Breaking News

ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನಕೊಲೆ

ಬೆಳಗಾವಿ: ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನನ್ನು ಕ್ರೂರವಾಗಿ ಕೊಲೆ ಮಾಡಿ ಎಸೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಹೊರವಲಯದ ಆರ್‌ಟಿಓ ಕಛೇರಿ ಮುಂಭಾಗದಲ್ಲಿ ನಡೆದಿದೆ. ಅಥಣಿ ತಾಲೂಕಿನ ದರೂರ ಗ್ರಾಮದ ಸಿದ್ಧಾರೂಢ ಶಿರಗುಪ್ಪಿ(25) ಕೊಲೆಯಾದ ವ್ಯಕ್ತಿ. ಸಿದ್ಧಾರೂಢ ಶಿರಗುಪ್ಪಿ ಕಳೆದ 2 ವರ್ಷಗಳಿಂದ ಮಾಜಿ ಡಿಸಿಎಂ ಸಹೋದರ, ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪಾ ಸವದಿಯ ಕಾರು ಚಾಲನಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಕಳೆದ ರಾತ್ರಿ ಪರಪ್ಪ …

Read More »

ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲೆ ಸಾವು – ತಂದೆ ಸ್ಥಿತಿ ಚಿಂತಾಜನಕ!

ಚಿಕ್ಕೋಡಿ: ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನ್ನೊವಾ ಕಾರು ಡಿಕ್ಕಿಯಾದ ಪರಿಣಾಮ ತಾಯಿ ಹಾಗೂ ಮಗಳು ಸ್ಥಳದಲ್ಲಿಯೇ ಮೃತ ಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ನರಸಿಂಗಪೂರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೆ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದು, ತಂದೆಯ ಸ್ಥಿತಿ …

Read More »

ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ 100% ಟ್ಯಾಕ್ಸ್ ವಿನಾಯಿತಿ : ಬೊಮ್ಮಾಯಿ

ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ ಶೇ.100 ಟ್ಯಾಕ್ಸ್ ವಿನಾಯಿತಿ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವದನ್ನ ತೋರಿಸಿದ್ದಾರೆ. ಅದೆಷ್ಟೂ ಜನ ಉಗ್ರರ ಕೈಲಿ ಸಿಕ್ಕಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಹೀಗಾಗಿಯೇ ಕಾಶ್ಮೀರದಲ್ಲಿ 370ಯನ್ನ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿದರು. ಇದಕ್ಕಾಗಿ …

Read More »

ಪಿಕ್‍ಪಾಕೆಟ್ ಪ್ರಕರಣದಲ್ಲಿ ನಟಿ ಅರೆಸ್ಟ್

ಕೋಲ್ಕತ್ತಾ: ಬೆಂಗಾಳಿ, ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ರೂಪಾ ದತ್ತಾ, ಪಿಕ್‍ಪಾಕೆಟ್ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ. ನಡೆದಿದ್ದೇನು?: ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಮೇಳದಲ್ಲಿ ಭಾಗವಹಿಸಿದ್ದರು. ಈ ವೇಳೆ ರೂಪಾ ದತ್ತಾ, ಪರ್ಸ್‍ವೊಂದನ್ನು ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ಪೊಲೀಸರೊಬ್ಬರು ನೋಡಿದ ನಂತರ ಶನಿವಾರ ಅವರನ್ನು ಬಂಧಿಸಲಾಗಿದೆ ಎಂದು ಬಿದಾನ್ ನಗರ್ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬಂಧನದ ನಂತರ ವಿಚಾರಣೆ ವೇಳೆಯಲ್ಲಿ ಆಕೆ ನೀಡಿದ್ದ ಉತ್ತರಗಳು ಸಮರ್ಪಕವಾಗಿರಲಿಲ್ಲ. ಶೋಧನೆ ವೇಳೆ ಆಕೆಯ ಬ್ಯಾಗ್‍ನಿಂದ …

Read More »

ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹ ತರಿಸಲು ಮೋದಿ ಸೂಚನೆ

ನವದೆಹಲಿ: ಮಾರ್ಚ್ 1 ರಂದು ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ. 

Read More »

ಶಾಸಕ ಅಭಯ ಪಾಟೀಲ ಅವರ ಫೇಸ್ ಬುಕ್ ಪುಟವನ್ನು ಕೆಲವು ಕಿಡಗೇಡಿಗಳು ಹ್ಯಾಕ್ ಮಾಡಿದ್ದಾರೆ.

ಬೆಳಗಾವಿ-ಸಾಮಾಜಿಕ ಕಾರ್ಯಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲೂ ಪ್ರಸಿದ್ಧಿ ಪಡೆದಿರುವ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಫೇಸ್ ಬುಕ್ ಪುಟವನ್ನು ಕೆಲವು ಕಿಡಗೇಡಿಗಳು ಹ್ಯಾಕ್ ಮಾಡಿದ್ದಾರೆ. ಅಭಯ ಪಾಟೀಲ ಎಂಬ ಹೆಸರಿನಲ್ಲಿದ್ದ ವೇರಿಫೈಡ್ ಪೇಸ್ ಬುಕ್ ಪೇಜ್ ಹ್ಯಾಕ್ ಆಗಿದ್ದು, ಈ ಕುರಿತು ಶಾಸಕ ಅಭಯ ಪಾಟೀಲ ಬೆಳಗಾವಿಯ ಸೈಬರ್ ಕ್ರೈಂ, ಸಿಇಎನ್ ಪೋಲೀಸ್ ಠಾಣೆಗೆ ದೂರು ನೀಡಿದ್ದು ಇನೆಸ್ಪೆಕ್ಟರ್ ಗಡ್ಡೇಕರ ಅವರು ದೂರು ದಾಖಲಿಸಿಕೊಂಡು ವಿಚಾರಣೆ …

Read More »

ಜೆಡಿಎಸ್ ನಲ್ಲಿ ಸಿ.ಎಂ.ಇಬ್ರಾಹಿಂಗೆ ಗೌರವಯುತ ಸ್ಥಾನ..?

ಬೆಂಗಳೂರು,ಮಾ.13- ಕಾಂಗ್ರೆಸ್ ತೊರೆದು ಪಕ್ಷ ಸೇರ್ಪಡೆಯಾಗಲಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರಿಗೆ ಗೌರವಯುತ ಸ್ಥಾನ ನೀಡಲು ಜೆಡಿಎಸ್ ಉದ್ದೇಶಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಣೆ ಮಾಡಿದ ಬಳಿಕ ಇಬ್ರಾಹಿಂ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜೆಡಿಎಸ್ ಜೊತೆ ಚರ್ಚೆ ನಡೆಸಿದರು. ಪಕ್ಷಕ್ಕೆ ಸೇರ್ಪಡೆಯಾದ ಮೇಲೆ ನೀಡುವ ಸ್ಥಾನಮಾನ, ಪಕ್ಷ ಸಂಘಟನೆ, ಮುಂಬರುವ ಚುನಾವಣೆ ಹಾಗೂ ತಮ್ಮ ಬೆನ್ನ …

Read More »

ಬಿಜೆಪಿ ಅಭ್ಯರ್ಥಿ ಘೋಷಣೆ; ಕಾಂಗ್ರೆಸ್‌ನಿಂದ ಯಾರು?

ಬಾಗಲಕೋಟೆ: ಪದವೀಧರರು ಮತ್ತು ಶಿಕ್ಷಕರ ವಲಯದಲ್ಲಿ ಪ್ರತಿಷ್ಠೆಯ ಚುನಾವಣೆ ಮುಂಬರುವ ಮೇ ತಿಂಗಳಲ್ಲಿ ನಡೆಯಲಿದೆ. ಈ ಚುನಾವಣೆಗೆ ಆಡಳಿತಾರೂಢ ಬಿಜೆಪಿಯಿಂದ ಎರಡೂ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಕಾಂಗ್ರೆಸ್‌ನಿಂದ ಯಾರಿಗೆ ಕಣಕ್ಕಿಳಿಸಬೇಕೆಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆಯುತ್ತಿದೆ. ವಾಯವ್ಯ ಪದವೀಧರರ ಮತಕ್ಷೇತ್ರಕ್ಕೆ ಈ ಕ್ಷೇತ್ರದ ಹಾಲಿ ಸದಸ್ಯ ಹನಮಂತ ಆರ್‌. ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಹಾಲಿ ಸದಸ್ಯ ಅರುಣ ಶಹಾಪುರ ಅವರನ್ನೇ ಬಿಜೆಪಿ ಅಭ್ಯರ್ಥಿಗಳನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. …

Read More »

ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣವ‌ನ್ನು ಭೇಧಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರುಗೋಡ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣವ‌ನ್ನು ಭೇಧಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಮುರುಗೋಡ ಡಿಸಿಸಿ ಬ್ಯಾಂಕಿನಲ್ಲಿ ನಕಲಿ ಕೀ ಉಪಯೋಗಿಸಿ ಸುಮಾರು ನಾಲ್ಕು ಕೋಟಿಗೂ ಅಧಿಕ ನಗರದು 4.41 ಕೋಟಿ ಮತ್ತು ಬ್ಯಾಂಕಿನಲ್ಲಿ ಅಡವಿಟ್ಟ 1.5 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಮಾರ್ಚ್ 6 ರಂದು ನಡೆದಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು …

Read More »

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ: ನಾರಾಯಣಗೌಡ

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ನಿಖಿಲ್ ಸೋಲುವುದಕ್ಕೆ ಅವರ ದೊಡ್ಡಪ್ಪ ರೇವಣ್ಣನೇ ಕಾರಣ ಎಂದು ಸಚಿವ ಕೆ.ಸಿ. ನಾರಾಯಣ ಹೇಳಿದ್ದಾರೆ. ನಗರದ ಕೆ.ಆರ್.ಪೇಟೆಯ ಸಿಂಧಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ. ನಿಖಿಲ್ ಕುಮಾರಸ್ವಾಮಿ ಬಗ್ಗೆ ನನಗೆ ಗೌರವ ಇದೆ. ಅವರು ಸುಮ್ಮನೆ ಮಾತನಾಡುವುದು ತಪ್ಪು. ಕುಮಾರಸ್ವಾಮಿ ಸುಪುತ್ರ ನಿಖಿಲ್ ಇನ್ನೂ ಚಿಕ್ಕ ರಾಜಕಾರಣಿ. ಪ್ರತಿಯೊಂದರ ಬಗ್ಗೆ ಮಾಹಿತಿ ತಿಳಿದಕೊಂಡು ನಿಖಿಲ್ ಮಾತನಾಡಬೇಕು. ಒಂದೂವರೆ ವರ್ಷ ಸರ್ಕಾರ …

Read More »