ಗದಗ: ಸರ್ಕಾರಿ ಪ್ರೌಢಶಾಲೆಯಲ್ಲಿ 6 ವರ್ಷದಿಂದ ಇಂಗ್ಲಿಷ್ ಶಿಕ್ಷಕರಿಲ್ಲ. ‘ಸರ್ ನಮ್ಮ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನಿಯೋಜನೆ ಮಾಡಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾಲು ಹಿಡಿದು ವಿದ್ಯಾರ್ಥಿಗಳು ಗೋಳಾಡಿದ ಘಟನೆ ಗದಗದಲ್ಲಿ ನಡೆದಿದೆ. ಗದಗ ತಾಲೂಕಿನ ಕದಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 6 ವರ್ಷದಿಂದ ಇಂಗ್ಲಿಷ್ ಶಿಕ್ಷಕರ ಕೊರತೆ ಇದೆ. ಹೀಗಾಗಿ ಇಂಗ್ಲಿಷ್ ಶಿಕ್ಷಕರ ನೇಮಕ ಮಾಡಿ ಎಂದು ಗದಗ ಬಿಇಒ ಎಂ.ಎ.ರಡ್ಡೇರ್‌ಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದೇ ವೇಳೆ ಬಿಇಒಗೆ …
Read More »ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಘೋಷಿಸಿದ ಜಮೀರ್ ಅಹ್ಮದ್
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಮೃತಪಟ್ಟ ಎರಡು ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದಾರೆ. ನ್ಯೂ ತರಗುಪೇಟೆಯಲ್ಲಿ ನಿಗೂಢ ಸ್ಫೋಟ ಪ್ರಕರಣದಲ್ಲಿ ಮನೋಹರ್ ಮತ್ತು ಅಸ್ಲಮ್ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ವೈಯಕ್ತಿಕವಾಗಿ ಪರಿಹಾರ ಮೊತ್ತ ಘೋಷಿಸಿದರು. ಘಟನೆಯಲ್ಲಿ ಒಟ್ಟು ಇಬ್ಬರು ಮೃತಪಟ್ಟರೆ ಐದು ಮಂದಿಗೆ ಗಾಯವಾಗಿದೆ. ಎಲ್ಲರೂ ಸ್ಥಳೀಯರೇ ಆಗಿದ್ದು, …
Read More »ಮೋದಿ-ಕಮಲಾ ಹ್ಯಾರೀಸ್ ದ್ವಿಪಕ್ಷೀಯ ಮಾತುಕತೆ; ಇಂಡೋ-ಫೆಸಿಫಿಕ್ ಪ್ರದೇಶದ ಬಗ್ಗೆ ಫೋಕಸ್
ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾದರು. ಬಳಿಕ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. ಇಬ್ಬರು ನಾಯಕರುಗಳು ಇಂಡೋ-ಫೆಸಿಫಿಕ್ ಪ್ರದೇಶದ ಬಗ್ಗೆ ಹೆಚ್ಚು ಗಮನ ಹರಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ವ್ಯಾಪಾರ, ಅಭಿವೃದ್ಧಿ, ಎರಡೂ ದೇಶಗಳ ಸ್ನೇಹ ಸಂಬಂಧ, ಸಂಸ್ಕೃತಿ ಹೀಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆಯೂ ಚರ್ಚೆ …
Read More »ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ಯಾರೂ ಗಂಭೀರವಾಗಿ ಪರಿಗಣಿಸಿಲ್ಲ : ಸಿದ್ದರಾಮಯ್ಯ
ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರವಾಗಲೀ, ಪೊಲೀಸರಾಗಲಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಮೈಸೂರು ಪೊಲೀಸರು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಿರಂತರವಾಗಿ ಆ ಭಾಗದಲ್ಲಿ ಅಪರಾಧ ಪ್ರಕರಣಗಳು ನಡೆಯುತ್ತಿರುವ ಸಂದರ್ಭದಲ್ಲಿ ಪೊಲೀಸರು ನಿದ್ದೆ ಮಾಡ್ತಿದ್ರಾ? ಎಂದು ಪ್ರಶ್ನಿಸಿದರು. ಈ ಕುರಿತು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು …
Read More »ಬಸ್ ಸಂಚಾರ ಪುನರಾರಂಭ
ಬೆಂಗಳೂರು : ಕೋವಿಡ್ ನಿಂದಾಗಿ ಕೆಲವೆಡೆ ಬಸ್‌ಗಳ ಸಂಚಾರ ನಿಲ್ಲಿಸಿತ್ತು. ಆದರೆ ದ್ದು, ಮಕ್ಕಳು ಶಾಲಾ-ಕಾಲೇಜಿಗೆ ತೆರಳಲು ಮೊದಲ ಆದ್ಯತೆ ನೀಡಲಾಗಿ ದ್ದು , ಈ ನಿಟ್ಟಿನಲ್ಲಿ ಬಸ್ ಸಂಚಾರ ಮತ್ತೆ ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಾರಿಗೆ ಸಚಿವ ಶ್ರೀ ರಾಮುಲು ಭರವಸೆ ನೀಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಕಾಂಗ್ರೆಸ್ ಸದಸ್ಯ ಬಸವನಗೌಡ ದದ್ದಲ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಶಾಲೆ- ಕಾಲೇಜು ಪ್ರಾರಂಭವಾಗಿದೆ. ಮಕ್ಕಳ ಅನುಕೂಲಕ್ಕಾಗಿ ಕೋವಿಡ್ ವೇಳೆ …
Read More »ಬಿಜೆಪಿಯಲ್ಲಿ ಬೊಮ್ಮಾಯಿ ನಾಯಕತ್ವದ ಕುರಿತು ಯಾವುದೇ ಸಮಸ್ಯೆಯಿಲ್ಲ : ಆರ್ ಅಶೋಕ್
ಬೆಂಗಳೂರು: ರಾಜ್ಯ ಭಾರತಿಯ ಜನತಾ ಪಾರ್ಟಿಯಲ್ಲಿ ಬಸವರಾಜ ಬೊಮ್ಮಾಯಿ ನಾಯಕತ್ವದ ಕುರಿತು ಯಾವುದೇ ಸಮಸ್ಯೆಯಿಲ್ಲ, ಗೊಂದಲಗಳಿಲ್ಲ. ಪಕ್ಷ, ಬರುವ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸಲಿದೆ. ಮತ್ತೆ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಗುರುವಾರ ಪ್ರತಿಪಾದಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅಶೋಕ್, ಸಿಎಂ ಅವರು ವಿರೊಧಪಕ್ಷದವರನ್ನೇ ಓಲೈಸುತ್ತಿದ್ದಾರೆ ಎಂಬ ಅಸಮಾಧಾನ ಸ್ವಪಕ್ಷದ ಶಾಸಕರಲ್ಲಿದೆಯೇ ಎಂಬ ಪ್ರಶ್ನೆಗೆ, ಕಾಂಗ್ರೆಸಿನವರಿಗೆ ಜಾತಿ, ಧರ್ಮ ಒಡೆಯುವುದೇ ಕೆಲಸವಾಗಿದೆ. …
Read More »ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ ವಾಹನ ನೀಡಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ಡಾಲ್ಮಿಯಾ ಭಾರತ ಸಿಮೆಂಟ್ ಲಿ., ಯಾದವಾಡ ಯುನಿಟ್‍ದಿಂದ 30 ಲಕ್ಷ ರೂ. ವೆಚ್ಚದ ಮೂರು …
Read More »ಅಪಘಾತಕ್ಕೆ ಪರಿಹಾರ ನೀಡಿಲ್ಲ; ದಾವಣಗೆರೆಯಲ್ಲಿ ಎರಡು ಸರ್ಕಾರಿ ಬಸ್ಗಳು ಜಪ್ತಿ
ದಾವಣಗೆರೆ: ಅಪಘಾತ ಪರಿಹಾರ ನೀಡದ ಹಿನ್ನೆಲೆ ಸರ್ಕಾರಿ ಬಸ್ಗಳನ್ನ ಜಪ್ತಿ ಮಾಡಲಾಗಿದೆ. ದಾವಣಗೆರೆ ಬಸ್ ನಿಲ್ದಾಣದಲ್ಲಿ 2 ಕೆಎಸ್ಆರ್ಟಿಸಿ ಬಸ್ಗಳನ್ನ ಜಪ್ತಿ ಮಾಡಿದ್ದಾರೆ. 2009ರ ಆಗಸ್ಟ್ 8ರಂದು ಕೆಎಸ್ಆರ್ಟಿಸಿ ಬಸ್ ಅಪಘಾತವಾಗಿತ್ತು. ಸುದೀಪ್ ಎಂಬುವವರು ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರು. ಕಾಲು ಕಳೆದುಕೊಂಡಿದ್ದ ಸುದೀಪ್ಗೆ ಪರಿಹಾರ ನೀಡುವಂತೆ ಆದೇಶ ನೀಡಲಾಗಿತ್ತು. ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿತ್ತು. ಆದರೆ ಪರಿಹಾರ ನೀಡದ ಹಿನ್ನೆಲೆ ಬಸ್ಗಳನ್ನ ಜಪ್ತಿ ಮಾಡಲಾಗಿದೆ. 2009ರ …
Read More »ಶಿಕ್ಷಕರ ಹುದ್ದೆ ಭರ್ತಿ ಮಾಡಿ- ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರು ಧರಣಿ
ಗದಗ: ತಾಲೂಕು ಕದಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಇಂಗ್ಲಿಷ್ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕೆಂದು ಮಕ್ಕಳು ಪಾಲಕರೊಂದಿಗೆ ಪ್ರತಿಭಟನೆ ಮಾಡಿದರು. ಶಾಲೆ ಬಂದ್ ಮಾಡಿ, ಕೊಠಡಿಗಳಿಗೆ ಬೀಗ ಜಡಿದು ಶಿಕ್ಷಣಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳೆದ 3 ವರ್ಷಗಳಿಂದ ಮಕ್ಕಳ ಅಳಲು ಆಲಿಸದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಶಾಲೆಯಲ್ಲಿ ಮೊದಲು 2ವರ್ಷ ವಾರಕ್ಕೆ ಎರಡು ದಿನದಂತೆ ಅತಿಥಿ ಶಿಕ್ಷಕರು ಬಂದು ಪಾಠ …
Read More »ಯತ್ನಾಳ್, ಬೆಲ್ಲದ್‍ಗೆ ಅಭಿನಂದನೆ ಸಲ್ಲಿಸಿದ ಜಯಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ: ಇಂದು 29ನೇ ದಿವಸಕ್ಕೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನ ಕಾಲಿಟ್ಟಿದೆ ಎಂದು ಬೆಳಗಾವಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಧ್ವನಿ ಎತ್ತಿದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರ ಶಾಸಕರಿಗೆ ಈ ಮೂಲಕ ಅಭಿನಂದನೆಯನ್ನು ತಿಳಿಸಿದರು. ಮೀಸಲಾತಿ ನೀಡುವ ಬಗ್ಗೆ ಮಾರ್ಚ್ 15ರಂದು ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರ …
Read More »