ಬೆಂಗಳೂರು : ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಎಲ್ಲವೂ ಸರಿಯಾಗಿಲ್ಲ ಎಂಬುದು ದಿನೇ ದಿನೇ ಮನದಟ್ಟಾಗುತ್ತಿದೆ. ಇಲ್ಲಿರುವ ಅಧಿಕಾರಿಗಳು ಕಾನೂನಿಗಿಂತ ಮೇಲಿದ್ದೇವೆ ಎಂದು ಭಾವಿಸಿದಂತಿದೆ. ಇವರಿಗೆಲ್ಲಾ ಕಾನೂನು ಎಂದರೆ ಏನು ಎಂಬುದನ್ನು ಅರ್ಥ ಮಾಡಿಸುವ ಸಮಯ ಹತ್ತಿರ ಬಂದಿದೆ’ ಎಂದು ಹೈಕೋರ್ಟ್ ಗುಡುಗಿದೆ. ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಲ್ಲಿ ಬಿಬಿಎಂಪಿ ವಿಫಲವಾಗಿದೆ’ ಎಂದು ಆಕ್ಷೇಪಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ …
Read More »ಮದ್ಯಪಾನ ಮಾಡೋದು ಮೆದುಳಿಗೆ ಒಳ್ಳೆಯದಾ.? ಸಂಶೋಧನೆಯಲ್ಲಿ ಬಯಲಾಗಿದೆ ʼಶಾಕಿಂಗ್ʼ ಸತ್ಯ
ಮದ್ಯಪಾನ ಮಾಡೋದು ನಿಮ್ಮ ಹೃದಯ ಹಾಗೂ ಕಿಡ್ನಿಗೆ ಒಳ್ಳೆಯದು ಅನ್ನೋ ವಿಚಿತ್ರ ಮೆಸೇಜ್ ಗಳನ್ನು ವಾಟ್ಸಾಪ್ ನಲ್ಲಿ ನೋಡಿರ್ತೀರಾ. ಆದ್ರೆ ಇದರಲ್ಲಿ ಎಳ್ಳಷ್ಟೂ ಸತ್ಯವಿಲ್ಲ. ಮದ್ಯಪಾನದಿಂದ ಮೆದುಳಿಗೂ ಹಾನಿಯಾಗುತ್ತದೆ ಎಂಬ ಆಘಾತಕಾರಿ ಅಂಶವೀಗ ಹೊಸದೊಂದು ಸಂಶೋಧನೆಯಲ್ಲಿ ಬಹಿರಂಗವಾಗಿದೆ. 36,000 ಜನರನ್ನು ಸಂಶೋಧನೆಗೆ ಒಳಪಡಿಸಿ ಈ ವರದಿಯನ್ನು ತಯಾರಿಸಲಾಗಿದೆ. ಪ್ರತಿದಿನ ಒಂದರಿಂದ ಎರಡು ಪೆಗ್ ಕುಡಿಯುವವರ ಮೆದುಳಿನಲ್ಲೂ ಬದಲಾವಣೆಗಳಾಗಿರೋದು ಸಾಬೀತಾಗಿದೆ. ಇನ್ನು ವಿಪರೀತ ಕುಡಿತದ ಚಟವಿರುವವರ ಮೆದುಳಿನ ರಚನೆ ಮತ್ತು …
Read More »ಟ್ಯಾಟೂʼ ಹಾಕುವ ನೆಪದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಯತ್ನ
ಕೊಚ್ಚಿ (ಕೇರಳ) : ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕೇರಳ ಪೊಲೀಸರು ಟ್ಯಾಟೂ(Tattoo)ಕಲಾವಿದನೊಬ್ಬನನ್ನು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಕೊಚ್ಚಿಯ ಎಡಪಲ್ಲಿಯಲ್ಲಿ ಟ್ಯಾಟೂ ಸ್ಟುಡಿಯೋ ನಡೆಸುತ್ತಿರುವ ಆರೋಪಿ ಸುಜೀಶ್ ಪಿಎಸ್ ವಿರುದ್ಧ ಆರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯಾಟೂ ಸ್ಟುಡಿಯೋದಲ್ಲಿ, ಟ್ಯಾಟೂ ಹಾಕಿಸಿಕೊಳ್ಳುವ ವೇಳೆ ಸುಜೀಶ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು 18 ವರ್ಷದ ಯುವತಿಯೊಬ್ಬಳು ಆರೋಪಿಸಿದ್ದಾರೆ. ಸುಜೀಶ್‌ನನ್ನು ಚೇರನಲ್ಲೂರು …
Read More »ಬಸಪ್ಪನಿಗೆ ಚಮಚದಲ್ಲಿ ಹಾಲು ಕುಡಿಸಿದ ಭಕ್ತರು!
ಬಾಗಲಕೋಟೆ: ಜನ ಮರುಳೊ, ಜಾತ್ರೆ ಮರುಳೊ ಎಂಬ ಘಟನೆ ನಿನ್ನೆ ರಾತ್ರಿ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ಬಸಪ್ಪನಿಗೆ ಭಕ್ತರು ಚಮಚದಲ್ಲಿ ಹಾಲು ಕುಡಿಸಿದ್ದಾರೆ. ಪಟ್ಟಣದ ಅರಳಿಕಟ್ಟೆ ಬಸಪ್ಪನಿಗೆ ಭಕ್ತರು ಚಮಚದಲ್ಲಿ ಹಾಲು ಕುಡಿಸಲು ಶುರು ಮಾಡಿದ್ದಾರೆ. ಚಮಚದಲ್ಲಿನ ಹಾಲು ಕೆಳಗೆ ಬಿದ್ದರೇ ಬಸವಣ್ಣ ಹಾಲು ಕುಡಿದ ಅಂತ ನಂಬಿಕೆ. ಈ ಸುದ್ದಿ ಪಟ್ಟಣದ ತುಂಬ ಹರಡಿದ್ದು, ಬಸಪ್ಪನನ್ನು ನೋಡಲು ಜನರು ಮುಗಿಬಿದ್ದಿದ್ದಾರೆ. ನಿನ್ನೆ ರಾತ್ರಿ ಜನರು ಬಸಪ್ಪನ ಪವಾಡ ನೋಡಬೇಕು …
Read More »ಯುಪಿ ಭವಿಷ್ಯ ಅಖಿಲೇಶ್ ಯಾದವ್ ಕೈಯಲ್ಲಿ ಸುರಕ್ಷಿತವಾಗಿರುತ್ತೆ: ಮಯಾಂಕ್ ಜೋಶಿ
ಲಕ್ನೋ: ಉತ್ತರ ಪ್ರದೇಶದ ಭವಿಷ್ಯ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಕೈಯಲ್ಲಿ ಸುರಕ್ಷಿತವಾಗಿರುತ್ತದೆ ಎಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಜೋಶಿ ಹೇಳಿದರು. ನಾನು ಇಂದು ಸಮಾಜವಾದಿ ಪಕ್ಷಕ್ಕೆ ಸೇರಿದ್ದೇನೆ. ಅಖಿಲೇಶ್ ಯಾದವ್ ಅಭಿವೃದ್ಧಿ, ಮಹಿಳೆಯರ ಸುರಕ್ಷತೆ ಮತ್ತು ಯುವಕರ ಬಗ್ಗೆ ಮಾತನಾಡುತ್ತಾರೆ. ಯುವಕನಾಗಿದ್ದಾಗ, ಪ್ರಗತಿಪರವಾಗಿ ಮಾತನಾಡುವ ಅಂತಹ ವ್ಯಕ್ತಿಯ ಜೊತೆ ನಿಲ್ಲಲು ನಾನು ಯೋಚಿಸಿದೆ. ಉತ್ತರ ಪ್ರದೇಶದ …
Read More »ಮೇಕೆದಾಟು ಮುಂದಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಿಂದ ಚುನಾವಣಾ ಆಟ: H.D.K.
ಬೆಂಗಳೂರು: ರಾಷ್ಟ್ರೀಯ ಪಕ್ಷಗಳು ಮೇಕೆದಾಟು ವಿಷಯವನ್ನಿಟ್ಟುಕೊಂಡು ಚುನಾವಣಾ ಆಟ ಪ್ರಾರಂಭಿಸಿವೆ ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್‍ನಲ್ಲಿ ಕಿಡಿಕಾರಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಮೇಕೆದಾಟು ಯೋಜನೆ ವಿವಾದವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಅವರೇ ವಿವಾದ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ಬಿಕ್ಕಟ್ಟಿನ ಲೇಪನ ಹಚ್ಚಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಎರಡೂ ರಾಜ್ಯಗಳು …
Read More »ಈ ವರ್ಷದಲ್ಲಿ ರಾಜ್ಯಸಭೆ ತೊರೆಯಲಿದ್ದಾರೆ ಹಲವಾರು ಸದಸ್ಯರು: ಸಂಕಷ್ಟದಲ್ಲಿ ಬಿಜೆಪಿ!
ನವದೆಹಲಿ: ರಾಜ್ಯಸಭೆ ಭಾರತದ ಸಂಸತ್ತಿನ ಮೇಲ್ಮನೆಯಾಗಿದೆ. ಸದಸ್ಯತ್ವವು 250 ಸದಸ್ಯರಿಗೆ ಸೀಮಿತವಾಗಿದ್ದು, ಪ್ರಸ್ತುತ ರಾಜ್ಯಸಭೆಯು 245 ಸದಸ್ಯರನ್ನು ಹೊಂದಿದೆ. 233 ಸದಸ್ಯರನ್ನು ವಿಧಾನಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ. ಇನ್ನುಳಿದ 12 ಜನರನ್ನು ಕಲೆ, ಸಾಹಿತ್ಯ, ವಿಜ್ಞಾನ ಮತ್ತು ಸಾಮಾಜಿಕ ಸೇವೆಗಳಿಗೆ ನೀಡಿದ ಕೊಡುಗೆಗಳಿಗಾಗಿ ರಾಷ್ಟ್ರಪತಿಗಳು ನಾಮನಿರ್ದೇಶನ ಮಾಡುತ್ತಾರೆ. ಸದಸ್ಯರು ಆರು ವರ್ಷಗಳ ಅವಧಿಗೆ ಅಧಿಕಾರ ಹೊಂದಿದ್ದು, ಮೂರನೇ ಒಂದು ಭಾಗದಷ್ಟು ಸದಸ್ಯರು ಪ್ರತಿ ಎರಡು ವರ್ಷಗಳಿಗೊಮ್ಮೆ ನಿವೃತ್ತರಾಗುತ್ತಾರೆ. ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ …
Read More »ರಾಜ್ಯದಲ್ಲಿದೆ 900 ಟನ್ ಬಂಗಾರದ ನಿಕ್ಷೇಪ!
ದೇಶದಲ್ಲಿರುವ ಅಮೂಲ್ಯ ಲೋಹ ನಿಕ್ಷೇಪ ಶೋಧನೆಗೆ ಕೇಂದ್ರ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಸೌತ್ ಜುವೆಲರಿ ಶೋ ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ ಸುಮಾರು 900 ಟನ್‌ಗಳಷ್ಟು ಬಂಗಾರದ ಲೋಹದ ನಿಕ್ಷೇಪ ಇದೆ ಎಂದು ಅಂದಾಜಿಸಲಾಗಿದ್ದು, ಕಾಪರ್, ಅಲ್ಯೂಮಿನಿಯಂನ ನಿಕ್ಷೇಪಗಳ ಶೋಧನೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು. ನಮ್ಮ ರಾಜ್ಯದಲ್ಲಿ ಗುರುತಿಸಲಾಗಿರುವ ಬಂಗಾರದ ನಿಕ್ಷೇಪಗಳ ಹರಾಜಿಗೆ …
Read More »ಕುತ್ತಿಗೆ ನೋವಿಗೆ ಇಲ್ಲಿದೆ ಮನೆ ಮದ್ದು
ನಮ್ಮ ದೇಹದಲ್ಲಿ ಕುತ್ತಿಗೆಯೂ ಬಹು ಮುಖ್ಯವಾದ ಅಂಗ. ಕೆಲವೊಂದು ಕಾರಣಗಳಿಂದ ಕುತ್ತಿಗೆ ನೋವು ಪದೇ ಪದೇ ಕಾಣಿಸಿಕೊಳ್ಳುತ್ತದೆ. ಅದಕ್ಕೆ ಮನೆಯಲ್ಲಿ ಮದ್ದು ತಯಾರಿಸಬಹುದು. ಕುತ್ತಿಗೆ ನೋವು ಇರುವವರು ಎರಡು ಗಂಟೆಗೊಮ್ಮೆ ಐಸ್ ಪ್ಯಾಕ್ ಇಟ್ಟುಕೊಳ್ಳಬಹುದು. ಇದರಿಂದ ನೋವು ನಿವಾರಣೆಯಾಗುತ್ತದೆ. ದಿನನಿತ್ಯ ಕುತ್ತಿಗೆ ವ್ಯಾಯಾಮ ಮಾಡುವುದರಿಂದ ಕುತ್ತಿಗೆ ನೋವಿನ ಸಮಸ್ಯೆಯಿಂದ ದೂರವಿರಬಹುದು. ಒಂದು ಲೋಟ ಹಾಲಿಗೆ ಒಂದು ಚಮಚ ಅರಿಷಿಣ ಪುಡಿ ಸೇರಿಸಿ ಅದನ್ನು ಬಿಸಿ ಮಾಡಿ ನಂತರ ಅದಕ್ಕೆ ಸ್ವಲ್ಪ …
Read More »ಆಂದೋಲನದ ವರದಿಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಸಿಎಂ!
ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾವು ಮಂಡಿಸಿದ ೨೦೨೨ನೇ ಸಾಲಿನ ಬಜೆಟ್ ಕುರಿತು ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾದ ಕೃಷಿ ಅನುದಾನ ಕುರಿತು ಸವಿವರ ವರದಿಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಆಂದೋಲನ ಪತ್ರಿಕೆಯ ಎರಡನೇ ಪುಟದಲ್ಲಿ ‘ಕೃಷಿ ಕ್ಷೇತ್ರಕ್ಕೆ ೩೩,೭೦೦ ಕೋಟಿ ರೂ.’ ಶೀರ್ಷಿಕೆಯಡಿ ಕೃಷಿ ಅನುದಾನ ಕುರಿತು ವರದಿಗಳು ವಿವರಗಳೊಂದಿಗೆ ಪ್ರಕಟವಾಗಿತ್ತು. ಆ ವರದಿಯನ್ನು ಬಸವರಾಜ ಬೊಮ್ಮಾಯಿ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದಾರೆ. ಲಕ್ಷಾಂತರ ಫಾಲೋವರ್‌ಗಳು …
Read More »
Laxmi News 24×7