Breaking News

ನಿನ್ನಿಂದ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು.. ಎಲ್ಲವನ್ನೂ ಟಿವಿಯಲ್ಲಿ ನೋಡಿದೆ. ಮಗನ ಮಾತಿಗೆ ಕಣ್ಣೀರಿಟ್ಟ ದಿವ್ಯಾ

ಕಲಬುರಗಿ: ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು… ನಾನು ಎಲ್ಲವನ್ನೂ ಟಿವಿಯಲ್ಲಿ ನೋಡಿದ್ದೇನೆ… ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ದಿವ್ಯಾ ಹಾಗರಗಿ ತನ್ನ ಮಕ್ಕಳನ್ನು ನೋಡಿ ಕಣ್ಣೀರಿಟ್ಟಿದ್ದಾಳೆ. ತಾಯಿಯನ್ನು ನೋಡಲು ಭಾನುವಾರ ಸಿಐಡಿ ಕಚೇರಿ ಬಂದ ಇಬ್ಬರು ಮಕ್ಕಳು ಕೂಡ ತಾಯಿಯನ್ನು ನೋಡುತ್ತಿದ್ದಂತೆ ಕಣ್ಣೀರು ಸುರಿಸಿದರು. ಈ ವೇಳೆ ‘ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ …

Read More »

ಕೆಜಿಎಫ್ ಚಿತ್ರದ ಅಬ್ಬರ ನೋಡಿ ಹೆದರಿದ್ದೆ: ಬಾಲಿವುಡ್ ನಟ ಅಮೀರ್ ಖಾನ್

ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ದೇಶಾದ್ಯಂತ ನಾಗಾಲೋಟ ಮುಂದುವರೆಸಿದೆ. ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾದರೂ ಮೂರನೇ ವಾರವೂ ಕೆಜಿಎಫ್ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ. ಕೆಜಿಎಫ್ 2 ಚಿತ್ರ ಸಾವಿರ ಗಡಿದಾಡಿದ ಭಾರತೀಯ ಚಿತ್ರರಂಗದ ನಾಲ್ಕನೇ ಚಿತ್ರವಾಗಿದೆ. ಇನ್ನು ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರ 2000 ಕೋಟಿ ಗಳಿಸಿ ಸಾರ್ವಕಾಲಿಕ ದಾಖಲೆ ಮಾಡಿದೆ. ಆದರೆ ಆ ಚಿತ್ರ ಹಿಂದಿಯಲ್ಲಿ 387 ಕೋಟಿ ರುಪಾಯಿ ಮಾತ್ರ ಗಳಿಕೆ …

Read More »

ಕರ್ನಾಟಕದ ಒಂದೇ ಒಂದು ಇಂಚು ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು

ಬೆಂಗಳೂರು,ಮೇ2- ಯಾವುದೇ ಕಾರಣಕ್ಕೂ ಕರ್ನಾಟಕದ ಒಂದೇ ಒಂದು ಇಂಚು ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.   ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಅನೇಕ ಪ್ರದೇಶಗಳಿದ್ದು, ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಾವು ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಅಜಿತ್ ಪವಾರ್ ಹೇಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಸಿಎಂ ಬೊಮ್ಮಾಯಿ ಅವರು ರಾಜಕೀಯ ಉಳಿವಿಗಾಗಿ …

Read More »

ಮೇ ತಿಂಗಳಲ್ಲಿ ಮಳೆಯ ದಿನಗಳು ಹೆಚ್ಚಿರಲಿದೆ

ಬೆಂಗಳೂರು: ಮಾರ್ಚ್‌ ಹಾಗೂ ಎಪ್ರಿಲ್‌ನಲ್ಲಿ ಉತ್ತರ ಭಾರತ ರಾಜ್ಯಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ನಷ್ಟು ಜಾಸ್ತಿಯಾಗಿದೆ. ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಸಿಗಾಳಿಯಿಂದ ಜನ ತತ್ತರಿಸಿದ್ದಾರೆ. ಅದರ ಪ್ರಭಾವ ರಾಜ್ಯದಲ್ಲೂ ಬೀರಲಿದೆ ಎಂಬ ಆತಂಕ ಮನೆಮಾಡಿತ್ತು. ಆದರೆ, ಇದೇ ಸಮಯದಲ್ಲಿ ವರುಣನ ಆಗಮನ ಹಾಗೂ ಹವಾಮಾನ ತಜ್ಞರ ಮುನ್ಸೂಚನೆಯು ಜನರ ಆತಂಕವನ್ನು ತಕ್ಕಮಟ್ಟಿಗೆ ದೂರ ಮಾಡಿದೆ. ಅದರಂತೆ ರಾಜ್ಯದಲ್ಲಿ “ಬೇಸಗೆಯ ಪೀಕ್‌’ ಅಂದರೆ ಮೇಯಲ್ಲೂ ಮಳೆಯ ದಿನಗಳು ಹೆಚ್ಚು ಇರಲಿದ್ದು, ಇದರಿಂದ …

Read More »

ಸವಾಲಿಗೆ ಜವಾಬ್ ವಾರ್‌ – ಡಿಕೆಶಿ ಜೊತೆ ತೊಡೆ ತಟ್ಟಿದವರೆಲ್ಲ ಇಕ್ಕಟ್ಟಿನಲ್ಲಿ ಸಿಲುಕುತ್ತಿದ್ದಾರಾ?

ಬೆಂಗಳೂರು: ಡಿಕೆಶಿ ಜೊತೆ ತೊಡೆ ತಟ್ಟಿದವರೆಲ್ಲ ಈಗ ಇಕ್ಕಟ್ಟಿನಲ್ಲಿ ಸಿಲುಕುತ್ತಿದ್ದು, ತನ್ನ ವಿರುದ್ಧ ತೊಡೆ ತಟ್ಟಿದವರನ್ನು ಎಕ್ಸ್ ಪೋಸ್ ಮಾಡಲು ಡಿಕೆ ಶಿವಕುಮಾರ್‌ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಹೌದು. ಈ ಮೊದಲ ರಾಜಕೀಯವಾಗಿ ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪ, ವಾಗ್ದಾಳಿ ನಡೆಯುತ್ತಿದ್ದವು. ಆದರೆ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ʼಸವಾಲಿಗೆ ಜವಾಬ್ʼ ಎಂಬ ಪೊಲಿಟಿಕ್ಸ್ ಶುರುವಾಗಿದೆ. ಸವಾಲಿಗೆ ಜವಾಬ್‌ʼ ಹೋರಾಟದಲ್ಲಿ ಕಾಕತಾಳಿಯವೋ ತಂತ್ರಗಾರಿಕೆಯೋ ಗೊತ್ತಿಲ್ಲ. ಆದರೆ ಡಿಕೆಶಿ …

Read More »

ಲಹರಿಗೆ 48 ವರುಷ : ಇಬ್ಬರ ಸಾಧನೆಗೆ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ

ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿದೆ. ಈಗ ಮತ್ತೊಂದು ವಿಶೇಷವೆಂದರೆ ಈ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ  “ಡಿವೈನ್ ಟೈಡ್ಸ್” ಎಂಬ ಅದ್ಭುತ ಆಲ್ಬಂ ಮೂಡಿಬಂದಿದೆ. ಈ ಆಲ್ಬಂ ಗಾಗಿ ರಿಕ್ಕಿಕೇಜ್ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಅವಾರ್ಡ್ ಬಂದಿರುವುದು ಇದು ಎರಡನೇ ಬಾರಿ. ಈ ಸಂತಸ ಹಂಚಿಕೊಳ್ಳಲು ಲಹರಿ ಸಂಸ್ಥೆ …

Read More »

ಬದಲಾವಣೆ ಕಾಲ ಪ್ರಾರಂಭವಾಗಿದೆ, ಸಬೂಬುಗಳ ಕಾಲ ಮುಗಿದಿದೆ: ಬೊಮ್ಮಾಯಿ

ಬೆಂಗಳೂರು: ಜನ ಕಲ್ಯಾಣಕ್ಕಾಗಿ ವಿವಿಧ ನಿಗಮಗಳಿಗೆ ನೀಡಲಾಗಿರುವ ಅನುದಾನ ನೇರವಾಗಿ ಫಲಾನುಭವಿಗಳಿಗೆ ಮುಟ್ಟಬೇಕೆನ್ನುವ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿದ್ದು, ಇದನ್ನು ನಾನೇ ಸ್ವತ: ಮೇಲ್ವಿಚಾರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಲ್ಯಾಣ ಮಿತ್ರ ಸಹಾಯವಾಣಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ಕೊಟ್ಟರು.  ಬದಲಾವಣೆಯ ಕಾಲ ಪ್ರಾರಂಭವಾಗಿದ್ದು, ಸಬೂಬುಗಳ ಕಾಲ ಮುಗಿದಿದೆ. ಶಿಕ್ಷಣ, …

Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‍ಗೆ ಗೋವಿಂದ ಕಾರಜೋಳ ತಿರುಗೇಟು

ಚಿತ್ರದುರ್ಗ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‍ಗೆ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ್ ಸಿಎಂ ರೇಸ್‍ನಲ್ಲಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಆಡಳಿತದಲ್ಲಿ ಹೇಳಿಕೊಳ್ಳುವ ಸಾಧನೆ ಮಾಡಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರದ ವಿರುದ್ಧ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಸದ್ಯ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ರಾಜ್ಯದಲ್ಲಿ …

Read More »

ನಾಯಕತ್ವ ಬದಲಾವಣೆ ಬಗ್ಗೆ ಸಂತೋಷ್ ಯಾಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ: ಉಮೇಶ್ ಕತ್ತಿ

ಚಿಕ್ಕೋಡಿ: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಸರ್ಕಾರ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾಯದರ್ಶಿ ಬಿ.ಎಲ್.ಸಂತೋಷ್ ಯಾಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಆಹಾರ ಹಾಗೂ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೊಮ್ಮಾಯಿ ಸರ್ಕಾರದಲ್ಲಿಯೇ ನಾವು ಮಂತ್ರಿಯಾಗಿದ್ದೇವೆ. ಒಳ್ಳೆಯ ಸರ್ಕಾರದ ಜೊತೆಗೆ ಬರುವ ದಿನಗಳಲ್ಲಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ …

Read More »

ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರ

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ಹಲವೆಡೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ. ಭಾರೀ ಗಾತ್ರದ ಮರಗಳೂ ವರುಣ ಆರ್ಭಟಕ್ಕೆ ಧರೆಗುರುಳಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಗರಪಾಲಿಕೆ ಮುಂದಾಗಿದೆ.ಕೆಲ ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದೆ. ನಿನ್ನೆ ಬೆಂಗಳೂರಿನಲ್ಲಿ ಸೃಷ್ಟಿಸಿದ ಅವಾಂತರಗಳು ಇದಕ್ಕೆ ಸಾಕ್ಷಿಯಾಗಿದೆ. …

Read More »