ಗೋಕಾಕ : ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರಂತಾ ಮಹಾನ್ ನಾಯಕರ ಪ್ರತಿಮೆಗಳಿಗೆ ಅವಮಾನ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಸುರಿದ ಪ್ರಕರಣದಿಂದ ಬೆಳಗಾವಿಯಲ್ಲಿ ಸಮಸ್ಯೆ ಉದ್ಭವವಾಗಿದೆ. ರಾಯಣ್ಣ ಪ್ರತಿಮೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದರು. ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ನಡೆದ ಎರಡು …
Read More »ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಬದ್ಧ, ಎಂಇಎಸ್ ಪುಂಡಾಟಿಕೆ ಸಹಿಸಲ್ಲ : ಸಿಎಂ ಬೊಮ್ಮಾಯಿ
ಬೆಳಗಾವಿ : ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ನಾವು ಸಿದ್ಧರಿದ್ದೇವೆ. ಗಡಿಯಲ್ಲಿ ಎಂಇಎಸ್ ಕಿಡಗೇಡಿಗಳ ಪುಂಡಾಟಿಕೆಯನ್ನು ನಾವು ಸಹಿಸಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. MES attack on Kannadigas : ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ತಡರಾತ್ರಿ ನಡೆದ ಗಲಾಟೆಯ ಬಗ್ಗೆ ಸಂಪೂರ್ಣ ಮಾಹಿತಿ ನನಗಿದೆ. ಪೊಲೀಸರು ಎಲ್ಲ ರೀತಿಯ ಕಾನೂನು ಕ್ರಮಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. …
Read More »ಕರ್ನಾಟಕ – ಮಹಾರಾಷ್ಟ್ರ ಮಧ್ಯ ಬಸ್ ಸಂಚಾರ ಸ್ಥಗಿತ
ಬೆಳಗಾವಿ – ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಡಾಟದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ – ಮಹಾರಾಷ್ಟ್ರ ಮಧ್ಯ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕರ್ನಾಟಕದಿಂದ ಯಾವುದೇ ಬಸ್ ಮಹಾರಾಷ್ಟ್ರ ಪ್ರವೇಶಿಸುತ್ತಿಲ್ಲ. ಹಾಗೆಯೇ ಮಹಾರಾಷ್ಟ್ರ ಬಸ್ ಗಳೂ ಕರ್ನಾಟಕದೊಳಗೆ ಪ್ರವೇಶಿಸುತ್ತಿಲ್ಲ. ಎರಡೂ ರಾಜ್ಯಗಳ ಬಸ್ ನಿಪ್ಪಾಣಿ ಗಡಿವರೆಗೆ ಬಂದು ಹಿಂದಿರುಗುತ್ತಿವೆ. ಇದರಿಂದಾಗಿ ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರು ಬಸ್ ಗಳಿಗೆ ಕಲ್ಲು ತೂರಾಟ ಮತ್ತಿತರ ಹಿಂಸಾಚಾರ ಕೃತ್ಯ ನಡೆಸಬಹುದೆನ್ನುವ ಹಿನ್ನೆಲೆಯಲ್ಲಿ ಬಸ್ …
Read More »ಬೆಳಗಾವಿಯಲ್ಲಿ ಬಂಧಿತರಾಗಿರುವ 27 ಜನರಿಗೆ 14 ದಿನ ನ್ಯಾಯಾಂಗ ಬಂಧನ,ಹಿಂಡಲಗಾ ಜೈಲಿಗೆ ಸ್ಥಳಾಂತರ
ಬೆಳಗಾವಿ – ಶುಕ್ರವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಬಂಧಿತರಾಗಿರುವ 27 ಜನರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನೆಲ್ಲ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ರಾತ್ರಿ ಪ್ರತಿಭಟನೆ ನೆಪದಲ್ಲಿ ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಲಾಗಿತ್ತು. ಒಂದು ವಾಹನಕ್ಕೆ ಬೆಂಕಿಯನ್ನೂ ಹಚ್ಚಲಾಗಿತ್ತು.ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ ಪೊಲೀಸರು 27 ಜನರನ್ನು ಬಂಧಿಸಿದ್ದಾರೆ. ಅವರನ್ನೆಲ್ಲ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆಲ್ಲ 14 ದಿನ ನ್ಯಾಯಾಂಗ ಬಂಧನ …
Read More »ಎಂಇಎಸ್ ಮುಖಂಡ ಶುಭಂ ಶೇಳ್ಕೆ, ಶ್ರೀರಾಮ ಸೇನೆಯ ರಮಾಕಾಂತ ಕೊಂಡೂಸ್ಕರ್ ಸೇರಿ 27 ಜನರನ್ನು ಬಂಧಿಸಲಾಗಿದೆ.
ಬೆಳಗಾವಿ – ಶುಕ್ರವಾರ ರಾತ್ರಿ ಬೆಳಗಾವಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಎಂಇಎಸ್ ಮುಖಂಡ ಶುಭಂ ಶೇಳ್ಕೆ, ಶ್ರೀರಾಮ ಸೇನೆಯ ರಮಾಕಾಂತ ಕೊಂಡೂಸ್ಕರ್ ಸೇರಿ 27 ಜನರನ್ನು ಬಂಧಿಸಲಾಗಿದೆ. ಆದರೆ ಮಾಜಿ ಮೇಯರ್ ಶಿವಾಜಿ ಸುಂಠಕರ್ ಮತ್ತು ಶಿವಸೇನೆ ಜಿಲ್ಲಾಧ್ಯಕ್ಷ ಪ್ರಕಾಶ ಶಿರೋಳ್ಕರ್ ಅವರನ್ನು ಕೇವಲ ವಿಚಾರಣೆಗೊಳಪಡಿಸಲಾಗಿದೆ., ಬಂಧಿಸಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.ಘಟನೆ ಸಂಬಂಧ ಕೆಲವರನ್ನು ವಿಚಾರಣೆಗೊಳಪಡಿಸಿ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಆದರೆ ಅಧಿಕೃತವಾಗಿ 27 ಜನರನ್ನು ಮಾತ್ರ ಬಂಧಿಸಲಾಗಿದೆ. ಬಂಧಿತರಲ್ಲಿ …
Read More »ಬೆಳಗಾವಿಯಲ್ಲಿ ಪುಂಡಾಟಿಕೆ;ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಷ್ಟ್ರಭಕ್ತರ ಪ್ರತಿಮೆಗಳನ್ನು ಧ್ವಂಸಗೊಳಿಸುವುದು ಸರಿಯಲ್ಲ. ಕೆಲವೇ ಕಲ ಪುಂಡರು ಈ ರೀತಿ ಮಾಡುತ್ತಿದ್ದಾರೆ. ಅಂತವರನ್ನು ಸದೆಬಡಿಯುವುದಾಗಿ ತಿಳಿಸಿದರು. ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದರು.
Read More »ಮೈಸೂರಿನಲ್ಲಿ ಶಾಕ್ ನೀಡಿದ ನಕಲಿ ನಂದಿನಿ ತುಪ್ಪ
ಮೈಸೂರು: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪವನ್ನು ತಯಾರಿಸಿ ಮಾರಾಟ ಮಾಡುವುದರೊಂದಿಗೆ ಕೆಎಂಎಫ್ ಗೆ ಕಪ್ಪು ಚುಕ್ಕೆ ನೀಡಿದ್ದಲ್ಲದೆ, ಕೋಟ್ಯಂತರ ರೂ. ಅಕ್ರಮ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ. ಎಪಿಎಂಸಿ ಬಳಿಯ ಹೊಸಹುಂಡಿ ಗ್ರಾಮದಲ್ಲಿದ್ದ ನಕಲಿ ನಂದಿನಿ ತುಪ್ಪ ತಯಾರಿಕಾ ಗೋದಾಮು ಪತ್ತೆಯಾಗಿದ್ದು, ಈ ನಕಲಿ ತುಪ್ಪದ ಸೃಷ್ಟಿಕರ್ತ ಯಾರು ಎಂಬುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ವಿಷಯ ತಿಳಿದು ಹ್ಯೂಮನ್ ರೈಟ್ಸ್ ತಂಡದ ಉಪಾಧ್ಯಕ್ಷ ಪ್ರದೀಪ್ ನೇತೃತ್ವದಲ್ಲಿ ದಾಳಿ ಮಾಡಿದಾಗ …
Read More »ಭಿಕ್ಷಾಟನೆ ಮುಕ್ತ ಕರ್ನಾಟಕ ಮಾಡಲು ಕ್ರಮ : ಕೋಟಾ ಶ್ರೀನಿವಾಸ ಪೂಜಾರಿ
ಬೆಂಗಳೂರು : ಕರ್ನಾಟಕ ವನ್ನು ಭಿಕ್ಷಾಟನೆ ಮುಕ್ತ ಮಾಡಲು ಮುಂದಿನ ವಾರ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ವಿಧಾನ ಪರಿಷತ್‍ನಲ್ಲಿ ಸದಸ್ಯ ಕೆ.ಗೋವಿಂದರಾಜು ಅವರ ಪ್ರಶ್ನೆ ಕೇಳಿ, 2021ರಲ್ಲಿ ಆರು ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿ ಮಕ್ಕಳನ್ನು ರಕ್ಷಿಸಲಾಗಿದೆ. ಭಿಕ್ಷಾಟನೆ ನಿರ್ಮೂಲನೆಗಾಗಿ ಬಿಬಿಎಂಪಿ 280 ಕೋಟಿ ಸೇರಿ ಸುಮಾರು 400 …
Read More »ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ‘ಗುಡ್ ನ್ಯೂಸ್’ : ‘ಮೊಟ್ಟೆ’ ತಿನ್ನದ ಮಕ್ಕಳಿಗೆ ಸಿಗುತ್ತೆ ಹಾಲು ..!
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆಯ ಬದಲಿಗೆ ಬಾಳೆಹಣ್ಣು ನೀಡುವುದರ ಜೊತೆಗೆ ಶೇಂಗಾಚಿಕ್ಕಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.ಇದೀಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶ ಒಳಗೊಂಡಿರುವ ಕಾರಣಕ್ಕೆ ಮಕ್ಕಳಿಗೆ …
Read More »ಬೆಳಗಾವಿಯಲ್ಲಿ ಮತ್ತೆ `MES’ ಪುಂಡಾಟ : ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ!
ಬೆಳಗಾವಿ : ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಆರೋಪ ಕೇಳಿಬಂದಿತ್ತು. ಈ ಘಟನೆ ಖಂಡಿಸಿ ಹಿಂದೂಪರ ಸಂಘಟನೆಳು ಪ್ರತಿಭಟನೆ ನಡೆಸಿದ್ದು. ಈ ವೇಳೆ ಎಂಇಎಸ್ ಪುಂಡಾಟ ನಡೆಸಿದ್ದು, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳು …
Read More »
Laxmi News 24×7