇಟು ನೀಡಿದರು. ಸಿಂದಗಿಯಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು ಎಂದು ಬಸವರಾಜ ಬೊಮ್ಮಾಯಿ ಭಾಷಣ ಬಿಗಿದಿದ್ದಾರೆ. ನಾನು ಕೇಳುತ್ತೇನೆ, ‘ಸೀನಿಯರ್ ಬೊಮ್ಮಾಯಿ, ಬಸವರಾಜ ಬೊಮ್ಮಾಯಿ ಯಾವತ್ತಾದರೂ ಕುರಿ ಕಾಯ್ದಿದ್ದೀರೇನು?’ ಎಂದು ಪ್ರಶ್ನಿಸಿದರು. ನಾನು ಕುರಿ ಕಾಯ್ದಿದಿನಯ್ಯ..! ಕಂಬಳಿ …
Read More »ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ವಿಚಾರವಾಗಿ ಸೋಮವಾರ ಟ್ವೀಟ್ ಮಾಡಿರುವ ಬಿಜೆಪಿ, ‘ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ’ ಎಂದು ಆರೋಪಿಸಿದೆ. ‘ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂಬುದಾಗಿ ಹೇಳುತ್ತೀರಿ ಸಿದ್ದರಾಮಯ್ಯ?’ ಎಂದು …
Read More »