ತುಮಕೂರು: ಲಾಡ್ಜ್ ಒಂದರ ಸುರಂಗದಲ್ಲಿ ಅಡಗಿ ಕುಳಿತು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ತುಮಕೂರಿನ ಕ್ಯಾತ್ಸಂದ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ತುಮಕೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ರಾಶಿ ರಾಶಿ ಕಾಂಡೋಮ್ ಗಳು ಬಿದ್ದಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯವರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಖಚಿತ ಮಾಹಿತಿ ಆಧಾರದ ಮೇಲೆ ತುಮಕೂರಿನ ಕ್ಯಾತ್ಸಂದ್ರದ ಲಾಡ್ಜ್ ಒಂದರ ಮೇಲೆ ಪೊಲೀಸರೊಂದಿಗೆ ದಾಳಿ ನಡೆಸಿದ್ದು, …
Read More »ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು
ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹೆರಿಗೆ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರಾರು ಬಾಣತಿಯರು ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಓಡಿ ಬಂದ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಹೆರಿಗೆ ವಿಭಾಗದಲ್ಲಿದ್ದ ನೂರಾರು ಬಾಣಂತಿಯರು ಅಪಾಯದ ಮುನ್ಸೂಚನೆ ಅರಿತು ತಮ್ಮ ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯ ಹೊರಗೆ ಓಡಿ ಬಂದಿದ್ದಾರೆ ಅಷ್ಟೋತ್ತಿಗೆ ಬೆಂಕಿ ಹೆರಿಗೆ ವಿಭಾಗವನ್ನು ಆವರಿಸಿಕೊಂಡಿದೆ. …
Read More »ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಶಾಸಕರು ಹಾಗೂ ಸಚಿವರು ಭಾಗಿಯಾಗಿದ್ದರು. ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಅತ್ಯಾಚಾರ ಪ್ರಕರಣದಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ. …
Read More »ತುಮಕೂರಲ್ಲಿ ಕಾಂಡೋಮ್ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್.. ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ, ಐವರ ಬಂಧನ
ತುಮಕೂರು: ಇಲ್ಲಿನ ರಿಂಗ್ ರಸ್ತೆಯ ಲಾಡ್ಜ್ವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸಲು ಕಳ್ಳಮಾರ್ಗವಾಗಿದ್ದ ಸುರಂಗವೊಂದನ್ನು ಪತ್ತೆಹಚ್ಚಿದ್ದಾರೆ. ಈ ಸುರಂಗದಲ್ಲಿ ಅಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುರಂಗದೊಳಗೆ ಇಬ್ಬರು ಮಹಿಳೆ ಹಾಗೂ ಓರ್ವ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಡಗಿಕೊಂಡಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಈ ಲಾಡ್ಜ್ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್‌ಗಳು ಪತ್ತೆ ಆಗಿದ್ದವು. ವಿಷಯ ತಿಳಿದು ತನಿಖೆ …
Read More »ಬೆಂಗಳೂರಿನಲ್ಲಿ ಸೆ. 25ರವರೆಗೂ ಗುಡುಗು ಸಹಿತ ಭಾರೀ ಮಳೆ; ಸಂಜೆ ಬೇಗ ಮನೆ ಸೇರಿಕೊಳ್ಳಿ!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore Rain) ಒಂದು ಗಂಟೆ ಮಳೆ ಸುರಿದರೂ ಜನಜೀವನ ಅಸ್ತವ್ಯಸ್ತವಾಗಿ ಬಿಡುತ್ತದೆ. ಚರಂಡಿ ವ್ಯವಸ್ಥೆ, ರಾಜಕಾಲುವೆಗಳ ಅವ್ಯವಸ್ಥೆ, ತಗ್ಗು ಪ್ರದೇಶದಲ್ಲಿ ಮನೆಗಳನ್ನು ನಿರ್ಮಾಣ ಮಾಡಿರುವುದು ಹೀಗೆ ನಾನಾ ಕಾರಣಗಳಿಂದ ಮಳೆಗಾಲದಲ್ಲಿ ಬೆಂಗಳೂರಿಗರಿಗೆ ನರಕ ದರ್ಶನವಾಗುತ್ತಲೇ ಇರುತ್ತದೆ. ಇಂದಿನಿಂದ ಸೆ. 25ರವರೆಗೂ ಬೆಂಗಳೂರಿನಲ್ಲಿ ಮತ್ತೆ ಮಳೆ (Heavy Rain in Bengaluru) ಜೋರಾಗಲಿದ್ದು, ಇಂದಿನಿಂದ 5 ದಿನ ಗುಡುಗು- ಮಿಂಚು (Bengaluru Rains) ಸಹಿತ ಭಾರೀ ಮಳೆಯಾಗಲಿದೆ. …
Read More »ಬೆಳಗಾವಿಯಲ್ಲಿ ಎಂಇಎಸ್‌ನಿಂದ ದಿನಕ್ಕೊಂದು ನಾಟಕ; ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ
ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್‌ನಿಂದ (Maharashtra Ekikaran Samiti -MES) ದಿನಕ್ಕೊಂದು ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕವೂ ಪದೇಪದೇ ಸಾಮಾಜದ ಸ್ವಾತ್ಯವನ್ನು ಹಾಳು ಮಾಡುವ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಗಳು ಕೇಳಿ ಬಂದಿವೆ. ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ ಗಣೇಶ ವಿಸರ್ಜನೆ ವೇದಿಕೆ ಮೇಲೆ ಕನ್ನಡ ನಾಮಫಲಕವಷ್ಟೇ ಇದ್ದಿದ್ದಕ್ಕೆ ಎಂಇಎಸ್ ಖ್ಯಾತೆ ತೆಗೆದಿದೆ. ಇಷ್ಟೇ ಅಲ್ಲದೆ ಎಂಇಎಸ್ ಪುಂಡರ ವಿರುದ್ಧ …
Read More »ಮೈಸೂರು ರಾಜಮನೆತನದ ಆನೆಗಳನ್ನು ಗುಜರಾತ್ಗೆ ಕಳುಹಿಸಲು ನಿರ್ಧಾರ; ಕಾರಣ ಇಲ್ಲಿದೆ
ಮೈಸೂರು: ರಾಜಮನೆತನದ ಆನೆಗಳನ್ನು (Elephants) ಗುಜರಾತ್ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಅರಮನೆಯಲ್ಲಿರುವ ಪ್ರತಿ ಆನೆಗಳನ್ನು ನಿರ್ವಹಣೆ ಮಾಡಲು ದಿನಕ್ಕೆ 10 ಸಾವಿರ ರೂ. ಖರ್ಚಾಗುತ್ತಿದೆ. ತಿಂಗಳಿಗೆ 6 ಆನೆಗಳ ನಿರ್ವಹಣೆಗೆ ಸುಮಾರು 18 ಲಕ್ಷ ರೂ. ವೆಚ್ಚವಾಗುತ್ತಿದೆ. ಹೀಗಾಗಿ ನಾಲ್ಕು ಆನೆಗಳನ್ನು ಗುಜರಾತ್ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಸದ್ಯ ಆರು ಆನೆಗಳಿದ್ದು, ಇದರಲ್ಲಿ ನಾಲ್ಕು ಆನೆಗಳು ಗುಜರಾತ್ಗೆ ಕಳುಹಿಸಲಾಗುತ್ತದೆ. ಇನ್ನುಳಿದ ಎರಡು ಆನೆಗಳು ಅರಮನೆಯಲ್ಲೇ ಉಳಿದುಕೊಳ್ಳಲಿವೆ. ಅರಮನೆ ಆನೆಗಳು ದಸರಾ …
Read More »ಕಾರ್ಮಿಕ ಇಲಾಖೆ ಫುಡ್ ಕಿಟ್ ವಿತರಣೆಯಲ್ಲಿ ಅವ್ಯವಹಾರ, ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಬೆಳಗಾವಿ: ಕಾರ್ಮಿಕ ಇಲಾಖೆ ಫುಡ್ ಕಿಟ್ ಅಕ್ರಮ ದಾಸ್ತಾನು ಆರೋಪ ಕೇಳಿ ಬಂದಿದೆ. ಫುಡ್ ಕಿಟ್ಗಳನ್ನು ಹಳೆ ಬೆಳಗಾವಿಯ ಸಾಯಿ ಭವನದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದ್ದು ಲಾಕ್‌ಡೌನ್ ವೇಳೆ ಕಾರ್ಮಿಕರಿಗೆ ನೀಡಬೇಕಿದ್ದ ಫುಡ್ ಕಿಟ್ಗಳನ್ನು ಬಿಜೆಪಿ ಕಾರ್ಯಕರ್ತರ ಮನೆಗೆ ರವಾನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಅವಧಿ ಮುಗಿದ ಫುಡ್ ಕಿಟ್ ವಿತರಣೆ ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತೆ ಸರಳಾ ಸಾತಪೂತೆ ಬೆಳಗಾವಿಯ ಶಹಾಪುರ …
Read More »ಸದನದಲ್ಲಿ ಬೆಲೆ ಏರಿಕೆ ಗದ್ದಲ: ಬಿಜೆಪಿಯದ್ದು ಲೂಟಿ ಸರ್ಕಾರ ಎಂದ ‘ಸಿದ್ದು’; ‘ಭೂತದ ಬಾಯಲ್ಲಿ ಭಗವದ್ಗೀತೆ’ ಎಂದು ವಿಪಕ್ಷಗಳಿಗೆ ಸಿಎಂ ಬೊಮ್ಮಾಯಿ ‘ಗುದ್ದು’
ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಬೆಲೆ ಏರಿಕೆ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ವಾಕ್ಸಮರ, ವಾಗ್ದಾಳಿಗಳಿಗೆ ಕಾರಣವಾಗಿದೆ. ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಉತ್ತರಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು ನಿಜ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಆದರೆ ಅದಕ್ಕೆ ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆಯಾಗಿರುವುದು ಮಾತ್ರ ಕಾರಣವಲ್ಲ, ಬೇರೆ ಬೇರೆ ಕಾರಣಗಳಿಂದ ಬೆಲೆ …
Read More »ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’: ಶಿವಲಿಂಗೇಗೌಡ
ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ …
Read More »