Breaking News

ದೈಹಿಕ ಹಲ್ಲೆಗೈದು ಸಹಿ ಪಡೆಯಲಾಗಿದೆ, ದಾಖಲಿಸಿರುವ ಹೇಳಿಕೆಗಳಿಗೆ ಸಮ್ಮತಿಯಿಲ್ಲ: ಡಿಆರ್‌ಐ ಎಡಿಜಿಗೆ ರನ್ಯಾ ರಾವ್ ಪತ್ರ

ಬೆಂಗಳೂರು : ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರನ್ಯಾ ರಾವ್‌ ಅವರು ಜೈಲಿನಿಂದಲೇ ಡಿಆರ್‌ಐ ಅಡಿಷನಲ್ ಡೈರಕ್ಟರ್ ಜನರಲ್‌ಗೆ ಸುದೀರ್ಘವಾದ ಮನವಿ ಪತ್ರ ಬರೆದಿದ್ದಾರೆ. ಏಳು ಅಂಶಗಳ ಕುರಿತು ಪ್ರಸ್ತಾಪಿಸಿ ರನ್ಯಾ ರಾವ್ ಬರೆದಿರುವ ಮನವಿ ಪತ್ರವನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಡಿಆರ್‌ಐ ಎಡಿಜಿಯವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ರನ್ಯಾ ರಾವ್ ಮನವಿ ಪತ್ರದಲ್ಲೇನಿದೆ ? ದುಬೈನಿಂದ ಬಂದಿಳಿದ ನನ್ನ ವಿರುದ್ಧ ಚಿನ್ನ …

Read More »

ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ವಾಹನ

ಬೆಳಗಾವಿ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ನಡೆದಿದೆ. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಧಾರವಾಡ ಮೂಲದ ಪರಪ್ಪ ಬಾಳಿಕಾಯಿ, …

Read More »

ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ.

ಬೆಂಗಳೂರು : “ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ,‌ ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ …

Read More »

ಕೆಪಿಸಿಸಿ ಅಧ್ಯಕ್ಷರು ಕರೆದಾಗ ಭಾಗವಹಿಸಲೇಬೇಕಾಗುತ್ತದೆ,:ಸತೀಶ್ ಜಾರಕಿಹೊಳಿ

ಬೆಂಗಳೂರು, 15 ಮಾರ್ಚ್ : ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೊಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಆಯೋಜಿಸಿದ ಔತಣಕೂಟದಲ್ಲಿ (Dinner party) ಭಾಗವಹಿಸಿದ್ದರ ಬಗ್ಗೆ ಮಾತಾಡುತ್ತಾ, ಅದರಲ್ಲಿ ಅಂಥ ವಿಶೇಷವೇನೂ ಇಲ್ಲ, ಕೆಪಿಸಿಸಿ ಅಧ್ಯಕ್ಷರು ಕರೆದಾಗ ಭಾಗವಹಿಸಲೇಬೇಕಾಗುತ್ತದೆ, ಬಿಜೆಪಿ ನಾಯಕರು ಹೇಳುವ ಮಾತುಗಳನ್ನು ನಂಬುವ ಅವಶ್ಯಕತೆ ಇಲ್ಲ, ಯಾಕೆಂದರೆ ಅವರು ಸಿದ್ದರಾಮಯ್ಯ ಎಷ್ಟುದಿನ ಮುಖ್ಯಮಂತ್ರಿಯಾಗಿರುತ್ತಾರೆ ಅಂತ ಹೇಳಿಕೆಗಳನ್ನು ನೀಡುತ್ತಿರುತ್ತಾರೆ, ಇವತ್ತೊಂದು ಹೇಳುತ್ತಾರೆ, ನಾಳೆ ಮತ್ತೊಂದು ಹೇಳುತ್ತಾರೆ ಎಂದು ಹೇಳಿದರು.

Read More »

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ

ಬೆಂಗಳೂರು : ಸಿಐಡಿ ಕರ್ನಾಟಕ, ಇನ್ಫೋಸಿಸ್ ಫೌಂಡೇಶನ್ ಆ್ಯಂಡ್ ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್ ಇಂಡಿಯಾ (ಡಿಎಸ್‌ಸಿಐ) ದಿಂದ ಜಂಟಿಯಾಗಿ ಸ್ಥಾಪಿಸಲ್ಪಟ್ಟಿರುವ ಸೈಬರ್ ಕ್ರೈಂ ಇನ್ವೆಸ್ಟಿಗೇಷನ್​ ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್ (CCITR) ವತಿಯಿಂದ ಒಂದು ದಿನದ ಸೈಬರ್ ಅಪರಾಧ ತನಿಖಾ ಶೃಂಗಸಭೆ (ಸಿಐಡಿ ಡಿಕೋಡ್-2025)ನ್ನ ಇಂದು ಆಯೋಜಿಸಲಾಗಿತ್ತು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಶೃಂಗಸಭೆಯಲ್ಲಿ ಹೆಚ್ಚುತ್ತಿರುವ ಹೊಸ ಸೈಬರ್ ಅಪರಾಧಗಳು, ಜ್ಞಾನದ ಹಂಚಿಕೆ, ಕೌಶಲ್ಯಾಭಿವೃದ್ಧಿ ಹಾಗೂ ಸಹಯೋಗದ ಮೂಲಕ ಪರಿಹರಿಸುವ …

Read More »

ಮಂಗೇಶ ಪವಾರ, ವಾಣಿ‌ ವಿಲಾಸ ಜೋಶಿ‌ ಬೆಳಗಾವಿ ಮೇಯರ್ ಹುದ್ದೆ : ಮತ್ತೆ ಚುಕ್ಕಾಣಿ ‌ಹಿಡಿದ ಬಿಜೆಪಿ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಬಹುಮತದಿಂದ ಆಯ್ಕೆಯಾದರು. ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ‌ ಚುಕ್ಕಾಣಿ ‌ಹಿಡಿಯುವಲ್ಲಿ ಯಶಸ್ವಿಯಾಯಿತು. ಮರಾಠಿಗರಾದ ಮಂಗೇಶ ಪವಾರ 41ನೇ ವಾರ್ಡ್ ಸದಸ್ಯರಾಗಿದ್ದು, ವೃತ್ತಿಯಲ್ಲಿ ನೇಕಾರಿಕೆ ಮಾಡುತ್ತಾರೆ‌. ಇನ್ನು …

Read More »

“ಸರ್ಕಾರಿ ನೌಕರರು ಮಧ್ಯಾಹ್ನ 12 ರಿಂದ 3ರ ವರೆಗೆ ಕ್ಷೇತ್ರ ಭೇಟಿ ಮಾಡಬಾರದು.:ದಿನೇಶ್​ ಗುಂಡೂರಾವ್

ರಾಯಚೂರು : “ಬೇಸಿಗೆ ಬಿಸಿಲಿನ ತಾಪ ಹೆಚ್ಚಳ ಹಿನ್ನೆಲೆ ಸರ್ಕಾರಿ ನೌಕರರ ಕೆಲಸದ ಸಮಯ ಬದಲಾವಣೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾ‌ನವಾಗಲಿದ್ದು, ಬಿಸಿಲು ಇರುವುದರಿಂದ ಮಧ್ಯಾಹ್ನದ ಹೊತ್ತು ಕ್ಷೇತ್ರ ಭೇಟಿ ಮಾಡುವುದನ್ನು ಬಿಡಬೇಕು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಜಿಲ್ಲೆಯ ಮಾನವಿ ಪಟ್ಟಣದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ಮೇಳದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರಿ ನೌಕರರು ಮಧ್ಯಾಹ್ನ 12 ರಿಂದ …

Read More »

ಅರಳಿಮಟ್ಟಿ ಸರಕಾರಿ ಪ್ರಾಥಮಿಕ ಶಾಲೆ ಈಗ ಪಿಎಂ ಶ್ರೀ ಯೋಜನೆಗೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೊಂದು ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯು ಆಯ್ಕೆಯಾಗಿದ್ದು, ತಾಲ್ಲೂಕಿನ ಅರಳಿಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೇಂದ್ರ ಪುರಸ್ಕೃತ ಪಿಎಂಶ್ರೀ ಶಾಲೆಯನ್ನಾಗಿ ಪರಿವರ್ತನೆಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ದೇಶದಲ್ಲಿನ ಗ್ರಾಮೀಣ ಪ್ರದೇಶದ ಶಾಲೆಗಳನ್ನು ಕೇಂದ್ರೀಯ ಶಾಲೆಗಳ ರೀತಿಯಲ್ಲಿ ಸ್ಥಾಪಿಸಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಪಿಎಂಶ್ರೀ ಹೆಸರಿನ ಶಾಲೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮೂಡಲಗಿ ವಲಯದಲ್ಲಿ ಒಟ್ಟು …

Read More »

ಧಾರವಾಡ ಕಲಘಟಗಿ ರಸ್ತೆಯ ನುಗ್ಗಿಕೇರಿ ಬಳಿ ಸರಣಿ ಅಪಘಾತ,

ಧಾರವಾಡ ಕಲಘಟಗಿ ರಸ್ತೆಯ ನುಗ್ಗಿಕೇರಿ ಬಳಿ ಸರಣಿ ಅಪಘಾತ, ಹಲವರಿಗೆ ಗಾಯ…. ಅಪಘಾತದಲ್ಲಿ ಕಾರ್ ಅಟೋ ಬೈಕ್‌ಗೆ ಡ್ಯಾಮೇಜ್ ಅಟೋ ಬೈಕ್ ಹಾಗೂ ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಅಟೋ ಚಾಲಕರಿಗೆ ಗಾಯವಾಗಿ ಕಾರ್‌ನಲ್ಲಿದವರು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡ ಹೊರವಲಯದ ಕಲಘಟಗಿ ರಸ್ತೆ ನುಗ್ಗಿಕೇರಿಯಲ್ಲಿ ನಡೆದಿದೆ. ಅಟೋ ಮತ್ತು ಬೈಕ್ ನಡುವೆ ಮೊದಲು‌ ಅಪಘಾತ ನಡೆದಿದ್ದು, ಈ ವೇಳೆ ಹಿಂಬದಿಯೇ ಬರುತ್ತಿದ್ದ ಕಾರ …

Read More »

ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು*

ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ* *ಬೆಂಗಳೂರು:* ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಮಹಿಳೆಯರ ಪರ ಇರುವ ಪಕ್ಷ, ಮಹಿಳೆಯರ, ಯುವಕರ, …

Read More »