Breaking News

ಜೆಡಿಎಸ್ ಪಕ್ಷದ್ದು ಮಿಷನ್ 123 ಅಲ್ಲ,ಮಿಷನ್ 23: ಬಿ.ವೈ.ವಿಜಯೇಂದ್ರ ಲೇವಡಿ

ಸುಬ್ರಹ್ಮಣ್ಯ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕ ಸ್ಥಾನ ಗಳಿಸಲು ಜೆಡಿಎಸ್ ಇದೀಗ ಮಿಷನ್ 123 ಎಂಬ ಕಾರ್ಯಾಗಾರ ನಡೆಸುತ್ತಿದೆ. ಅದು ಮಿಷನ್ 123 ಅಲ್ಲ, ಬದಲಾಗಿ ಅದು ಮಿಷನ್ 23 ಅಷ್ಟೆನೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದರು. ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಪಕ್ಷಕ್ಕೆ ಕಡಿಮೆ ಸೀಟು ಬಂದರೆ ಸಂತಸವಾಗುತ್ತದೆ. ಯಾವುದೇ ಪಕ್ಷಕ್ಕೆ ಬಹುಮತ ಬಾರದೆ …

Read More »

ಬಿಜೆಪಿಯವರು ಸತ್ತರೆ ₹1 ಕೋಟಿ ಪರಿಹಾರ: ಶಾಸಕ ಬಯ್ಯಾಪುರ

ಕುಷ್ಟಗಿ (ಕೊಪ್ಪಳ ಜಿಲ್ಲೆ): ‘ಉತ್ತರ ಪ್ರದೇಶದ ಲಖಿಂಪುರ- ಖೇರಿ ಬಳಿ ಪ್ರತಿಭಟನೆ ವೇಳೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಪುತ್ರನ ಕಾರು ಹರಿದು ಮೃತರಾದ ರೈತ ಕುಟುಂಬಗಳಿಗೆ ಅಲ್ಲಿಯ ಬಿಜೆಪಿ ಸರ್ಕಾರ ಕೇವಲ ₹45 ಲಕ್ಷ ಪರಿಹಾರ ನೀಡುತ್ತಿದೆ. ಇಂತಹ ಘಟನೆಯಲ್ಲಿ ಬಿಜೆಪಿಯ ಯಾವುದೇ ಮುಖಂಡ ಸತ್ತರೂ ಕಾಂಗ್ರೆಸ್ ಪಕ್ಷದಿಂದ ₹1 ಕೋಟಿ ಪರಿಹಾರ ನೀಡುತ್ತೇವೆ’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು. ಲಖಿಂಪುರ ಘಟನೆ ಖಂಡಿಸಿ ಕಾಂಗ್ರೆಸ್‌ನಿಂದ …

Read More »

ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವವರೆಗೆ ನಾನೇ ಅಭ್ಯರ್ಥಿ:ಸತೀಶ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಲ್ಲಿ ಮುಂಬರುವ ವಿಧಾನ ಪರಿಷತ್ ಚುನಾವಣೆಯ ಒಂದು ಸ್ಥಾನಕ್ಕೆ ಮಾತ್ರ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡು ವಿಧಾನ ಪರಿಷತ್ ಸ್ಥಾನಗಳಿದ್ದು, ಇಬ್ಬರು ಸ್ಪರ್ಧೆ ಮಾಡಿದರೇ ನಮ್ಮಲ್ಲೇ ಪೈಪೋಟಿ ಏರ್ಪಡುತ್ತದೆ. ಹೀಗಾಗಿ, ಒಂದೇ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇವೆ. ಸ್ಥಳೀಯ ಸಂಸ್ಥೆಗಳಲ್ಲಿ ನಮ್ಮದೇ ಆದ ವೋಟ್ ಬ್ಯಾಂಕ್ ಇದೆ. ಈಗಾಗಲೇ ಐದಾರು …

Read More »

ಕಾರು ಪಲ್ಟಿ : ಮಹಿಳೆಯರಿಬ್ಬರ ದುರ್ಮರಣ, ಮೂವರಿಗೆ ಗಂಭೀರ ಗಾಯ

ಹಳಿಯಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗಳಾಗಿರುವ ದುರ್ಘಟನೆ ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಭಾಗವತಿ ಕ್ರಾಸ್ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಮೃತರು ಕೊಲ್ಲಾಪುರದ ರಮಾನಂದ ನಗರದ ಮೀನಾ ಗಣೇಶ ಪಿಳೈ(55) ಮತ್ತು ರಾಜಮ್ಮ ಪಿಳೈ(35) ಎನ್ನುವವರಾಗಿದ್ದು, ಗಣೇಶ ಪಿಳೈ, ಸರಸ್ವತಿ ಪಿಳೈ ಮತ್ತು ರಾಧಾಕೃಷ್ಣ ಪಿಳೈ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ …

Read More »

ದಸರಾ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ

ದಸರಾ ಮಹೋತ್ಸವದ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ದೊರೆಯಲಿದೆ. ಅತ್ಯಂತ ಆಕರ್ಷಣಿಯ ಹಾಗೂ ವಿನೂತನ ರೀತಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ. ಈ ದೀಪಾಲಂಕಾರವನ್ನು ಪ್ರತೀ ದಿನ ಸಂಜೆ 6.30 ರಿಂದ ರಾತ್ರಿ 9.30 ಗಂಟೆಯವರೆಗೆ ಬೆಳಗಿಸಲಾಗುತ್ತದೆ. ಮೈಸೂರು ನಗರದ ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರುತ್ತಿರುವುದರಿಂದ ರಸ್ತೆಗಳಲ್ಲಿ ಜನ ದಟ್ಟಣೆ, ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ದೀಪಾಲಂಕಾರವನ್ನು ವೀಕ್ಷಿಸುವ ಜನರು ವಿದ್ಯುತ್ ದೀಪಗಳನ್ನು …

Read More »

ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರತೆಯಾಗಿದ್ದು ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗುವ ಸಾಧ್ಯತೆ

ರಾಯಚೂರು: ರಾಜ್ಯಕ್ಕೆ ಶೇ 45 ರಷ್ಟು ವಿದ್ಯುತ್ ನೀಡುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರತೆಯಾಗಿದ್ದು ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗುವ ಸಾಧ್ಯತೆ ಇದೆ. ಕಲ್ಲಿದ್ದಲು ಕೊರತೆಯ ಕರಿನೆರಳು ಆರ್ಟಿಪಿಎಸ್ ವಿದ್ಯುತ್ ಉತ್ಪಾದನೆ ಮೇಲೆ ಬಿದ್ದಿದೆ. ಎಂಟು ಘಟಕಗಳಿಂದ ಉಷ್ಣ ವಿದ್ಯುತ್ ಉತ್ಪಾದನೆ 1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದೆ. ಕಲ್ಲಿದ್ದಲು ಕೊರತೆಯಿಂದ ಈಗಾಗಲೇ ನಾಲ್ಕು ಘಟಕಗಳು ಉತ್ಪಾದನೆ ನಿಲ್ಲಿಸಿವೆ. ಕೇವಲ 4 ಘಟಕಗಳಿಂದ 480 …

Read More »

ಕಾಲೇಜು ಫೀಸ್​​ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ದಕ್ಷಿಣ ಕನ್ನಡ: ಕಾಲೇಜು ಫೀಸ್ ಕಟ್ಟುವ ವಿಚಾರಕ್ಕೆ ನೊಂದು ನಿನ್ನೆ ಆತ್ಮಹತ್ಯೆಗೆ ಯತ್ನಿಸಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಇಂದು ಮೃತಪಟ್ಟಿದ್ದಾಳೆ. ಕೇರಳದ ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ಮಂಗಳೂರಿನ ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ನಿನ್ನೆ ಸಂಜೆ ಹಾಸ್ಟೆಲ್​​ನ ಬಾತ್ ರೂಂ ನಲ್ಲಿ ಅತ್ಮಹತ್ಯೆಗೆ ಯತ್ನಿಸಿದ್ದಳು. ಅದನ್ನು ಗಮನಿಸಿದ ಹಾಸ್ಟೆಲ್​​ ಸಹ ವಿದ್ಯಾರ್ಥಿನಿಯರು ಗಂಭೀರ ಪರಿಸ್ಥಿತಿಯಲ್ಲಿದ್ದ ನೀನಾಳನ್ನು …

Read More »

ನಾಡಹಬ್ಬದ ಸಂಭ್ರಮ.. ಸಾಂಸ್ಕೃತಿಕ ನಗರಿಯಲ್ಲಿ ಮೇಳೈಸಿದ ದಸರಾ ದರ್ಬಾರ್​

ಮೈಸೂರು: ವಿಶ್ವವಿಖ್ಯಾತ 411ನೇ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ಸಿಗಲಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸೇರಿದಂತೆ ಗಣ್ಯರು ಆ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ದಸರಾ ಸಂಬ್ರಮದಲ್ಲಿರುವ ಅರಮನೆ ನಗರಿ ಮೈಸೂರು ಮಧುವಣಗಿತ್ತಿಯಂತೆ …

Read More »

ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ರನ್ನ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಆಗ್ರಹಿಸಿ,ಕಳೆದ 72 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಯು ಇಂದು ತೀವ್ರ ಸ್ವರೂಪಕ್ಕೆ ಪಡೆದುಕೊಂಡ ಘಟನೆ ಬಾಗಲಕೋಟ ಜಿಲ್ಲೆಯ ಮುದೋಳ ಪಟ್ಟಣದಲ್ಲಿ ಜರುಗಿದೆ ,ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಇದನ್ನು ತಡೆಯಲು ಪೊಲೀಸ್ ಬಿಗಿ ಭದ್ರತಾ ಏರ್ಪಡಿಸಿದ್ದ ರಿಂದ ಕೆಲ ಸಮಯ ಗೊಂದಲಮಯ ವಾತಾವರಣ ಉಂಟಾಗಿತು. ಸಚಿವ ಕಾರಜೋಳ ಮನೆಗೆ ಮುತ್ತಿಗೆ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ವೈದ್ಯರ ಮುಷ್ಕರ : `OPD’ ಸೇವೆ ವ್ಯತ್ಯಯ

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಆಸ್ಪತ್ರೆಗಳ ಸ್ಥಾನಿಕ ವೈದ್ಯರು (Doctor) ಇಂದು ಹೊರ ರೋಗಿ ಸೇವೆ (OPD) ಬಹಿಷ್ಕರಿಸಿ ಮುಷ್ಕರ (Strike) ನಡೆಸಲಿದ್ದಾರೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸ್ಥಾನಿಕ ವೈದ್ಯರು ಹಾಗೂ ಇಂಟರ್ನಿ ವೈದ್ಯರು ಮುಷ್ಕರ (Strike) ನಡೆಸಲಿದ್ದು, ಇದರಿಂದ ಸರ್ಕಾರಿ ಆಸ್ಪತ್ರೆಗಳ ಹೊರರೋಗಿಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಕೊರೊನಾ ಅಪಾಯ ಭತ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ …

Read More »