ಬೆಂಗಳೂರು: ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ಕೊತ್ತದೊಡ್ದಿ ಗ್ರಾಮದಲ್ಲಿ ನಡೆದಿದೆ. ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ ನಿಂದ ಪರಾರಿಯಾಗಿದ್ದಾರೆ. ಅಪಘಾತದಲ್ಲಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
Read More »ಹಾವು ಕಚ್ಚಿ ಸ್ವಾಮೀಜಿ ಸಾವು
ಚಾಮರಾಜನಗರ – ಇಲ್ಲಿಯ ಗೋಪಾಲಪುರದ ಕೋಲೇಶ್ವರ ಮಠದ ಗುರುಮಲ್ಲ ಸ್ವಾಮೀಜಿ ನಿಧನರಾಗಿದ್ದಾರೆ. ಅವರಿಗೆ 44 ವರ್ಷ ವಯಸ್ಸಾಗಿತ್ತು. ಶನಿವಾರ ಕಾರ್ಮಿಕರ ಕೆಲಸದ ಮೆಲುಸ್ತುವಾರಿ ನೋಡಲು ಹೋದ ಸಂದರ್ಭದಲ್ಲಿ ಸ್ವಾಮೀಜಿಗೆ ಹಾವು ಕಚ್ಚಿತ್ತು. ತಕ್ಷಣ ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಚಾಮರಾಜ ನಗರಕ್ಕೆ ಕಳಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾದರು. ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ.
Read More »ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ದಕ್ಷಿಣ ಆಫ್ರಿಕಾದಿಂದ ಬಂದಿರುವ 34 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಸೋಂಕು ದೃಢವಾಗಿದ್ದು, ಸೋಂಕಿತರನ್ನು ಐಸೋಲೇಷನ್ ಮಾಡಲಾಗಿದೆ. ಅಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಐವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 15 ಜನರ ಸ್ಯಾಂಪಲ್ ಗಳನ್ನು ಸಂಗ್ರಹಿಸಿ …
Read More »ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ ಸಂಕಷ್ಟ
ಬೆಂಗಳೂರು: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ ಸಂಕಷ್ಟ ಎದುರಾಗಿದ್ದು, ಸಾಲದ ಹಣ ವಾಪಸ್ ನೀಡುವಂತೆ ಕೊರ್ಟ್ ಆದೇಶ ನೀಡಿದೆ. 2013ರಲ್ಲಿ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ಅವರಿಂದ ದ್ವಾರಕೀಶ್ ಸಾಲ ಪಡೆದುಕೊಂಡಿದ್ದರು. ‘ಚಾರುಲತಾ’ ಸಿನಿಮಾ ಬಿಡುಗಡೆಗಾಗಿ 50 ಲಕ್ಷರೂ ಮೊತ್ತ ಪಡೆದುಕೊಂಡಿದ್ದರು. ನಂತರ ಸಾಲದ ಹಣ ವಾಪಸ್ ನೀದದೇ ಸತಾಯಿಸಿದ್ದರು. ಅಲ್ಲದೇ ದ್ವಾರಕೀಶ್ ನೀಡಿದ್ದ ಚೆಕ್ ಕೂಡ ಸರಿಯಿರಲಿಲ್ಲ. ನಾನು ಯಾವುದೇ ಚೆಕ್ ಕೊಟ್ಟಿಲ್ಲ, ಸಹಿ ನನ್ನದಲ್ಲ ಎಂದು ಕೋರ್ಟ್ ನಲ್ಲಿ …
Read More »ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಡಿವೈಡರ್ಗೆ ಬೈಕ್ ಡಿಕ್ಕಿ: ಬೆಂಗಳೂರಲ್ಲಿ ಜೀವಂತ ಹೆಣವಾದ ಯುವಕ
ಬೆಂಗಳೂರು : ಹೆಲ್ಮೆಟ್ ಹಾಕದೆ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಸ್ನೇಹಿತರಿಬ್ಬರು ಹೊರಟಿದ್ದರು. ಮಾರ್ಗಮಧ್ಯೆ ಜಂಕ್ಷನ್ನಲ್ಲಿ ಸಂಚಾರಿ ಪೊಲೀಸರು ತಪಾಸಣೆಯಲ್ಲಿ ನಿರತರಾಗಿದ್ದರು. ಸೀದಾ ಹೋಗಿ ದಂಡ ಕಟ್ಟಿದ್ರೆ ಯಾವುದೇ ಅನಾಹುತ ಆಗುತ್ತಿರಲಿಲ್ಲ. ಆದ್ರೆ, ಸ್ನೇಹಿತನ ಹುಚ್ಚುತನವೋ, ಪೊಲೀಸರ ಅಸಡ್ಡೆಯೋ ಯುವಕನೊರ್ವ ಆಸ್ಪತ್ರೆಯಲ್ಲಿ ಜೀವಂತ ಶವವಾಗಿದ್ದಾನೆ. ಹೌದು, ಇದೇ ತಿಂಗಳು 9 ರಂದು ಮಧ್ಯಾಹ್ನ ಬೈಕಿನಲ್ಲಿ ಸ್ನೇಹಿತರಿಬ್ಬರು ಕತ್ರಿಗುಪ್ಪೆ ಬಳಿ ಹೋಗುವಾಗ ತಪಾಸಣೆ ನಿರತನಾಗಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಡಿವೈಡರ್ಗೆ ಗುದ್ದಿದ್ದರು. ಪರಿಣಾಮ …
Read More »ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆಯಾಗುತ್ತದೆ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ನಾಳೆಯಿಂದ ಬೆಳಗಾವಿ ಅಧಿವೇಶ ಆರಂಭವಾಗುತ್ತದೆ. ಈಗಾಗಲೇ ಎಲ್ಲಾ ತಯಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯ ನಾಯಕರಿಗೆ ನಾನು ಹೇಳಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗಲ್ಲ. ಬದಲಾಗಿ ಬಡತನವನ್ನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಆಸೆ ಆಮಿಷವೊಡ್ಡಿ ಮತಾಂತರ ಮಾಡಲು ಅವಕಾಶವಿಲ್ಲ. ಮತಾಂತರ ಕಾಯ್ದೆ ಚರ್ಚೆಗೂ …
Read More »‘ರೈತ ಚಳವಳಿ’ ಅಂತ್ಯ: ಊರುಗಳತ್ತ ಹೆಜ್ಜೆ ಹಾಕಿದ ಹೋರಾಟಗಾರರು
ನವದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿರುವ ಕೇಂದ್ರ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದಾಗಿ ರೈತರಿಗೆ ಭರವಸೆ ನೀಡಿದೆ. ಹೀಗಾಗಿ ಪ್ರತಿಭಟನೆ ಹಿಂಪಡೆದಿರುವ ರೈತರು, ಹೋರಾಟದ ಸ್ಥಳದಲ್ಲಿ ಹೆದ್ದಾರಿಗಳಿಗೆ ಹಾಕಿದ್ದ ತಡೆಗಳನ್ನು ತೆಗೆದು ಹಾಕಿದರು. ನಂತರ ‘ಊರುಗಳತ್ತ ವಿಜಯ ಯಾತ್ರೆ’ ಕೈಗೊಂಡರು. ಹೋರಾಟದ ನೆಲವನ್ನು ತೊರೆಯುವಾಗ ರೈತರು ಭಾವುಕರಾಗಿದ್ದೂ ಕಂಡುಬಂತು. ನೂರಾರು ಟ್ರ್ಯಾಕ್ಟರ್‌ಗಳೊಂದಿಗೆ ಬಂದು, ಒಂದು ವರ್ಷಕ್ಕೂ ಅಧಿಕ ಕಾಲದಿಂದ ದೆಹಲಿ ಹೊರ ವಲಯದ ಸಿಂಘು, ಟಿಕ್ರಿ, ಘಾಜಿಪುರ ಬಳಿ …
Read More »ನಿಗಧಿಯಂತೆ ಡಿ.13ರಿಂದ 24ರವರೆಗೆ ಬೆಳಗಾವಿಯಲ್ಲಿ ಅಧಿವೇಶನ – ಸಿಎಂ ಬೊಮ್ಮಾಯಿ
ಬೆಂಗಳೂರು: ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನಿಗಧಿಯಂತೆ ಡಿಸೆಂಬರ್ 13 ರಿಂದ 24ರವರೆಗೆ ಬೆಳಗಾವಿಯಲ್ಲಿ ನಡೆಸಲಾಗುತ್ತದೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸೋದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,ನಿಗದಿಯಂತೆ ಡಿಸೆಂಬರ್ 13ರಿಂದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲೇ ನಡೆಸಲಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ರೇಟ್ ದುಬಾರಿ ದರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇರೆ …
Read More »ರಾಜ್ಯದಲ್ಲಿ 10 ರಿಂದ 15 ಕಡೆ ನಿಂತುಕೊಳ್ಳಿ ಅಂತಾ ಕರೆಯುತ್ತಿದ್ದಾರೆ.
ಬಾಗಲಕೋಟೆ: ನನ್ನ ಪರವಾಗಿ ಬನ್ನಿ, ಘೋಷಣೆ ಕೂಗಿ ಅಂತಾ ಯಾರನ್ನೂ ಕರೆದಿಲ್ಲ. ಮುಂದೆಯೂ ಕರೆಯುವುದಿಲ್ಲ ಎಂದು ಬಾದಾಮಿ ಕ್ಷೇತ್ರದ ಶಾಸಕ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಶುಕ್ರವಾರ ವಿಶೇಷ ಹೆಲಿಕಾಪ್ಟರ್ ಮೂಲಕ ಬಾದಾಮಿಗೆ ಆಗಮಿಸಿದ್ದ ಅವರು, ನೇರವಾಗಿ ಪುರಸಭೆಯಲ್ಲಿರುವ ಮತಗಟ್ಟೆಗೆ ಭೇಟಿ ನೀಡಿ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಕಾಲವಿದೆ. ಈಗಲೇ ಎಲ್ಲಿ ಸ್ಪರ್ಧೆ ಮಾಡಬೇಕು ಎಂದು …
Read More »ಸುಮಾರು 5 ನೂರಕ್ಕೂ ಅಧಿಕ ರೈತರು ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ
ಹಾವೇರಿ : ಪ್ರಮುಖ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರವು ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಪೂಜಾರ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಸುಮಾರು 500 ಅಧಿಕ ರೈತರು ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ರವಾನಿಸಿದರು. ಕೇಂದ್ರ ಸರ್ಕಾರ ವಾಪಸ್ ಪಡೆದಂತೆ ರಾಜ್ಯ ಸರ್ಕಾರ ಸಹ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು. ವಾಪಸ್ …
Read More »
Laxmi News 24×7