Breaking News

ಕಣ್ಣೀರಿಡುತ್ತಾ ಸದನದಿಂದ ಹೊರ ಬಂದ ಅಂಜಲಿ ನಿಂಬಾಳ್ಕರ್

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರ ಪ್ರತಿಧ್ವನಿಸಿತು. ಈ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಭಾವುಕರಾದ ಸನ್ನಿವೇಶಕ್ಕೆ ಸದನದ ಸದಸ್ಯರು ಸಾಕ್ಷಿಯಾದರು. ರೇಪ್ ಪ್ರಕರಣದ ಚರ್ಚೆ ವೇಳೆ ಕಣ್ಣೀರಿಡುತ್ತಾ ಸದನದಿಂದ ಹೊರ ಬಂದ ಅಂಜಲಿ ನಿಂಬಾಳ್ಕರ್ ಗ್ಯಾಂಗ್ ರೇಪ್ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಶಾಸಕಿ ರೂಪ ಶಶಿಧರ್ ಮಾತನಾಡುವಾಗ.. ಕಣ್ಣೀರಿಡುತ್ತಾ ಸದನದಿಂದ ಮೊಗಸಾಲೆಗೆ ಹೋದ ಅಂಜಲಿ ನಿಂಬಾಳ್ಕರ್ ನಂತರ ಕಣ್ಣೀರು ಒರೆಸಿಕೊಂಡು, …

Read More »

ಹೈ-ಎಂಡ್ ಬೈಕ್ ಯಾಕೆ? ನಮಗೆ ಈ ಹೋರಿನೇ ಸಾಕು..!

ಬಾಗಲಕೋಟೆ: ಹದಿನೆಂಟು ತಿಂಗಳ ಕಿಲಾರಿ ಹೋರಿಯೊಂದು ದಾಖಲೆಯ ಮೊತ್ತಕ್ಕೆ ಮಾರಾಟವಾಗುವ ಮೂಲಕ ಅಚ್ಚರಿ ಹುಟ್ಟಿಸಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ತೇರದಾಳ ಪಟ್ಟಣದ ನಾಲ್ಕನೇ ಕಿನಾಲ್ ತೋಟದ ವಸತಿ ಪ್ರದೇಶದ ಭೀಮಪ್ಪ ಬರಡಗಿ ಎಂಬುವರ ಹೋರಿ ಬರೋಬ್ಬರಿ 3 ಲಕ್ಷ 25 ಸಾವಿರ ರೂಪಾಯಿಗಳಿಗೆ ಮಾರಾಟವಾಗಿದೆ. ಅಶೋಕ‌ ಕುರಿ ಎಂಬುವರು 3 ಲಕ್ಷ 25 ಸಾವಿರಕ್ಕೆ ಖರೀದಿ ಮಾಡಿದ್ದಾರೆ. ಜಾನುವಾರು ಪ್ರದರ್ಶನದಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದ ಹೋರಿ ನೋಡೋದಕ್ಕೆ ಬಾರಿ ಮೈಮಾಟ …

Read More »

ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಭಾನುವಾರ ರಜೆ ದಿನ

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗಿದೆ. ಇಡೀ ದೇಶವನ್ನು ಕೊರೊನಾ ಮುಕ್ತ ಮಾಡಲು ಮಕ್ಕಳು ಹೊರೆತು ಪಡಿಸಿ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಹಾಕಲಾಗುತ್ತಿತ್ತು. ವಾರದ 7 ದಿನವೂ ಲಸಿಕೆ ಹಾಕುವ ಅಭಿಯಾನ ನಡೆಯುತ್ತಿತ್ತು. ಆದ್ರೆ ಈಗ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಇಲಾಖೆ ಮುಂದಾಗಿದೆ. ಯಾವುದೇ ರಜೆ ಇಲ್ಲದೇ, ನಿರಂತರವಾಗಿ ಆರೋಗ್ಯ ಸಿಬ್ಬಂದಿ ಕೆಲಸ ಮಾಡ್ತಾ ಇದ್ದರು. …

Read More »

ವಿಧಾನಸಭೆ: ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

 ಇದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ್‌ ಅವರು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಕೊಟ್ಟ ಟಾಂಗ್‌. ಪ್ರಶ್ನೋತ್ತರ ವೇಳೆಯಲ್ಲಿ ಬೇಲೂರು ಶಾಸಕ ಕೆ.ಎಸ್‌.ಲಿಂಗೇಶ್‌ ಅವರು ಮುಖ್ಯಮಂತ್ರಿಗಳ ಅಮೃತ ಗ್ರಾಮಪಂಚಾಯಿತಿ ಯೋಜನೆಯನ್ನು ಪ್ರಸ್ತಾಪಿಸಿ ಗ್ರಾಮ ಪಂಚಾಯಿತಿಯೊಂದಕ್ಕೆ 25 ಲಕ್ಷ ರೂ. ಕೊಡುವುದಾಗಿ ಹೇಳಲಾಗಿದೆ. ಆದರೆ, ಹಣ ಬಿಡುಗಡೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಗಮನಸೆಳೆದರು. ಜೆಡಿಎಸ್‌ ಸದಸ್ಯ ಬಂಡೆಪ್ಪ ಕಾಶೆಂಪೂರ ಈ ಪ್ರಶ್ನೆಗೆ ಪೂರಕವಾಗಿ ಮಾತಾಡಿದರು. ಆಗ ಸಚಿವ ಈಶ್ವರಪ್ಪ ಉತ್ತರಿಸಿ, ಗ್ರಾಪಂಗಳಿಗೆ …

Read More »

ಅಬುಧಾಬಿಯಲ್ಲಿಂದು ಹೈವೋಲ್ಟೇಜ್ ಪಂದ್ಯ: ಮುಂಬೈ-ಕೋಲ್ಕತ್ತಾ ನಡುವೆ ಯಾರಿಗೆ ವಿಜಯ?

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯಲ್ಲಿಂದು (IPL 2021) 34ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಇಯಾನ್ ಮಾರ್ಗನ್ (Eion Morgan) ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (MIvsKKR) ತಂಡಗಳು ಮುಖಾಮುಖಿ ಆಗುತ್ತಿವೆ. ಮುಂಬೈ ತಂಡ ಈ ಬಾರಿಯ ಟೂರ್ನಿಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಕಂಡಿದೆ. ಆಡಿದ ಎಂಟು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಅನುಭವಿಸಿದೆ. ಇತ್ತ ಕೆಕೆಆರ್ ತಂಡ ಆಡಿದ …

Read More »

ಬೆಂಕಿ ಅವಘಡ: ಪ್ರಾಣ ಉಳಿಸುವಂತೆ ಅಳಿಯನ ಬಳಿ ಅಂಗಲಾಚಿದ್ದ ಮೃತ ಮಹಿಳೆ

ಬೆಂಗಳೂರು: ‘ಕೊಠಡಿಯಲ್ಲಿ ಬೆಂಕಿ ಬಿದ್ದಿದೆ. ಬೇಗ ಬಂದು ಕಾಪಾಡಪ್ಪ. ಬೇಗ ಬಾ…’ ದೇವರಚಿಕ್ಕನಹಳ್ಳಿಯ ವಸತಿ ಸಮುಚ್ಚಯದಲ್ಲಿ ಮಂಗಳವಾರ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಸಜೀವ ದಹನವಾದ ಭಾಗ್ಯರೇಖಾ ಅವರು ತಮ್ಮ ಅಳಿಯ ಸಂದೀಪ್‌ ಬಳಿ ರಕ್ಷಣೆಗಾಗಿ ಅಂಗಲಾಚಿದ್ದ ಪರಿ ಇದು. ಸಂದೀಪ್‌-ಪ್ರೀತಿ ದಂಪತಿ ಪ್ರೀತಿಯ ಅವರ ತಾಯಿ ಭಾಗ್ಯರೇಖಾ ವಾಸವಿದ್ದ ಫ್ಲ್ಯಾಟ್‌ನ ಪಕ್ಕದಲ್ಲೇ (ಫ್ಲ್ಯಾಟ್‌ ನಂಬರ್‌ 211) ನೆಲೆಸಿದ್ದರು. ಅತ್ತೆ ಕರೆ ಮಾಡಿ ಹೇಳಿದ ಬಳಿಕವಷ್ಟೇ ಸಂದೀಪ್‌ಗೆ ಅಗ್ನಿ ಅವಘಡದ ವಿಷಯ …

Read More »

ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ …

Read More »

ಪತ್ನಿಯ ಮೊಬೈಲ್ ನೋಡಿದ ರಿಯಲ್​ ಎಸ್ಟೇಟ್​ ಉದ್ಯಮಿ: ಮುಂದೆ ನಡೆದಿದ್ದು ಘನ ಘೋರ ಘಟನೆ

ಬೆಂಗಳೂರು: ಅನ್ನಪೂರ್ಣೇಶ್ವರಿನಗರದಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಚೂರಿಯಿಂದ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ. ಅನ್ನಪೂರ್ಣೇಶ್ವರಿನಗರದ ನಿವಾಸಿ ರೂಪಾ (34) ಕೊಲೆಯಾದವರು. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ (39) ಆರೋಪಿ. ಕಾಂತರಾಜ್-ರೂಪಾ ದಂಪತಿಗೆ ಒಬ್ಬ ಮಗನಿದ್ದಾನೆ. ಪ್ರತಿನಿತ್ಯ ಪತ್ನಿಯ ಶೀಲ ಶಂಕಿಸಿ ಪತಿ ಜಗಳ ಮಾಡುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿತ್ತು. ಬುಧವಾರ ಸಂಜೆ 4.30ರಲ್ಲಿ ಕಾಂತರಾಜ್ ಪತ್ನಿಯ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ …

Read More »

ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ ಆರೋಪಿಸಿದ ಯುವತಿ

ಯುವತಿಯೇ ಬಂದು ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಚ್.ಎಸ್.ಆರ್ ಲೇಔಟ್ ನಿಂದ ಮುರುಗೇಶ್ ಪಾಳ್ಯಗೆ ಕ್ಯಾಬ್ ಬುಕ್ ಮಾಡಿದ್ದಳು. ಪಾನಮತ್ತರಾಳಾಗಿದ್ದ ಯುವತಿ ಕ್ಯಾಬಿನಿಂದ ಇಳಿಯುವ ಸ್ಥಿತಿಯಲ್ಲಿ ಇರಲಿಲ್ಲ. ಈ ಸಮಯದಲ್ಲಿ ರೇಪ್ ಎಸಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಯುವತಿ ದೌರ್ಜನ್ಯವನ್ನು ವಿರೋಧಿಸಿದ್ದಾಳೆ ಅತ್ಯಾಚಾರ ಪ್ರಯತ್ನ ವೇಳೆ ಕೂಗಾಡಿ ಜಟಾ ಪಟಿ ಮಾಡಿದ ಯುವತಿ ಎಸ್ಕೇಪ್ ಅಗೋಕೆ ಟ್ರೈ ಮಾಡಿ ಆರೋಪಿಯ ಮೊಬೈಲ್ ಕಿತ್ತುಕೊಂಡಿದ್ದಾಳೆ. ಖುದ್ದು ಜೀವನ್ ಭೀಮಾ ನಗರ …

Read More »

ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ ಕ್ಷೇತ್ರದ 21 ಗ್ರಾಮಗಳ ನದಿ ತೀರದ ಸಂತ್ರಸ್ತರು ಶಾಸಕರ ಬಳಿ ಅಳಲು ಮಂಡಿಸಿದರು. ನದಿ ತೀರದ ಗ್ರಾಮಗಳಾದ ಅಡಿಬಟ್ಟಿ, ಚಿಗಡೊಳ್ಳಿ, …

Read More »