Breaking News

ಬಂದ್ ಮಧ್ಯೆ ಸಿಎಂ ಬೊಮ್ಮಾಯಿ ಯಾವ ಕಾರ್ಯಕ್ರಮದಲ್ಲಿದ್ದಾರೆ? ಭಾರತ್ ಬಂದ್ ಬಗ್ಗೆ ಏನು ಹೇಳಿದರು?

ಹುಬ್ಬಳ್ಳಿ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು (ಸೆ.27) ಭಾರತ್ ಬಂದ್ಗೆ (Bharat Bandh) ಕರೆಕೊಟ್ಟಿದ್ದಾರೆ. ಸದ್ಯ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಯುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಬಂದ್ಗೆ ಬೆಂಬಲ ಸಿಕ್ಕಿಲ್ಲ. ಈ ಬಗ್ಗೆ ಪ್ರತಿಕ್ರಿಯಿ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕೊವಿಡ್ನಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಮಾಡಬಾರದು ಅಂತ ಹೇಳಿದ್ದಾರೆ. ಕಾಂಗ್ರೆಸ್ …

Read More »

ಚಾಮರಾಜನಗರ ಜಿಲ್ಲೆಯಲ್ಲೂ ಬಂದ್ ಆಚರಿಸಲು ಸಿದ್ಧತೆ

ಚಾಮರಾಜನಗರ: ಕೃಷಿ ಕಾನೂನುಗಳು, ಸರ್ಕಾರಿ ಸಂಸ್ಥೆಗಳ ಖಾಸಗೀಕರಣ, ಇಂಧನ, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ರೈತ ಸಂಘಟನೆಗಳು ಸೋಮವಾರ (ಸೆ.27) ಕರೆ ನೀಡಿರುವ ಭಾರತ ಬಂದ್ ಅನ್ನು ಜಿಲ್ಲೆಯಲ್ಲೂ ಅಚರಿಸಲು ರೈತ ಸಂಘಟನೆಗಳು, ವಿರೋಧ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಸಿದ್ಧತೆ‌ ನಡೆಸಿವೆ. ಚಾಮರಾಜನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಈಗಾಗಲೇ ರೈತ ಸಂಘಟನೆಗಳು ಹಾಗೂ ಇತರ ಸಂಘಟನೆಗಳ ಪ್ರತಿನಿಧಿಗಳು ಸಭೆ ಸೇರಿ ಬಂದ್‌ …

Read More »

, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ

ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ.   ಇಂದು ಭಾರತ​ ಬಂದ್​ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು …

Read More »

ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.

Read More »

ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್; ಆ ಮೂರು ಕೃಷಿ ಕಾಯ್ದೆಗಳು ಯಾವುದು..?

ಬೆಂಗಳೂರು: ಭಾರತ​ ಬಂದ್​ಗೆ ಮತ್ತೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿಯುತ್ತಿದ್ದಾರೆ. ಇದಕ್ಕಾಗಿ ಪೂರ್ವ ಸಿದ್ಧತೆ ಮಾಡ್ಕೊಂಡಿರೋ ರೈತರು, ದೇಶಾದ್ಯಂತ ಜಾಥಾ ನಡೆಸುತ್ತಿದ್ದಾರೆ. ಈ ಬಾರಿಯೂ ಪ್ರತಿಭಟನೆ, ಜಾಥಾ ಮೂಲಕವೇ ಕೇಂದ್ರ, ರಾಜ್ಯದ ವಿರುದ್ಧ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಸುಮಾರು ಒಂದೂವರೆ ವರ್ಷಗಳಿಂದ ಜನರ ಜೀವದ ಜೊತೆ ಜೀವನದ ಮೇಲೆ ಪರಿಣಾಮ ಬೀರಿರೋ ಕೊರೊನಾ …

Read More »

ದಯಮಾಡಿ ಬಂದ್​​ಗೆ ಸಹಕಾರ ನೀಡಿ ಸ್ವಾಮಿ- ಆಟೋ ಚಾಲಕನ ಕಾಲಿಗೆ ಬಿದ್ದ ರೈತ

ಧಾರವಾಡ: ‘ಭಾರತ್ ಬಂದ್’ ಹಿನ್ನೆಲೆ ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ ಬಸ್ ತೆಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನಾಕಾರರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭಾರತ ಬಂದ್ ಗೆ ಬೆಂಬಲ ನೀಡಲು ರೈತನೋರ್ವ ಆಟೋ ಚಾಲಕನ ಕಾಲಿಗೆ ಬಿದ್ದು ಮನವಿ ಮಾಡಿದ ಘಟನೆ ಆಲೂರು ವೆಂಕಟರಾವ್ ವೃತ್ತದಲ್ಲಿ ನಡೆದಿದೆ. ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ ದಯಮಾಡಿ ನಮಗೆ ಬೆಂಬಲ ನೀಡಿ ಎಂದು ರೈತ …

Read More »

ಭಾರತ್ ಬಂದ್’ ಮೊದಲೇ ಕೇಂದ್ರ ಸರ್ಕಾರಕ್ಕೆ ರೈತರು ನೀಡಿದ ಎಚ್ಚರಿಕೆ!?

ನವದೆಹಲಿ, ಸಪ್ಟೆಂಬರ್ 27: ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಲು ಆರಂಭಿಸಿ 10 ತಿಂಗಳೇ ಕಳೆದು ಹೋಗಿವೆ. ಮುಂದಿನ 10 ವರ್ಷಗಳವರೆಗೂ ರೈತರು ತಮ್ಮ ಹೋರಾಟ ಮುಂದುವರಿಸುವುದಕ್ಕೆ ಸಿದ್ಧರಿದ್ದೇವೆಯೇ ಹೊರತೂ ಕೇಂದ್ರ ಸರ್ಕಾರದ ಕಪ್ಪು ಕಾಯ್ದೆಗಳ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದಲೂ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪಂಜಾಬ್, ಹರಿಯಾಣ ಮತ್ತು …

Read More »

ಬೆಳಗಾವಿಯಲ್ಲಿ ಭಾರತ್ ಬಂದ್​ ಬಿಸಿ; ಬಸ್ ಸಂಚಾರ ತಡೆದು ಆಕ್ರೋಶ

ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ. ಇಂದು ಭಾರತ​ ಬಂದ್​ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು ಬಸ್​ …

Read More »

ರಾಜ್ಯದ ರೈತರ ಮಕ್ಕಳಿಗೆ ಮಹತ್ವದ ಮಾಹಿತಿ : `ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಭಾನುವಾರದಂದು ರೈತರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಂಬಂಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ಚಿಂತನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. …

Read More »

ಉ.ಪ್ರದೇಶ-ದೆಹಲಿ ಹೆದ್ದಾರಿ ತಡೆದ ರೈತರು -ಗಾಜಿಪುರ ಬಳಿ ಸಂಚಾರದಲ್ಲಿ ಅಸ್ತವ್ಯಸ್ತ

ನವದೆಹಲಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರತ್ ಬಂದ್ ಯಾಕೆ..? ಸುಮಾರು ಒಂದೂವರೆ ವರ್ಷಗಳಿಂದ ಜನರ ಜೀವದ ಜೊತೆ ಜೀವನದ ಮೇಲೆ ಪರಿಣಾಮ ಬೀರಿರೋ ಕೊರೊನಾ ಈಗಷ್ಟೇ ಹತೋಟಿಗೆ ಬಂದಿದೆ. ಜನರ ಬದುಕು ಸಹಜ ಸ್ಥಿತಿಗೆ ಮರಳಿದೆ. ವ್ಯಾಪಾರ ವಹಿವಾಟಿನಲ್ಲಿ ಪ್ರಗತಿ ಕಾಣ್ತಿದೆ. ಜನ ನೆಮ್ಮದಿಯ ಜೀವನ ಸಾಗಿಸ್ತಿರೋವಾಗಲೇ ಮತ್ತೆ …

Read More »