Breaking News

ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯ : ಬಿ.ವೈ.ವಿಜಯೇಂದ್ರ

ವಿಜಯಪುರ: ಹಾನಗಲ್, ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ದಿನೇ ದಿನೇ ಬಿಜೆಪಿ ಗೆಲುವು ನಿಶ್ಚಿತ ಎಂಬ ಸ್ಥಿತಿ ನಿರ್ಮಾಣವಾಗಿದೆ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯವಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಆತಂಕದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಮೇಲ್ನೋಟದ ಹೋರಾಟ ನಡೆಸಿದ್ದಾರೆ ಅಷ್ಟೇ ಎಂದರು. ಜನರ ಮುಂದೆ ಮಂಡಿಸಲು ವಿಷಯಗಳೇ ಇಲ್ಲದ ವಿಪಕ್ಷಗಳು …

Read More »

‘ಹಣ ಹಂಚುವಷ್ಟು ಕೆಳಮಟ್ಟಕ್ಕೆ ಇಳಿದವರು ನಾವಲ್ಲ’ ; ಕಾಂಗ್ರೆಸ್​ ಆರೋಪಕ್ಕೆ ಸವದಿ ತಿರುಗೇಟು

ಬೈ ಎಲೆಕ್ಷನ್​ ಭರಾಟೆ ಜೋರಾಗಿರುವ ಬೆನ್ನಲ್ಲೇ ರಾಜಕೀಯ ಕೆಸರೆರೆಚಾಟ ಕೂಡ ಹೆಚ್ಚಾಗಿದೆ. ಬಿಜೆಪಿ ನಾಯಕರು ಹಣ ಹಂಚಿ ಮತ ಬೇಟೆ ಮಾಡುತ್ತಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆರೋಪಕ್ಕೆ ವಿಜಯಪುರದ ಸಿಂದಗಿಯಲ್ಲಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ರು . ಹಣ ಹಂಚಿಕೆ ಮಾಡಿ ಮತ ಪಡೆದು ನಮಗೆ ರೂಢಿ ಇಲ್ಲ. ನಮ್ಮ ಪಕ್ಷ ಅಷ್ಟೊಂದು ಕೆಳ ಮಟ್ಟಕ್ಕೆ ಇಳಿದೂ ಇಲ್ಲ. ಕಾಂಗ್ರೆಸ್​ ಪಕ್ಷದವರೇ ಮೂಟೆ ಮೂಟೆ ಹಣ ತಂದು …

Read More »

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹುಬ್ಬಳ್ಳಿ: ಜೆಡಿಎಸ್ ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ. ಬಿಜೆಪಿ ಬಿ ಟೀಂ ಅಥವಾ ಒಳ ಒಪ್ಪಂದ ಎನ್ನುವ ಸುಳ್ಳು ಆರೋಪಗಳನ್ನು ಬಿಟ್ಟರೆ ನಮ್ಮ ಹಾಗೂ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ಬೇರೆ ವಿಚಾರಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಶನಿವಾರ ಇಲ್ಲಿನ ಕಿತ್ತೂರು ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮಾತನಾಡಲು ಬೇರೆ ಯಾವುದೇ ವಿಚಾರಗಳು ಇಲ್ಲ. ಹೀಗಾಗಿ …

Read More »

ಭಗತ್‌ಸಿಂಗ್‌ 114ನೇ ಜಯಂತ್ಯುತ್ಸವದ ಅಂಗವಾಗಿ ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ

ಗದಗ : ಭಗತ್‌ಸಿಂಗ್‌ ಅವರ 114ನೇ ಜಯಂತ್ಯುತ್ಸವದ ಅಂಗವಾಗಿ ನಗರದ ಭಗತ್‌ ಸಿಂಗ್‌ ಅಭಿಮಾನಿ ಬಳಗವು ನೆವೆಂಬರ್‌ 1ರಂದು ಸ್ವಾತಂತ್ರ್ಯೋತ್ಸವ ಸಂಭ್ರಮ, ಕನ್ನಡ ರಾಜ್ಯೋತ್ಸವ, ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ ಹಾಗೂ ಆಂಬುಲೆನ್ಸ್‌ ಸೇವೆಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಳಗದ ಅಧ್ಯಕ್ಷ ಶಿವಕುಮಾರ ತಡಕೋಡ ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಭಗತ್‌ ಸಿಂಗ್‌ ಅಭಿಮಾನಿ ಬಳಗವು ಸಾರ್ವಜನಿಕರಿಗೆ ಅನುಕೂಲವಾಗುವಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಬಲಿಷ್ಠ …

Read More »

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ:ಬೊಮ್ಮಾಯಿ

ಹುಬ್ಬಳ್ಳಿ –  ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ  ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ  ಮಾತನಾಡುತ್ತಿದ್ದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು.  ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ  …

Read More »

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

ಪಣಜಿ: ಗೋವಾಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿದ್ದು ತಪಾಸಣೆಗಾಗಿ 3200 ರೂ ಶುಲ್ಕ ವಿಧಿಸಲಾಗುತ್ತಿದ್ದು ,ಇದಕ್ಕಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಸರಕಾರ ಗುತ್ತಿಗೆ ನೀಡಿದೆ. ಗೋವಾದಲ್ಲಿ ಪ್ರವಾಸಿ ಸೀಜನ್ ಆರಂಭಗೊಂಡಿದ್ದು ವಿದೇಶಗಳಿಂದ ಪ್ರವಾಸಿಗರ ಆಗಮನ ಆರಂಭವಾಗಿದೆ . ಈಗಾಗಲೇ ಬೋಟ್‍ಗಳ ಮೂಲಕ ಮತ್ತು ಚಾರ್ಟರ್ ವಿಮಾನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಗೋವಾಕ್ಕೆ ಆಗಮಿಸುವ ದೇಶಿಯ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ತಪಾಸಣೆ ಅಥವಾ ಕೋವಿಡ್ …

Read More »

ಒಂದೇ ವೇದಿಕೆಯಲ್ಲಿ ಸತ್ಯ ಗೊತ್ತಾಗಲಿ: ಸಿಎಂಗೆ ಸಿದ್ದರಾಮಯ್ಯ ಸವಾಲು

ಅಕ್ಕಿಆಲೂರ: ‘ಮಿಸ್ಟರ್ ಬಸವರಾಜ್ ಬೊಮ್ಮಾಯಿ ಒಂದೇ ವೇದಿಕೆಗೆ ನೀವೂ ಬನ್ನಿ, ನಾನೂ ಬರುತ್ತೇನೆ. ಹಾನಗಲ್ ಕ್ಷೇತ್ರದಲ್ಲಿ ನನ್ನ ಸರ್ಕಾರ ಇದ್ದಾಗ ಎಷ್ಟು ಕೆಲಸ ಆಗಿವೆ? ಎಷ್ಟು ಅನುದಾನ ಕೊಟ್ಟಿದ್ದೇನೆ ಎನ್ನುವುದನ್ನೆಲ್ಲಾ ಹೇಳುತ್ತೇನೆ. ನಿಮ್ಮ ಕೊಡುಗೆ ಏನು ಎನ್ನುವುದನ್ನು ನೀವೂ ಹೇಳಿ. ಜನರಿಗೆ ಸತ್ಯ ಗೊತ್ತಾಗಲಿ’ ಎಂದು ಶಾಸಕ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು. ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ನರೇಗಲ್, ಆಡೂರು, ಅಕ್ಕಿಆಲೂರು ಮತ್ತು ಹಿರೂರು ಗ್ರಾಮಗಳಲ್ಲಿ ಶುಕ್ರವಾರ ನಡೆದ …

Read More »

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

ಬೆಂಗಳೂರು :ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ ಎಂದು ರಾಜ್ಯ ಬಿಜೆಪಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿ ಶುಕ್ರವಾರ ಟ್ವೀಟ್ ಮಾಡಿದೆ. ನೂರು ಕೋಟಿ ಲಸಿಕೆ ಪೂರ್ಣಗೊಳಿಸಿದ ಬಳಿಕ ಟೀಕಿಸಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಗಳನ್ನು ಮಾಡಿದೆ. ‘ವಿವಿಧ ದೇಶಗಳು ವಿತರಿಸಿದ ಲಸಿಕೆ ಪ್ರಮಾಣ ಅಮೆರಿಕಾ – 41.01ಕೋಟಿ ಜಪಾನ್ – 18.21ಕೋಟಿ ಜರ್ಮನಿ – 11.12ಕೋಟಿ ರಷ್ಯಾ – 9.98ಕೋಟಿ ಬ್ರಿಟನ್ – …

Read More »

ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಮಾಡಿದ ರಮೇಶ್​ ಜಾರಕಿಹೊಳಿ,

ಬೆಳಗಾವಿ: ಕಳೆದುಕೊಂಡ ಮಂತ್ರಿಗಿರಿಯನ್ನು ಮತ್ತೆ ಪಡೆಯಲು ಹರಸಾಹಸ ಪಡುತ್ತಿರುವ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಟೆಂಪಲ್​ ರನ್​ ಮುಂದುವರಿಸಿದ್ದಾರೆ. ಕಳೆದ ವಾರ ಪುತ್ರ ಅಮರನಾಥ ಸೇರಿದಂತೆ ಆಪ್ತರೊಂದಿಗೆ ಕೇದಾರನಾಥನ ದರ್ಶನ ಮಾಡಿದ್ದ ಜಾರಕಿಹೊಳಿ, ಇದೀಗ ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಪಡೆದಿದ್ದಾರೆ. ನಿನ್ನೆ ಶುಕ್ರವಾರ ಹಿನ್ನೆಲೆಯಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂದಹಾಗೆ ಕೊಲ್ಲಾಪುರ ಮಹಾಲಕ್ಷ್ಮಿ, ರಮೇಶ್ ಜಾರಕಿಹೊಳಿ ಅವರ ಮನೆದೇವರು. ಭೇಟಿ …

Read More »

ನಳಿನ್ ಕುಮಾರ್ ಕಟೀಲ್ ಗಂಡೊ ಹೆಣ್ಣೊ ಎಂಬ ಬಗ್ಗೆಯೇ ಅನುಮಾನವಾಗುತ್ತದೆ : ಬೆಳೂರು ಗೋಪಾಲಕೃಷ್ಣ ಕಿಡಿ

ಶಿವಮೊಗ್ಗ : ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಯಾವ ಅರ್ಹತೆಯೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಇಲ್ಲ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೆಳೂರು ಗೋಪಾಲಕೃಷ್ಣ ಹರಿಹಾಯ್ದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಕಟೀಲ್ ವಿರುದ್ಧ ಕಟುವಾಗಿ ಟೀಕಿಸಿದ ಅವರು, ಈ ಕಟೀಲ್ ಗಂಡೊ ಹೆಣ್ಣೊ ಎಂಬ ಬಗ್ಗೆಯೇ ಅನುಮಾನವಾಗುತ್ತದೆ. ಬಿಜೆಪಿಯಲ್ಲಿಯೇ ಕೊಳೆತು ನಾರುವಷ್ಟು ವಿಷಯಗಳಿದ್ದರೂ ಕೂಡ ಕಾಂಗ್ರೇಸ್ ನಾಯಕರ ಬಗ್ಗೆ ತಮ್ಮ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ. ರೇಪ್ ಮಾಡಿದವರು ಸದನದಲ್ಲಿ ಬ್ಲೂ …

Read More »