Breaking News

ನಟನೆಯ ಕನಸು ಕಾಣುತ್ತಿದ್ದ ಮೌನಿ ರಾಯ್ ಇದಕ್ಕಾಗಿ ಮಾಡಿದ್ದೇನು ಗೊತ್ತಾ..?

ಬಾಲಿವುಡ್ ಕನಸು ಬೆನ್ನತ್ತಿ ಕಾಲೇಜು ವ್ಯಾಸಂಗಕ್ಕೆ ತಿಲಾಂಜಲಿ ಬಿಟ್ಟಿದ್ದ ಮೌನಿ ರಾಯ್ ಅಕ್ಷಯ್‌ ಕುಮಾರ್‌ ಜೊತೆಗೆ ‘ಗೋಲ್ಡ್’ ಚಿತ್ರದ ಮೂಲಕ ಬಾಲಿವುಡ್‌ಗೆ ಭರ್ಜರಿ ಎಂಟ್ರಿ ಕೊಟ್ಟು ಚಿತ್ರರಂಗದಲ್ಲಿ ಇದುವರೆಗೂ ಬಹು ದೂರ ಸಾಗಿ ಬಂದಿದ್ದಾರೆ. ಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಹೊಂದಿರುವ ಮೌನಿ, ಬಾಲಿವುಡ್‌ಗೆ ಬರಬೇಕಾದರೆ ತಾವೆಂತೆಂಥಾ ತ್ಯಾಗಗಳನ್ನು ಮಾಡಿದ್ದಾರೆ ಎಂಬ ಸಂಗತಿಯನ್ನು ಹಂಚಿಕೊಂಡಿದ್ದಾರೆ.   ನಟನೆಯ ಕನಸು ಕಾಣುತ್ತಿದ್ದ ಮೌನಿ, ಇದಕ್ಕಾಗಿ ತಮ್ಮ ಕಾಲೇಜು ವ್ಯಾಸಂಗ ತ್ಯಜಿಸಿ ಕನಸಿನ ನಗರಿಗೆ …

Read More »

ಲಂಚ ಪಡೆಯುವಾಗಲೇ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕುಂದಗೋಳ ಅಧಿಕಾರಿ

ಕುಂದಗೋಳ: ರೈತರೊಬ್ಬರ ಬಳಿ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾದ ಕಂದಾಯ ನಿರೀಕ್ಷಕರೊಬ್ಬರು ಎಸಿಬಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕುಂದಗೋಳ ಪಟ್ಟಣದ ಕಂದಾಯ ನಿರೀಕ್ಷಕ ಶಿವಾನಂದ ಬೆಮಣ್ಣವರ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ರೈತನ ಹೊಸ ಪಾಣಿಯನ್ನ ಮಾಡಿಕೊಡಲು ಅಧಿಕಾರಿ 35 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಅನ್ನೋ ಆರೋಪ ಕೇಳಿ ಬಂದಿತ್ತು. ಹೀಗಾಗಿ ರೈತ ಎಸಿಬಿ ಪೊಲೀಸರಿಗೆ ಅಧಿಕಾರಿ ವಿರುದ್ಧ ದೂರು ನೀಡಿದ್ದರಂತೆ. ಇಂದು ಕಚೇರಿಯಲ್ಲಿ ರೈತನಿಂದ ಅಧಿಕಾರಿ ಹಣ …

Read More »

ಬೆಳಗಾವಿ ಮಹಾನಗರ ಪಾಲಿಕೆಗೆ ಶಾಕ್ ಕೊಟ್ಟ ಹೈಕೋರ್ಟ್.. ಏನಿದು ಪ್ರಕರಣ..?

ಬೆಳಗಾವಿ: ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಅಲರವಾಡದಲ್ಲಿ ನಿರ್ಮಾಣವಾಗ್ತಿದ್ದ ಎಸ್​ಟಿಪಿ ಘಟಕ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಮಾಡಲು ಲೋಕಾಯುಕ್ತಕ್ಕೆ ಹೈಕೋರ್ಟ್ ಆದೇಶ ನೀಡಿದೆ. ಈಗಾಗಲೇ 2 ಕೋಟಿ ಖರ್ಚು ಮಾಡಿ ಬೇರೆ ಕಡೆ ನಿರ್ಮಾಣ ಮಾಡ್ತಿದೆ. ಮೊದಲು ಶುರುವಾಗಿದ್ದ ಜಾಗಕ್ಕೆ 2 ಕೋಟಿ ಖರ್ಚು ಮಾಡಿ ವ್ಯರ್ಥ ಮಾಡಿದೆ. ಬೆಳಗಾವಿ ಮ. ಪಾಲಿಕೆ ಈಗ ಬೇರೆ ಜಾಗದಲ್ಲಿ ನಿರ್ಮಾಣ ಮಾಡ್ತಿದೆ ಎನ್ನಲಾಗಿದೆ. ಪ್ರಕರಣದ ತನಿಖೆ …

Read More »

ಕುಡುಕುನ ವೇಷ ಧರಿಸಿ ಆರೋಪಿ ಬಂಧಿಸಿದ ಪೊಲೀಸರು.. 9 ವರ್ಷಗಳ ಹಿಂದಿನ ಕೇಸ್​ಗೆ ಕೊನೆಗೂ ಮುಕ್ತಿ

ಬೆಂಗಳೂರು: ಒಂಭತ್ತು ವರ್ಷದ ಹಿಂದಿನ ಪ್ರಕರಣವೊಂದನ್ನ ಪೊಲೀಸರು ಬೇಧಿಸಿದ್ದಾರೆ, ಕುಡುಕನ ಸೋಗಿನಲ್ಲಿ ಹೋಗಿ ಆರೋಪಿಯನ್ನ ಬಂಧಿಸಿದ್ದಾರೆ. ಟ್ರ್ಯಾಕ್ಟರ್ ಓಡಿಸುತ್ತಿದ್ದ ಆಂಥೋನಿ ಎಂಬಾತ ಆಟೋಗೆ ಡಿಕ್ಕಿಹೊಡೆದು ಪರಾರಿಯಾಗಿದ್ದನಂತೆ. ಘಟನೆಯಲ್ಲಿ 8 ವರ್ಷದ ಕೌಶಲ್ ಕುಮಾರ್​ ಎಂಬಾತ ಮೃತಪಟ್ಟಿದ್ದ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿಗೆ 10 ತಿಂಗಳು 15 ದಿನ ಜೈಲು ಶಿಕ್ಷೆಯಾಗಿತ್ತು. ಆತನಿಗೆ ಶಿಕ್ಷೆ ಪ್ರಕಟ ಆಗ್ತಿದ್ದಂತೆ ಆತ ತಲೆಮೆರೆಸಿಕೊಂಡಿದ್ದ. ಬಳಿಕ ವಿಳಾಸ ಬದಲಿಸಿಕೊಂಡು …

Read More »

ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ, ಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ. ಕ್ಯಾರಕೊಪ್ಪ ಗ್ರಾಮದ ಎನ್‌ಎಚ್ 4 ಬಳಿ ಅನಾಹುತ ಸಂಭವಿಸಿದೆ. ನಿದ್ರೆ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಇದ್ದ. ಹೀಗಾಗಿ ದುರ್ಘಟನೆ ನಡೆದಿರಬಹುದು ಅಂತಾ ಹೇಳಲಾಗಿದೆ. ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಗಾಯಗೊಂಡಿರುವವರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ …

Read More »

ಸರಕಾರಿ ಕಾಲೇಜುಗಳಲ್ಲಿ ದಾಖಲಾತಿ ದಾಖಲೆ!

ಬೆಂಗಳೂರು: ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ಪ್ರವೇಶಾತಿ ಹೊಸ ದಾಖಲೆ ಸೃಷ್ಟಿಸಿದ್ದು, ಉನ್ನತ ಶಿಕ್ಷಣದ ದಾಖಲಾತಿಯೂ ಹೆಚ್ಚಿದೆ. ದ್ವಿತೀಯ ಪಿಯುಸಿಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿ ರುವುದರಿಂದ ಪದವಿ, ವೃತ್ತಿಪರ ಕೋರ್ಸ್‌ಗಳಲ್ಲಿಯೂ ದಾಖಲಾತಿ ಹೆಚ್ಚಲಿದೆ ಎಂಬ ನಿರೀಕ್ಷೆಯನ್ನು ಈ ಹಿಂದೆಯೇ ಸರಕಾರ ಮಾಡಿತ್ತು. ಈಗ ಸರಕಾರಿ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಅಕ್ಟೋಬರ್‌ ಮೊದಲ ವಾರದ ವರೆಗೂ ಅವಕಾಶ ನೀಡಲಾಗಿದೆ. ರಾಜ್ಯದ 330 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈಗಾಗಲೇ …

Read More »

ರೈತರನ್ನು ಕಡೆಗಣಿಸಿದ ಸರ್ಕಾರಕ್ಕೆ ಉಳಿಗಾಲವಿಲ್ಲ: ಆಶ್ರಫ ಮಾಚಾರ

ಶಹಾಪುರ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಕರೆ ನೀಡಿದ ಭಾರತ್‌ ಬಂದ್‌ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಹಲವೆಡೆ ಅಂಗಡಿ ಮುಗ್ಗಟ್ಟು ತೆರೆದಿದ್ದವು. ಸಾರಿಗೆ ವ್ಯವಸ್ಥೆ ಸಾಮಾನ್ಯವಾಗಿತ್ತು. ನಂತರ ವಿವಿಧ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದ ಬಸವೇಶ್ವರ ವೃತ್ತದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಆಶ್ರಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಎಸ್ಡಿಪಿಐ ಕನ್ನಡಪರ …

Read More »

ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka …

Read More »

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

ಬೆಂಗಳೂರು: ಆಯುಧ ಪೂಜೆ ಒಳಗೆ ಪದಾಧಿಕಾರಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಆಯ್ಕೆಯಲ್ಲಿ ಯುವಕರು ಎಂದರೆ ತೀರಾ ಚಿಕ್ಕವರಲ್ಲ, ಅವರಿಗೆ ತಕ್ಕಮಟ್ಟಿಗೆ ಅನುಭವವೂ ಇರಬೇಕು. ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ. ಯಾರೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. ದೆಹಲಿಯಲ್ಲಿ ನಾನು ರಾಷ್ಟ್ರೀಯ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದೇನೆ ಎಂದು …

Read More »

ಆರ್ ಎಸ್ ಎಸ್, ಬಿಜೆಪಿಯವರದ್ದು ತಾಲಿಬಾನ್ ಸಂಸ್ಕೃತಿ:ಸಿದ್ದರಾಮಯ್ಯ

ಬಾದಾಮಿ: ಆರ್ ಎಸ್ ಎಸ್, ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ, ತಾಲಿಬಾನಿಗಳಿಗೆ ಹೇಗೆ ಮನುಷ್ಯತ್ವ, ಸಂಸ್ಕೃತಿ ಇಲ್ಲವೋ ಅದೇ ರೀತಿ ಆರ್ ಎಸ್ ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ ವರ್ತಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟು ಟೀಕೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕ ಸಿ ಟಿ ರವಿಯವರ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ಯಾರಿಗೆ ನಂಬಿಕೆ ಇಲ್ಲವೋ …

Read More »