ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ …
Read More »ಉಡುಪಿ – ಬಾಲಕಿ ಮೇಲೆ ನಿರಂತರ ಅತ್ಯಾಚಾರ
ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳುಗಳಿಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಪೊಕ್ಸೊ ಕಾಯಿದೆಯಡಿ ಬಂಧಿಸಿದ್ದಾರೆ. ಸಂದೀಪ್ ನಾಯ್ಕ ಹಾಗೂ ವಿಘ್ನೇಶ್ ನಾಯ್ಕ ಬಂಧಿತ ಆರೋಪಿಗಳು. ಬಾಲಕಿಯ ತಂದೆ ಹಾಗೂ ತಾಯಿ ಕೆಲಸಕ್ಕೆಂದು ಹೊರ ಹೋದ ಸಂದರ್ಭ ಆಕೆ ಮನೆಯಲ್ಲಿ ಒಬ್ಬಳೇ ಇರುತ್ತಿದ್ದಳು. ಈ ವೇಳೆ ಸಮೀಪದ ಮನೆಯಲ್ಲಿರುವ ಬಾಲಕಿಯ ಸಂಬಂಧಿಕರಾದ ಆರೋಪಿಗಳು, …
Read More »ವಾಹನ ಸವಾರರಿಗೆ ರಿಲೀಫ್ ಪೆಟ್ರೋಲ್, ಡಿಸೇಲ್ ದರ ಇಳಿಕೆ
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಮಾರಾಟ ತೆರಿಗೆಯನ್ನು ಶೇಕಡಾ 35 ರಿಂದ ಶೇಕಡಾ 25.9ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 24 ರಿಂದ ಶೇಕಡಾ 14.34ಕ್ಕೆ ಇಳಿಸಿವೆ. ಇದರಿಂದ ನ.3ರಂದು ಇದ್ದ ಪೆಟ್ರೋಲಿನ ಚಿಲ್ಲರೆ ಮಾರಾಟ ದರವು 113.93 ರೂಪಾಯಿಯಿಂದ 100.63 ರೂಪಾಯಿಗೆ ಬಂದಿದ್ದು, ಒಟ್ಟಾರೆ ದರ ಕಡಿತ 13.30 ರೂಪಾಯಿ ಆಗಲಿದೆ. ಇನ್ನು ನ.3 ರಂದು ಇದ್ದ ಡೀಸೆಲ್ …
Read More »ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ:ಕಾಂಗ್ರೆಸ್
ತುಮಕೂರು: ‘ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮನ್ನು 10 ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದರು. ಈಗ ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ ಆಡಳಿತ ನಡೆಸುತ್ತಿದೆ’ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನೇತೃತ್ವದ ಸರ್ಕಾರ ಈವರೆಗೆ ದೇಶದಲ್ಲಿ ಜಾರಿಗೊಳಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವ ಸಲುವಾಗಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನಕ್ಕೆ ತುಮಕೂರಿನಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ …
Read More »ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ
ಬೆಂಗಳೂರು : ರಾಜ್ಯ ಸರ್ಕಾರವು (State Government) ಸರ್ಕಾರಿ ನೌಕರರಿಗೆ (Government Employees) ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, …
Read More »ಪರಿಷತ್ ಚುನಾವಣೆ: ಮತದಾರರ ಅಂತಿಮಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್
ಬೆಳಗಾವಿ : 04-ಬೆಳಗಾವಿ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 511 ಮತಗಟ್ಟೆಗಳ ಅಂತಿಮ ಮತದಾರರ ಪಟ್ಟಿಗಳನ್ನು ಭಾನುವಾರ(ನ.21) ಪ್ರಸಿದ್ದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ. ಮತದಾರರ ಕರಡು ಪಟ್ಟಿಯನ್ನು 11-11-2021 ರಂದು ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆಗಳನ್ನು ಆಧರಿಸಿ ಸರಿಪಡಿಸಲಾಗಿರುವ ಮತದಾರರ ಅಂತಿಮ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಗಳು ಸಂಬಂಧಿಸಿದ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ, …
Read More »ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಫಲಿತಾಂಶ
ಬೆಳಗಾವಿ – ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿಕಟಪೂರ್ವ ಅಧ್ಯಕ್ಷೆ ಮಂಗಲಾ ಮೆಟಗುಡ್ ಪುನರಾಯ್ಕೆಯಾಗಿದ್ದಾರೆ. ಚಲಾಯಿತ 6805 ಮತಗಳ ಪೈಕಿ ಮಂಗಲಾ ಮೆಟಗುಡ್ 4935 ಮತ ಪಡೆದಿದ್ದಾರೆ. ಬಸವರಾಜ ಖಾನಪ್ಪನವರ್ 1155, ರವೀಂದ್ರ ತೋಟಿಗೇರ 582 ಹಾಗೂ ಸುರೇಶ ಮರಲಿಗನವರ್ 41 ಮತ ಪಡೆದಿದ್ದಾರೆ. 91 ಮತಗಳು ತಿರಸ್ಕೃತವಾಗಿವೆ.
Read More »ಕಂಪ್ಲಿಯ ಸೇತುವೆ ಮುಳುಗಡೆ: ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆ ಮಧ್ಯೆ ಸಂಚಾರ ಸ್ಥಗಿತ
ಕಂಪ್ಲಿ : ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯನ್ನು ನೇರವಾಗಿ ಸಂಪರ್ಕಿಸುತ್ತಿದ್ದ ಕಂಪ್ಲಿಯ ಸೇತುವೆ ಮುಳುಗಡೆಯಾಗಿದ್ದು, ಉಭಯ ಜಿಲ್ಲೆಗಳ ಮಧ್ಯೆ ನೇರ ರಸ್ತೆ ಸಂಚಾರ ಸ್ಥಗಿತವಾಗಿದೆ. ಕಂಪ್ಲಿಯ ಸೇತುವೆ ಮೇಲೆ ಯಾವುದೇ ಸಂಚಾರಕ್ಕೆ ಅವಕಾಶವಿಲ್ಲದಂತೆ ಪೊಲೀಸರು ಪಹರೆ ಕಾಯುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಗೆ ಕೇವಲ ಎರಡು ಅಡಿ ಮಾತ್ರ ಬಾಕಿ ಉಳಿದಿದೆ. ಪ್ರವಾಹದ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸೇತುವೆ ಮೇಲೆ …
Read More »ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು, ನ.21- ಸಹೋದರ ಲಖನ್ ಜಾರಕಿಹೊಳಿಗೆ ಮೇಲ್ಮನೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸಿಎಂ ಭೇಟಿ ಮಾಡಿ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಇಂದು ಬೆಳಗ್ಗೆ ಸಿಎಂ ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು , ಕುತೂಹಲ ಕೆರಳಿಸಿತು. ಈ ಹಿಂದೆ ಲಖನ್ ಜಾರಕಿಹೊಳಿಗೆ ಅವಕಾಶ ಕೊಡುವ ಆಶ್ವಾಸನೆ ನೀಡಿದ್ದ …
Read More »ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ
K.P.CC ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ, ಅಲ್ಲಿನ ಜನರ ಅಹವಾಲು ಆಲಿಸುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ. ಕೆಲ ದಿನಗಳ ಹಿಂದೆ ದಕ್ಷಿಣ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆ ಆಲಿಸಿದ್ದ ಅವರು, ಭಾನುವಾರ ಪುನಃ ಕ್ಷೇತ್ರದಲ್ಲಿ ಸಂಚರಿಸಿ ಅಹವಾಲು ಆಲಿಸಿದರು. ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ …
Read More »