Breaking News

ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ

ಚಿಕ್ಕಮಗಳೂರು, (ಮಾರ್ಚ್​ 19): ಅಮ್ಮನಿಗೆ ಬೈದಿದ್ದಕ್ಕೆ ತನ್ನ ಮಾವನನ್ನೇ ಕೊಂದಿರುವ (Murder) ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಬಯಲುಸೀಮೆ ಭಾಗವಾದ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಂಚನಹಳ್ಳಿ ಸಾಹುಕಾರ‌ ಎಂದೇ ಖ್ಯಾತಿ ಪಡೆದಿದ್ದ ಗಂಗಾಧರೇಗೌಡ ಅವರ ಮಗ ಸಿದ್ದರಾಮೇಗೌಡ ಅವರನ್ನು ಮಾರ್ಚ್ 15 ರ ಬೆಳಗ್ಗೆ ಹೆಣವಾಗಿ ಬಿದ್ದಿದ್ದ, ಸಿದ್ದರಾಮೇಗೌಡನ ಕುತ್ತಿಗೆ ಸುತ್ತ ರಕ್ತದ ಕಲೆಯಿದ್ದು, ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪಂಚನಹಳ್ಳಿ ಗ್ರಾಮವನ್ನೇ ಬೆಚ್ಚಿ ಬೀಳುವಂತೆ …

Read More »

ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ

ಚಿಕ್ಕಮಗಳೂರು, ಮಾರ್ಚ್​​ 19: ನಾಪತ್ತೆಯಾಗಿದ್ದ (Missing) 10ನೇ ತರಗತಿ ವಿದ್ಯಾರ್ಥಿ (student) ನದಿಯಲ್ಲಿ ಶವವಾಗಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ನಡೆದಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರು ನಿವಾಸಿಯಾಗಿರುವ ಶ್ರೇಯಸ್, ಕಳಸ ಪಟ್ಟಣದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಕಳಸ‌ ಪಟ್ಟಣದ ಚಿಕ್ಕಪ್ಪನ ನಿವಾಸದಲ್ಲಿ ಶ್ರೇಯಸ್ ವಾಸವಿದ್ದ. ನಾಪತ್ತೆಯಾಗಿದ್ದ ಆತನಿಗಾಗಿ ಪೊಲೀಸರು ಹುಡುಕಾಟ …

Read More »

ರಾಜ್ಯಪಾಲರಿಂದ ಡಿಕೆ ಶಿವಕುಮಾರ್​​ಗೆ ಮತ್ತೊಂದು ಶಾಕ್

ಬೆಂಗಳೂರು, (ಮಾರ್ಚ್​ 19): ರಾಮನಗರ (Ramanagara) ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ‌ ಹೆಸರು ಬದಲಾವಣೆ ಮಾಡಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕನಸಿಗೆ ಕೇಂದ್ರ ಸರ್ಕಾರ ತಣ್ಣೀರೆರಚಿಸಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರ ಕನಸಿನ ಗ್ರೇಟರ್ ಬೆಂಗಳೂರು ವಿಧೇಯಕ (greater bengaluru …

Read More »

7 ವರ್ಷದ ಬಾಲಕಿ ಮೇಲೆ ಬಿಜೆಪಿ ಯುವ ಮುಖಂಡನಿಂದ ಅತ್ಯಾಚಾರ

ಬಿಜೆಪಿ ಯುವ ಮುಖಂಡನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಸಿರಗುಪ್ಪದ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ದೇವು ನಾಯಕ್ ವಿರುದ್ಧ ಸಿರಿಗೆರೆ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಆರೋಪಿ ದೇವು ನಾಯಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

Read More »

ಬೆಳ್ಳಂ ಬೆಳಿಗ್ಗೆ 3ರಿಂದ 4 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲಿನ ಬೀಗ ಮುರಿದು ಕಳ್ಳತನ‌ ಮಾಡಿ 700 ಗ್ರಾಂ ಚಿನ್ನ ದೋಚಿ ಪರಾರಿ

ಬೆಳಗಾವಿ : ಬೆಳ್ಳಂ ಬೆಳಿಗ್ಗೆ 3ರಿಂದ 4  ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲಿನ ಬೀಗ ಮುರಿದು ಕಳ್ಳತನ‌ ಮಾಡಿ 700 ಗ್ರಾಂ ಚಿನ್ನ ದೋಚಿ ಪರಾರಿಯಾದ ಘಟನೆ ಗೋಕಾಕ ಪಟ್ಟಣದಲ್ಲಿ ನಡೆದಿದೆ. ಗೋಕಾಕ ಪಟ್ಟಣದ ವಿದ್ಯಾನಗರದಲ್ಲಿನ ವ್ಯಾಪಾರಸ್ಥ ಶ್ರೀರಾಮ ಚೌದರಿಯವರ ಮನೆಯಲ್ಲಿಟ್ಟಿದ್ದ 700 ಗ್ರಾಂ ಚಿನ್ನ ಕಳ್ಳತನ‌ ಆಗಿದ್ದು ಸುದ್ದಿ ತಿಳಿದ ನಗರ ಠಾಣೆಯ CPI ಸುರೇಶಬಾಬು ಬಂಡಿವಡ್ಡರ ಮತ್ತು ನಗರ ಪಿ,ಎಸ್,ಐ, ಕೆ.ವಾಲಿಕಾರ ಇವರು ಸ್ಥಳಕ್ಕೆ …

Read More »

ಕರ್ನಾಟಕ ಬಂದ್‌ಗೆ ಆಟೋ ಚಾಲಕರ ಸಂಘ ಬೆಂಬಲ

ಮಾರ್ಚ್ 22ರಂದು ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್‌ಗೆ ಇದೀಗ ಬೆಂಗಳೂರಿನಲ್ಲಿ ಆಟೋ ಚಾಲಕರ ಸಂಘಟನೆ ಕೂಡ ಬೆಂಬಲ ನೀಡಿದೆ. ಈ ಕುರಿತು ಆಟೋ ಚಾಲಕರ ಸಂಘಟನೆ ಅಧ್ಯಕ್ಷ ಶ್ರೀನಿವಾಸ್ ಪ್ರತಿಕ್ರಿಯಿಸಿ, ಎಲ್ಲಾ ಆಟೋ ರಿಕ್ಷಾದವರು ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್‌ಗೆ ಬೆಂಬಲ ಕೊಡುತ್ತೇವೆ. ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಮಾರ್ಚ್ 22ರಂದು ನಡೆಯುವ ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.

Read More »

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಎಲ್ಲರೂ ಕೈ ಜೋಡಿಸುವಂತೆ ವಾಟಾಳ್ ನಾಗರಾಜ್ ಕರೆ

ಮೈಸೂರು : ಮಾ. 22ರಂದು ಕನ್ನಡಪರ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್​ಗೆ ಎಲ್ಲರೂ ಬೆಂಬಲ ನೀಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ನಗರದಲ್ಲಿಂದು ಈಟಿವಿ ಭಾರತದ ಜೊತೆ ಮಾತನಾಡಿದ ಅವರು ಈ ಬಂದ್‌ ಏಕೆ ಎಂಬ ಕುರಿತು ಮಾಹಿತಿ ನೀಡಿದರು. ಬೆಳಗಾವಿಯ ಕೆಲವೆಡೆ ಕನ್ನಡಿಗನ ಮೇಲೆ ಮರಾಠಿಗರ ದಬ್ಬಾಳಿಕೆ ಹೆಚ್ಚಾಗಿದ್ದು, ಇದನ್ನ ಖಂಡಿಸಿ ಮಾ. …

Read More »

ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಂಗಡಿಯಲ್ಲಿದ್ದ ಸುಮಾರು ಒಂದು ಕೋಟಿ ಮೊತ್ತದ ವಸ್ತು ಹಾನಿ

ಗಂಗಾವತಿ: ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಇಲ್ಲಿನ ವಾಣಿಜ್ಯ ಮಳಿಗೆಯೊಂದಕ್ಕೆ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ಸುಮಾರು ಒಂದೂವರೆ ಕೋಟಿ ರೂಪಾಯಿ ಮೊತ್ತದ ವಸ್ತುಗಳು ನಾಶವಾದ ಘಟನೆ ಇಲ್ಲಿನ ಕೊಪ್ಪಳ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಕೊಪ್ಪಳ ರಸ್ತೆಯ ಸಿಬಿಎಸ್ ವೃತ್ತದ ಸಮೀಪದ ಹಳೇಯ ಪವನಬಾರ್ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ದಾದಾಪೀರ್ ಎಂಬುವರಿಗೆ ಸೇರಿದ ಈ ಅಂಗಡಿಯಲ್ಲಿ ಹೊಸ ಜನರೇಟರ್, ಕೃಷಿ ಮತ್ತು ರೈತರಿಗೆ ಉಪಯುಕ್ತವಾಗುವ ಯಂತ್ರೋಪಕರಣಗಳ ಮಾರಾಟ ಮಾಡಲಾಗುತಿತ್ತು.ಮಾರಾಟ ಮತ್ತು …

Read More »

ಮಾರಕಾಸ್ತ್ರ ಝಳಪಿಸುತ್ತಾ ಬೈಕ್​ ವ್ಹೀಲಿಂಗ್: ಆರೋಪಿಗಳ ಬಂಧಿಸಿದ ಪೊಲೀಸರು

ಬೆಂಗಳೂರು : ಮಾರಕಾಸ್ತ್ರ ಝಳಪಿಸುತ್ತಾ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡಿದ್ದ ಇಬ್ಬರು ಆರೋಪಿಗಳನ್ನು ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹೇಶ್ (19) ಹಾಗೂ ಮಂಜುನಾಥ್ (19) ಬಂಧಿತ ಆರೋಪಿಗಳು. ಮಾರ್ಚ್ 15ರಂದು ಔಟರ್ ರಿಂಗ್ ರಸ್ತೆಯ ಚೌಡೇಶ್ವರಿನಗರ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರವನ್ನು ರಸ್ತೆಗೆ ಉಜ್ಜುತ್ತಾ, ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡುತ್ತ ಸಾಗಿದ್ದ ಆರೋಪಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ …

Read More »

ಜಿಲ್ಲಾ ಹೆಸರು ಮರುನಾಮಕರಣಕ್ಕೆ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ ಕೇಂದ್ರ

ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಬೇಕು ಎಂಬ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರದ ನಿರಾಕರಿಸಿದೆ. ಉನ್ನತ ಮೂಲಗಳ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಮರುನಾಮಕರಣ ಮಾಡಲು ಕೋರಿ ರಾಜ್ಯ ಸರ್ಕಾರ ಎರಡು ತಿಂಗಳ ಹಿಂದೆಯೇ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಳ್ಳಿಹಾಕಿದೆ. ಆದ್ರೆ, ಯಾವ ಕಾರಣದಿಂದ ನಿರಾಕರಿಸಲಾಗಿದೆ ಎಂಬುದನ್ನು ತಿಳಿಸಿಲ್ಲ. ಆದರೆ, ಮೂಲಗಳು …

Read More »