ಬೆಂಗಳೂರು: ಭಾರತ ಬಂದ್ಗೆ ಮತ್ತೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿಯುತ್ತಿದ್ದಾರೆ. ಇದಕ್ಕಾಗಿ ಪೂರ್ವ ಸಿದ್ಧತೆ ಮಾಡ್ಕೊಂಡಿರೋ ರೈತರು, ದೇಶಾದ್ಯಂತ ಜಾಥಾ ನಡೆಸುತ್ತಿದ್ದಾರೆ. ಈ ಬಾರಿಯೂ ಪ್ರತಿಭಟನೆ, ಜಾಥಾ ಮೂಲಕವೇ ಕೇಂದ್ರ, ರಾಜ್ಯದ ವಿರುದ್ಧ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಸುಮಾರು ಒಂದೂವರೆ ವರ್ಷಗಳಿಂದ ಜನರ ಜೀವದ ಜೊತೆ ಜೀವನದ ಮೇಲೆ ಪರಿಣಾಮ ಬೀರಿರೋ ಕೊರೊನಾ …
Read More »ದಯಮಾಡಿ ಬಂದ್ಗೆ ಸಹಕಾರ ನೀಡಿ ಸ್ವಾಮಿ- ಆಟೋ ಚಾಲಕನ ಕಾಲಿಗೆ ಬಿದ್ದ ರೈತ
ಧಾರವಾಡ: ‘ಭಾರತ್ ಬಂದ್’ ಹಿನ್ನೆಲೆ ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ ಬಸ್ ತೆಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನಾಕಾರರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭಾರತ ಬಂದ್ ಗೆ ಬೆಂಬಲ ನೀಡಲು ರೈತನೋರ್ವ ಆಟೋ ಚಾಲಕನ ಕಾಲಿಗೆ ಬಿದ್ದು ಮನವಿ ಮಾಡಿದ ಘಟನೆ ಆಲೂರು ವೆಂಕಟರಾವ್ ವೃತ್ತದಲ್ಲಿ ನಡೆದಿದೆ. ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ ದಯಮಾಡಿ ನಮಗೆ ಬೆಂಬಲ ನೀಡಿ ಎಂದು ರೈತ …
Read More »ಭಾರತ್ ಬಂದ್’ ಮೊದಲೇ ಕೇಂದ್ರ ಸರ್ಕಾರಕ್ಕೆ ರೈತರು ನೀಡಿದ ಎಚ್ಚರಿಕೆ!?
ನವದೆಹಲಿ, ಸಪ್ಟೆಂಬರ್ 27: ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಲು ಆರಂಭಿಸಿ 10 ತಿಂಗಳೇ ಕಳೆದು ಹೋಗಿವೆ. ಮುಂದಿನ 10 ವರ್ಷಗಳವರೆಗೂ ರೈತರು ತಮ್ಮ ಹೋರಾಟ ಮುಂದುವರಿಸುವುದಕ್ಕೆ ಸಿದ್ಧರಿದ್ದೇವೆಯೇ ಹೊರತೂ ಕೇಂದ್ರ ಸರ್ಕಾರದ ಕಪ್ಪು ಕಾಯ್ದೆಗಳ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದಲೂ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪಂಜಾಬ್, ಹರಿಯಾಣ ಮತ್ತು …
Read More »ಬೆಳಗಾವಿಯಲ್ಲಿ ಭಾರತ್ ಬಂದ್ ಬಿಸಿ; ಬಸ್ ಸಂಚಾರ ತಡೆದು ಆಕ್ರೋಶ
ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ. ಇಂದು ಭಾರತ ಬಂದ್ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು ಬಸ್ …
Read More »ರಾಜ್ಯದ ರೈತರ ಮಕ್ಕಳಿಗೆ ಮಹತ್ವದ ಮಾಹಿತಿ : `ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಭಾನುವಾರದಂದು ರೈತರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಂಬಂಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ಚಿಂತನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. …
Read More »ಉ.ಪ್ರದೇಶ-ದೆಹಲಿ ಹೆದ್ದಾರಿ ತಡೆದ ರೈತರು -ಗಾಜಿಪುರ ಬಳಿ ಸಂಚಾರದಲ್ಲಿ ಅಸ್ತವ್ಯಸ್ತ
ನವದೆಹಲಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರತ್ ಬಂದ್ ಯಾಕೆ..? ಸುಮಾರು ಒಂದೂವರೆ ವರ್ಷಗಳಿಂದ ಜನರ ಜೀವದ ಜೊತೆ ಜೀವನದ ಮೇಲೆ ಪರಿಣಾಮ ಬೀರಿರೋ ಕೊರೊನಾ ಈಗಷ್ಟೇ ಹತೋಟಿಗೆ ಬಂದಿದೆ. ಜನರ ಬದುಕು ಸಹಜ ಸ್ಥಿತಿಗೆ ಮರಳಿದೆ. ವ್ಯಾಪಾರ ವಹಿವಾಟಿನಲ್ಲಿ ಪ್ರಗತಿ ಕಾಣ್ತಿದೆ. ಜನ ನೆಮ್ಮದಿಯ ಜೀವನ ಸಾಗಿಸ್ತಿರೋವಾಗಲೇ ಮತ್ತೆ …
Read More »ಭಾರತ್ ಬಂದ್: ಏನಿರುತ್ತೆ.? ಏನಿರಲ್ಲ.? ಇಲ್ಲಿದೆ ಮಾಹಿತಿ
ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿರುವ ಭಾರತ ಬಂದ್ ಅಂಗವಾಗಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಭಾರತ ಬಂದ್ ಗೆ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಬಸ್, ಟ್ಯಾಕ್ಸಿ, ಆಟೋ ಸೇವೆಗಳು ಮುಂದುವರೆಯಲಿವೆ. ಅದೇ ರೀತಿ ಮೆಟ್ರೋ, ರೈಲು ಸಂಚಾರ ಇರುತ್ತದೆ. ಶಾಲಾ-ಕಾಲೇಜುಗಳು ಇರಲಿವೆ. ಬಂದ್, ಪ್ರತಿಭಟನೆ ಬಿಸಿ ತಟ್ಟುತ್ತಿದ್ದಂತೆಯೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. …
Read More »ಸುರೇಶ್ ಅಂಗಡಿ ಕೊರೊನಾಗೆ ಇಲ್ಲೇ ಚಿಕಿತ್ಸೆ ಪಡೆದಿದ್ದರೆ ಉಳಿಯುತಿದ್ದರೆನೋ, ಏಮ್ಸ್ ನಲ್ಲಿ ಚಿಕಿತ್ಸೆ ಪಡೆದರೂ ಬದುಕಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್
ಬೆಳಗಾವಿ: ಸುರೇಶ್ ಅಂಗಡಿ ಕೊರೊನಾಗೆ ಇಲ್ಲೇ ಚಿಕಿತ್ಸೆ ಪಡೆದಿದ್ದರೆ ಉಳಿಯುತಿದ್ದರೆನೋ, ಏಮ್ಸ್ ನಲ್ಲಿ ಚಿಕಿತ್ಸೆ ಪಡೆದರೂ ಬದುಕಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿಯ ಸಾವಗಾಂವದ ಅಂಗಡಿ ಕಾಲೇಜಿನಲ್ಲಿಡಲಾಗಿದ್ದ ದಿವಂಗತ ಸಂಸದ ಸುರೇಶ್ ಅಂಗಡಿ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುರೇಶ್ ನಮ್ಮನ್ನ ಅಗಲಿ ಒಂದು ವರ್ಷ ಆಗಿದೆ. ಆದರೆ ಅವರ ನೆನಪು ಇಗಲೂ ನಮ್ಮ ಮನಸ್ಸಿನಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದರು. ನಾನೇ ಅವರನ್ನು ಬೆಳಗಾವಿ …
Read More »ಬಂದ್ ಠುಸ್ ಪಟಾಕಿ – ಬೆಂಗಳೂರಿನಲ್ಲಿ ಎಂದಿನಂತೆ ಸಾಗುತ್ತಿದೆ ಜನ ಜೀವನ
ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ನೀಡಿದ ಬಂದ್ ಬೆಂಗಳೂರಿನಲ್ಲಿ ಠುಸ್ ಪಟಾಕಿಯಾಗಿದೆ. ನಗರದ ಜನ ಜೀವನ ಎಂದಿನಂತೆ ಸಾಗುತ್ತಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಜನ ಪ್ರತಿದಿನದಂತೆ ಸಂಚರಿಸುತ್ತಿದ್ದಾರೆ. ಪ್ರತಿಭಟನೆಯಿಂದ ಬಸ್ ತಡೆಯಬಾರದು ಎಂಬ ಕಾರಣಕ್ಕೆ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರೈಲ್ವೇಗೂ ಬಂದ್ ಬಿಸಿ ತಟ್ಟಿಲ್ಲ. ಪ್ರಯಾಣಿಕರ ಸೇವೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ಹೂವು, ಹಣ್ಣಿನ ಮಾರುಕಟ್ಟೆಗಳಿಗೆ ಜನ ಬರುತ್ತಿದ್ದು ಎಂದಿನಂತೆ …
Read More »ಬೆಳಗಾವಿ ಮಾದರಿ ಯಶಸ್ವಿಯಾದರೆ ಪ್ರತಿ ಪಾಲಿಕೆಯಲ್ಲೂ ಇ-ಗ್ರಂಥಾಲಯ ನಿರ್ಮಾಣ: ಸಿಎಂ
ಬೆಳಗಾವಿ: ಇಡೀ ಭಾರತವೇ ಬೆಳಗಾವಿಯಲ್ಲಿದೆ. ಇಲ್ಲಿಯ ಜನತೆ ಕನ್ನಡನಾಡಿನ ಬಗ್ಗೆ ಅಪಾರ ಅಭಿಮಾನ ಹೊಂದಿದವರು. ದೇಶಾಭಿಮಾನಿಗಳು. ಯಾವುದೇ ರೀತಿಯ ಸಂಕುಚಿತ ಭಾವನೆ ಹಾಗೂ ವಿಚಾರಗಳಿಗೆ ಇಲ್ಲಿ ಜಾಗವಿಲ್ಲ ಎಂಬುದನ್ನು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಶಹಾಪುರದ ಶಿವಾಜಿ ಉದ್ಯಾನದ ಬಳಿಯ ರವೀಂದ್ರ ಕೌಶಿಕ್ ಇ-ಗ್ರಂಥಾಲಯವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆ ಕರ್ನಾಟಕ ರಾಜ್ಯದ ಕಿರೀಟ ಪ್ರಾಯವಾಗಿದೆ. ಆದ್ದರಿಂದ …
Read More »