ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ …
Read More »ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ಬೆಳಕಿಗೆ
ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಅನ್ಯಕೋಮಿನ ಸ್ನೇಹಿತೆಯರ ಜತೆ ಮಾತನಾಡುತ್ತಿದ್ದ ಯುವಕನನ್ನು ಪ್ರಶ್ನಿಸಿದ ಕೆಲ ಸ್ಥಳೀಯರು, ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಒಂದು ವಾರದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಕಾಲೇಜು ಸ್ನೇಹಿತೆಯರ ಜತೆಗೆ ಮಾತನಾಡುತ್ತಿದ್ದ ಅನ್ಯಕೋಮಿನ ಯುವಕ ಮತ್ತು ಯುವತಿಯರ ಜತೆಗೆ ವಾಗ್ವಾದ ನಡೆಸಿದ ಕೆಲವರು, ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ ಯುವತಿಯರಿಬ್ಬರನ್ನು …
Read More »ದೇಶಿ ತಳಿಗಳ ಅಭಿವೃದ್ಧಿಗೆ ಅಮೃತ ಸಿರಿ, ಅಮೃತ ಧಾರಾ
ಬೆಂಗಳೂರು: ಸರಕಾರವು ದೇಶಿ ಗೋ ತಳಿ ಸಂವರ್ಧನೆಗಾಗಿ ರೈತರಿಗೆ ಕಡಿಮೆ ದರದಲ್ಲಿ ಕರುಗಳನ್ನು ವಿತರಣೆ ಮಾಡಲು ನಿರ್ಧರಿಸಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಇಲಾಖೆ ಯಿಂದ ಜಾರಿಗೊಳ್ಳುತ್ತಿರುವ ಯೋಜನೆಗೆ “ಅಮೃತ ಸಿರಿ’ ಮತ್ತು “ಅಮೃತ ಧಾರಾ’ ಎಂದು ಹೆಸರಿಡಲು ನಿರ್ಧರಿಸಲಾಗಿದೆ. ಗಂಡು ಕರು ವಿತರಣೆಗೆ ಅಮೃತ ಧಾರಾ, ಹೆಣ್ಣು ಕರು ವಿತರಣೆಗೆ ಅಮೃತ ಸಿರಿ ಎಂದು ನಾಮಕರಣ ಮಾಡಲಾಗಿದ್ದು, ದೇಶಿ ತಳಿಗಳಾದ ಮಲೆನಾಡು ಗಿಡ್ಡ, ಹಳ್ಳಿಕಾರ್, ಅಮೃತ …
Read More »ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಟಿಎಂಸಿ ನಾಯಕ ಬಾಬುಲ್ ಸುಪ್ರಿಯೊ
ನವದೆಹಲಿ: ತಿಂಗಳ ಹಿಂದೆಯಷ್ಟೇ ಬಿಜೆಪಿ ತೊರೆದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದ ಕೇಂದ್ರದ ಮಾಜಿ ಸಚಿವ ಬಾಬುಲ್ ಸುಪ್ರಿಯೊ ಮಂಗಳವಾರ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇಷ್ಟು ದಿನ ನನ್ನ ಮೇಲೆ ವಿಶ್ವಾಸವಿಟ್ಟ ಪಕ್ಷ ಮತ್ತು ಬಿಜೆಪಿ ನಾಯಕರಾದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ …
Read More »ಅವಿವೇಕಿ ಬಿಜೆಪಿ ರಾಜ್ಯಾಧ್ಯಕ್ಷ; ತಲೆಕೆಟ್ಟು ಮಾತನಾಡುತ್ತಿದ್ದಾರೆ; ನಳೀನ್ ಕುಮಾರ್ ಕಟೀಲ್ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ
ಬೆಂಗಳೂರು: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅವಿವೇಕಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಮೊದಲು ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದೆ. ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ನಳೀನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ, ತಲೆ ಕೆಟ್ಟಿದೆ. ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರ ಮನಸ್ಸು …
Read More »ಎಚ್ಆರ್ಪಿ ಹಗರಣದಲ್ಲಿ ರಾಜಕಾರಣಿಗಳೂ ಭಾಗಿ: ಆರೋಪ
ಹಾಸನ: ಹೇಮಾವತಿ ಜಲಾಶಯ ಯೋಜನೆ (ಎಚ್ಆರ್ಪಿ) ಮುಳುಗಡೆ ಸಂತ್ರಸ್ತರ ಅಕ್ರಮ ಭೂ ಮಂಜೂರಾತಿ ಪ್ರಕರಣದಲ್ಲಿ ಅಧಿಕಾರಿಗಳ ಜತೆ ಭಾಗಿಯಾಗಿರುವ ರಾಜಕಾರಣಿಗಳ ವಿರುದ್ಧವೂ ಮೂರು ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಎ.ಮಂಜು ಒತ್ತಾಯಿಸಿದರು. ಹೇಮಾವತಿ ಜಲಾಶಯ ನಿರ್ಮಾಣ ವೇಳೆ 13,500 ಸಂತ್ರಸ್ತರು ಸುಮಾರು 21 ಸಾವಿರ ಎಕರೆ ಭೂಮಿ ಕಳೆದುಕೊಂಡಿದ್ದರು. ನಂತರದಲ್ಲಿ ಸಂತ್ರಸ್ತರಿಗೆ ಹಂಚಿಕೆ ಮಾಡಲು 25,554 ಎಕರೆ ಜಮೀನನ್ನು ವಿವಿಧ ತಾಲ್ಲೂಕುಗಳಲ್ಲಿ …
Read More »45ರ ವ್ಯಕ್ತಿ, 25ರ ಯುವತಿ ನಡುವೆ ವಿವಾಹ; ಏನಿದು ವೈರಲ್ ಫೋಟೋ ಹಿಂದಿನ ಕಹಾನಿ
ಕುಣಿಗಲ್ : 45 ವರ್ಷದ ವ್ಯಕ್ತಿಯೋರ್ವನು 25 ವರ್ಷದ ಯುವತಿಯನ್ನು ಮದುವೆಯಾಗಿರುವ , ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುರುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಹಸವಾಗಿದೆ, ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಅಕ್ಕಿಮರಿಪಾಳ್ಯ ಗ್ರಾಮದ ಶಂಕರಣ್ಣ (45) ವರ್ಷ, ಸಂತೇಮಾವತ್ತೂರು ಗ್ರಾಮದ ಮೇಘನಾ (25) ವರ್ಷದ ಯುವತಿಯನ್ನು ಮಧುವೆಯಾಗಿದ್ದು, ಯುವಕರನ್ನು ನಿಬ್ಬೆರಗಾಗಿಸಿದೆ. ಕಳೆದ ಹಲವು ದಿನಗಳ ಹಿಂದೆ ಯುವಕರು ನಾವು ಮದುವೆಯಾಗಬೇಕು, ಹುಡುಗಿಯನ್ನು ಹುಡುಕಿ ಮದುವೆ ಮಾಡಿಸಿ ಎಂದು …
Read More »ಹೇಳುವುದು ಆಚಾರ, ಮಾಡುವುದು ಅನಾಚಾರ; ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯ ನೋಡಿದ್ದು ಯಾವ ಪಕ್ಷದವರು ? ಬಿಜೆಪಿಗೆ ತಿರುಗೇಟು ನೀಡಿದ JDS
ಬೆಂಗಳೂರು: ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎತ್ತಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿ ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ. ಸಮಾಜದ ಉದ್ದಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ಎಂದು ಜೆಡಿಎಸ್ ತಿರುಗೇಟು ನೀಡಿದೆ. ಸರಣಿ …
Read More »ಮಂಗ್ಳೂರಿನ ಪ್ರತಿಷ್ಠಿತ ವಕೀಲನ ಕರಾಳ ಮುಖ ಬಯಲು: ವಿದ್ಯಾರ್ಥಿನಿ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜೇಶ್ ಭಟ್ ಕಚೇರಿಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇಂಟರ್ನಶಿಪ್ ಮಾಡಲು ಬಂದಿದ್ದಳು. ಕಚೇರಿಯಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆನ್ನಲಾಗಿದೆ. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿದ ವರ್ತಿಸಿದ್ದಾರೆಂದು ಸಂತ್ರಸ್ತೆ ದೂರು ನೀಡಿದ್ದಾರೆ. 12 ಕ್ಕೂ ಹೆಚ್ಚು …
Read More »ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಹೆಬ್ಬೆಟ್ ಗಿರಾಕಿ’ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ. ಘಟನೆಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಟ್ವೀಟ್ ಆಗಿರುವುದರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಈ ಟ್ವೀಟ್ ತೆಗೆದುಹಾಕಲು ಸೂಚನೆ ನೀಡಲಾಗಿದೆ. …
Read More »