ಬೆಂಗಳೂರು : 2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ದತಿಯ ವಿಸ್ತರಣೆ ಹಾಗೂ ಜನಪ್ರೀಯ ಕಾರ್ಯಕ್ರಮವನ್ನು ಅಳವಡಿಸಲು ಆರ್ಕೆವಿವೈ ಯೋಜನೆಯಡಿ ರೂ 7234 ಕೋಟಿಗಳ ಅನುದಾನವನ್ನು ಒದಗಿಸಲಾಗಿದ್ದು …
Read More »ದಸರಾ ಬಳಿಕ ಎಲ್ಲ ತರಗತಿಯವರಿಗೂ ಬಿಸಿಯೂಟ
ಬೆಂಗಳೂರು: ದಸರಾ ರಜೆ ಬಳಿಕ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಆರಂಭದ ಜತೆಗೆ 1ರಿಂದ 10ನೇ ತರಗತಿ ವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಬಿಸಿಯೂಟ ಸಿಗಲಿದೆ. ಅ. 10ರಿಂದ ಅ. 20ರ ವರೆಗೆ ದಸರಾ ರಜೆ ಇರಲಿದೆ. ಈಗಾಗಲೇ ಸರಕಾರ 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭಿಸಿದೆ. ಆದರೆ ಬಿಸಿಯೂಟ ಆರಂಭಿಸಿಲ್ಲ. ದಸರಾ ರಜೆ ಮುಗಿಯುತ್ತಿದ್ದಂತೆ 1ರಿಂದ 5ನೇ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಯ ಜತೆಗೆ …
Read More »ಕಾಲೇಜು ವಿದ್ಯಾರ್ಥಿಗಳಿದ್ದ ಬಸ್, ಟ್ರ್ಯಾಕ್ಟರ್ ಅಪಘಾತ
ಕೋಲಾರ: ವಿದ್ಯಾರ್ಥಿಗಳಿದ್ದ ಕಾಲೇಜು ಬಸ್ ಹಾಗೂ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ರಭಸಕ್ಕೆ ಟ್ರಾಕ್ಟರ್ ಎರಡು ಭಾಗಗಳಾಗಿದೆ. ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಚಾಲಕರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರದ ವಿಜಯ ಚೇತನ ಪಿಯು ಕಾಲೇಜಿಗೆ ಸೇರಿದ ಖಾಸಗೀ ಬಸ್ ಇದಾಗಿದ್ದು, ಬಸ್ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. …
Read More »ಲೈಂಗಿಕ ಸಂಪರ್ಕಕ್ಕೆ ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿರಾತಕ: ಮಹಿಳೆ ಸಾವು
ಲೈಂಗಿಕ ಸಂಪರ್ಕಕ್ಕೆ ವಿರೋಧಿಸಿದ್ದಕ್ಕೆ ವ್ಯಕ್ತಿಯೊಬ್ಬ ರಾತ್ರಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾಳೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಧ್ಯರಾತ್ರಿ ವಿವಾಹಿತ ಮಹಿಳೆ ಬಾಲಮ್ಮ ತೀವ್ರ ಗಾಯಗೊಂಡಿದ್ದು, ಸೋಮವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆರೋಪಿ ಗಂಗಾಪ್ಪ ನಾಪತ್ತೆಯಾಗಿದ್ದಾನೆ. ಗ್ರಾಮದ ಆರೋಪಿ ಗಂಗಪ್ಪ ಹಲವು ದಿನಗಳಿಂದ ಅಕ್ರಮ ಸಂಬಂಧಕ್ಕಾಗಿ ಮಹಿಳೆ ಮೇಲೆ ಹಿಂದೆ ಬಿದ್ದಿದ್ದ. ಆದರೆ ಈತನ ಮಾತಿಗೆ ಒಪ್ಪದ ಹಿನ್ನೆಲೆಯಲ್ಲಿ ಸೇಡು …
Read More »ಮೊದಲ ಬಾರಿಗೆ ಬಾಹ್ಯಾಕಾಶದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ; ಆಗಸಕ್ಕೆ ಹಾರುತ್ತಿರುವ ನಿರ್ದೇಶಕರು ಇವರೇ?
ಬೈಕೋನೂರ್: ಇದೇ ಮೊದಲ ಬಾರಿಗೆ ಬಾಹ್ಯಾಕಾಶದಲ್ಲಿ ಸಿನಿಮಾವೊಂದರ ಚಿತ್ರೀಕರಣಕ್ಕೆ ರೋಸ್ಕೋಸ್ಮೀಸ್ ಅನುಮತಿ ನೀಡಿದೆ. ನಟಿ ಯೂಲಿಯಾ ಪೆರೆಸಿಲ್ಡ್, ನಿರ್ದೇಶಕ ಕ್ಲಿಮ್ ಶಿಪೆಂಕೊ ಮತ್ತು ಗಗನಯಾತ್ರಿ ಆಂಟನ್ ಶಕಾಪ್ಲೆರೋವ್ ಮಂಗಳವಾರ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಎಂದು ರಷ್ಯಾದ ರಾಜ್ಯ ಬಾಹ್ಯಾಕಾಶ ನಿಗಮ ರೋಸ್ಕೋಸ್ಮೋಸ್ ತಿಳಿಸಿದೆ. ಮುಖ್ಯ ಮತ್ತು ಬ್ಯಾಕಪ್ ಸಿಬ್ಬಂದಿಯನ್ನು ಅನುಮೋದಿಸಲಾಗಿದೆ. ರೋಸ್ಕೋಸ್ಮೋಸ್ ಮತ್ತು ರಷ್ಯಾದ ಚಾನೆಲ್ ಒನ್ ಕಳೆದ ನವೆಂಬರ್ನಲ್ಲಿ ಬಾಹ್ಯಾಕಾಶದಲ್ಲಿ ಚಲನಚಿತ್ರವನ್ನು ನಿರ್ಮಿಸುವ ಯೋಜನೆಯನ್ನು ಅನಾವರಣಗೊಳಿಸಿತು. ನಟಿ …
Read More »ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪ್ರಮುಖರ …
Read More »ಮಕ್ಕಳ ಮಾರಾಟ ಪ್ರಕರಣ : ಆಶಾಕಾರ್ಯಕರ್ತೆ ಬಂಧನ
ಕೋಲಾರ: ರಾಜ್ಯದಲ್ಲಿ ದಿನದಿಂದದಿನಕ್ಕೆ ಮಕ್ಕಳ ಮಾರಾಟ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಸ್ವತ: ಆಶಾ ಕಾರ್ಯಕರ್ತೆಯರೇ ಮಕ್ಕಳ ಮಾರಾಟ ಜಾಲದ ಹಿಂದೆ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಕ್ಕಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಲಾರದಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು ಹಾಗೂ ಮಗು ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಕೆಜಿಎಫ್ ತಾಲೂಕಿನ ಪಂತನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನೀಲಮ್ಮ ಹಾಗೂ ಬಾಬು ದಂಪತಿ ಮಗುವನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. …
Read More »ಶಾರುಖ್ ಖಾನ್ ಪುತ್ರನಿಗೆ ಸಿಗದ ಜಾಮೀನು
ಮುಂಬೈ: ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾದ ಪ್ರಕರಣದಡಿ ಬಂಧಿತರಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ ಮುಂಬೈನ ಕಿಲ್ಲಾ ಕೋರ್ಟ್ ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಮುಂಬೈ ಗೋವಾ ನಡುವೆ ಸಮುದ್ರದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಶನಿವಾರ ರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆರ್ಯನ್ …
Read More »ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಬೆಳಗಾವಿಗೆ
ಬೆಳಗಾವಿ: ಬೆಳಗಾವಿ ತಂಡವು ಜಿಲ್ಲಾ ಅಂಗವಿಕಲರ ಸೇವಾ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಬಾಗಲಕೋಟೆ ತಂಡ ದ್ವಿತೀಯ ಮತ್ತು ಮೈಸೂರು ತಂಡದವರು ತೃತಿಯ ಸ್ಥಾನ ಪಡೆದರು. ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರಹುಸೇನ ಪಠಾಣ ಹಾಗೂ ಸುರೇಶ ಯಾದವ ಪ್ರತಿಷ್ಠಾನದ ಅಧ್ಯಕ್ಷ ಸುರೇಶ ಯಾದವ ವಿಜೇತ ತಂಡಗಳಿಗೆ …
Read More »ರೈತರಿಗೆ ಭದ್ರತೆ ನೀಡಲು ಆಗ್ರಹ
ಬೆಳಗಾವಿ: ಉತ್ತರಪ್ರದೇಶದ ಲಿಖಿಂಪುರ್ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ವಾಹನ ಹರಿಸಿ ನಾಲ್ವರು ರೈತರನ್ನು ಬಲಿ ಪಡೆದ ಆರೋಪಿಯನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆಯವರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಸಿದಗೌಡ ಮೋದಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ …
Read More »