ಕಲಬುರಗಿ: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಆಘಾತಕಾರಿ ಘಟನೆ ನಗರದ ಎನ್.ಜಿ.ಓ. ಕಾಲೋನಿಯ ಹನುಮಾನ್ ಮಂದಿರದ ಉದ್ಯಾನವನದಲ್ಲಿ ನಡೆದಿದೆ. ನಗರದ ಎನ್.ಜಿ.ಓ. ಕಾಲೋನಿಯ ಮಹಾದೇವಿ ಸುರೇಶ ದಂಪತಿ ಪುತ್ರ 6 ವರ್ಷದ ಸಿದ್ದು ಮೃತ ಬಾಲಕ. ವಿದ್ಯುತ್ ತಂತಿ ತಗಲಿ ಮೃತಪಟ್ಟಿದ್ದಾನೆ. ಹನುಮಾನ್ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. …
Read More »ವಿದ್ಯಾರ್ಥಿಗಳು ತರಗತಿಗೆ ಚಕ್ಕರ್, ರೊಮ್ಯಾನ್ಸ್ಗೆ ಹಾಜರ್
ಕೊಪ್ಪಳ: ಆತ ಪ್ರೇಮಿಯೇ ಇರಲಿ, ಪತಿಯೇ ಆಗಿರಲಿ. ತನ್ನ ಹೊರತಾಗಿ ಬೇರೊಂದು ಹೆಣ್ಣನ್ನು ಕಣ್ಣೆತ್ತಿ ನೋಡಿದ್ರೂ ಸಿಡಿಮಿಡಿಗೊಳ್ಳುವುದು ಭಾರತೀಯ ಹೆಣ್ಣು ಮಕ್ಕಳ ಹುಟ್ಟುಗುಣ. ಆದರೆ ಇಲ್ಲೊಂದು ಕಡೆ ಅಕ್ಕ ಪಕ್ಕ ಕುಳಿತು ಇಬ್ಬರು ಯುವತಿಯರನ್ನು ಒಬ್ಬನೇ ಮುದ್ದಾಡುವ ದೃಶ್ಯ ಸಾಮಾನ್ಯವಾಗಿದ್ದು, ಇದು ಸ್ವಾತಂತ್ರ್ಯನಾ? ಸ್ವೇಚ್ಚಾಚಾರವೇ ಎಂಬ ಪ್ರಶ್ನೆ ಮೂಡಿದೆ. ಕೊಪ್ಪಳದ ಗಂಗಾವತಿಯ ನ್ಯಾಯಾಧೀಶರ ನಿವಾಸ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದಿನ ಜಾಗವನ್ನು ಕಾಲೇಜ್ ವಿದ್ಯಾರ್ಥಿಗಳು ಪ್ರಣಯದ ಅಡ್ಡ ಮಾಡಿಕೊಂಡಿದ್ದಾರೆ. …
Read More »ಶಿಕ್ಷಣ ಕೇಂದ್ರಗಳೇ ಈಗ ಕೊರೊನಾ ಹಬ್..? ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಪಾಸಿಟಿವ್..!
ಮಂಡ್ಯ: ಕೊರೊನಾದ ಮೂರನೇ ಅಲೆ ಆತಂಕದ ಮಧ್ಯೆ ಒಂದನೇ ತರಗತಿಯಿಂದ ಶಾಲೆ ಆರಂಭಿಸಲು ಸರ್ಕಾರ ಚರ್ಚೆ ನಡೆಸುತ್ತಿದೆ. ಆತಂಕದ ಬೆಳವಣಿಗೆ ಏನಂದರೆ ಕೆಲವೊಂದು ಶಾಲಾ-ಕಾಲೇಜುಗಳು ಕೊರೊನಾ ಹಾಟ್ಸ್ಪಾಟ್ ಕೇಂದ್ರವಾಗುತ್ತಿವೆಯಾ ಅನ್ನೋ ಅನುಮಾನ ಶುರುವಾಗಿದೆ. ಇದೀಗ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಕಾಲೇಜಿನ 412 ವಿಧ್ಯಾರ್ಥಿಗಳ ಪೈಕಿ 28 ಮಂದಿಗೆ ಸೋಂಕು ದೃಢವಾಗಿದೆ. ಸೋಂಕಿತರಿಗೆ ನಾಗಮಂಗಲ ಪಟ್ಟಣದ …
Read More »₹13,165 ಕೋಟಿ ರಕ್ಷಣಾ ಉಪಕರಣಗಳ ಖರೀದಿಗೆ ರಾಜನಾಥ್ ಸಿಂಗ್ ಅನುಮೋದನೆ
ನವದೆಹಲಿ: ಸೇನಾ ಪಡೆಗಳಿಗೆ ಮತ್ತಷ್ಟು ಶಕ್ತಿ ತುಂಬಲು ರಕ್ಷಣಾ ಸ್ವಾಧೀನ ಮಂಡಳಿ ಮುಂದಾಗಿದೆ. ಹೀಗಾಗಿಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ₹13,165 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಉಪಕರಣಗಳನ್ನು ಖರೀದಿಸಲು ಅನುಮತಿ ನೀಡಿದೆ. ಭಾರತೀಯ ಮೂರು ಸೇನಾ ಪಡೆಗಳಿಗೂ ಎಎಲ್‌ಎಚ್ ಹೆಲಿಕಾಪ್ಟರ್ ಸೇರಿದಂತೆ ಹಲವು ರಕ್ಷಣಾ ಉಪಕರಣಗಳನ್ನು ಈ ಯೋಜನೆಯಡಿ ಖರೀದಿಸಲಾಗುತ್ತದೆ. ಈ ಕ್ರಮದಿಂದಾಗಿ ಸ್ಥಳೀಯವಾಗಿ ಅವಲಂಬನೆಯಾಗುವ ಮೂಲಕ ಆತ್ಮ ನಿರ್ಭರ …
Read More »ಮೈಸೂರಲ್ಲಿ ದಸರಾ ಸಂಭ್ರಮ.. ರಾತ್ರಿ ಕಟ್ಟುನಿಟ್ಟಿನ ನೈಟ್ ಬೀಟ್ಗೆ DCP ಪಾಠ..!
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಹೈ-ಅಲರ್ಟ್ ಆಗಿದೆ. ರಾತ್ರಿ ವೇಳೆ ಗಸ್ತು ಹೆಚ್ಚಿಸಿ, ಅಪರಾಧ ಪ್ರಕರಣಗಳ ಕಡಿವಾಣಕ್ಕೆ ಮುಂದಾಗಿದೆ. ನಗರದಲ್ಲಿ ಕಟ್ಟುನಿಟ್ಟಿನ ನೈಟ್ ಬೀಟ್ ಕಾರ್ಯಾಚರಣೆ ನಡೆಯುತ್ತಿದ್ದು, ಸಾರ್ವಜನಿಕರಿಗೆ ಮೈಸೂರು ಪೊಲೀಸರು ಅಭಯ ನೀಡುತ್ತಿದ್ದಾರೆ. ಜೊತೆಗೆ ನೈಟ್ ಬೀಟ್ ಸಂಬಂಧ ವಿವಿಧ ಠಾಣಾ ಸಿಬ್ಬಂದಿಗೆ ಡಿಸಿಪಿ ಮಾರ್ಗದರ್ಶನ ನೀಡಿದ್ದಾರೆ. ಸಾರ್ವಜನಿಕವಾಗಿ ರಸ್ತೆಯಲ್ಲೇ ಸಿಬ್ಬಂದಿಗೆ ಮಾರ್ಗದರ್ಶನವನ್ನ ಡಿಸಿಪಿ ಗೀತಾಪ್ರಸನ್ನ ನೀಡಿದ್ದಾರೆ. ರಾತ್ರಿ …
Read More »ಮಹಾರಾಷ್ಟ್ರದಲ್ಲಿ ಮತ್ತೆ ಮಹಾ ಮಳೆ 13 ಸಾವು; 560ಕ್ಕೂ ಹೆಚ್ಚು ಮಂದಿಯ ರಕ್ಷಣೆ
ಮುಂಬೈ: ಗುಲಾಬ್ ಚಂಡಮಾರುತದ ಪ್ರಭಾವದಿಂದ ಮಹಾರಾಷ್ಟ್ರದ ಹಲವೆಡೆ ಸುರಿದ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಈವರೆಗೆ ಒಟ್ಟು 13 ಜನ ಸಾವನ್ನಪ್ಪಿದ್ದಾರೆ. ಮರಾಠವಾಡ, ಮಹಾರಾಷ್ಟ್ರದ ಉತ್ತರ ಭಾಗಗಳಲ್ಲಿ ಮಳೆಗೆ ಅಪಾರ ಹಾನಿ ಉಂಟಾಗಿದೆ. ಎನ್ಡಿಆರ್ಎಫ್ ಪಡೆ ಸಂಕಷ್ಟದಲ್ಲಿ ಸಿಲುಕಿದ್ದ 560 ಮಂದಿಯನ್ನ ರಕ್ಷಣೆ ಮಾಡಿದೆ. 200ಕ್ಕೂ ಹೆಚ್ಚು ರಾಸುಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಕೆಲವು ಮನೆಗಳಿಗೂ ಹಾನಿಯಾಗಿದೆ. ಭಾರೀ ಮಳೆ …
Read More »ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಬ್ಬ ಮಾಜಿ ಶಾಸಕ ಮತ್ತು ಒಬ್ಬ ಹಾಲಿ ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿಕೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಶೃಂಗೇರಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್ ಯಡಿಯೂರಪ್ಪ …
Read More »ತಾಲಿಬಾನ್ ಹೇಳಿಕೆ ನೀಡಿದ ಸಿದ್ದರಾಮಯ್ಯ ಮಾನಸಿಕತೆ ಬಗ್ಗೆ ನೋವಿದೆ- ಕೋಟ ಶ್ರೀನಿವಾಸ ಪೂಜಾರಿ
ಬೀದರ್: ರಾಷ್ಟ್ರ ಭಕ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾನಸಿಕತೆ ಬಗ್ಗೆ ನೋವಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಅವರು ಆರ್‌ಎಸ್‌ಎಸ್‌ನ್ನು ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಸಿದ್ದರಾಮಯ್ಯನವರು ಕಾಂಗ್ರೆಸ್‌ನ್ನು ಪರಂಪರೆಯನ್ನು ಒಪ್ಪಿಕೊಂಡವರು ಮತ್ತು ನೆಹರು ಅವರನ್ನು ಗೌರವಿಸುತ್ತಾರೆ ಎಂದಾದರೆ ಆರ್‌ಎಸ್‌ಎಸ್‌ನ್ನು …
Read More »ಲೇ ನೀವೆಲ್ಲ ಹೀರೋಗಳಾ…ಹಿಂದೂಗಳೇ ಎಲ್ಲೋಗಿದ್ದೀರಾ? ವಿಜಯಲಕ್ಷ್ಮಿ ಪರಿಸ್ಥಿತಿ ಕಂಡು ವಕೀಲ ಜಗದೀಶ್ ಗರಂ
ನಮ್ಮ ತಾಯಿ ಆರೋಗ್ಯ ಸರಿಯಿಲ್ಲ, ನಮ್ಮ ಅಕ್ಕನ ಆರೋಗ್ಯ ಸರಿಯಲ್ಲ, ಯಾರಾದರೂ ಸಹಾಯ ಮಾಡಿ ಎಂದು ಅಂಗಲಾಚಿ ಬೇಡುತ್ತಿದ್ದ ನಟಿ ವಿಜಯಲಕ್ಷ್ಮಿ ಅವರು ತನ್ನ ತಾಯಿಯನ್ನು ಕಳೆದುಕೊಂಡಿದ್ದಾರೆ. 75 ವರ್ಷದ ವಿಜಯಾ ಸುಂದರಂ ಅವರು ಸೆಪ್ಟಂಬರ್ 29ರಂದು ಕೊನೆಯುಸಿರೆಳೆದರು. ವಿಜಯಲಕ್ಷ್ಮಿ ಅವರ ತಾಯಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ತಾಯಿಯನ್ನು ಕಳೆದುಕೊಂಡ ನಟಿ ವಿಜಯಲಕ್ಷ್ಮಿ ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಇಂಥ ಕಷ್ಟದ ಪರಿಸ್ಥಿತಿಯಲ್ಲೂ, ಅಸಹಾಯಕ ಸ್ಥಿತಿಯಲ್ಲಿ ಕಣ್ಣೀರಿಡುತ್ತಿದ್ದ ಕುಳಿತ್ತಿದ್ದ ಹೆಣ್ಣುಮಗಳ ಸಹಾಯಕ್ಕೆ ಯಾರು …
Read More »2022ರ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಲಿದೆ: ನಡ್ಡಾ ವಿಶ್ವಾಸ
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದಲ್ಲಿ ‘ಡಬಲ್ ಎಂಜಿನ್’ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೊಂದಿಗೆ 2022ರ ವಿಧಾನಸಭಾ ಚುನಾವವಣೆಯಲ್ಲಿ ಬಿಜೆಪಿ ಪಕ್ಷ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರತಿಪಾದಿಸಿದರು. ಬುಧವಾರ ವರ್ಚುವಲ್ ಸಭೆಯಲ್ಲಿ ಪಕ್ಷದ ಶಕ್ತಿ ಕೇಂದ್ರದ ಸಂಚಾಲಕರು ಮತ್ತು ಉಸ್ತುವಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷದ ಚುನಾವಣಾ ಕಾರ್ಯಗಳಲ್ಲಿ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ನಿರ್ಣಾಯಕ ಪಾತ್ರವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ತಳಮಟ್ಟದ ಕಾರ್ಯಕರ್ತರನ್ನು ಬಲವರ್ಧನೆಗೊಳಿಸುವಂತೆ ಸೂಚಿಸಿದರು. ಬೂತ್ …
Read More »