ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎರಡು ವರ್ಷದ ಬಾಲಕಿ ಪತ್ತೆಯಾಗಿದ್ದಾಳೆ. ಬೆತ್ತಲೆ ಸ್ಥಿತಿಯಲ್ಲಿದ್ದ ಬಾಲಕಿಯ ಮೈಮೇಲೆ ಸಿಗರೇಟ್ ನಿಂದ ಸುಟ್ಟ ಗಾಯಗೊಳಿಸಲಾಗಿದೆ. ಮಗುವಿನ ಮೈತುಂಬ ಸುಟ್ಟ ಗಾಯಗಳಾಗಿದ್ದು, ಬಾಲಕಿ ಎರಡು ದಿನಗಳ ಕಾಲ ಗದ್ದೆಯಲ್ಲಿ ನರಳಾಡಿದ್ದಾಳೆ. ನರಳಾಟದ ಸದ್ದು ಕೇಳಿ ಕಬ್ಬಿನ ಗದ್ದೆಯಲ್ಲಿ ಹುಡುಕಾಡಿದ ಗ್ರಾಮಸ್ಥರು ಅಮಾನವೀಯ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ಬಾಲಕಿಯನ್ನು ರಕ್ಷಿಸಿ ಅಥಣಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ಹೆಚ್ಚಿನ …
Read More »ಅನ್ನಭಾಗ್ಯ’ ಯೋಜನೆ: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಿಸಲು ಸರ್ಕಾರ ಮತ್ತೊಂದು ಕ್ರಮಕೈಗೊಂಡಿದೆ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೋನಿಗಳು, ಹಾಡಿಗಳು, ತಾಂಡಾಗಳು, ಗೊಲ್ಲರಹಟ್ಟಿ ಕಾಲೋನಿಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 10,89,445 ಅಂತ್ಯೋದಯ, 1,15,02,798 ಬಿಪಿಎಲ್ ಮತ್ತು 21,44,006 ಎಪಿಎಲ್ ಕಾರ್ಡ್ ದಾರರಿದ್ದು, ಪಡಿತರ ಪಡೆದುಕೊಳ್ಳಲು ಅನುಕೂಲವಾಗುವಂತೆ 100 ರೇಷನ್ ಕಾರ್ಡ್ ಗಳಿಗೆ ಒಂದರಂತೆ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಾಗುವುದು ಎನ್ನಲಾಗಿದೆ.
Read More »ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಆರೋಪ: ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್
ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮ 69ರ ಅಡಿಯ ಚರ್ಚೆಯ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ, ಹೈದರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಆದಾಗ ಜನರು ಖುಷಿಪಟ್ಟಿದ್ದರು. ಆದರೆ ಯವುದೇ ರೀತಿಯ ಅಭಿವೃದ್ಧಿ ಆಗಿಲ್ಲ. ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಈವರೆಗೆ ರಚನೆ ಆಗಿಲ್ಲ. ಯಾವುದೇ ಅಧ್ಯಕ್ಷರ ನೇಮಕಾತಿಯೂ ಆಗಿಲ್ಲ, ಒಂದೇ …
Read More »BIG NEWS: ಬೆಲೆ ಏರಿಕೆ ಮಾಡಿ ಜನರ ರಕ್ತ ಹೀರುತ್ತಿರುವ ಬಿಜೆಪಿ ಸರ್ಕಾರ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ದಪ್ಪ ಚರ್ಮದ ಬಿಜೆಪಿ ಸರ್ಕಾರಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿರುವ ಜನರ ಸಂಕಷ್ಟ ಅರ್ಥವಾಗುತ್ತಿಲ್ಲ. ಜನರ ಧ್ವನಿಯಾಗಿ ನಾವು ಹೋರಾಟ ಮಾಡುತ್ತಿದ್ದರೆ ಕಾಂಗ್ರೆಸ್ ನವರು ನಾಟಕವಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ರಕ್ತ ಕುಡಿಯುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿ ಸರ್ಕಾರ ದಪ್ಪ ಚರ್ಮದ ಸರ್ಕಾರ. ಬೆಲೆ ಏರಿಕೆಯನ್ನು ಬಹಳ ಲಘುವಾಗಿ …
Read More »ಎತ್ತಿನಗಾಡಿ ಚಲೋ ಆಯ್ತು, ಸೈಕಲ್ ಜಾಥಾ ಆಯ್ತು, ಇದೀಗ ಕಾಂಗ್ರೆಸ್ನಿಂದ ಟಾಂಗಾ ಜಾಥಾ!
ಬೆಂಗಳೂರು: ಬೆಲೆ ಏರಿಕೆಯನ್ನೇ ಅಸ್ತ್ರವಾಗಿ ಬಳಸಿಕೊಂಡ ಕೈ ನಾಯಕರು, ಮೇಲಿಂದ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಎತ್ತಿನಗಾಡಿ ಚಲೋ, ಸೈಕಲ್ ಜಾಥಾ ಬಳಿಕ, ಇದೀಗ ಕಾಂಗ್ರೆಸ್ನಿಂದ ಟಾಂಗಾ ಜಾಥಾ ನಡೆಯುತ್ತಿದೆ. ಮೂರನೇ ಬಾರಿ ವಿಧಾನಸೌಧಕ್ಕೆ ಟಾಂಗದಲ್ಲಿ ಬರುವ ಮೂಲಕ ವಿನೂತನ ಹೋರಾಟಕ್ಕೆ ಕೈ ನಾಯಕರು ಮುಂದಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಾಥಾ ನಡೆಯುತ್ತಿದೆ. ಟಾಂಗ ಜಾಥಾ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …
Read More »ಸರ್ಕಾರಿ ಶಾಲೆಯಲ್ಲಿ ಕಳ್ಳತನ!
ಕೊಪ್ಪಳ : ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಬರಲಿ ಎಂಬ ನಿಟ್ಟಿನಲ್ಲಿ ಕಂಪ್ಯೂಟರ್ ಲ್ಯಾಬ್ ಗಳನ್ನು ತೆರೆಯಲಾಗಿದೆ. ಆದರೆ, ಖದೀಮರು ಮಾತ್ರ ಅವುಗಳನ್ನು ಬಿಡದೆ ದೋಚಿರುವ ಘಟನೆ ನಡೆದಿದೆ. ಸರ್ಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಲ್ಯಾಬ್ ಬಾಗಿಲು ಮುರಿದು ಒಳಗೆ ನುಗ್ಗಿದ್ದ ಖದೀಮರು 10 ಕಂಪ್ಯೂಟರ್, ಒಂದು ಲ್ಯಾಪ್ ಟಾಪ್ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಯಲಬುರ್ಗಾ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ …
Read More »ಚಿಕ್ಕಮಗಳೂರಿನಲ್ಲಿ ದಾರುಣ ಘಟನೆ; ಹೆತ್ತಮ್ಮನನ್ನ ಕೊಲೆಗೈದು ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಮಗ
ಚಿಕ್ಕಮಗಳೂರು: ಹೆತ್ತಮ್ಮನನ್ನು ಮಗನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ದಾರುಣ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ. ಸುಧಾ( 48 ) ಕೊಲೆಯಾದ ಮಹಿಳೆಯಾಗಿದ್ದು, ಮಗ ದುಶ್ಯಂತ್ (28) ಹೆತ್ತಮ್ಮನನ್ನೇ ಕೊಲೆ ಮಾಡಿದ್ದಾನೆ. ಇಂದು ಮಧ್ಯಾಹ್ನ ಘಟನೆ ನಡೆದಿದೆ ಎನ್ನಲಾಗಿದ್ದು, ಸಂಜೆ 5.45ರ ವೇಳೆಗೆ ಸುಧಾ ಅವರ ಕಿರಿಯ ಪುತ್ರ ಸಂತೋಷ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬುದು ಇನ್ನೂ ತಿಳಿದು ಬಂದಿಲ್ಲ. …
Read More »ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯ ತೀವ್ರಗೊಳಿಸಿದ್ದೇವೆ:ಆಯುಕ್ತ ರಂದೀಪ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೂ ಲಸಿಕೆ ಪಡೆಯದವರನ್ನು ಗುರುತಿಸಿ ಪಾಲಿಕೆ ಸಂಚಾರಿ ಲಸಿಕಾ ತಂಡವು ಮನೆ-ಮನೆಗೆ ತೆರಳಿ ಲಸಿಕೆ ನೀಡುತ್ತಿದೆ. ವಿಶೇಷವಾಗಿ ಮನೆಯಿಂದ ಹೊರಗೆ ಬಾರದಂತಹ ಹಿರಿಯರು, ವಿಕಲಚೇತನರು ಹಾಗೂ ವೃದ್ಧಾಶ್ರಮಗಳಿಗೆ ಸಂಚಾರಿ ಮೊಬೈಲ್ ತಂಡ ಭೇಟಿ ನೀಡಿ ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಕೊಳಗೇರಿ ಪ್ರದೇಶದ ಮನೆ-ಮನೆಗೆ ಭೇಟಿ ನೀಡಿ ಲಿಸಕೆ ಪಡೆಯದವರಿಗೆ ಜಾಗೃತಿ ಮೂಡಿಸಿ ಲಸಿಕೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ …
Read More »35 ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ
ಜನವಾಡ: ಅರಳು ಸ್ವಯಂ ಸೇವಾ ಸಂಸ್ಥೆಯು ಆಶಾ ಫಾರ್ ಎಜುಕೇಷನ್ ಸಂಸ್ಥೆ ನೆರವಿನಡಿ ಬೀದರ್‍ನ ನಾವದಗೇರಿ, ಕಮಠಾಣ, ಯದಲಾಪುರ ಹಾಗೂ ಕಾಪಲಾಪುರ ಗ್ರಾಮಗಳ 35 ಬಡ ಕುಟುಂಬಗಳಿಗೆ ಉಚಿತ ಆಹಾರಧಾನ್ಯ ಕಿಟ್ ವಿತರಿಸಿತು. ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಹಿಂದುಗಡೆಯ ಸಂಸ್ಥೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅರಳು ಸಂಸ್ಥೆ ನಿರ್ದೇಶಕ ಡಾ. ಕೆ.ಟಿ. ಮೆರಿಲ್ ಅವರು, ಕೋವಿಡ್ ಪ್ರಯುಕ್ತ ತಲಾ ಐದು ಕೆ.ಜಿ ಅಕ್ಕಿ, …
Read More »ಲಸಿಕಾ ಕೇಂದ್ರಕ್ಕೆ ಜಿಲ್ಲಾ ಸಮೀಕ್ಷಣಾಧಿಕಾರಿ ಬೇಟಿ, ಪರಿಶೀಲನೆ
ಬಾಗಲಕೋಟೆ: ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್-19 ಲಸಿಕಾ ಮೇಳದ ಹಿನ್ನಲೆಯಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಅವರು ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರಕಾರದ ಸೂಚನೆ ಮೇರೆಗೆ ಲಸಿಕಾಕರಣ ಪ್ರಗತಿಯನ್ನು ವೃದ್ದಿಸುವ ನಿಟ್ಟಿನಲ್ಲಿ ಪ್ರತಿ ಬುಧವಾರ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತಿದ್ದು, ಲಸಿಕಾಕರಣ ಪರಿಶೀಲನೆಗೆ ಬುಧವಾರ ಬಾದಾಮಿ ತಾಲೂಕಿನಲ್ಲಿ ಸ್ಥಾಪಿಸಲಾದ ವಿವಿಧ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೇಟಿ ಸಮಯದಲ್ಲಿ ಮುಖ್ಯ …
Read More »