ಬೆಂಗಳೂರು: ಜೆಡಿಎಸ್ ಪಕ್ಷದವರು ಉಪ ಚುನಾವಣೆಯಲ್ಲಿ ಎರಡೂ ಕಡೆ ಮುಸ್ಲಿಂ ಅಭ್ಯರ್ಥಿಳನ್ನು ಕಣಕ್ಕಿಳಿಸಿರುವ ಹಿಂದಿನ ಉದ್ದೇಶ ಏನೇ ಇದ್ದರೂ ಮತದಾರರು ಮೂರ್ಖರಲ್ಲ. ಕಾಂಗ್ರೆಸ್‌ನ ಗೆಲ್ಲುವ ಅಭ್ಯರ್ಥಿಗೇ ಮತ ನೀಡುತ್ತಾರೆಯೇ ಹೊರತು ಸೋಲು ಅಭ್ಯರ್ಥಿಗಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ನಿಷ್ಕ್ರಿಯತೆ ಬಗ್ಗೆ ಇರುವ ಅಸಹನೆಯನ್ನು ಹೊರ ಹಾಕಲು ಜನತೆ ಈ …
Read More »ಅವಧಿ ಪೂರ್ಣಗೊಳಿಸಲಿದ್ದೇನೆ, ನನ್ನ ನೇತೃತ್ವದಲ್ಲೇ 2023 ವಿಧಾನಸಭೆ ಚುನಾವಣೆ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದದ್ದೇನೆ, ಹಾಗೂ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ ಕಾನ್ ಕ್ಲೇವ್ ನಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಉತ್ತಮ ಆಡಳಿತ ನೀಡುವ ಜತೆಗೆ ಮತ್ತೊಂದು ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕ ತರುತ್ತೇನೆ .ಎಷ್ಟು ಅವಧಿಗೆ ನಾನು ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಮುಖ್ಯವಲ್ಲ. ಈ …
Read More »ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಡಿಕೆಶಿಗೆ ಕುಮಾರಸ್ವಾಮಿ ತರಾಟೆ
ಬೆಂಗಳೂರು: ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ.ಸಿ.ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಡಿಕೆ ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಟೀಕಿಸಿದ್ದಾರೆ. ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ …
Read More »ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ
ಹೊಸದಿಲ್ಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಕೇಂದ್ರ ಕಲ್ಲಿದ್ದಲು,ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ವಿ.ಸುನೀಲ್ ಕುಮಾರ್, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ …
Read More »ದೇವನಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳ ದಾಳಿ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ದೇವನಹಳ್ಳಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿವೆ. ಬಾಲಕಿ ಮೇಲೆ ನಾಯಿಗಳು ಅಟ್ಯಾಕ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು (ಅ.9) ಬೆಳಿಗ್ಗೆ 16 ವರ್ಷದ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ 6 ಕ್ಕೂ ಅಧಿಕ ನಾಯಿಗಳು ಏಕಾಏಕಿ ಬಾಲಕಿ ಮೇಲೆ ದಾಳಿ ಮಾಡಿವೆ. ಸ್ಥಳೀಯರ ನೆರವಿನಿಂದ ಅದೃಷ್ಟವಶಾತ್ …
Read More »ಬಿಬಿಎಂಪಿ ಯಡವಟ್ಟಿಗೆ 9 ವರ್ಷದ ಬಾಲಕ ಬಲಿ
ಬೆಂಗಳೂರು: ನಿರ್ವಹಣೆ ಇಲ್ಲದ ಬಿಬಿಎಂಪಿ ಪಾರ್ಕ್‌ನ ಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟಿ.ದಾಸರಹಳ್ಳಿಯ ಮಲ್ಲಸಂದ್ರದ 13 ನೇ ವಾರ್ಡ್ನ ಕೆಂಪೇಗೌಡ ಪಾರ್ಕ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು 9 ವರ್ಷದ ಪ್ರತಾಪ್ ಎಂದು ಗುರುತಿಸಲಾಗಿದೆ. ಈತ ಗಾರ್ಮೆಂಟ್ಸ್ ನೌಕರ ರುದ್ರಮುನಿ ಹಾಗೂ ತಾಯಿ ಕಾಂತಮಣಿ ದಂಪತಿಯ ಪುತ್ರ. ಮಳೆಯಿಂದಾಗಿ ಪಾರ್ಕ್‌ನ ತಗ್ಗು ಪ್ರದೇಶದಲ್ಲಿ ನಿಂತಿದ್ದ ನೀರಿನಿಂದ ಅವಘಡ ಸಂಭವಿಸಿದ್ದು, ಆಟವಾಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ಪಾರ್ಕ್ …
Read More »ಕಲಬುರಗಿ: 340 ಕೆ.ಜಿ ಗಾಂಜಾ ವಶ; ಮೂವರ ಬಂಧನ
ಕಲಬುರಗಿ: ಆಂಧ್ರಪ್ರದೇಶದ ಧರ್ಮಾಚಲಂನಿಂದ ನಗರ ತಂದ 340 ಕೆಜಿ ತೂಕದ ಕಾಂಜಾವನ್ನು ನಗರ ಪೊಲೀಸರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಗರ ಪೊಲೀಸ್ ಆಯುಕ್ತಾಲಯದ ಸೈಬರ್ ಅಪರಾಧ ಮತ್ತು ಮಾದಕದ್ರವ್ಯ ನಿಗ್ರಹ ಠಾಣೆ (ಸಿಇಎನ್) ಪೊಲೀಸರು, ವಾಹನ ಜಪ್ತಿ ಮಾಡಿದರು. ಮಹಾರಾಷ್ಟ್ರದ ಲಾತೂರ ಮೂಲದ ಅಕ್ರಮ ಇನಾಮದಾರ, ಸುಮೇರ್ ಇನಾಮದಾರ್ ಹಾಗೂ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮೋಹನ್ ಮೇತ್ರೆ ಎಂಬುವರನ್ನು …
Read More »ರಸ್ತೆಯಿಂದ ಇಳಿದು ಗದ್ದೆಗೆ ನುಗ್ಗಿದ ಸರ್ಕಾರಿ ಬಸ್; ವಿದ್ಯಾರ್ಥಿಗಳೇ ತುಂಬಿದ್ದರು!
ಬಳ್ಳಾರಿ: ಶಾಲಾ ಕಾಲೇಜಿನ ಮಕ್ಕಳೇ ಹೆಚ್ಚಾಗಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ನುಗ್ಗಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಓರ್ವಾಯಿ ಗ್ರಾಮದ ಬಳಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ಓರ್ವಾಯಿ ಗ್ರಾಮದಿಂದ ಬಳ್ಳಾರಿಗೆ ತೆರಳುತ್ತಿದ್ದ ಬಸ್ನಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು. ರಸ್ತೆ ಕಿರಿದಾಗಿರುವುದರಿಂದ ಚಾಲಕನಿಗೆ ನಿಯಂತ್ರಿಸುವಲ್ಲಿ ಸಮಸ್ಯೆಯಾಗಿ, ಬಸ್ ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ನುಗ್ಗಿತು. ಗದ್ದೆಯು ತಗ್ಗಿನಲ್ಲಿದ್ದರೂ …
Read More »ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ ಆರೋಪಿಗಳು
ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ …
Read More »ನಿಲ್ಲದ IT ಬೇಟೆ.. ಬೆಳಗಾವಿಯ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್
ಬೆಳಗಾವಿ: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ಇಂದು ಕೂಡ ದಾಳಿ ಕಂಟಿನ್ಯೂ ಆಗಿದ್ದು ಜಿಲ್ಲೆಯ ಉದ್ಯಮಿ ಹಾಗೂ ನೀರಾವರಿ ಇಲಾಖೆ ಗುತ್ತಿಗೆದಾರ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಜಿಲ್ಲೆಯ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಮನೆ ಮೇಲೆ 16 ಜನ ಆದಾಯ ತೆರಿಗೆ ಅಧಿಕಾರಿಗಳ …
Read More »