Breaking News

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು. ರಾಜ್ಯದ ಜನ ನನ್ನನ್ನು ಐದು ವರ್ಷಗಳ …

Read More »

ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಸಿದ್ದರಾಮಯ್ಯ – ಹೈಕಮಾಂಡ್ ನಾಯಕರ ಭೇಟಿ ಹಿಂದಿನ ಗುಟ್ಟೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ  ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಚೇರಿಗೆ ತಲುಪಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರು ದಿಢೀರ್ ದೆಹಲಿ ವಿಮಾನ ಏರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ರಾಜ್ಯ ರಾಜಕೀಯದ ಮುಂದಿನ ನಡೆಗಳ ಕುರಿತು ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಇಂದು ಸಂಜೆಯೇ ದೆಹಲಿಗೆ ತೆರಳುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ …

Read More »

ಮುಂದಿನ ಸಿಎಂ ಯಾರು – ಪ್ರಶ್ನೆಗೆ ಉತ್ತರ ನೀಡದೇ ನಗುಮುಖದಿಂದ ಎದ್ದು ಹೋದ ಸಿದ್ದರಾಮಯ್ಯ

ಬೆಂಗಳೂರು: ಮುಂದೆ ಕರ್ನಾಟಕದ ಸಿಎಂ  ಯಾರು ಎನ್ನುವ ಪ್ರಶ್ನೆಗೆ ಸಿಎಂ ಯಾವುದೇ ಉತ್ತರ ನೀಡದೇ ಹೈಕಮಾಂಡ್‌ ನಿರ್ಧಾರ ಮಾಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೈಕಮಾಂಡ್‌ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು. ನನ್ನನ್ನು ಸೋನಿಯಾ ಗಾಂಧಿ ಅವರು‌ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡರು. ಆಗ ನನ್ನ ಜೊತೆ 8 ಜನ‌ ಶಾಸಕರು …

Read More »

ಸಂವಿಧಾನವೇ ನನ್ನ ಧರ್ಮ, ಮತದಾರರೇ ನನ್ನ ಅಭಿಮಾನಿ ದೇವರು: ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಲೋಕಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊನ್ನೆ ಹೈಕಮಾಂಡ್‌ನವರು ನನಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಅವರು ರಾಜೀನಾಮೆ ಕೊಡಿ ಎಂದು ಹೇಳಿದ ತಕ್ಷಣ, ನಾನು ನಾಡಿದ್ದು (ಇಂದು) ಕೊಡುತ್ತೇನೆ ಎಂದು ತಿಳಿಸಿದ್ದೆ. ಅದರಂತೆಯೇ ನಾನು ಇಂದು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ …

Read More »

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ  ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್‌ಫಾಸ್ಟ್‌ ಮೀಟಿಂಗ್’ ನಡೆಯಿತು. ಕಾವೇರಿ ನಿವಾಸದ ಅಂಗಳ ಸದಾ ಜನಸಾಗರದಿಂದ, ಅಧಿಕಾರದ ಗಿಜಿಗುಡುವಿಕೆಯಿಂದ ತುಂಬಿರುತ್ತಿತ್ತು. ಆದರೆ …

Read More »

ಕೆಪಿಸಿಸಿ ಸಾರಥ್ಯ ಸಚಿವ ಸತೀಶ್‌ ಜಾರಕಿಹೊಳಿಗೆ ನೀಡಿದರೆ ಸೂಕ್ತವೆಂದ ಬೆಳಗಾವಿ ಶಾಸಕರು

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಅತ್ಯಂತ ಸೂಕ್ತ ಎಂದು ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಅಭಿಪ್ರಾಯಪಟ್ಟಿದ್ದಾರೆ. ಆದರೆ, ಶೀಘ್ರದಲ್ಲೇ ನಡೆಯಲಿದೆ ಎನ್ನಲಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಗಾದಿಯ ಕುರಿತು ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ …

Read More »

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು. ಮುಂದಿನ‌‌‌ ಸಿಎಂ ಯಾರು ಎಂಬ ಹೆಸರನ್ನ ಹೇಳದ ಸಿದ್ದರಾಮಯ್ಯ, ಮುಂದೆ ಯಾರು …

Read More »

ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧತೆ ಕೈಗೊಳ್ಳಿ: ಸಿಇಒ ರಾಹುಲ ಶಿಂಧೆ ಸೂಚನೆ

ಜಿಲ್ಲೆಯ ಎಲ್ಲ ಶಾಲೆ ಹಾಗೂ ಅಂಗನವಾಡಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಶಾಲೆ ಹಾಗೂ ಅಂಗನವಾಡಿಗಳ ಪ್ರಾರಂಭೋತ್ಸವ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಶಾಲೆ ಹಾಗೂ ಅಂಗನವಾಡಿಗಳ ಒಳ, ಹೊರಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಆದ್ಯತೆ ನೀಡಬೇಕು. ಆಹಾರ ಪದಾರ್ಥಗಳ ದಾಸ್ತಾನು ಕೊಠಡಿ ಶುಚಿಯಾಗಿಟ್ಟುಕೊಳ್ಳಬೇಕು. ಆಹಾರ ಪದಾರ್ಥ ಗುಣಮಟ್ಟ …

Read More »

ರಾಜಕೀಯ ಬೆಳವಣಿಗೆ ಮಧ್ಯೆ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್‌

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ …

Read More »

ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಬಾಗಲಕೋಟೆ: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್  ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್​​ಗೆ ಒತ್ತಾಯಿಸಿದ್ದಾರೆ. ನಾಳೆ ಎಲ್ಲೆಡೆ ಬಕ್ರೀದ್ ಹಬ್ಬದ ಸಂಭ್ರಮ. ಮುಸ್ಲಿಂ …

Read More »