Breaking News

ದೇಶಕ್ಕೆ ಸರ್‌ಎಂವಿ ಕೊಡುಗೆ ಅಪಾರ: ಸಿಇಒ ಮೊಹಮ್ಮದ್‌ ರೋಶನ್‌ ಅಭಿಮತ

ಹಾವೇರಿ: ಸರ್ ಎಂ. ವಿಶ್ವೇಶ್ವರಯ್ಯ ಅವರು ಕೇವಲ ಎಂಜಿನಿಯರ್‌ ಅಷ್ಟೇ ಅಲ್ಲದೇ ದೂರ ದೃಷ್ಟಿಕೋನದ ದೇಶ ಕಂಡ ಅಪ್ರತಿಮ ವ್ಯಕ್ತಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್‌ ರೋಶನ್‌ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಲೋಕೋಪಯೋಗಿ ಇಲಾಖೆ, ಪಂಚಾಯತ್‌ ರಾಜ್ ಎಂಜಿನಿಯರಿಂಗ್‌ ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯಗಳ ಸಂಸ್ಥೆ, ಯೋಜನಾ ಅನುಷ್ಠಾನ ವಿಭಾಗ ಹಾಗೂ …

Read More »

ನಿಮ್ಮ ಹೃದಯವನ್ನು ಪ್ರೀತಿಸಿ; ಡಾ.ಸುರೇಶ ಪಟ್ಟೇದ

ಬೆಳಗಾವಿ: ಜಗತ್ತಿನಾದ್ಯಂತ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ, ಅಪಾಯದಿಂದ ದೂರ ಇರುವುದಕ್ಕಾಗಿ ಜನರನ್ನು ಶಿಕ್ಷಿತರನ್ನಾಗಿ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸೆ.29ರಂದು ವಿಶ್ವ ಹೃದಯ ದಿನ ಆಚರಿಸಲಾಗುತ್ತದೆ. ಹೃದಯವನ್ನು ಪ್ರೀತಿಸಬೇಕು ಎನ್ನುವುದು ಆಚರಣೆಯ ಮುಖ್ಯ ಉದ್ದೇಶವಾಗಿದೆ. ಹಿಂದೆ, 50 ಅಥವಾ 40 ವರ್ಷವಾದವರು ವರ್ಷಕ್ಕೊಮ್ಮೆ ಹೃದಯದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡುತ್ತಿದ್ದೆವು. ಆದರೆ, ಇತ್ತೀಚಿನ ವರ್ಷಗಳಲ್ಲಿ 30 ವರ್ಷದವರಿಗೂ ತಿಳಿಸುತ್ತಿದ್ದೇವೆ. ಏಕೆಂದರೆ, ಆ ವಯಸ್ಸಿನವರಲ್ಲೂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ, ಜಾಗೃತಿ …

Read More »

ಡೆತ್​ನೋಟ್​ ಬರೆದಿಟ್ಟು ಬೆಂಗಳೂರು ಸಮೀಪ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ

ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್​ ಅಪಾರ್ಟ್​ಮೆಂಟ್​ನಲ್ಲಿ ಕಿರುತೆರೆ ನಟಿ ಸೌಜನ್ಯ (25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ ಬೆಳಗ್ಗೆ ದೊಡ್ಡಬೆಲೆ ಬಳಿಯ ಅಪಾರ್ಟ್​ಮೆಂಟ್​ನಲ್ಲಿ ತಮ್ಮ ನಿವಾಸದಲ್ಲೇ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯ ಬರೆದಿಟ್ಟಿದ್ದ ಡೆತ್​ನೋಟ್​ ಪತ್ತೆಯಾಗಿದೆ. ಸಾವಿಗೂ ಎರಡು ದಿನ ಮೊದಲೇ ಮನದ ನೋವನ್ನ ಅಕ್ಷರಕ್ಕಿಳಿಸಿದ್ದಾರೆ. ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ …

Read More »

ಬೆಳಗಾವಿ: ‘ಸಕ್ಕರೆ ಕಾರ್ಖಾನೆಗಳು ₹ 42.17 ಕೋಟಿ ಕಬ್ಬಿನ ಬಿಲ್ ಪಾವತಿಸುವುದು ಬಾಕಿ ಇದೆ’ ಎಂದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಬೆಳಗಾವಿ: ‘ಸಕ್ಕರೆ ಕಾರ್ಖಾನೆಗಳು ₹ 42.17 ಕೋಟಿ ಕಬ್ಬಿನ ಬಿಲ್ ಪಾವತಿಸುವುದು ಬಾಕಿ ಇದೆ’ ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ವಿವಿಧ ಸಭೆಗಳನ್ನು ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ರಾಜ್ಯದಲ್ಲಿ ಒಟ್ಟು 87 ನೋಂದಾಯಿತ ಸಕ್ಕರೆ ಕಾರ್ಖಾನೆಗಳಿವೆ. ಅವುಗಳಲ್ಲಿ 64 ಕಾರ್ಖಾನೆಗಳು ಕಾರ್ಯನಿರತವಾಗಿವೆ. 2020-21ನೇ ಕಬ್ಬು ಅರೆಯುವ ಹಂಗಾಮಿನಲ್ಲಿ 440.84 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದು 42.94 …

Read More »

ಪಂಚಮಸಾಲಿಗಳಿಗೆ 2ಎ ಮೀಸಲಾತಿ: ಸಚಿವನಾಗಿ ಬೀದಿಯಲ್ಲಿ ಹೋರಾಡಲಾಗಲ್ಲ- ನಿರಾಣಿ

ಬೆಳಗಾವಿ: ‘ನಾನು ಸಚಿವ ಸ್ಥಾನದಲ್ಲಿದ್ದುಕೊಂಡು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಬೀದಿಯಲ್ಲಿ ನಿಂತು ಹೋರಾಡಲು ಸಾಧ್ಯವಾಗುವುದಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಬಸವ ಜಯಮೃತ್ಯುಂಜಯ ಸ್ವಾಮೀಜಿ ನಮ್ಮ ಗುರುಗಳು. ಅವರನ್ನು ಸಮಾಜದ ಪೀಠಕ್ಕೆ ನಾವೇ ಆಯ್ಕೆ ಮಾಡಿದ್ದು. ನಮ್ಮ ಹೋರಾಟಕ್ಕೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ ಎಂದು ಅವರು ಯಾರನ್ನು ದೃಷ್ಟಿಯಲ್ಲಿಟ್ಟುಕೊಂಡು ಆರೋಪ ಮಾಡಿದ್ದಾರೋ ನನಗೆ ಗೊತ್ತಿಲ್ಲ’ …

Read More »

ರಾತ್ರಿ ರಾಜಕೀಯದಿಂದ ಶಾಸಕಿಯಾದ ಲಕ್ಷ್ಮಿ ಹೆಬ್ಬಾಳಕರ: ಸಂಜಯ ಪಾಟೀಲ

ಬೆಳಗಾವಿ: ‘ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಟೀಕಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣೆಗೆ ಮುನ್ನ, ನಾನು ನಿಮ್ಮ ಮನೆ ಮಗಳು ಎಂದೆಲ್ಲಾ ಹೇಳಿ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಿದ್ದರು. ಆ ಕನಸುಗಳನ್ನು ನನಸು ಮಾಡಲಾಗಿಲ್ಲ. ಹೀಗಾಗಿ, ಗ್ರಾಮೀಣ ಕ್ಷೇತ್ರದ ಜನರು ಪ್ರತಿಕ್ರಿಯೆ ಕೊಡಲು …

Read More »

ಯುಕೆ-27 ಹೋಟೆಲ್‌ನಲ್ಲಿ ಮುರುಗೇಶ ನಿರಾಣಿ- ಸತೀಶ ಜಾರಕಿಹೊಳಿ ರಹಸ್ಯ ಮಾತುಕತೆ

ಬೆಳಗಾವಿ: ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಇಲ್ಲಿನ ಯುಕೆ-27 ಹೋಟೆಲ್‌ನಲ್ಲಿ ರಹಸ್ಯವಾಗಿ ಬುಧವಾರ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಅವರು ಅರ್ಧ ಗಂಟೆಗೂ ಹೆಚ್ಚು ಸಮಯ ಚರ್ಚಿಸಿದರು. ಬಳಿಕ ಒಂದೇ ಕಾರಿನಲ್ಲಿ ಪ್ರಯಾಣಿಸಿ ಮತ್ತೊಂದು ಹೋಟೆಲ್‌ನಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಲ್ಲಿ ಭಾಗಿಯಾದರು. ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಮತ್ತು ಸಕ್ಕರೆ …

Read More »

ಸಿಎಂ ಮಮತಾಗೆ ಅಳಿವು-ಉಳಿವಿನ ಪ್ರಶ್ನೆಯಾದ ಬೈಎಲೆಕ್ಷನ್

ನವದೆಹಲಿ, ಸೆ.30- ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹುದ್ದೆಯ ಅಳಿವು ಉಳಿವನ್ನು ನಿರ್ಧರಿಸುವ ಭವಾನಿಪುರ ಸೇರಿದಂತೆ ಒಟ್ಟು ನಾಲ್ಕು ವಿಧಾನ ಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆದಿದೆ. ಪಶ್ಚಿಮಬಂಗಾಳದ ಭವಾನಿಪುರ, ಸಂಸೆರ್ಗಂಜ್, ಜಂಗಿಪುರ್ ಕ್ಷೇತ್ರಗಳು ಒಡಿಸಾ ರಾಜ್ಯದ ಪುರಿ ಜಿಲ್ಲೆಯ ಪಿಪಿಲಿ ವಿಧಾನಸಭಾಕ್ಷೇತ್ರಕ್ಕೆ ಉಪಚುನಾವಣೆಗಳು ನಡೆದಿವೆ. ಬೆಳಗ್ಗೆ ಏಳರಿಂದ ಸಂಜೆ ಆರು ಗಂಟೆಯವರೆಗೂ ಮತದಾನ ನಡೆದಿದೆ. ಬೆಳಗ್ಗೆ ಮತದಾನದಲ್ಲಿ ಉತ್ಸಾಹ ಕಂಡು ಬಂದಿದ್ದು, ಜನ ಸಾಲುಗಟ್ಟಿ ಮತ …

Read More »

2 ಎ ಮೀಸಲಾತಿ ನೀಡದಿದ್ದರೆ ಅ.1ರಿಂದ ಮತ್ತೆ ಹೋರಾಟ ಆರಂಭ: ಜಯ ಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ: ರಾಜ್ಯ ಸರ್ಕಾರ ಅ.1 ರೊಳಗೆ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ-2 ಎ ಮೀಸಲಾತಿ ಸೌಲಭ್ಯ ಒದಗಿಸುವ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದಲ್ಲಿ ಅಂದಿನಿಂದಲೇ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೆ ಹೋರಾಟ ಪ್ರಾರಂಭಿಸಲಾಗುವುದು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 1 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್‌ರವರ ಜನ್ಮದಿನದ …

Read More »

ಮಹಿಳೆಯ ಮೇಲೆ ದಾಳಿ ಮಾಡಿದ ಚಿರತೆ, ಮುಂದೇನಾಯ್ತು : ಭಯಾನಕ Video Viral

ಮುಂಬೈ : ಮುಂಬೈನಲ್ಲಿ ಮಧ್ಯ ವಯಸ್ಕ ಮಹಿಳೆ ಮೇಲೆ ಹೊಂಚು ಹಾಕಿಕೊಂಡಿದ್ದ ಚಿರತೆಯೊಂದು ದಾಳಿ ಮಾಡಿದ್ದು, ಮಹಿಳೆ ತನ್ನ ವಾಕಿಂಗ್ ಸ್ಟಿಕ್ ನಿಂದ ಚಿರತೆಯೊಂದಿಗೆ ಹೋರಾಡಿದ್ದು, ಚಿರತೆ ಅಲ್ಲಿಂದ ಕಾಲ್ಕಿತ್ತ ಘಟನೆ ನಡೆದಿದೆ. ಮುಂಬೈನ ಆರೆಯಲ್ಲಿ ಚಿರತೆ ಮಹಿಳೆ ಮೇಲೆ ದಾಳಿ ಮಾಡಲು ಹೊರಟಿತ್ತು. ಮೂರು ದಿನಗಳಲ್ಲಿ ಅದೇ ಪ್ರದೇಶದಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ಈ ಮಹಿಳೆ ಚಿರತೆಯನ್ನು ಎಷ್ಟು ಧೈರ್ಯದಿಂದ ಎದುರಿಸಿದಳು ಎಂಬುದನ್ನು ದೃಶ್ಯಾವಳಿಗಳು ತೋರಿಸುತ್ತವೆ. ಸದ್ಯ …

Read More »