Breaking News

ಸಿವಿಲ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ; 10 ಮಂದಿ ಸಾವು

ನವದೆಹಲಿ: ಮಹಾರಾಷ್ಟ್ರದ ಅಹಮದ್‌ನಗರದಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಐಸಿಯು ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸುಟ್ಟು ಗಾಯಗೊಂಡಿರೋರಿಗೆ ಚಿಕಿತ್ಸೆ ಶುರುಮಾಡಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದೆ. ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Read More »

64 ಪ್ರಯಾಣಿಕರನ್ನು ಊಟಕ್ಕೆಂದು ಕೆಳಗಿಳಿಸಿ ಬಹುದೊಡ್ಡ ಶಾಕ್​ ಕೊಟ್ಟ ಕೇರಳ ಖಾಸಗಿ ಬಸ್​ ಡ್ರೈವರ್​;

ಕೇರಳದಿಂದ ಅಸ್ಸಾಂಗೆ ಹೊರಟಿದ್ದ ಖಾಸಗಿ ಬಸ್​​ನ ಚಾಲಕ ಮತ್ತು ಕ್ಲೀನರ್​ ಸೇರಿ ಪ್ರಯಾಣಿಕರಿಗೆ ಬಹುದೊಡ್ಡ ಶಾಕ್​ ಕೊಟ್ಟಿದ್ದಾರೆ. ಬಹುಶ್ಯಃ ಆ ಪ್ರಯಾಣಿಕರು ಯಾರೂ ಹೀಗೊಂದು ಕೆಟ್ಟ ಸನ್ನಿವೇಶ ಎದುರಾಗಬಹುದು ಎಂದು ನಿರೀಕ್ಷೆ ಮಾಡಿರಲು ಸಾಧ್ಯವೇ ಇಲ್ಲ. ಇದೊಂದು ಕೇರಳ ಮೂಲದ ಖಾಸಗಿ ಬಸ್​ ಆಗಿದ್ದು, 64 ಪ್ರಯಾಣಿಕರನ್ನು ಹೊತ್ತು ಅಸ್ಸಾಂಗೆ ಸಾಗುತ್ತಿತ್ತು. ಹೀಗೆ ಹೋಗುವಾಗ ತೆಲಂಗಾಣದ ನಲ್ಗೊಂಡ ಬಳಿ ಊಟಕ್ಕೆ ಇಳಿದಿದ್ದರು. ಸಹಜವಾಗಿ ಪ್ರಯಾಣಿಕರೆಲ್ಲ ತಮ್ಮ ಲಗೇಜ್​ಗಳನ್ನೆಲ್ಲ ಬಸ್​​ನಲ್ಲೇ ಇಟ್ಟು …

Read More »

ಮೋದಿಯವರ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ‘ಅಭಿವೃದ್ಧಿಯ ಮಾತುಗಳಿಂದ ದೂರವಿದ್ದು, ಲಕ್ಷಾಂತರ ಕುಟುಂಬಗಳು ಮರದ ಒಲೆ ಹೊತ್ತಿಸಲು ಒತ್ತಾಯಿಸಲ್ಪಟ್ಟಿವೆ. ಮೋದಿ ಅವರ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ ಮತ್ತು ಬ್ರೇಕ್ ಸಹ ವಿಫಲವಾಗಿದೆ’ ಎಂದು ರಾಹುಲ್ ಗಾಂಧಿ ಇಂದು ಟ್ವೀಟ್ ಮಾಡಿದ್ದಾರೆ.   ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ LPG ಸಿಲಿಂಡರ್‌ಗಳ ಬೆಲೆ ಏರಿಕೆಯ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬೆಲೆ ಏರಿಕೆಯಿಂದಾಗಿ ಗ್ರಾಮೀಣ ಪ್ರದೇಶದ 42 ಪ್ರತಿಶತ ಜನರು ಅಡುಗೆ ಆಹಾರಕ್ಕಾಗಿ …

Read More »

ರಾಜ್ಯದ ಚಿತ್ರಮಂದಿರಗಳಲ್ಲಿ ನಾಳೆ `ಪುನೀತ್ ರಾಜ್ ಕುಮಾರ್’ಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಬೆಂಗಳೂರು : ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಾಳೆ ರಾಜ್ಯದ ಚಿತ್ರಮಂದಿರಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರಾಜ್ಯಾದ್ಯಂತ 550 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಾಳೆ ಸಂಜೆ 6 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.   ಚಿತ್ರ ಪ್ರದರ್ಶಕರರು ನಟ ಪುನೀತ್ ರಾಜ್ ಕುಮಾರ್ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ನಮನ ಸಲ್ಲಿಸಲಾಗಿದೆ.ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ನಟ …

Read More »

ಟೂರಿಸ್ಟ್ ಸೀಸನ್ ಚಾರ್ಟರ್ಡ್ ವಿಮಾನವನ್ನು ಡಿಸೆಂಬರ್ 13 ಗೆ ಗೋವಾ ಸ್ವಾಗತಿಸಲು ತಯಾರಿ

ಗೋವಾ: ಸುಮಾರು ಒಂದು ವರ್ಷದ ನಂತರ, ಈ ಋತುವಿನ ಮೊದಲ ಚಾರ್ಟರ್ಡ್ ಫ್ಲೈಟ್ ಡಿಸೆಂಬರ್ 13 ರಂದು ಯುಕೆ ನಿಂದ ಗೋವಾಕ್ಕೆ ಆಗಮಿಸಲಿದೆ, ಇದು ಕೋವಿಡ್ -19 ಏಕಾಏಕಿ ನಂತರ ಅಂತರಾಷ್ಟ್ರೀಯ ಪ್ರವಾಸೋದ್ಯಮ ವಲಯದಲ್ಲಿ ವಿರಾಮವನ್ನು ಕೊನೆಗೊಳಿಸುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.   ಡಿಸೆಂಬರ್‌ನಿಂದ ಯುಕೆಯಿಂದ ಪ್ರತಿ ವಾರ ನಾಲ್ಕು ಚಾರ್ಟರ್ಡ್ ವಿಮಾನಗಳು, ಗ್ಯಾಟ್‌ವಿಕ್ ಮತ್ತು ಮ್ಯಾಂಚೆಸ್ಟರ್ ಏರ್‌ಪೋರ್ಟ್‌ಗಳಿಂದ ತಲಾ ಎರಡು ವಿಮಾನಗಳು ಗೋವಾಕ್ಕೆ ಹಾರಲಿವೆ ಎಂದು ಗೋವಾದ …

Read More »

ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್, ಚಿನ್ನದ ಚೈನ್ ಕಿತ್ತುಕೊಂಡು ಪರಾರಿ

ಶಿವಮೊಗ್ಗ, ನವೆಂಬರ್ 6: ಶನಿವಾರ ಬೆಳಗಿನ ಜಾವ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿ ಮೂರು ಕಡೆ ದರೋಡೆ ಮಾಡಿದ್ದಾರೆ. ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್, ಚಿನ್ನದ ಚೈನ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ.   ಘಟನೆ 1: ಬಸ್ ಇಳಿದವರ ಮೇಲೆ ದಾಳಿ ಬೆಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆಗಮಿಸಿದ ಪರಶುರಾಮ ಎಂಬುವವರು ಬೆಳಗ್ಗೆ 4 …

Read More »

ಜಸ್ಟಿಸ್ ಕೆ ಚಂದ್ರು: ‘ಜೈ ಭೀಮ್’ ಚಿತ್ರದ ಅಸಲಿ ಹೀರೋ

ಕಾಲಿವುಡ್ ನಟ ಸೂರ್ಯ ವಿಭಿನ್ನ ಆಯಾಮದ ಸಿನಿಮಾಗಳನ್ನು ಮಾಡುವುದರಲ್ಲಿ ಸದಾ ಮುಂದಿರುತ್ತಾರೆ. ಕಳೆದ ವರ್ಷ ‘ಸೂರರೈ ಪೋಟ್ರು’ ಕ್ಯಾಪ್ಟನ್ ಗೋಪಿನಾಥ್ ಅವರ ಜೀವನ ಆಧಾರಿತ ಬಯೋಪಿಕ್ ಮೂಲಕ ಗಮನ ಸೆಳೆದಿದ್ದರು. ಇನ್ನು ಈ ವರ್ಷ ‘ಜೈ ಭೀಮ್’ ಚಿತ್ರದ ಮೂಲಕ ಮತ್ತೊಮ್ಮೆ ತಾನು ವಿಭಿನ್ನ ಆಯಾಮದ ಚಿತ್ರಗಳ ನಾಯಕ ನಟ ಅಂತ ಸಾಬೀತುಪಡಿಸಿಕೊಂಡಿದ್ದಾರೆ. ನವೆಂಬರ್ 2ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ ಆಗಿರುವ ‘ಜೈ ಭೀಮ್’ ಈಗಾಗಲೇ ನೋಡುಗರ ವ್ಯಾಪಕ …

Read More »

ಡಾ.ರಾಜ್ ಕುಟುಂಬದ ವೈದ್ಯ ಡಾ.ರಮಣರಾವ್ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು, ನ.6- ಪುನೀತ್ ರಾಜ್‍ಕುಮಾರ್ ಅವರ ಸಾವಿಗೆ ವೈದ್ಯರ ಎಡವಟ್ಟೇ ಕಾರಣ ಎಂದು ಕೆಲವರು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಡಾ.ರಾಜ್ ಕುಟುಂಬದ ವೈದ್ಯ ಡಾ.ರಮಣರಾವ್ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸದಾಶಿವನಗರದಲ್ಲಿರುವ ಅವರ ನಿವಾಸದ ಬಳಿ ಇರುವ ವೈದ್ಯ ರಮಣರಾವ್ ಅವರ ಮನೆ ಮತ್ತು ಕ್ಲಿನಿಕ್ ಬಳಿ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗಿದೆ. ಈಗಾಗಲೇ ಕೆಲ ಅಭಿಮಾನಿಗಳು ವೈದ್ಯರನ್ನು ಬಂಸಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಪ್ರತಿಭಟನೆಗಳು ಕೂಡ …

Read More »

ಹಾನಗಲ್ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದೂಡಲು ಯತ್ನ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಚುನಾವಣೆ ನಡೆಸಲು ಆಸಕ್ತಿ ತೋರುತ್ತಿಲ್ಲ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದೂಡಲು ಯತ್ನಿಸುತ್ತಿದೆ. ಆಡಳಿತಾಧಿಕಾರಿಗಳ ಅವಧಿಯನ್ನು ಇನ್ನೂ ಆರು ತಿಂಗಳಿಗೆ ವಿಸ್ತರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ಉಪ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಸರ್ಕಾರ ಚುನಾವಣೆ ನಡೆಸಲು ಆಸಕ್ತಿ ತೋರಿಸುತ್ತಿಲ್ಲ ಎಂದು …

Read More »

ಬಾಡಿಗೆ ಹಣ ಖರ್ಚು ಮಾಡಿದ್ದಕ್ಕೆ ಪತ್ನಿಯ ಕೊಲೆ ಮಾಡಿದ ಪತಿ

ಪತ್ನಿ ಬಾಡಿಗೆ ನೀಡಲು ಎತ್ತಿಟ್ಟಿದ್ದ ಹಣ ಖರ್ಚು ಮಾಡಿದ್ದಾಳೆಂದು ಪತಿರಾಯ ತನ್ನ ಪತ್ನಿಯನ್ನೇ ಕೊಲೆಮಾಡಿದ್ದಾನೆ. ಘಟನೆ ಬೆಂಗಳೂರಿನ ದಯಾನಂದ ನಗರದಲ್ಲಿ ನಡೆದಿದೆ. ಪತಿ ಫಾರೂಕ್ ಆಗಿದ್ದು, ಪತ್ನಿ ನಾಜೀಯ ಕೊಲೆಯಾಗಿರುವ ದುರ್ದೈವಿಯಾಗಿದ್ದಾರೆ. ಪತ್ನಿ 6500ರೂ ಹಣದಲ್ಲಿ ಡ್ಯೂಪ್ಲಿಕೇಟ್ ಜ್ಯುವೆಲರಿ ಖರೀದಿಸಿದ್ದು, ಬಾಡಿಗೆಗೆ ಎಂದು ನೀಡಿದ್ದ ಹಣ ಖರ್ಚು ಮಾಡಿಕೊಂಡಿದ್ದಾಳೆ. ಬಳಿಕ ಬಾಡಿಗೆ ಹಣ ನೀಡುವಂತೆ ಪತಿ ತಿಳಿಸಿದಾಗ ವಿಚಾರ ಬಯಲಾಗಿದೆ. ನಂತರ ಕೋಪಗೊಂಡ ಫಾರೂಕ್ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ, …

Read More »